ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Praja Seva Andolan: ಅಹವಾಲುಗಳಿಗೆ ಕಾಲಮಿತಿಯಲ್ಲಿ ಪರಿಹಾರ; ಸರ್ಕಾರಿ ಯೋಜನೆಗಳ ಸದುಪಯೋಗಕ್ಕೆ ಕರೆ: ಉಪವಿಭಾಗಾಧಿಕಾರಿ ಡಿ.ಹೆಚ್. ಅಶ್ವಿನ್

ಸರ್ಕಾರದ ವಿವಿಧ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಅಧಿಕಾರಿಗಳು ಕಾರ್ಯ ನಿರ್ವಹಿಸಬೇಕು. ಮಾಹಿತಿ ಕೊರತೆಯಿಂದ ಯಾವುದೇ ಅರ್ಹರು ಸೌಲಭ್ಯದಿಂದ ವಂಚಿತರಾಗಬಾರದು. ಇಲಾಖೆಗಳ ನಡುವೆ ಸಮನ್ವಯ ಸಾಧಿಸಿ ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತ ಪರಿಹಾರ ಕಲ್ಪಿಸುವುದು ಅಧಿಕಾರಿಗಳ ಜವಾಬ್ದಾರಿ ಎಂದರು.

ನಂದಿಯಲ್ಲಿ ‘ಪ್ರಜಾ ಸೇವೆ ಆಂದೋಲನ’ಕ್ಕೆ ಉಪವಿಭಾಗಾಧಿಕಾರಿ ಡಿ.ಹೆಚ್. ಅಶ್ವಿನ್, ತಹಸೀಲ್ದಾರ್ ರಶ್ಮಿ ಹಾಗೂ ತಾಪಂ ಇಒ ಶ್ರೀನಾಥ್ ಗೌಡ ಚಾಲನೆ ನೀಡಿದರು.

ಚಿಕ್ಕಬಳ್ಳಾಪುರ: ಸಾರ್ವಜನಿಕರು ಸಮಸ್ಯೆಗಳ ಪರಿಹಾರಕ್ಕಾಗಿ ಸರ್ಕಾರಿ ಕಚೇರಿಗಳಿಗೆ ಅಲೆದಾಡು ವುದನ್ನು ತಪ್ಪಿಸಿ, ಆಡಳಿತವೇ ಜನರ ಬಳಿಗೆ ತೆರಳಿ ಅಹವಾಲುಗಳನ್ನು ಆಲಿಸಿ ಕಾಲಮಿತಿಯಲ್ಲಿ ಪರಿಹರಿಸುವ ಉದ್ದೇಶದಿಂದ ‘ಪ್ರಜಾ ಸೇವೆ ಆಂದೋಲನ’(Praja Seva Andolan)ಕ್ಕೆ ಆದ್ಯತೆ ನೀಡಲಾಗುತ್ತಿದೆ ಎಂದು ಉಪವಿಭಾಗಾಧಿಕಾರಿ ಡಿ.ಹೆಚ್.ಅಶ್ವಿನ್ ಹೇಳಿದರು.

ತಾಲೂಕಿನ ನಂದಿ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದ ‘ಪ್ರಜಾ ಸೇವೆ ಆಂದೋಲನ’ಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಸರ್ಕಾರದ ವಿವಿಧ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು. ಮಾಹಿತಿ ಕೊರತೆಯಿಂದ ಯಾವುದೇ ಅರ್ಹರು ಸೌಲಭ್ಯದಿಂದ ವಂಚಿತರಾಗಬಾರದು. ಇಲಾಖೆಗಳ ನಡುವೆ ಸಮನ್ವಯ ಸಾಧಿಸಿ ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತ ಪರಿಹಾರ ಕಲ್ಪಿಸುವುದು ಅಧಿಕಾರಿಗಳ ಜವಾಬ್ದಾರಿ ಎಂದರು.

ಸ್ವೀಕರಿಸಿದ ಅಹವಾಲುಗಳು ಕೇವಲ ಅರ್ಜಿಗಳಾಗಿ ಉಳಿಯದಂತೆ ಅವುಗಳ ಪ್ರಗತಿಯನ್ನು ನಿರಂತರವಾಗಿ ಪರಿಶೀಲಿಸಲಾಗುವುದು. ಪ್ರತಿ ಬುಧವಾರ ಜಿಲ್ಲಾಧಿಕಾರಿ ನೇತೃತ್ವದಲ್ಲಿ ನಡೆಯುವ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಹವಾಲುಗಳ ವಿಲೇವಾರಿ ಕುರಿತು ಪರಿಶೀಲನೆ ನಡೆಸಲಾಗುವುದು ಎಂದು ತಿಳಿಸಿದರು.

