ಹಿಂದೂ ಸಮಾಜದ ಸಂಸ್ಕೃತಿ ಹಾಗೂ ಪರಂಪರೆಯ ಜಾಗೃತಿಗಾಗಿ : ಫೆ.೧ರಂದು ಶಿಡ್ಲಘಟ್ಟದಲ್ಲಿ ಬೃಹತ್ ಹಿಂದೂ ಸಮಾಜೋತ್ಸವ
ಹಿಂದೂ ಸಮಾಜೋತ್ಸವ ಆಯೋಜನಾ ಸಮಿತಿ ಶಿಡ್ಲಘಟ್ಟ ತಾಲ್ಲೂಕು ಅಧ್ಯಕ್ಷ ಹಾಗೂ ವೆಂಕಟೇಶ್ವರ ಚಿತ್ರಮಂದಿರದ ಮಾಲೀಕರಾದ ಪ್ರಕಾಶ್ ಮಾತನಾಡಿ, ಇದು ಯಾವುದೇ ರಾಜಕೀಯ ಪಕ್ಷ ಅಥವಾ ನಿರ್ದಿಷ್ಟ ಜಾತಿಗೆ ಸೀಮಿತವಾದ ಕಾರ್ಯಕ್ರಮವಲ್ಲ. ಸನಾತನ ಧರ್ಮದ ಉಳಿವು, ಧಾರ್ಮಿಕ ಮೌಲ್ಯ ಗಳ ಸಂರಕ್ಷಣೆ ಹಾಗೂ ಅವುಗಳನ್ನು ಮುಂದಿನ ಪೀಳಿಗೆಗೆ ತಲುಪಿಸುವ ಜವಾಬ್ದಾರಿ ಪ್ರತಿಯೊಬ್ಬ ಹಿಂದೂ ಬಾಂಧವರ ಮೇಲಿದೆ.
-
ಶಿಡ್ಲಘಟ್ಟ: ಹಿಂದೂ ಸಮಾಜದ ಏಕತೆ, ಸಂಸ್ಕೃತಿ ಹಾಗೂ ಪರಂಪರೆಯನ್ನು ಉಳಿಸಿ ಬೆಳೆಸುವ ಉದ್ದೇಶದಿಂದ ಫೆಬ್ರವರಿ ೧ರಂದು ಶಿಡ್ಲಘಟ್ಟದಲ್ಲಿ ಬೃಹತ್ ಹಿಂದೂ ಸಮಾಜೋತ್ಸವವನ್ನು ಹಮ್ಮಿಕೊಳ್ಳಲಾಗಿದ್ದು, ಇದರ ಅಂಗವಾಗಿ ಭವ್ಯ ಶೋಭಾ ಯಾತ್ರೆ ಆಯೋಜಿಸಲಾಗುತ್ತಿದೆ ಎಂದು ಮುಖಂಡ ಸೀಕಲ್ ಆನಂದ ಗೌಡ ತಿಳಿಸಿದ್ದಾರೆ.
ನಗರದ ಕೋಟೆ ವೃತ್ತದಲ್ಲಿರುವ ಶ್ರೀ ಸೋಮೇಶ್ವರ ಸ್ವಾಮಿ ದೇವಾಲಯದ ಆವರಣದಲ್ಲಿ ಹಿಂದು ಸಮಾಜೋತ್ಸವದ ಶೋಭಾ ಯಾತ್ರೆ ಕುರಿತು ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಈ ಕಾರ್ಯಕ್ರಮವು ಸಂಪೂರ್ಣವಾಗಿ ಪಕ್ಷಾತೀತವಾಗಿದ್ದು ಯಾವುದೇ ರಾಜಕೀಯ ಉದ್ದೇಶವಿಲ್ಲದೆ ಎಲ್ಲಾ ಸಮುದಾಯಗಳ ಸಹಕಾರದೊಂದಿಗೆ ನಡೆಯಲಿದೆ ಎಂದರು.
ಹಿಂದೂ ಸಮಾಜೋತ್ಸವ ಆಯೋಜನಾ ಸಮಿತಿ ಶಿಡ್ಲಘಟ್ಟ ತಾಲ್ಲೂಕು ಅಧ್ಯಕ್ಷ ಹಾಗೂ ವೆಂಕಟೇಶ್ವರ ಚಿತ್ರಮಂದಿರದ ಮಾಲೀಕರಾದ ಪ್ರಕಾಶ್ ಮಾತನಾಡಿ, ಇದು ಯಾವುದೇ ರಾಜಕೀಯ ಪಕ್ಷ ಅಥವಾ ನಿರ್ದಿಷ್ಟ ಜಾತಿಗೆ ಸೀಮಿತವಾದ ಕಾರ್ಯಕ್ರಮವಲ್ಲ. ಸನಾತನ ಧರ್ಮದ ಉಳಿವು, ಧಾರ್ಮಿಕ ಮೌಲ್ಯಗಳ ಸಂರಕ್ಷಣೆ ಹಾಗೂ ಅವುಗಳನ್ನು ಮುಂದಿನ ಪೀಳಿಗೆಗೆ ತಲುಪಿಸುವ ಜವಾಬ್ದಾರಿ ಪ್ರತಿಯೊಬ್ಬ ಹಿಂದೂ ಬಾಂಧವರ ಮೇಲಿದೆ. ಎಲ್ಲ ಹಿಂದೂ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಮಾಜೋತ್ಸವವನ್ನು ಯಶಸ್ವಿಗೊಳಿಸಬೇಕೆಂದು ಅವರು ಮನವಿ ಮಾಡಿದರು.
ಇದನ್ನೂ ಓದಿ: Chikkaballapur News: ಆರ್.ಬಿ.ತಿಮ್ಮಾಪುರ ಸೇರಿ ದಲಿತ ಸಚಿವರ ಮೇಲಿನ ಅಪಪ್ರಚಾರ ನಿಲ್ಲಿಸಿ: ಇಲ್ಲವೇ ಹೋರಾಟ ಎದುರಿಸಿ
ಶೋಭಾ ಯಾತ್ರೆಯಲ್ಲಿ ವಿವಿಧ ಧಾರ್ಮಿಕ ಸಂಘಟನೆಗಳು, ಯುವ ಸಂಘಗಳು ಹಾಗೂ ಸಾರ್ವ ಜನಿಕರು ಭಾಗವಹಿಸುವ ನಿರೀಕ್ಷೆಯಿದ್ದು, ಸಂಸ್ಕೃತಿಯ ವೈಭವವನ್ನು ಪ್ರತಿಬಿಂಬಿಸುವ ವಿವಿಧ ಕಲಾ ತಂಡಗಳೊಂದಿಗೆ ಯಾತ್ರೆ ಸಾಗಲಿದೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಚಿನ್ನಿ, ಚೆಲುವರಾಜ್, ಮುಖೇಶ್, ಸೀನಾ, ಸೇರಿದಂತೆ ಹಿಂದು ಬಾಂಧವರು ಭಾಗವಹಿಸಿದ್ದರು.
ಬೈಕ್ ರ‍್ಯಾಲಿ ಮೂಲಕ ಜನಜಾಗೃತಿ
ಹಿಂದೂ ಸಮಾಜೋತ್ಸವದ ಸಮಾವೇಶ ಹಾಗೂ ಶೋಭಾ ಯಾತ್ರೆಯ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಗುರುವಾಋ ನಗರದ ಪ್ರಮುಖ ರಸ್ತೆಗಳಲ್ಲಿ ಬೈಕ್ ರ‍್ಯಾಲಿ ನಡೆಸಲಾಗುವುದು. ಈ ರ‍್ಯಾಲಿಯ ಮೂಲಕ ಸಮಾಜೋತ್ಸವದ ಮಹತ್ವ ಹಾಗೂ ಉದ್ದೇಶವನ್ನು ಜನರಿಗೆ ತಲುಪಿಸಲಾಗುವುದು ಎಂದು ಹಿಂದು ಸಮಾಜೋತ್ಸವ ಸಂಘದ ಅಧ್ಯಕ್ಷ ಪ್ರಕಾಶ್ ತಿಳಿಸಿದ್ದಾರೆ.