ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Chikkaballapur News: ಟೆಂಡರ್ ಪ್ರಕ್ರಿಯೆಯಲ್ಲಿ ಪಾರದರ್ಶಕತೆ, ಕಾನೂನು ಪಾಲನೆಗೆ ಅಧಿಕಾರಿಗಳಿಗೆ ತರಬೇತಿ

ಜಿಲ್ಲಾ ಪಂಚಾಯಿತಿಯ ಸರ್.ಎಂ. ವಿಶ್ವೇಶ್ವರಯ್ಯ ಸಭಾಂಗಣದಲ್ಲಿ ಅ.8ರಂದು ನಡೆದ ‘ಕೆಟಿಪಿಪಿ ಕಾಯ್ದೆ ಮತ್ತು ನಿಯಮಗಳು ಹಾಗೂ ಟೆಂಡರ್ ಪ್ರಕ್ರಿಯೆ’ ವಿಷಯದ ತರಬೇತಿ ಕಾರ್ಯಾಗಾರದಲ್ಲಿ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯಿತಿ ಕಚೇರಿಯ ಅಧಿಕಾರಿ ಮತ್ತು ಸಿಬ್ಬಂದಿ ಭಾಗವಹಿಸಿ ಟೆಂಡರ್ ಪ್ರಕ್ರಿಯೆಯ ವಿವಿಧ ಹಂತಗಳ ಕುರಿತು ಸಮಗ್ರ ಮಾಹಿತಿ ಪಡೆದುಕೊಂಡರು.

ಕೆಟಿಪಿಪಿ ಕಾಯ್ದೆ ಮತ್ತು ನಿಯಮಗಳ ಕುರಿತು ಒಂದು ದಿನದ ಕಾರ್ಯಾಗಾರ

-

Profile
Ashok Nayak Oct 9, 2026 11:23 AM

ಚಿಕ್ಕಬಳ್ಳಾಪುರ : ಗ್ರಾಮ ಪಂಚಾಯಿತಿಗಳಲ್ಲಿ ಅಭಿವೃದ್ಧಿ ಕಾಮಗಾರಿಗಳು ಹಾಗೂ ವಿವಿಧ ಖರೀದಿ ಪ್ರಕ್ರಿಯೆಗಳನ್ನು ನಿಯಮಾನುಸಾರ, ಪಾರದರ್ಶಕವಾಗಿ ಮತ್ತು ಪರಿಣಾಮಕಾರಿಯಾಗಿ ಅನುಷ್ಠಾನ ಗೊಳಿಸುವ ನಿಟ್ಟಿನಲ್ಲಿ ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಕಾಯ್ದೆ (ಕೆಟಿಪಿಪಿ ಕಾಯ್ದೆ) ಹಾಗೂ ನಿಯಮಗಳ ಕುರಿತು ಜಿಲ್ಲೆಯ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಮತ್ತು ಜಿಲ್ಲಾ ಪಂಚಾಯಿತಿ ಅಧಿಕಾರಿ-ಸಿಬ್ಬಂದಿಗೆ ಒಂದು ದಿನದ ತರಬೇತಿ ಕಾರ್ಯಾಗಾರ ಆಯೋಜಿಸಲಾಗಿತ್ತು.

ಜಿಲ್ಲಾ ಪಂಚಾಯಿತಿಯ ಸರ್.ಎಂ. ವಿಶ್ವೇಶ್ವರಯ್ಯ ಸಭಾಂಗಣದಲ್ಲಿ ಅ.೮ರಂದು ನಡೆದ ‘ಕೆಟಿಪಿಪಿ ಕಾಯ್ದೆ ಮತ್ತು ನಿಯಮಗಳು ಹಾಗೂ ಟೆಂಡರ್ ಪ್ರಕ್ರಿಯೆ’ ವಿಷಯದ ತರಬೇತಿ ಕಾರ್ಯಾಗಾರದಲ್ಲಿ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯಿತಿ ಕಚೇರಿಯ ಅಧಿಕಾರಿ ಮತ್ತು ಸಿಬ್ಬಂದಿ ಭಾಗವಹಿಸಿ ಟೆಂಡರ್ ಪ್ರಕ್ರಿಯೆಯ ವಿವಿಧ ಹಂತಗಳ ಕುರಿತು ಸಮಗ್ರ ಮಾಹಿತಿ ಪಡೆದುಕೊಂಡರು.

