ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Gaubidanur News: ವಿದ್ಯಾರ್ಥಿ ಜೀವನದಲ್ಲಿ ಸಮಯದ ಅಪಮೌಲ್ಯ ಸಲ್ಲದು : ಶ್ರೀಷಡಕ್ಷರಮುನಿ ದೇಶಿಕೇಂದ್ರ ಸ್ವಾಮೀಜಿ

ಕೆಎಚ್‌ಪಿ ಫೌಂಡೇಶನ್ ವತಿಯಿಂದ ಕಳೆದ ಆರು ವರ್ಷಗಳಿಂದ ತಾಲೂಕಿನ ವಿದ್ಯಾರ್ಥಿಗಳಿಗೆ ಪ್ರತಿ ವರ್ಷ ಸುಮಾರು 40 ಲಕ್ಷ ವೆಚ್ಚದಲ್ಲಿ ಉಚಿತ ನೋಟ್‌ಬುಕ್‌ಗಳನ್ನು ವಿತರಿಸಲಾಗುತ್ತಿದೆ. ಕಳೆದ ಮೂರು ವರ್ಷಗಳಿಂದ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಅಗತ್ಯ ಅನುದಾನ ನೀಡಲಾಗಿದ್ದು, ಕುಡಿ ಯುವ ನೀರು, ಶೌಚಾಲಯ ಹಾಗೂ ಆಟದ ಮೈದಾನ ಸೇರಿದಂತೆ ಮೂಲಸೌಲಭ್ಯಗಳ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ

ವಿದ್ಯಾರ್ಥಿಗಳು ತಮ್ಮ ಅಮೂಲ್ಯವಾದ ವಿದ್ಯಾರ್ಥಿ ಜೀವನದ ಸಮಯವನ್ನು ವ್ಯರ್ಥ ಮಾಡದೆ ಶ್ರದ್ಧೆ ಮತ್ತು ಏಕಾಗ್ರತೆಯಿಂದ ವಿದ್ಯಾಭ್ಯಾಸ ಮಾಡುವ ಮೂಲಕ ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ಶ್ರೀ ಆದಿಜಾಂಭವ ಮಹಾ ಸಂಸ್ಥಾನದ ಪರಮ ಪೂಜ್ಯ ಶ್ರೀಷಡಕ್ಷರಮುನಿ ದೇಶಿಕೇಂದ್ರ ಸ್ವಾಮಿಗಳು ಕರೆ ನೀಡಿದರು.

ಗೌರಿಬಿದನೂರು: ವಿದ್ಯಾರ್ಥಿಗಳು ತಮ್ಮ ಅಮೂಲ್ಯವಾದ ವಿದ್ಯಾರ್ಥಿ ಜೀವನದ ಸಮಯವನ್ನು ವ್ಯರ್ಥ ಮಾಡದೆ ಶ್ರದ್ಧೆ ಮತ್ತು ಏಕಾಗ್ರತೆಯಿಂದ ವಿದ್ಯಾಭ್ಯಾಸ ಮಾಡುವ ಮೂಲಕ ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ಶ್ರೀ ಆದಿಜಾಂಭವ ಮಹಾ ಸಂಸ್ಥಾನದ ಪರಮ ಪೂಜ್ಯ ಶ್ರೀಷಡಕ್ಷರಮುನಿ ದೇಶಿಕೇಂದ್ರ ಸ್ವಾಮಿಗಳು ಕರೆ ನೀಡಿದರು.

ನಗರದ ಹಿರೇಬಿದನೂರು ಸಮೀಪದ ಆರ್.ಜಿ. ಕಲ್ಯಾಣ ಮಂಟಪದಲ್ಲಿ ಕೆಎಚ್‌ಪಿ ಫೌಂಡೇಶನ್ ವತಿಯಿಂದ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಸಮಾರಂಭದಲ್ಲಿ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಿ ಸಮಾಜಕ್ಕೆ ಮಾದರಿಯಾಗಬೇಕೆಂದು ಸಲಹೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ಕೆ.ಎಚ್.ಪುಟ್ಟಸ್ವಾಮಿಗೌಡ(MLA K H Puttaswamy Gowda)ಮಾತನಾಡಿ, ಶಿಕ್ಷಣವು ಸಮಾಜದ ಅಭಿವೃದ್ಧಿಗೆ ಪ್ರಮುಖ ಶಕ್ತಿಯಾಗಿದ್ದು, ಗುಣಮಟ್ಟದ ಶಿಕ್ಷಣ ಪಡೆದ ವಿದ್ಯಾರ್ಥಿಗಳು ದೇಶದ ಅಮೂಲ್ಯ ಆಸ್ತಿಯಾಗುತ್ತಾರೆ ಎಂದರು.

