ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

135th birth anniversary celebration of Dr.Ambedkar: ಏ.14ರಂದು ಅದ್ಧೂರಿ ಬಿ.ಆರ್.ಅಂಬೇಡ್ಕರ್‌ರ 135ನೇ ಜನ್ಮ ದಿನಾಚರಣೆ ಸಮಾರಂಭ: ಸಚಿವ ಎಂ.ಸಿ.ಸುಧಾಕರ್ ಭಾಗಿ

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಸಮಾಜ ಕಲ್ಯಾಣ ಇಲಾಖೆ, ಚಿಕ್ಕ ಬಳ್ಳಾಪುರ ಇವರ ಸಂಯುಕ್ತಾಶ್ರಯದಲ್ಲಿ ಏ.14ರಂದು ಮಧ್ಯಾಹ್ನ 12 ಗಂಟೆಗೆ ಮಹಾ ಮಾನವತಾ ವಾದಿ, ಸಂವಿಧಾನ ಶಿಲ್ಪಿ, ಭಾರತ ರತ್ನ, ಡಾ. ಬಿ.ಆರ್.ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆ ಸಮಾರಂಭವನ್ನು ನಗರದ ಕನ್ನಡ ಭವನದಲ್ಲಿ ಆಯೋಜಿಸಲಾಗಿದ್ದು ಜಿಲ್ಲಾ ಉಸ್ತುವಾರಿ ಸಚಿವರು ಭಾಗಿಯಾಗುವರು

ಏ.14ರಂದು ಅದ್ಧೂರಿ ಬಿ.ಆರ್.ಅಂಬೇಡ್ಕರ್‌ರ 135ನೇ ಜನ್ಮ ದಿನಾಚರಣೆ ಸಮಾರಂಭ

-

Profile
Ashok Nayak Apr 13, 2026 10:59 PM

ಪಜಾತಿ ನೌಕರರ ಸಂಘ, ಜಿಲ್ಲಾ ರೆಡ್‌ಕ್ರಾಸ್ ಸಂಸ್ಥೆ ಸಹಯೋಗದಲ್ಲಿ ಸ್ವಯಂಪ್ರೇರಿತ ರಕ್ತದಾನ ಶಿಬಿರ ಆಯೋಜನೆ

ಚಿಕ್ಕಬಳ್ಳಾಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಸಮಾಜ ಕಲ್ಯಾಣ ಇಲಾಖೆ, ಚಿಕ್ಕ ಬಳ್ಳಾಪುರ ಇವರ ಸಂಯುಕ್ತಾಶ್ರಯದಲ್ಲಿ ಏ.14ರಂದು ಮಧ್ಯಾಹ್ನ 12 ಗಂಟೆಗೆ ಮಹಾ ಮಾನವತಾ ವಾದಿ, ಸಂವಿಧಾನ ಶಿಲ್ಪಿ, ಭಾರತ ರತ್ನ, ಡಾ. ಬಿ.ಆರ್.ಅಂಬೇಡ್ಕರ್ ಅವರ 135ನೇ ಜನ್ಮ ದಿನಾ ಚರಣೆ ಸಮಾರಂಭವನ್ನು ನಗರದ ಕನ್ನಡ ಭವನದಲ್ಲಿ ಆಯೋಜಿಸಲಾಗಿದ್ದು ಜಿಲ್ಲಾ ಉಸ್ತುವಾರಿ ಸಚಿವರು ಭಾಗಿಯಾಗುವರು.

ಮಂಗಳವಾರ ನಡೆಯುವ ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಬೆಳಿಗ್ಗೆ 10 ಗಂಟೆಗೆ ನಗರದ ಎಂ.ಜಿ. ರಸ್ತೆಯಲ್ಲಿರುವ ಡಾ. ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ನಂತರದ ಪದವಿ ಬಾಲಕರ ಜೈಭೀಮ್ ವಿದ್ಯಾರ್ಥಿನಿಲಯದ ಆವರಣದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ನಂತರ ಜಾನಪದ ಕಲಾ ತಂಡಗಳೊಂದಿಗೆ ಹಾಗೂ ಇಲಾಖೆಗಳ ಸ್ತಬ್ಧ ಚಿತ್ರಗಳೊಂದಿಗೆ ಮೆರವಣಿಗೆಗೆ ಚಾಲನೆ ನೀಡಲಿದ್ದು ಡಾ.ಬಿ.ಆರ್.ಅಂಬೇಡ್ಕರ್ ವೃತ್ತದ (ಶಿಡ್ಲಘಟ್ಟ ಸರ್ಕಲ್) ಮುಖಾಂತರ ಕನ್ನಡ ಭವನದವರೆಗೆ ಸಾಗಲಿದೆ.

