ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Gudibande News: ಕಾಯಕ ಗ್ರಾಮ ಯೋಜನೆಯಡಿ ಎಲ್ಲೋಡು ಗ್ರಾ.ಪಂ. ದತ್ತು : ಸಿಇಒ ನವೀನ್ ಭಟ್

ಗ್ರಾಮ ಪಂಚಾಯಿತಿ ಕಾರ್ಯ ಕ್ಷಮತೆ ಹೆಚ್ಚಿಸಲು ಮತ್ತು ಗ್ರಾಮಗಳ ಜನರಿಗೆ ಉತ್ತಮ ಸೌಲಭ್ಯಗಳನ್ನು ಒದಗಿಸಲು ರಾಜ್ಯ ಸರ್ಕಾರವು ಕಾಯಕ ಗ್ರಾಮ ಯೋಜನೆಯನ್ನು ಜಾರಿಗೊಳಿಸಿದೆ. ಹಿಂದುಳಿದ ಗ್ರಾಮ ಪಂಚಾಯತ್ ಗಳಿಗೆ ಚುರುಕು ಮುಟ್ಟಿಸಲು ಮತ್ತು ಅವುಗಳ ಅಭಿವೃದ್ಧಿಗೆ ವೇಗ ನೀಡಲು ಗ್ರಾಮೀಣಾಭಿ ವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಈ ಯೋಜನೆಯನ್ನು ರೂಪಿಸಿದೆ. ಕಾಯಕದಿಂದಲೇ ಸಕಲವನ್ನೂ ಸಾಧಿಸಬಹುದು.

ಕಾಯಕ ಗ್ರಾಮ ಯೋಜನೆಯಡಿ ಎಲ್ಲೋಡು ಗ್ರಾ.ಪಂ. ದತ್ತು

ತಾಲೂಕಿನ ಎಲ್ಲೋಡು ಗ್ರಾಪಂ ಕಚೇರಿಯಲ್ಲಿ ಜಿಪಂ ಸಿಇಒ ನವೀನ್ ಭಟ್ ವೈ ರವರ ಅಧ್ಯಕ್ಷತೆಯಲ್ಲಿ ನಡೆದ ಕಾಯಕ ಗ್ರಾಮ ಸಭೆಯಲ್ಲಿ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವೈ ನವೀನ್ ಭಟ್ ಮಾತನಾಡಿದರು. -

Ashok Nayak
Ashok Nayak Nov 28, 2025 11:57 AM

ಗುಡಿಬಂಡೆ : ಸರ್ಕಾರಗಳ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾ ನಗೊಳಿಸಿ, ಮೂಲ ಸೌಕರ್ಯಗಳನ್ನು ಒದಗಿಸಲು ಕಾಯಕ ಗ್ರಾಮ ಯೋಜನೆಯಡಿ ಎಲ್ಲೋಡು ಗ್ರಾಮ ಪಂಚಾಯಿತಿಯನ್ನು ದತ್ತು ಪಡೆಯಲಾಗಿದೆ ಎಂದು ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವೈ ನವೀನ್ ಭಟ್ ತಿಳಿಸಿದರು.

ಈ ಸಂಬಂಧ ಎಲ್ಲೋಡು ಗ್ರಾಪಂ ಕಚೇರಿಯಲ್ಲಿ ಜಿಪಂ ಸಿಇಒ ನವೀನ್ ಭಟ್ ವೈ ರವರ ಅಧ್ಯಕ್ಷತೆ ಯಲ್ಲಿ ನಡೆದ ಕಾಯಕ ಗ್ರಾಮ ಸಭೆಯಲ್ಲಿ ಮಾತನಾಡಿದ ಅವರು, ಗ್ರಾಮ ಪಂಚಾಯಿತಿ ಕಾರ್ಯ ಕ್ಷಮತೆ ಹೆಚ್ಚಿಸಲು ಮತ್ತು ಗ್ರಾಮಗಳ ಜನರಿಗೆ ಉತ್ತಮ ಸೌಲಭ್ಯಗಳನ್ನು ಒದಗಿಸಲು ರಾಜ್ಯ ಸರ್ಕಾರವು ಕಾಯಕ ಗ್ರಾಮ ಯೋಜನೆಯನ್ನು ಜಾರಿಗೊಳಿಸಿದೆ. ಹಿಂದುಳಿದ ಗ್ರಾಮ ಪಂಚಾಯತ್ ಗಳಿಗೆ ಚುರುಕು ಮುಟ್ಟಿಸಲು ಮತ್ತು ಅವುಗಳ ಅಭಿವೃದ್ಧಿಗೆ ವೇಗ ನೀಡಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಈ ಯೋಜನೆಯನ್ನು ರೂಪಿಸಿದೆ. ಕಾಯಕದಿಂದಲೇ ಸಕಲವನ್ನೂ ಸಾಧಿಸಬಹುದು. ಬದುಕಿನ ಸಾರ್ಥಕತೆ ಕಾಣಬಹುದು. ಈ ಮಹತ್ವದ ಕಾಯಕ ತತ್ವವನ್ನು ಅರ್ಥಪೂರ್ಣವಾಗಿಸಲು ನಮ್ಮ ಸರ್ಕಾರವು ಕಾಯಕ ಗ್ರಾಮ ಎಂಬ ಮಹತ್ವದ ಕಾರ್ಯಕ್ರಮ ರೂಪಿಸಲಾಗಿದೆ ಎಂದರು.

