ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

S N Subbareddy: ಶೀಘ್ರದಲ್ಲೇ ಎಲ್ಲಾ ನಿವೇಶನ ರಹಿತರಿಗೆ ಹಕ್ಕುಪತ್ರ ವಿತರಣೆ: ಶಾಸಕ ಸುಬ್ಬಾರೆಡ್ಡಿ

ಈಗಾಗಲೇ ನಿವೇಶನ ರಹಿತರ ಪಟ್ಟಿಯನ್ನೂ ಸಿದ್ಧಪಡಿಸಲಾಗಿದ್ದು, ಆದಷ್ಟು ಶೀಘ್ರವಾಗಿ ನಿವೇಶನ ಗಳ ಹಕ್ಕುಪತ್ರಗಳನ್ನು ವಿತರಿಸಲಾಗುವುದು. ಗುಡಿಬಂಡೆ ಮುಖ್ಯ ರಸ್ತೆಯಲ್ಲಿ ನಿವೇಶನ ಕಳೆದು ಕೊಂಡವರಿಗೆ ನಿವೇಶನ ನೀಡಲು ಜಮೀನು ಗುರುತಿಸಲಾಗಿದ್ದು, ನಿವೇಶನ ನೀಡಲು ಸಿದ್ಧತೆ ನಡೆಯುತ್ತಿದೆ. ಮುಂದಿನ ಮೂರು ತಿಂಗಳ ಒಳಗೆ ಎಲ್ಲರಿಗೂ ನಿವೇಶನ ನೀಡಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ

ಪಟ್ಟಣದ ಪ್ರವಾಸಿ ಮಂದಿರದಲ್ಲಿ ತಾಲೂಕಿನ ಎಂಟು ಗ್ರಾಪಂ ವ್ಯಾಪ್ತಿಯಲ್ಲಿನ ಅಭಿವೃದ್ಧಿ ಕಾಮಗಾರಿಗಳ ಕುರಿತು ಮುಖಂಡರೊಂದಿಗೆ ಶಾಸಕ ಸುಬ್ಬಾರೆಡ್ಡಿ ಅವರು ಚರ್ಚೆ ನಡೆಸಿದರು.

ಗುಡಿಬಂಡೆ: ನನ್ನ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿರುವ ನಿವೇಶನ ರಹಿತರಿಗೆ ಆದಷ್ಟು ಶೀಘ್ರ ವಾಗಿ ನಿವೇಶನಗಳ ಹಕ್ಕುಪತ್ರಗಳನ್ನು ಹಂಚಿಕೆ ಮಾಡಲು ಅಗತ್ಯ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಶಾಸಕ ಎಸ್.ಎನ್.ಸುಬ್ಬಾರೆಡ್ಡಿ(MLA S N Subbareddy) ಭರವಸೆ ನೀಡಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ತಾಲೂಕಿನ ಎಂಟು ಗ್ರಾಪಂ ವ್ಯಾಪ್ತಿಯಲ್ಲಿನ ಅಭಿವೃದ್ಧಿ ಕಾಮಗಾರಿಗಳ ಕುರಿತು ಮುಖಂಡರೊಂದಿಗೆ ನಡೆದ ಚರ್ಚಾ ಸಭೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಶಾಸಕರು, ತಮ್ಮ ಕ್ಷೇತ್ರ ವ್ಯಾಪ್ತಿಯ ಬಾಗೇಪಲ್ಲಿ, ಗುಡಿಬಂಡೆ ಹಾಗೂ ಚೇಳೂರು ತಾಲೂಕುಗಳಲ್ಲಿ ಸುಮಾರು 40 ಸಾವಿರ ಮನೆಗಳನ್ನು ಅನಧಿಕೃತವಾಗಿ ನಿರ್ಮಿಸಲಾಗಿದೆ. ಎಲ್ಲಾ ಮನೆಗಳಿಗೆ ಹಕ್ಕುಪತ್ರ ಹಾಗೂ ಖಾತೆ ಮಾಡಿಕೊಡುವ ಕೆಲಸ ಮಾಡುತ್ತೇನೆ.

ಈಗಾಗಲೇ ನಿವೇಶನ ರಹಿತರ ಪಟ್ಟಿಯನ್ನೂ ಸಿದ್ಧಪಡಿಸಲಾಗಿದ್ದು, ಆದಷ್ಟು ಶೀಘ್ರವಾಗಿ ನಿವೇಶನ ಗಳ ಹಕ್ಕುಪತ್ರಗಳನ್ನು ವಿತರಿಸಲಾಗುವುದು. ಗುಡಿಬಂಡೆ ಮುಖ್ಯ ರಸ್ತೆಯಲ್ಲಿ ನಿವೇಶನ ಕಳೆದು ಕೊಂಡವರಿಗೆ ನಿವೇಶನ ನೀಡಲು ಜಮೀನು ಗುರುತಿಸಲಾಗಿದ್ದು, ನಿವೇಶನ ನೀಡಲು ಸಿದ್ಧತೆ ನಡೆಯುತ್ತಿದೆ. ಮುಂದಿನ ಮೂರು ತಿಂಗಳ ಒಳಗೆ ಎಲ್ಲರಿಗೂ ನಿವೇಶನ ನೀಡಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು.