ಇದನ್ನೂ ಓದಿ: Praja Seva campaign: ಜನರ ಸಮಸ್ಯೆಗಳನ್ನು ಕಡೆಗಣಿಸಿದ್ರೆ ಕಠಿಣ ಕ್ರಮ; ಅಧಿಕಾರಿಗಳಿಗೆ ಡಿಸಿಎಂ‌ ಜಿ.ಪರಮೇಶ್ವರ್‌ ಎಚ್ಚರಿಕೆ

ತಹಸೀಲ್ದಾರ್ ರಶ್ಮಿ ಮಾತನಾಡಿ, ಕಂದಾಯ ದಾಖಲೆ, ಜಮೀನು, ಹಕ್ಕುಪತ್ರ ಸೇರಿದಂತೆ ವಿವಿಧ ಸಮಸ್ಯೆಗಳ ಕುರಿತು ಸ್ವೀಕರಿಸಿದ ಅರ್ಜಿಗಳನ್ನು ನಿಯಮಾನುಸಾರ ಪರಿಶೀಲಿಸಿ ಪರಿಹರಿಸ ಲಾಗುವುದು. ಸಾರ್ವಜನಿಕರು ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬೇಕು ಎಂದರು.

ತಾಪಂ ಇಒ ಶ್ರೀನಾಥ್ ಗೌಡ ಮಾತನಾಡಿ, ಗ್ರಾಮ ಪಂಚಾಯಿತಿಗಳು ಹಾಗೂ ಇಲಾಖೆಗಳ ಸಮನ್ವಯದ ಮೂಲಕ ಜನರ ಸಮಸ್ಯೆಗಳನ್ನು ಸ್ಥಳೀಯ ಮಟ್ಟದಲ್ಲಿಯೇ ಗುರುತಿಸಿ ಪರಿಹರಿಸ ಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಕೃಷಿ, ತೋಟಗಾರಿಕೆ, ರೇಷ್ಮೆ, ಪಶುಪಾಲನೆ, ಆರೋಗ್ಯ, ಬೆಸ್ಕಾಂ, ಕಂದಾಯ ಹಾಗೂ ಗ್ರಾಮೀಣಾಭಿವೃದ್ಧಿ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದು ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ವಿವಿಧ ಯೋಜನೆಗಳ ಕುರಿತು ಮಾಹಿತಿ ನೀಡಿದರು. ರೈತರಿಗೆ ಪಿಎಂ ಕಿಸಾನ್, ಕೃಷಿ ಹೊಂಡ, ಹನಿ ನೀರಾವರಿಗೆ ಶೇ.90 ಸಹಾಯಧನ, ಪಾಲಿಹೌಸ್‌ಗೆ ಶೇ.50 ನೆರವು ಹಾಗೂ ಬೆಳೆ ವಿಮೆ ಕುರಿತು ಮಾಹಿತಿ ನೀಡಲಾಯಿತು. ರೇಷ್ಮೆ ಸಾಕಾಣಿಕೆಗೂ ಸಹಾಯಧನ ಲಭ್ಯವಿರುವುದನ್ನು ತಿಳಿಸಲಾಯಿತು.

ಪಶುಪಾಲನಾ ಇಲಾಖೆ ವತಿಯಿಂದ ಮೇವಿನ ಕೊರತೆ ನೀಗಿಸಲು 52,200 ಮೇವಿನ ಕಿಟ್‌ಗಳ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಲಾಯಿತು. ಅನುಗ್ರಹ ಯೋಜನೆಯಡಿ ಜಾನುವಾರು ಮೃತ ಪಟ್ಟರೆ ದೊರೆಯುವ ಪರಿಹಾರದ ಬಗ್ಗೆಯೂ ಮಾಹಿತಿ ನೀಡಲಾಯಿತು. ಕಾರ್ಯಕ್ರಮದಲ್ಲಿ ಅರ್ಹ ಫಲಾನುಭವಿಗಳಿಗೆ ಹಕ್ಕುಪತ್ರಗಳನ್ನು ವಿತರಿಸಲಾಯಿತು.