ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Suspected Terrorists: ವಿಧ್ವಂಸಕ ಕೃತ್ಯಗಳಿಗೆ ಸಂಚು; ಚಿಕ್ಕಬಳ್ಳಾಪುರದಲ್ಲಿ ಇಬ್ಬರು ಶಂಕಿತ ಉಗ್ರರ ಬಂಧನ!

ಸಾರ್ವಜನಿಕ ಶಾಂತಿಗೆ ಧಕ್ಕೆ ತರುವ ಚಟುವಟಿಕೆಯಲ್ಲಿ ಇಬ್ಬರು ಆರೋಪಿಗಳು ಭಾಗಿಯಾಗಿದ್ದರೆಂಬುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಈ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ಮುಂದುವರಿದಿದೆ. ಇಬ್ಬರನ್ನು ಬಂಧಿಸಿ ಹೆಚ್ಚಿನ ವಿಚಾರಣೆಗಾಗಿ ವಶಕ್ಕೆ ಪಡೆಯಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹು ತಿಳಿಸಿದ್ದಾರೆ.

ವಿಧ್ವಂಸಕ ಕೃತ್ಯಕ್ಕೆ ಸಂಚು; ಚಿಕ್ಕಬಳ್ಳಾಪುರದಲ್ಲಿ 2 ಶಂಕಿತ ಉಗ್ರರ ಬಂಧನ!

-

Prabhakara R
Prabhakara R Sep 25, 2026 7:10 PM

ಬೆಂಗಳೂರು: ದೇಶದಲ್ಲಿ ವಿಧ್ವಂಸಕ ಕೃತ್ಯಗಳಿಗೆ ಸಂಚು ರೂಪಿಸಿದ ಆರೋಪದಲ್ಲಿ ಇಬ್ಬರು ಶಂಕಿತ ಉಗ್ರರರನ್ನು ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚಿಕ್ಕಬಳ್ಳಾಪುರದ ಬಾಪೂಜಿನಗರದ ಶಬ್ಬೀರ್ ಹಾಗೂ ಉತ್ತರ ಭಾರತ ಮೂಲದ ಸಲ್ಮಾನ್ ಬಂಧಿತ ಶಂಕಿತ ಉಗ್ರರಾಗಿದ್ದು,ಇಬ್ಬರನ್ನು ತೀವ್ರ ವಿಚಾರಣೆ ನಡೆಸಲಾಗಿದೆ ಎಂದು ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹು ತಿಳಿಸಿದ್ದಾರೆ.

ಆರೋಪಿಗಳು ಟೆಲಿಗ್ರಾಂನಲ್ಲಿ ಗುಂಪೊಂದನ್ನು ರಚಿಸಿಕೊಂಡು ಭಯೋತ್ಪಾದನೆ ಹಾಗೂ ವಿಧ್ವಂಸಕ ಕೃತ್ಯಗಳ ಕುರಿತು ಚರ್ಚೆ ನಡೆಸುತ್ತಿದ್ದರು. ಶ್ರೀಮಂತರನ್ನು ಅಪಹರಿಸಿ ಹಣ ಸಂಗ್ರಹಿಸಿ, ಆ ಹಣವನ್ನು ಭಯೋತ್ಪಾದನಾ ಚಟುವಟಿಕೆಗಳಿಗೆ ಬಳಸುವ ಬಗ್ಗೆ ಗುಂಪಿನಲ್ಲಿ ಚರ್ಚೆ ನಡೆದಿತ್ತು ಎಂದು ತಿಳಿಸಿದ್ದಾರೆ.

ಬರ್ತ್‌ಡೇ ಪಾರ್ಟಿ ನಂತರ ನಾಪತ್ತೆಯಾಗಿದ್ದ ಗ್ರಾಮದ ಮುಖ್ಯಸ್ಥನ ಪುತ್ರ ಶವವಾಗಿ ಪತ್ತೆ; ಮೈ ತುಂಬ ಗಾಯ

ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳ ವಿರುದ್ಧ ಚಿಕ್ಕಬಳ್ಳಾಪುರ ನಗರ ಪೊಲೀಸರು ಭಾರತೀಯ ನ್ಯಾಯ ಸಂಹಿತೆ (ಬಿಎನ್ ಎಸ್) ಸೆಕ್ಷನ್ 113ರ ಅಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ದೇಶದಲ್ಲಿ ಅರಾಜಕತೆ ಸೃಷ್ಟಿಸುವ ಉದ್ದೇಶದಿಂದ ವಿವಿಧ ರೀತಿಯ ದಾಳಿ ನಡೆಸುವ ಕುರಿತು ಆರೋಪಿಗಳು ಪ್ರತಿದಿನ ಟೆಲಿಗ್ರಾಂ ಗುಂಪಿನಲ್ಲಿ ಚರ್ಚಿಸುತ್ತಿದ್ದರು ಎನ್ನಲಾಗಿದೆ. ಅಲ್ಲದೆ, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವ ಕುರಿತು ಚರ್ಚೆ ನಡೆದಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

‌ರಾಜ್ಯದ ಬಿಜೆಪಿ ನಾಯಕರ ಕೊಲೆಗೆ ಸ್ಕೆಚ್

ಚಿಕ್ಕಬಳ್ಳಾಪುರದಲ್ಲಿ ಇಬ್ಬರು ಶಂಕಿತ ಉಗ್ರರ ಬಂಧನದ ಬೆನ್ನಲ್ಲೇ ಸ್ಫೋಟಕ ವಿಚಾರವೊಂದು ಹೊರಬಿದ್ದಿದೆ. ರಾಜ್ಯದ ಮೂವರು ಪ್ರಭಾವಿ ಬಿಜೆಪಿ ನಾಯಕರನ್ನು ಮುಗಿಸಬೇಕು ಅಂತ ಶಂಕಿತ ಉಗ್ರರಿದ್ದ ಟೆಲಿಗ್ರಾಂ ಗ್ರೂಪ್‌ನಲ್ಲಿ ಚರ್ಚೆ ನಡೆದಿದೆ ಎನ್ನಲಾಗಿದೆ. ಮುಸ್ಲಿಂ ವಿರೋಧಿಗಳನ್ನು ಮುಗಿಸಬೇಕು ಎಂದು ಗ್ರೂಪ್‌ನಲ್ಲಿ ಚರ್ಚೆ ನಡೆದಿದ್ದು, ಬಿಜೆಪಿ ಬಸನಗೌಡ ಪಾಟೀಲ ಯತ್ನಾಳ್, ಸಿಟಿ ರವಿ ಹಾಗೂ ಪ್ರತಾಪ್ ಸಿಂಹ ಸೇರಿ ಹಲವರನ್ನು ಮುಗಿಸಬೇಕು ಎಂದು ಈ ಶಂಕಿತ ಉಗ್ರರು ಟಾರ್ಗೆಟ್ ಹಾಕಿಕೊಂಡಿದ್ದರು ಎನ್ನಲಾಗಿದೆ.

ಹೊಸಕೋಟೆಯ ಇಬ್ಬರು ಹಾಗೂ ಹಾಸನದ ಒಬ್ಬರನ್ನು ಶಬ್ಬೀರ್​ ಟೆಲಿಗ್ರಾಮ್‌ ಗ್ರೂಪ್‌ಗೆ ಸೇರಿಸಿದ್ದನಂತೆ. ಇನ್ನು ಕಳೆದ ನಾಲ್ಕು ತಿಂಗಳ ಹಿಂದೆಯಷ್ಟೇ ಶಬ್ಬೀರ್ ಗ್ರೂಪ್​ಗೆ ಸೇರಿದ್ದ ಎಂದು ತಿಳಿದುಬಂದಿದೆ. ಚಿಕ್ಕಬಳ್ಳಾಪುರದಲ್ಲಿ ಓದುತ್ತಿದ್ದ ಈತ ಪಿಯುಸಿ ಪರೀಕ್ಷೆಯಲ್ಲಿ ಫೇಲ್ ಆಗಿದ್ದ. ಗಾಂಜಾ ಸೇವನೆ ಮಾಡುತ್ತಿದ್ದ ಎಂಬ ಮಾಹಿತಿ ಇದೆ. ಈತನಿಗೆ 6 ತಿಂಗಳ ನಂತರ ಗನ್ ಟ್ರೈನಿಂಗ್ ಕೊಡುವುದಾಗಿ ಅಡ್ಮಿನ್ ತಿಳಿಸಿದ್ದ ಎನ್ನಲಾಗಿದೆ.