ಇದನ್ನೂ ಓದಿ: Chinthamani News: ಚಿಂತಾಮಣಿಯ ನರಸಿಂಹಪೇಟೆಯಲ್ಲಿ ಅ.9ರಿಂದ ನವರಾತ್ರಿ, ಗಣೇಶೋತ್ಸವ

ಗ್ರಾಮೀಣ ಪ್ರದೇಶಗಳಲ್ಲಿ ಸರ್ಕಾರದ ಅನುದಾನದಲ್ಲಿ ನಡೆಯುವ ಅಭಿವೃದ್ಧಿ ಕಾಮಗಾರಿಗಳ ಗುಣಮಟ್ಟ, ಸಮಯಬದ್ಧ ಅನುಷ್ಠಾನ ಹಾಗೂ ಸಾರ್ವಜನಿಕ ಹಣದ ಸಮರ್ಪಕ ಬಳಕೆಯಲ್ಲಿ ಟೆಂಡರ್ ಪ್ರಕ್ರಿಯೆ ಪ್ರಮುಖ ಪಾತ್ರ ವಹಿಸುತ್ತದೆ. ಈ ಹಿನ್ನೆಲೆಯಲ್ಲಿ ಟೆಂಡರ್ ಆಹ್ವಾನದಿಂದ ಹಿಡಿದು ಬಿಡ್ ಪರಿಶೀಲನೆ, ಆಯ್ಕೆ, ಅನುಮೋದನೆ ಸೇರಿದಂತೆ ವಿವಿಧ ಹಂತಗಳಲ್ಲಿ ಅನುಸರಿಸ ಬೇಕಾದ ಕಾನೂನು ಮತ್ತು ನಿಯಮಗಳ ಬಗ್ಗೆ ಅಧಿಕಾರಿಗಳಿಗೆ ಸ್ಪಷ್ಟ ಅರಿವು ಮೂಡಿಸುವ ಉದ್ದೇಶದಿಂದ ತರಬೇತಿ ಆಯೋಜಿಸಲಾಗಿತ್ತು.

ತರಬೇತಿಯ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಕೆಎಸ್‌ಆರ್‌ಟಿಸಿಯ ನಿವೃತ್ತ ಹಿರಿಯ ಉಗ್ರಾಣ ವ್ಯವಸ್ಥಾಪಕ ಮಹದೇವ್ ಪ್ರಸಾದ್ ಅವರು ಕೆಟಿಪಿಪಿ ಕಾಯ್ದೆ ಮತ್ತು ನಿಯಮಗಳ ಪ್ರಮುಖ ಅಂಶಗಳನ್ನು ಅತ್ಯಂತ ವ್ಯವಸ್ಥಿತ ಹಾಗೂ ಪರಿಣಾಮಕಾರಿ ರೀತಿಯಲ್ಲಿ ವಿವರಿಸಿದರು. ಟೆಂಡರ್ ಪ್ರಕ್ರಿಯೆಯಲ್ಲಿ ಅಧಿಕಾರಿಗಳು ವಹಿಸಬೇಕಾದ ಜವಾಬ್ದಾರಿ, ನಿಯಮಗಳ ಪಾಲನೆ, ಅಗತ್ಯ ದಾಖಲೆಗಳ ನಿರ್ವಹಣೆ, ಟೆಂಡರ್ ಆಹ್ವಾನ ಮತ್ತು ಪರಿಶೀಲನೆ ಸೇರಿದಂತೆ ಪ್ರಾಯೋಗಿಕವಾಗಿ ಎದುರಾಗಬಹುದಾದ ಹಲವು ಸಂದರ್ಭಗಳ ಕುರಿತು ಮಾರ್ಗದರ್ಶನ ನೀಡಿದರು.

ಕೇವಲ ಕಾಯ್ದೆಯ ನಿಯಮಗಳನ್ನು ತಿಳಿಸುವುದಕ್ಕೆ ಸೀಮಿತವಾಗದೆ, ನೈಜ ಆಡಳಿತಾತ್ಮಕ ಸಂದರ್ಭಗಳಲ್ಲಿ ನಿಯಮಗಳನ್ನು ಹೇಗೆ ಅನ್ವಯಿಸಬೇಕು, ಯಾವ ಹಂತಗಳಲ್ಲಿ ಎಚ್ಚರಿಕೆ ವಹಿಸಬೇಕು ಮತ್ತು ಪ್ರಕ್ರಿಯೆಯಲ್ಲಿ ಪಾರದರ್ಶಕತೆಯನ್ನು ಹೇಗೆ ಕಾಪಾಡಿಕೊಳ್ಳಬೇಕು ಎಂಬುದರ ಕುರಿತು ಪ್ರಾಯೋಗಿಕ ಮಾಹಿತಿಯನ್ನೂ ನೀಡಲಾಯಿತು.