ಉನ್ನತ ಶಿಕ್ಷಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಂ.ಸಿ.ಸುಧಾಕರ್ (Dr M C Sudhakar)ಕಾರ್ಯ ಕ್ರಮದ ಉದ್ಘಾಟನೆ ನೆರವೇರಿಸಲಿದ್ದಾರೆ.

ಇದನ್ನೂ ಓದಿ: BR Ambedkar Birth Anniversary: ಅಂಬೇಡ್ಕರ್‌ 134ನೇ ಜನ್ಮ ದಿನಾಚರಣೆ; ಪ್ರಧಾನಿ, ರಾಷ್ಟ್ರಪತಿ ಸಹಿತ ಗಣ್ಯರಿಂದ ಗೌರವ ನಮನ

ಕಾರ್ಯಕ್ರಮದ ಉಪಸ್ಥಿತಿಯನ್ನು ಸಮಾಜ ಕಲ್ಯಾಣ ಇಲಾಖೆಯ ಸಚಿವ ಡಾ. ಹೆಚ್.ಸಿ. ಮಹದೇವಪ್ಪ (Dr H C Mahadevappa)ನೆರವೇರಿಸಲಿದ್ದಾರೆ. ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಪಿ.ಇ. ಪ್ರದೀಪ್ ಈಶ್ವರ್(MLA P E Pradeep Eshwar) ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದ ಡಾ.ಕೆ.ಸುಧಾಕರ್(MP Dr K Sudhakar), ಕೋಲಾರ ಲೋಕಸಭಾ ಕ್ಷೇತ್ರದ ಸಂಸದ ಎಂ.ಮಲ್ಲೇಶ್ ಬಾಬು(MP M Mallesh babu), ಕರ್ನಾಟಕ ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಎನ್.ಸಂಪಂಗಿ, ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮ ನಿಯಮಿತದ ಅಧ್ಯಕ್ಷ ಡಾ.ಬಿ.ಸಿ.ಮುದ್ದುಗಂಗಾಧರ್, ಕರ್ನಾಟಕ ರಾಜ್ಯ ಬೀಜ ನಿಗಮದ ಅಧ್ಯಕ್ಷ ಆಂಜಿನಪ್ಪ, ಕರ್ನಾಟಕ ರಾಜ್ಯ ಸಹಕಾರ ಕೈಮಗ್ಗ ನೇಕಾರರ ಮಹಾಮಂಡಳಿ ನಿಗಮದ ಅಧ್ಯಕ್ಷ ಬಿ.ಜಿ. ಗಣೇಶ್, ಶಾಸಕರುಗಳಾದ ಎಸ್.ಎನ್. ಸುಬ್ಬಾರೆಡ್ಡಿ, ಬಿ.ಎನ್. ರವಿಕುಮಾರ್, ಕೆ.ಹೆಚ್. ಪುಟ್ಟಸ್ವಾಮಿಗೌಡ, ವಿಧಾನ ಪರಿಷತ್ತು ಶಾಸಕರಾದ ಚಿದಾನಂದ ಎಂ. ಗೌಡ, ಎಂ.ಎಲ್.ಅನಿಲ್ ಕುಮಾರ್, ಡಿ.ಟಿ. ಶ್ರೀನಿವಾಸ, ಡಾ. ಹೆಚ್.ನರಸಿಂಹಯ್ಯ(MLAs like S.N. Subbareddy, B.N. Ravikumar, K.H. Puttaswamy Gowda, Legislative Council MLA Chidananda M. Gowda, M.L. Anil Kumar, D.T. Srinivasa, Dr. H. Narasimhaiah) ವಿಜ್ಞಾನ ಶೈಕ್ಷಣಿಕ ಸಾಂಸ್ಕೃತಿಕ ಮತ್ತು ಪ್ರವಾಸೋದ್ಯಮ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎನ್.ಹೆಚ್ ಶಿವಶಂಕರರೆಡ್ಡಿ, ಚಿಕ್ಕಬಳ್ಳಾಪುರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ.ಎನ್. ಕೇಶವರೆಡ್ಡಿ, ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷ ಗೊಲ್ಲಹಳ್ಳಿ ಶಿವಪ್ರಸಾದ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎನ್. ರಮೇಶ್ ಭಾಗವಹಿಸ ಲಿದ್ದಾರೆ.

