Car accident: ಆಂಧ್ರದಲ್ಲಿ ಭೀಕರ ಅಪಘಾತ; ಕಾರು ಬಾವಿಗೆ ಬಿದ್ದು ಕರ್ನಾಟಕದ ಮೂವರ ದುರ್ಮರಣ
Car accident: ಅಡುಗೆ ಕೆಲಸಕ್ಕಾಗಿ ಕಾರಿನಲ್ಲಿ ಐವರು ತೆರಳುತ್ತಿದ್ದಾಗ ಭಾನುವಾರ ಮುಂಜಾನೆ ಈ ಅಪಘಾತ ಸಂಭವಿಸಿದೆ. ವಾಹನವು ಇದ್ದಕ್ಕಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ಬಾವಿಗೆ ಬಿದ್ದು, ಕರ್ನಾಟಕ ಮೂಲದ ಮೂವರು ಸ್ಥಳದಲ್ಲೇ ಮೃತಪಟ್ಟು, ಇನ್ನಿಬ್ಬರು ಗಾಯಗೊಂಡಿದ್ದಾರೆ.


ರಾಯಚೋಟಿ: ಆಂಧ್ರ ಪ್ರದೇಶದ ಅನ್ನಮಯ್ಯ ಜಿಲ್ಲೆಯ (Car accident) ಕುರವಪಲ್ಲಿ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಬಾವಿಗೆ ಬಿದ್ದು ಕರ್ನಾಟಕ ಮೂಲದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಮುತ್ತಕದಲ್ಲಿಯ ಲೋಕೇಶ್, ಚಂದ್ರನಹಳ್ಳಿ ನಿವಾಸಿ ಶಿವಾನಂದ ಹಾಗೂ ಕೋಲಾರ ಜಿಲ್ಲೆಯ ಸುಗಟೂರಿನ ಚಲಪತಿ ಮೃತರು ಎಂದು ಗುರುತಿಸಲಾಗಿದೆ.
ಅಡುಗೆ ಕೆಲಸಕ್ಕಾಗಿ ಕಾರಿನಲ್ಲಿ ಒಟ್ಟು ಐವರು ತೆರಳುತ್ತಿದ್ದಾಗ ಭಾನುವಾರ ಮುಂಜಾನೆ ಈ ಅಪಘಾತ ಸಂಭವಿಸಿದೆ. ವಾಹನವು ಇದ್ದಕ್ಕಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ಬಾವಿಗೆ ಬಿದ್ದಿದೆ. ಈ ವೇಳೆ ಲೋಕೇಶ್, ಶಿವಾನಂದ, ಚಲಪತಿ ಮೃತಪಟ್ಟಿದ್ದು, ಇನ್ನುಳಿದ ಸುನೀಲ್, ತಿಪ್ಪಾರೆಡ್ಡಿ ಕಾರಿನ ಹಿಂಬದಿ ಗಾಜನ್ನು ಒಡೆದು ಹೊರಗೆ ಬಂದಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಳಕ್ಕೆ ಪೀಲೇರು ಪೊಲೀಸರು ಭೇಟಿ ನೀಡಿ ಪರಿಶೀಲಿಸಿ, ಮೃತದೇಹಗಳನ್ನು ಹೊರಗೆ ತೆಗೆದಿದ್ದಾರೆ.
ಈ ಸುದ್ದಿಯನ್ನೂ ಓದಿ |Bike Taxi services: ಬೈಕ್ ಟ್ಯಾಕ್ಸಿ ಸೇವೆ ಕಾನೂನುಬದ್ಧಗೊಳಿಸಿ; ಸಾರಿಗೆ ಸಚಿವ ರಾಮಲಿಂಗಾರೆಡ್ಡಿಗೆ ಬಿಟಿಎ ಮನವಿ
ಮಂಡ್ಯದಲ್ಲಿ ಹೀನ ಕೃತ್ಯ; ಬುದ್ಧಿಮಾಂದ್ಯ ಯುವತಿ ಮೇಲೆ 17 ವರ್ಷದ ಬಾಲಕನಿಂದ ಅತ್ಯಾಚಾರ!

