ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ; ಕ್ಯಾಂಟರ್‌ಗೆ ಸಿಲುಕಿ ಆದಿಯೋಗಿ ದರ್ಶನ ಮುಗಿಸಿ ಮರಳುತ್ತಿದ್ದ ಬೈಕ್ ಸವಾರಿಬ್ಬರ ದುರ್ಮರಣ

Road Accident: ಆದಿಯೋಗಿ ದರ್ಶನ ಮುಗಿಸಿ ಬೆಂಗಳೂರಿಗೆ ವಾಪಸಾಗುತ್ತಿದ್ದ ಯುವಕ ಹಾಗೂ ಯುವತಿ ಪ್ರಯಾಣಿಸುತ್ತಿದ್ದ ಬೈಕ್‌ಗೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಲಿಂಗಶೆಟ್ಟಿಪುರ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಭಾನುವಾರ ನಡೆದಿದೆ.

ಚಿಕ್ಕಬಳ್ಳಾಪುರ ತಾಲೂಕಿನ ಲಿಂಗಶೆಟ್ಟಿಪುರ ಗೇಟ್ ಬಳಿ ನಡೆದ ರಸ್ತೆ ಅಪಘಾತ

ಚಿಕ್ಕಬಳ್ಳಾಪುರ, ಆ. 16: ಆದಿಯೋಗಿ ದರ್ಶನ ಮುಗಿಸಿ ಬೆಂಗಳೂರಿಗೆ ವಾಪಸಾಗುತ್ತಿದ್ದ ಯುವಕ ಹಾಗೂ ಯುವತಿ ಪ್ರಯಾಣಿಸುತ್ತಿದ್ದ ಬೈಕ್‌ಗೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಲಿಂಗಶೆಟ್ಟಿಪುರ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಭಾನುವಾರ (ಆಗಸ್ಟ್‌ 16) ನಡೆದಿದೆ (Road Accident). ಮೃತ ಯುವಕನನ್ನು ಬೆಂಗಳೂರಿನಲ್ಲಿ ವಾಸವಿದ್ದ ಉತ್ತರ ಪ್ರದೇಶ ಮೂಲದ ಅಮನ್ ದೇವ್ ಮಿಶ್ರಾ (28) ಎಂದು ಗುರುತಿಸಲಾಗಿದ್ದು, ಯುವತಿಯ ಗುರುತು ಇನ್ನೂ ಪತ್ತೆಯಾಗಿಲ್ಲ.

ಆದಿಯೋಗಿ ದರ್ಶನ ಮುಗಿಸಿ ಬೈಕ್‌ನಲ್ಲಿ ಬೆಂಗಳೂರಿನತ್ತ ತೆರಳುತ್ತಿದ್ದ ವೇಳೆ ಲಿಂಗಶೆಟ್ಟಿಪುರ ಗೇಟ್ ಬಳಿ ಹೆದ್ದಾರಿ ದಾಟುವಾಗ ಬಾಗೇಪಲ್ಲಿ ಕಡೆಯಿಂದ ವೇಗವಾಗಿ ಬಂದ ಕ್ಯಾಂಟರ್ ಬೈಕ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಇಬ್ಬರೂ ಕ್ಯಾಂಟರ್‌ನ ಚಕ್ರಗಳಡಿ ಸಿಲುಕಿದ್ದು, ಸುಮಾರು 100 ಮೀಟರ್‌ವರೆಗೆ ಎಳೆದುಕೊಂಡು ಹೋಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಭಾನುವಾರ ರಜೆ ಹಿನ್ನೆಲೆಯಲ್ಲಿ ಆದಿಯೋಗಿ ದರ್ಶನಕ್ಕೆ ಸಾವಿರಾರು ಪ್ರವಾಸಿಗರು ಆಗಮಿಸಿದ್ದರಿಂದ ಅಪಘಾತದ ಬಳಿಕ ರಾಷ್ಟ್ರೀಯ ಹೆದ್ದಾರಿ 44ರ ಎರಡೂ ಬದಿಗಳಲ್ಲಿ ಕಿಲೋ ಮೀಟರ್‌ಗಟ್ಟಲೆ ಸಂಚಾರ ದಟ್ಟಣೆ ಉಂಟಾಯಿತು. ಸ್ಥಳಕ್ಕೆ ಧಾವಿಸಿದ ಪೊಲೀಸರು ಮೃತದೇಹಗಳನ್ನು ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ಸಾಗಿಸಿ, ಸಂಚಾರ ಸುಗಮಗೊಳಿಸಲು ಹರಸಾಹಸಪಟ್ಟರು.

ಇದೇ ಸ್ಥಳದಲ್ಲಿ ಪದೇ ಪದೆ ಅಪಘಾತಗಳು ಸಂಭವಿಸುತ್ತಿರುವುದನ್ನು ಖಂಡಿಸಿ ಸ್ಥಳೀಯರು ಕೆಲಕಾಲ ಆದಿಯೋಗಿ ಕಡೆಗೆ ತೆರಳುವ ರಸ್ತೆಯನ್ನು ಬಂದ್ ಮಾಡಿ ಪ್ರತಿಭಟನೆ ನಡೆಸಿದರು. ಈಶಾ ಫೌಂಡೇಶನ್ ವತಿಯಿಂದ ಪರ್ಯಾಯ ರಸ್ತೆ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿದರು. ಘಟನೆ ಸಂಬಂಧ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಧರ್ಮಸ್ಥಳಕ್ಕೆ ತೆರಳುತ್ತಿದ್ದವರ ಕಾರು ಭೀಕರ ಅಪಘಾತ; ಮೂವರ ದುರ್ಮರಣ

ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್ ಸವಾರ ಸಾವು

ಚಿಂತಾಮಣಿ: ಕೆಲವು ದಿನಗಳ ಹಿಂದೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ವೈಜಕೂರು ಮತ್ತು ಜೋಡಿ ರಸ್ತೆಯ ಮಧ್ಯೆ ಅಪರಿಚಿತ ವಾಹನ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತ ಪಟ್ಟಿರುವ ಘಟನೆ ಇತ್ತೀಚೆಗೆ ನಡೆದಿತ್ತು. ಮೃತರನ್ನು ಆಂಧ್ರಪ್ರದೇಶದ ಮದನಪಲ್ಲಿ ನಿವಾಸಿ ಕೆಂಚಲ್ಲ ಮಧು ನಾಯ್ಡು (28) ಎಂದು ಗುರುತಿಸಲಾಗಿದೆ. ರಾತ್ರಿ ಸುಮಾರು 9 ಗಂಟೆಗೆ ಘಟನೆ ನಡೆದಿದ್ದು, ವೇಗವಾಗಿ ಬಂದ ಅಪರಿಚಿತ ವಾಹನ ಬೈಕ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿತ್ತು.

ರಾಜ್ಯದ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ.

ʼಪ್ರವಾಸಿ ಪ್ರಪಂಚʼ ವೆಬ್‌ಸೈಟ್‌ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್‌ ಮಾಡಿ.

Ramesh Ballamoole

View all posts by this author