ಅತಿಥಿಗಳಾಗಿ ಸರ್ಕಾರದ ಕಾರ್ಯದರ್ಶಿಗಳು, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್. ಮಂಜುಳ, ಸಮಾಜ ಕಲ್ಯಾಣ ಇಲಾಖೆ ಮತ್ತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಡಿ.ರಂದೀಪ್, ಸಮಾಜ ಕಲ್ಯಾಣ ಇಲಾಖೆಯ ಆಯುಕ್ತ ಡಾ. ರಾಕೇಶ್ ಕುಮಾರ್ .ಕೆ ಭಾಗವಹಿಸಲಿದ್ದಾರೆ.

ಮುಖ್ಯ ಭಾಷಣಕಾರರಾಗಿ ಬೆಂಗಳೂರು ವಿಶ್ವವಿದ್ಯಾಲಯದ ಅರ್ಥಶಾಸ್ತ್ರ ಪ್ರಾಧ್ಯಾಪಕ ಡಾ. ಕೃಷ್ಣರಾಜ್ ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳ ಸಾಧಕರನ್ನು ಗುರುತಿಸಿ ಅಂಬೇಡ್ಕರ್ ಪ್ರಶಸ್ತಿ ನೀಡಿ ಸನ್ಮಾನಿಸುವ ಕೆಲಸ ಮಾಡಲಾಗುವುದು.

*
ಅಂಬೇಡ್ಕರ್ ಅವರ 135ನೇ ಜಯಂತಿ ಅಂಗವಾಗಿ ರಾಜಬೀದಿಗಳಲ್ಲಿ ಪಾನಕ ಪನ್ನೀರು ಮಜ್ಜಿಗೆ ಸೇವೆ, ನಡೆಯಲಿದ್ದು ಅಂಬೇಡ್ಕರ್ ಭಾವಚಿತ್ರವುಳ್ಳ ಪಲ್ಲಕ್ಕಿಗಳ ಮೆರವಣಿಗೆಯನ್ನು, ವಿವಿಧ ಇಲಾಖೆಗಳ ಸಾಧನೆಯನ್ನು ಸಾರುವ ಸ್ಥಬ್ಧ ಚಿತ್ರಗಳ ಮೆರವಣಿಗೆ ಇರಲಿದೆ.

ಮುಖ್ಯವಾಗಿ ಪಜಾತಿ ನೌಕರರ ಗೃಹನಿರ್ಮಾಣ ಮಂಡಳಿ ವತಿಯಿಂದ 2ನೇ ವರ್ಷದ ಸ್ವಯಂ ಪ್ರೇರಿತ ಬೃಹತ್ ರಕ್ತದಾನ ಶಿಬಿರದ ವ್ಯವಸ್ಥೆ ಮಾಡಲಾಗಿದ್ದು ಅಂಬೇಡ್ಕರ್ ಅನುಯಾಯಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬಂದು ರಕ್ತದಾನ ಶಿಬಿರದಲ್ಲಿ ಭಾಗಿಯಾಗಬೇಕೆಂದು ಸವಿನಯವಾಗಿ ಕೋರಲಾಗಿದೆ. ಅಂಬೇಡ್ಕರ್ ಭವನದಲ್ಲಿ ರಕ್ತದಾನ ಶಿಬಿರದ ವ್ಯವಸ್ಥೆ ಮಾಡಲಾಗಿದ್ದು ಜಿಲ್ಲಾ ರೆಡ್‌ಕ್ರಾಸ್ ಸಂಸ್ಥೆಯ ಸಹಯೋಗದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ.

ಜಿಲ್ಲೆಯ ಎಲ್ಲಾ ಚುನಾಯಿತ ಪ್ರತಿನಿಧಿಗಳು, ದಲಿತಪರ ಸಂಘಟನೆಗಳ ಪದಾಧಿಕಾರಿಗಳು, ಸರ್ಕಾರಿ ನೌಕರರ ಜಿಲ್ಲಾ ಸಂಘ ಮತ್ತು ಇತರೆ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಸಮಸ್ತ ನಾಗರಿಕರು, ಶಾಲಾ ಕಾಲೇಜು ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವರು.