ಚಿಂತಾಮಣಿ: ನಗರದ ವಾರ್ಡ್ ಸಂಖ್ಯೆ 22ರಲ್ಲಿ ಕಳೆದ ಹಲವು ದಿನಗಳಿಂದ ಕುಡಿಯುವ ನೀರಿನ ಸಮಸ್ಯೆ ತಲೆದೂರಿದ್ದು,ಇದರಿಂದ ಆಕ್ರೋಶಗೊಂಡ ನಿವಾಸಿಗಳು ಖಾಲಿ ಕೊಡಗಳೊಂದಿಗೆ ರಸ್ತೆ ತಡೆ ನಡೆಸಿ ಬೃಹತ್ ಪ್ರತಿಭಟನೆ ನಡೆಸಿದರು.
ವಾರ್ಡ್ನ ಪುರುಷರು,ಮಹಿಳೆಯರು ಮತ್ತು ಮಕ್ಕಳು ರಸ್ತೆಯಲ್ಲೇ ಕುಳಿತು ಸಂಚಾರಕ್ಕೆ ಅಡ್ಡಿ ಪಡಿಸಿದರು. ಸಾರ್ವಜನಿಕ ಸಾರಿಗೆ ಬಸ್‌ಗಳನ್ನು ತಡೆದು ನಿಲ್ಲಿಸಿದ ಪ್ರತಿಭಟನಾಕಾರರು, ಅಧಿಕಾರಿ ಗಳ ವಿರುದ್ಧ ಘೋಷಣೆಗಳನ್ನು ಕೂಗಿದರು."ನಮಗೆ ಕುಡಿಯುವ ನೀರು ಕೊಡಿ ಇಲ್ಲವೇ ಅಧಿಕಾರ ಬಿಟ್ಟು ತೊಲಗಿ"ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇದನ್ನೂ ಓದಿ: Chinthamani News: ಕಾಂಗ್ರೆಸ್ ಅಭ್ಯರ್ಥಿಗಳ ಭರ್ಜರಿ ಗೆಲುವು: ಚಿಂತಾಮಣಿಯಲ್ಲಿ ಕೈ ಕಾರ್ಯಕರ್ತರಿಂದ ಸಂಭ್ರಮ
ಪ್ರತಿಭಟನೆಯಲ್ಲಿ ಮಾತನಾಡಿದ ಸ್ಥಳೀಯ ನಿವಾಸಿಗಳು,"ಹಲವು ವಾರಗಳಿಂದ ನೀರಿನ ಸರಬ ರಾಜು ಸರಿಯಾಗಿ ಆಗುತ್ತಿಲ್ಲ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಹಾಗೂ ಜನಪ್ರತಿನಿಧಿಗಳಿಗೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಅನಿವಾರ್ಯವಾಗಿ ನಾವು ರಸ್ತೆಗಿಳಿಯ ಬೇಕಾಗಿದೆ," ಎಂದು ತಿಳಿಸಿದರು.
ರಸ್ತೆ ತಡೆಯಿಂದಾಗಿ ಕಿಲೋಮೀಟರ್‌ಗಟ್ಟಲೆ ವಾಹನ ಸವಾರರು ಪರದಾಡುವಂತಾಯಿತು. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಪ್ರತಿಭಟನಾಕಾರರನ್ನು ಸಮಾಧಾನಪಡಿಸಲು ಪ್ರಯತ್ನಿಸಿದರು. ನಂತರ ಸಂಬAಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಬಂದು ನೀರಿನ ಸಮಸ್ಯೆ ಬಗೆಹರಿ ಸುವ ಭರವಸೆ ನೀಡಿದ ಬಳಿಕ ಪ್ರತಿಭಟನೆಯನ್ನು ಹಿಂತೆಗೆದುಕೊಳ್ಳಲಾಯಿತು.
ನಗರಸಭೆ ಅಧಿಕಾರಿಗಳು ಶೀಘ್ರವೇ ಕ್ರಮ ಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಇನ್ನೂ ತೀವ್ರವಾದ ಹೋರಾಟ ನಡೆಸುವುದಾಗಿ ವಾರ್ಡ್ ನಿವಾಸಿಗಳು ಎಚ್ಚರಿಕೆ ನೀಡಿದ್ದಾರೆ.