8cbpm1kk ok

ಕಾರ್ಯಾಗಾರದಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ವೈ.ನವೀನ್ ಭಟ್ ಸ್ವತಃ ಭಾಗವಹಿಸಿ ತರಬೇತಿಯ ಪ್ರಗತಿಯನ್ನು ಸೂಕ್ಷö್ಮವಾಗಿ ಗಮನಿಸಿದರು. ಉಪಕಾರ್ಯದರ್ಶಿಗಳು ಹಾಗೂ ಮುಖ್ಯ ಲೆಕ್ಕಾಧಿಕಾರಿಗಳು ಸೇರಿದಂತೆ ಜಿಲ್ಲಾ ಪಂಚಾಯಿತಿಯ ಹಿರಿಯ ಅಧಿಕಾರಿಗಳು ಸಹ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ವೈ.ನವೀನ್ ಭಟ್ ಅವರು, ಸರ್ಕಾರಿ ಅಧಿಕಾರಿಗಳು ಯಾವುದೇ ಕಾಮಗಾರಿ ಅಥವಾ ಖರೀದಿ ಪ್ರಕ್ರಿಯೆ ಕೈಗೊಳ್ಳುವಾಗ ಸಂಬAಧಿಸಿದ ಕಾಯ್ದೆ ಮತ್ತು ನಿಯಮಗಳ ಬಗ್ಗೆ ಸ್ಪಷ್ಟ ಜ್ಞಾನ ಹೊಂದಿರುವುದು ಅತ್ಯಂತ ಅಗತ್ಯ. ನಿಯಮಾನುಸಾರ ಪ್ರಕ್ರಿಯೆಗಳನ್ನು ಅನುಸರಿಸುವುದರಿಂದ ಆಡಳಿತದಲ್ಲಿ ಪಾರದರ್ಶಕತೆ ಹೆಚ್ಚುವುದರ ಜೊತೆಗೆ ಸಾರ್ವಜನಿಕ ಹಣದ ಸಮರ್ಪಕ ಬಳಕೆಯನ್ನೂ ಖಚಿತಪಡಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಅಭಿಪ್ರಾಯಪಟ್ಟರು. ತರಬೇತಿಯ ಗುಣಮಟ್ಟ ಮತ್ತು ಅದರ ಪ್ರಾಯೋಗಿಕ ಉಪಯುಕ್ತತೆಯನ್ನು ಅವರು ಪ್ರಶಂಸಿಸಿದರು.

ತರಬೇತಿಯಲ್ಲಿ ಭಾಗವಹಿಸಿದ್ದ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯಿತಿ ಕಚೇರಿಯ ಅಧಿಕಾರಿ-ಸಿಬ್ಬಂದಿ, ಕೆಟಿಪಿಪಿ ಕಾಯ್ದೆ ಮತ್ತು ಟೆಂಡರ್ ಪ್ರಕ್ರಿಯೆಗೆ ಸಂಬAಧಿಸಿದ ಹಲವು ಸೂಕ್ಷ್ಮ ವಿಚಾರಗಳ ಕುರಿತು ಸ್ಪಷ್ಟತೆ ದೊರೆತಿದ್ದು, ದೈನಂದಿನ ಆಡಳಿತಾತ್ಮಕ ಕಾರ್ಯನಿರ್ವಹಣೆಯಲ್ಲಿ ಇದು ಸಹಕಾರಿಯಾಗಲಿದೆ ಎಂದು ಅಭಿಪ್ರಾಯಪಟ್ಟರು.

ಸರ್ಕಾರಿ ಕಾಮಗಾರಿಗಳಲ್ಲಿ ನಿಯಮಬದ್ಧತೆ, ಪಾರದರ್ಶಕತೆ ಮತ್ತು ಹೊಣೆಗಾರಿಕೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಇಂತಹ ತರಬೇತಿ ಕಾರ್ಯಾಗಾರಗಳು ಅಧಿಕಾರಿಗಳ ವೃತ್ತಿಪರ ಸಾಮರ್ಥ್ಯವನ್ನು ಹೆಚ್ಚಿಸುವುದರ ಜೊತೆಗೆ ಸಾರ್ವಜನಿಕ ಹಣದ ಸದ್ಬಳಕೆ ಮತ್ತು ಉತ್ತಮ ಆಡಳಿತಕ್ಕೆ ಬಲ ನೀಡಲಿವೆ ಎಂಬ ಅಭಿಪ್ರಾಯ ವ್ಯಕ್ತವಾಯಿತು.