ಇದನ್ನೂ ಓದಿ: Gauribidanur News: ಶ್ರೀಶಾರದಾ ದೇವಿ ದೇವಸ್ಥಾನದಲ್ಲಿ ವಿಮಾನ ಗೋಪುರ ಕಲಶ ಸ್ಥಾಪನೆ ಹಾಗೂ ಮಹಾಕುಂಭಾಭಿಷೇಕದಲ್ಲಿ ಶ್ರೀವಿಧುಶೇಖರ ಭಾರತಿ ಮಹಾಸ್ವಾಮಿ ಭಾಗಿ

ಕೆಎಚ್‌ಪಿ ಫೌಂಡೇಶನ್ ವತಿಯಿಂದ ಕಳೆದ ಆರು ವರ್ಷಗಳಿಂದ ತಾಲೂಕಿನ ವಿದ್ಯಾರ್ಥಿಗಳಿಗೆ ಪ್ರತಿ ವರ್ಷ ಸುಮಾರು 40 ಲಕ್ಷ ವೆಚ್ಚದಲ್ಲಿ ಉಚಿತ ನೋಟ್‌ಬುಕ್‌ಗಳನ್ನು ವಿತರಿಸಲಾಗುತ್ತಿದೆ. ಕಳೆದ ಮೂರು ವರ್ಷಗಳಿಂದ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಅಗತ್ಯ ಅನುದಾನ ನೀಡಲಾಗಿದ್ದು, ಕುಡಿ ಯುವ ನೀರು, ಶೌಚಾಲಯ ಹಾಗೂ ಆಟದ ಮೈದಾನ ಸೇರಿದಂತೆ ಮೂಲಸೌಲಭ್ಯಗಳ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ ಎಂದು ತಿಳಿಸಿದರು.

ವಿದ್ಯಾರ್ಥಿಗಳು ವಿಶ್ವಜ್ಞಾನಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಜೀವನವನ್ನು ಆದರ್ಶವಾಗಿ ತೆಗೆದು ಕೊಂಡು ಶ್ರದ್ಧೆ, ಏಕಾಗ್ರತೆ ಹಾಗೂ ಪರಿಶ್ರಮದಿಂದ ವಿದ್ಯಾಭ್ಯಾಸ ಮಾಡಿ ತಮ್ಮ ಶಾಲೆ, ಶಿಕ್ಷಕರು ಮತ್ತು ಪೋಷಕರಿಗೆ ಕೀರ್ತಿ ತರಬೇಕೆಂದು ಅವರು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಹಾಸ್ಯ ಕಲಾವಿದೆ ಡಾ.ಸುಧಾ ಬರಗೂರು ಮಾತನಾಡಿ, ಶಾಸಕ ಕೆ.ಎಚ್.ಪುಟ್ಟಸ್ವಾಮಿಗೌಡ ಅವರು ತಮ್ಮ ಸಂಪತ್ತನ್ನು ಜನೋಪಯೋಗಿ ಕಾರ್ಯಗಳಿಗೆ ಬಳಸು ತ್ತಿದ್ದು, ಕ್ಷೇತ್ರದ ಜನರ ವಿಶ್ವಾಸ ಗಳಿಸಿದ್ದಾರೆ ಎಂದು ಪ್ರಶಂಸಿಸಿದರು. ಪೋಷಕರು ಮಕ್ಕಳನ್ನು ಅಂಕಗಳಿಗೆ ಮಾತ್ರ ಸೀಮಿತಗೊಳಿಸದೆ, ಜೀವನದ ಸವಾಲುಗಳನ್ನು ಎದುರಿಸುವ ಸಾಮರ್ಥ್ಯವನ್ನು ಬೆಳೆಸುವಂತೆ ಮಾರ್ಗದರ್ಶನ ನೀಡಬೇಕೆಂದು ಸಲಹೆ ನೀಡಿದರು.

ಸಮಾರಂಭದಲ್ಲಿ ಸುಮಾರು 250 ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಕೆಎಚ್‌ಪಿ ಫೌಂಡೇಶನ್ ವತಿಯಿಂದ ತಲಾ ರೂ.5000 ನಗದು, ಕನ್ನಡ ಶಬ್ದಕೋಶ, ಸ್ಮರಣ ಫಲಕ ನೀಡಿ ಗೌರವಿಸಲಾಯಿತು. ಬಳಿಕ ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ಊಟದ ವ್ಯವಸ್ಥೆ ಕಲ್ಪಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಡಿಡಿಪಿಐ ರಮೇಶ್, ಆರ್. ಅಶೋಕ್ ಕುಮಾರ್, ನಿವೃತ್ತ ಜಿಲ್ಲಾಧಿಕಾರಿ ಬಾಬಣ್ಣ, ಮಾಜಿ ಜಿಪಂ ಉಪಾಧ್ಯಕ್ಷ ರಾಘವೇಂದ್ರ ಹನುಮಾನ್, ಉದ್ಯಮಿ ಬಿ.ಆರ್. ಶ್ರೀನಿವಾಸ್ ಮೂರ್ತಿ, ಅಜಾಕ್ ಕಂಪನಿಯ ವಿಜಯಕುಮಾರ್ ಇದ್ದರು.