ಇದನ್ನೂ ಓದಿ: Gudibande News: ಮಕ್ಕಳಲ್ಲಿನ ಪ್ರತಿಭೆ ಅನಾವರಣಕ್ಕೆ ಪ್ರೋತ್ಸಾಹ ಅತ್ಯಗತ್ಯ: ಬಾಲಾಜಿ

ಇನ್ನೂ ಕಾಯಕ ಗ್ರಾಮ ಯೋಜನೆ ರಾಜ್ಯದ ಹಿಂದುಳಿದ ಗ್ರಾಮ ಪಂಚಾಯಿತಿಗಳನ್ನು ಅಭಿವೃದ್ಧಿ ಪಡಿಸಲು ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿವಿಧ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಗುರಿಯನ್ನು ಹೊಂದಿದೆ. ಈ ಯೋಜನೆಯಡಿ, ಹಿರಿಯ ಅಧಿಕಾರಿಗಳು ಹಿಂದುಳಿದ ಗ್ರಾಮ ಪಂಚಾಯಿತಿಗಳನ್ನು ದತ್ತು ಪಡೆದು, ಮುಂದಿನ ಮೂರು ವರ್ಷಗಳಲ್ಲಿ ಶಿಕ್ಷಣ, ಆರೋಗ್ಯ, ಮೂಲಸೌಕರ್ಯ ಮತ್ತು ಪರಿಸರ ಸಂರಕ್ಷಣೆ ಸೇರಿದಂತೆ ಸಮಗ್ರ ಅಭಿವೃದ್ಧಿ ಕಾರ್ಯ ಗಳನ್ನು ಕೈಗೊಳ್ಳುತ್ತಾರೆ. ಈ ಯೋಜನೆಯು ಉತ್ತಮ ಆಡಳಿತ ಮತ್ತು ಗ್ರಾಮ ಪಂಚಾಯಿತಿಗಳ ಕಾರ್ಯಕ್ಷಮತೆಯನ್ನು ಸುಧಾರಿಸುವ ಗುರಿಯನ್ನು ಹೊಂದಿದೆ ಎಂದರು.

೧೯ ಪ್ರಮುಖ ಉದ್ದೇಶಗಳು: ಯೋಜನೆಯಡಿ ಒಟ್ಟು ೧೯ ನಿರ್ದಿಷ್ಟ ಗುರಿಗಳನ್ನು ಹಾಕಿಕೊಳ್ಳಲಾಗಿದೆ. ಪ್ರಮುಖವಾಗಿ ಆಡಳಿತಾತ್ಮಕ ಸುಧಾರಣೆ, ಗ್ರಾಪಂ ಸಭೆಗಳ ಸಮರ್ಪಕ ನಿರ್ವಹಣೆ, ಕುಡಿಯುವ ನೀರು, ಬೀದಿ ದೀಪ ಮತ್ತು ಘನತ್ಯಾಜ್ಯ ನಿರ್ವಹಣೆಗೆ ಆದ್ಯತೆ ನೀಡಲಾಗುವುದು. ಅಲ್ಲದೆ, ಪಂಚಾ ಯಿತಿ ವ್ಯಾಪ್ತಿಯ ಆಸ್ತಿಗಳನ್ನು ಗುರುತಿಸಿ ತೆರಿಗೆ ವ್ಯಾಪ್ತಿಗೆ ತರುವುದು, ಕೂಸಿನ ಮನೆ, ಗ್ರಂಥಾಲಯ, ನೈರ್ಮಲ್ಯ, ಎಸ್‌ಸಿ/ಎಸ್‌ಟಿ ಕಲ್ಯಾಣ ಹಾಗೂ ನರೇಗಾ ಯೋಜನೆಗಳ ಅನುಷ್ಠಾನದತ್ತ ಗಮನ ಹರಿಸಲಾಗುವುದು ಎಂದು ತಿಳಿಸಿದರು.

ಬಳಿಕ ಎಲ್ಲೋಡು ಸರ್ಕಾರಿ ಪ್ರೌಢಶಾಲೆಗೆ ಭೇಟಿ ನೀಡಿದ ಸಿಇಒ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಗಳೊಂದಿಗೆ ಸಂವಾದ ನಡೆಸಿದರು. ಪರೀಕ್ಷೆಯಲ್ಲಿ ಉತ್ತಮ ದರ್ಜೆಯಲ್ಲಿ ಉತ್ತೀರ್ಣರಾಗಲು ಅಗತ್ಯ ವಿರುವ ಸೌಲಭ್ಯಗಳು ಹಾಗೂ ಶೈಕ್ಷಣಿಕ ತಯಾರಿ ಕುರಿತು ಶಿಕ್ಷಕರು ಮತ್ತು ವಿದ್ಯಾರ್ಥಿಗಳೊಂದಿಗೆ ಚರ್ಚಿಸಿದರು. ಈ ಸಂದರ್ಭದಲ್ಲಿ ತಾಲೂಕು ಪಂಚಾಯಿತಿ ಇಒ ನಾಗಮಣಿ, ಪಿಡಿಒ ಎ.ಆರ್. ಶ್ರೀನಿವಾಸ್, ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಹಾಗೂ ಸಿಬ್ಬಂದಿ ಉಪಸ್ಥಿತ ರಿದ್ದರು.