ಮಂಡ್ಯ: ಬಿಡದಿಯಲ್ಲಿ ವಿಶೇಷಚೇತನ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣ (Physical abuse) ಕೇಳಿಬಂದ ಬೆನ್ನಲ್ಲೇ ಮಂಡ್ಯ ಜಿಲ್ಲೆಯಲ್ಲಿ ಬುದ್ಧಿಮಾಂದ್ಯ ಯುವತಿ ಮೇಲೆ ಅಪ್ರಾಪ್ತ ವಯಸ್ಸಿನ ಬಾಲಕನೊಬ್ಬ ಅತ್ಯಾಚಾರ ಎಸಗಿ, ಜಾತಿನಿಂದನೆ ಮಾಡಿರುವ ಆರೋಪ ಕೇಳಿಬಂದಿದೆ. ಜಿಲ್ಲೆಯ ನಾಗಮಂಗಲ ತಾಲೂಕಿನ ಕರಿಕ್ಯಾತನಹಳ್ಳಿಯಲ್ಲಿ ಶುಕ್ರವಾರ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಗ್ರಾಮದ 19 ವರ್ಷದ ಬುದ್ಧಿಮಾಂದ್ಯ ಯುವತಿ ಮನೆಯವರು ಕಾರ್ಯನಿಮಿತ್ತ ಬೇರೊಂದು ಗ್ರಾಮಕ್ಕೆ ತೆರಳಿದ್ಧ ವೇಳೆ ಮೆಣಸಿನಕಾಯಿ ಕೇಳುವ ನೆಪದಲ್ಲಿ ಯುವತಿ ಮನೆಗೆ ಹೋಗಿದ್ದ ಅದೇ ಗ್ರಾಮದ 17 ವರ್ಷದ ಬಾಲಕ, ಯುವತಿ ಬಾಯಿಗೆ ಬಟ್ಟೆ ಕಟ್ಟಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ.
ಯುವತಿ ಚೀರಾಟ ಕೇಳಿದ ಪಕ್ಕದ ಮನೆಯಲ್ಲಿದ್ದ ಯುವತಿಯ ಅಜ್ಜಿ ಬಂದು ನೋಡಿದಾಗ ಬಾಲಕನ ಕೃತ್ಯ ಬಯಲಾಗಿದೆ. ಈ ವೇಳೆ ದೌರ್ಜನ್ಯ ತಡೆಯಲು ಬಂದ ಅಜ್ಜಿ ಮೇಲೆ ಬಾಲಕ ಹಲ್ಲೆ ನಡೆಸಿದ್ದಲ್ಲದೇ ಜಾತಿನಿಂದನೆ ಮಾಡಿದ್ದಾನೆಂದು ಯುವತಿಯ ಪೋಷಕರು ಆರೋಪಿಸಿದ್ದಾರೆ.
ದೌರ್ಜನ್ಯಕ್ಕೊಳಗಾದ ಯುವತಿಯ ಪೋಷಕರು ನೀಡಿದ ದೂರಿನನ್ವಯ ಶುಕ್ರವಾರ ರಾತ್ರಿ ಡಿವೈಎಸ್‌ಪಿ ಬಿ.ಚಲುವರಾಜು, ಸಿಪಿಐ ನಿರಂಜನ್ ಹಾಗೂ ನಾಗಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್‌ಐ ರಾಜೇಂದ್ರ ಸ್ಥಳಕ್ಕೆ ಭೇಟಿಕೊಟ್ಟು ಪರಿಶೀಲನೆ ನಡೆಸಿದ್ದಾರೆ. ಅಪ್ರಾಪ್ತ ವಯಸ್ಸಿನ ಬಾಲಕನ ವಿರುದ್ಧ ಲೈಂಗಿಕ ದೌರ್ಜನ್ಯ ಮತ್ತು ಜಾತಿನಿಂದನೆ ಪ್ರಕರಣ ದಾಖಲಾಗಿದೆ. ಬಳಿಕ ಪೊಲೀಸರು ಜಡ್ಜ್ ಮುಂದೆ ಬಾಲಕನನ್ನು ಹಾಜರುಪಡಿಸಿ, ಬಾಲಾಪರಾಧಿ ಗೃಹಕ್ಕೆ ಕಳುಹಿಸಲಾಗಿದೆ.
ಈ ಸುದ್ದಿಯನ್ನೂ ಓದಿ | Groom Dies: ಜಮಖಂಡಿಯಲ್ಲಿ ಘೋರ ಘಟನೆ; ತಾಳಿ ಕಟ್ಟಿದ ಹದಿನೈದು ನಿಮಿಷದಲ್ಲೇ ವರ ಸಾವು!