ಇದನ್ನೂ ಓದಿ: Chikkaballapur News: ಬರದ ಹೊಡೆತಕ್ಕೆ ರೈತ ಸಂಘ ಆಕ್ರೋಶ; ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಲು ಎಕೆಆರ್‌ಎಸ್ ಆಗ್ರಹ

ಇನ್ನೂ ಇದೇ ಸಂದರ್ಭದಲ್ಲಿ ರಾಮಪಟ್ಟಣ ರಸ್ತೆ ಅಗಲೀಕರಣದ ಬಗ್ಗೆ ಮಾತನಾಡಿದ ಅವರು, ಈ ರಸ್ತೆಯ ಅಕ್ಕಪಕ್ಕದ ಮನೆಗಳ ಮಾಲೀಕರು ಎಲ್ಲರೂ ಬಂದು ನನ್ನನ್ನು ಭೇಟಿ ಮಾಡಿ ಮಾತನಾಡಿ ದ್ದರು. ಅಂದು ಮಧ್ಯ ರಸ್ತೆಯಿಂದ 20 ಅಡಿ ಅಗಲೀಕರಣಕ್ಕೆ ಶಿಫಾರಸು ಮಾಡಲಾಗಿತ್ತು. ಆದರೆ ಕೆಲವರು ಅದರ ವಿರುದ್ಧ ಕೋರ್ಟ್‌ನಲ್ಲಿ ದಾವೆ ಹೂಡಿದ್ದಾರೆ. ಮತ್ತೊಮ್ಮೆ ಮಾಲೀಕರೊಂದಿಗೆ ಚರ್ಚೆ ನಡೆಸುತ್ತೇನೆ. ಒಂದು ವೇಳೆ ಅವರು ಒಪ್ಪದೇ ಇದ್ದರೆ, ಸರ್ಕಾರದ ನಿಯಮಾವಳಿಯಂತೆ ರಸ್ತೆ ಅಗಲೀಕರಣಕ್ಕೆ ಮುಂದಾಗುವಂತೆ ಸೂಚನೆ ನೀಡುತ್ತೇನೆ ಎಂದರು.

ಈ ಸಭೆಯಲ್ಲಿ ರಸ್ತೆ, ಚರಂಡಿ, ಅಂಗನವಾಡಿ, ಶಾಲಾ ಕಾಂಪೌಂಡ್ ಸೇರಿದಂತೆ ಹಲವು ಕಾಮಗಾರಿ ಗಳನ್ನು ಕೈಗೊಳ್ಳುವಂತೆ ಶಾಸಕರಿಗೆ ಮುಖಂಡರು ಮನವಿ ಮಾಡಿದ್ದು, ಅದನ್ನು ಪಟ್ಟಿಮಾಡ ಲಾಗಿದೆ. ಮುಂದಿನ ಮೂರು ತಿಂಗಳ ಒಳಗೆ ಎಲ್ಲಾ ಕಾಮಗಾರಿಗಳನ್ನು ಕೈಗೊಳ್ಳಲು ಅನುದಾನ ಬಿಡುಗಡೆ ಮಾಡಿಸುತ್ತೇನೆ. ಜೊತೆಗೆ ಸಿಎಂ ಅವರ ಬಳಿಯೂ ಸಹ ಹೆಚ್ಚಿನ ಅನುದಾನಕ್ಕೆ ಬೇಡಿಕೆ ಇಟ್ಟಿದ್ದು, ಅನುದಾನ ಸಿಗುವ ನಿರೀಕ್ಷೆ ಇದೆ ಎಂದರು.

ಗುಡಿಬಂಡೆ ತಾಲೂಕಿನಲ್ಲಿ ಬಸ್ ಡಿಪೋ ಹಾಗೂ ಕ್ರೀಡಾಂಗಣ ನಿರ್ಮಾಣಕ್ಕೆ ಸಾಕಷ್ಟು ಬೇಡಿಕೆ ಯಿದೆ. ಬಹಳ ದಿನಗಳಿಂದ ಜನರು ಹಾಗೂ ಯುವಕರು ಈ ಬೇಡಿಕೆ ಇಡುತ್ತಿದ್ದಾರೆ. ಬಸ್ ಡಿಪೋ ಕುರಿತು ಈಗಾಗಲೇ ಸಾರಿಗೆ ಸಚಿವರಾದ ಬೈರತಿ ಸುರೇಶ್ ಅವರೊಂದಿಗೆ ಚರ್ಚೆ ನಡೆಸಲಾಗಿದೆ. ಅನುದಾನ ಲಭ್ಯತೆ ನೋಡಿಕೊಂಡು ಶೀಘ್ರದಲ್ಲೇ ಬಸ್ ಡಿಪೋ ನಿರ್ಮಾಣಕ್ಕೆ ಅನುದಾನ ನೀಡುತ್ತೇನೆ. ಜೊತೆಗೆ ಬಾಗೇಪಲ್ಲಿಯಲ್ಲಿ ಹೈಟೆಕ್ ಬಸ್ ಡಿಪೋಗೂ ಬೇಡಿಕೆ ಇಟ್ಟಿದ್ದು, ನೀಡುವ ಭರವಸೆ ನೀಡಿದ್ದಾರೆ ಎಂದರು.

ಈ ವೇಳೆ ತಹಸೀಲ್ದಾರ್ ಸಿಗ್ಬತ್ತುಲ್ಲಾ, ತಾಪಂ ಇಒ ನಾಗಮಣಿ, ವಿವಿಧ ಗ್ರಾಪಂಗಳ ಮುಖಂಡರು, ಸಾರ್ವಜನಿಕರು ಸೇರಿದಂತೆ ಹಲವರು ಹಾಜರಿದ್ದರು.