ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Praja Seva: ಅರ್ಜಿ ಸಲ್ಲಿಸುವ ವಿಧಾನ ತಿಳಿದು, ಅಗತ್ಯ ದಾಖಲೆಗಳೊಂದಿಗೆ ಅರ್ಜಿ ನೀಡಿ ಶೇ.100ರಷ್ಟು ವಿಲೇವಾರಿಗೆ ಕ್ರಮ

ಸಾರ್ವಜನಿಕರು ಪ್ರಜಾಸೇವಾ ಆಂದೋಲನದ ಮೂಲಕ ತಮ್ಮ ಸಮಸ್ಯೆಗಳಿಗೆ ಪರಿಹಾರ ಪಡೆಯಲು ಸದ್ಬಳಕೆ ಮಾಡಿಕೊಳ್ಳಬೇಕು. ಅರ್ಜಿ ಸಲ್ಲಿಸುವ ವಿಧಾನವನ್ನು ಸರಿಯಾಗಿ ತಿಳಿದು, ಅಗತ್ಯ ದಾಖಲೆ ಗಳೊಂದಿಗೆ ಅರ್ಜಿ ಸಲ್ಲಿಸಿ ಸ್ವೀಕೃತಿ ಪಡೆದುಕೊಂಡರೆ, ಅರ್ಜಿಗಳ ಶೇ.100ರಷ್ಟು ವಿಲೇವಾರಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಪ್ರಭು ಹೇಳಿದರು.

ಚಿಕ್ಕಬಳ್ಳಾಪುರ: ಸಾರ್ವಜನಿಕರು ಪ್ರಜಾಸೇವಾ ಆಂದೋಲನದ ಮೂಲಕ ತಮ್ಮ ಸಮಸ್ಯೆಗಳಿಗೆ ಪರಿಹಾರ ಪಡೆಯಲು ಸದ್ಬಳಕೆ ಮಾಡಿಕೊಳ್ಳಬೇಕು. ಅರ್ಜಿ ಸಲ್ಲಿಸುವ ವಿಧಾನವನ್ನು ಸರಿಯಾಗಿ ತಿಳಿದು, ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಿ ಸ್ವೀಕೃತಿ ಪಡೆದುಕೊಂಡರೆ, ಅರ್ಜಿಗಳ ಶೇ.100ರಷ್ಟು ವಿಲೇವಾರಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಪ್ರಭು ಹೇಳಿದರು.

ಶಿಡ್ಲಘಟ್ಟ ತಾಲ್ಲೂಕಿನ ವೈ.ಹುಣಸೇನಹಳ್ಳಿ ಗ್ರಾಮದಲ್ಲಿ ಶನಿವಾರ ನಡೆದ ಪ್ರಜಾ ಸೇವಾ ಆಂದೋಲನ(Public Service Movement)ದ ತಾಲ್ಲೂಕು ಮಟ್ಟದ ಮೂರನೇ ಸಭೆಗೆ ಚಾಲನೆ ನೀಡಿ ಮಾತನಾಡಿದರು.

ಸರ್ಕಾರದ ನಿರ್ದೇಶನದಂತೆ ಪ್ರಜಾಸೇವಾ ಆಂದೋಲನದ ಸಭೆಗಳನ್ನು ಮೊದಲು ಹೋಬಳಿ ಹಾಗೂ ನಂತರ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಪರಿಣಾಮಕಾರಿಯಾಗಿ ನಡೆಸಬೇಕು. ಸಾರ್ವಜನಿ ಕರು ಸಲ್ಲಿಸುವ ಅರ್ಜಿಗಳನ್ನು ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿ, ನಿಗದಿತ ಅವಧಿಯಲ್ಲಿ ವಿಲೇವಾರಿ ಮಾಡಬೇಕು. ಕರ್ತವ್ಯಲೋಪ ಅಥವಾ ನಿರ್ಲಕ್ಷ್ಯ ಕಂಡುಬಂದರೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಇದನ್ನೂ ಓದಿ: Praja Seve: ಪ್ರಜಾ ಸೇವೆಯಲ್ಲಿ ಜನರ ಆಕ್ರೋಶ: ಅರ್ಜಿಗಳಿಗಷ್ಟೇ ಸೀಮಿತವೇ...ಪ್ರಜಾ ಸೇವೆಯಲ್ಲಿ ಸಮಸ್ಯೆಗಳಿಗೆ ಪರಿಹಾರ ಯಾವಾಗ?

ಜಿಲ್ಲೆಯಲ್ಲಿ ದಾಖಲೆಗಳಿಲ್ಲದೆ ನಿರ್ಮಿಸಿರುವ ಸುಮಾರು 1.40 ಲಕ್ಷ ಮನೆಗಳಿಗೆ ಮುಂದಿನ ನಾಲ್ಕು ತಿಂಗಳಲ್ಲಿ ಕಂದಾಯ ಗ್ರಾಮ ಅಭಿಯಾನದಡಿ ಮಾಲೀಕತ್ವದ ದಾಖಲೆ ಹಾಗೂ ಹಕ್ಕುಪತ್ರಗಳನ್ನು ಒಂದೇ ವೇದಿಕೆಯಲ್ಲಿ ಒದಗಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಈಗಾಗಲೇ ಪ್ರತಿ ತಾಲ್ಲೂಕಿನ 50 ರಿಂದ 60 ಗ್ರಾಮಗಳಲ್ಲಿ ಅಳತೆ ಕಾರ್ಯ ಪೂರ್ಣಗೊಂಡಿದೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಶೇ.60ರಷ್ಟು ಮಳೆ ಕೊರತೆಯಿಂದ ತೀವ್ರ ಬರ ಪರಿಸ್ಥಿತಿ ಎದುರಾಗಿದ್ದು, 1.53 ಲಕ್ಷ ರೈತರು ಬೆಳೆ ವಿಮೆ ಮಾಡಿಸಿದ್ದಾರೆ. ಮುಂದಿನ 10 ದಿನಗಳಲ್ಲಿ ಸುಮಾರು ರೂಪಾಯಿ 74 ಕೋಟಿ ವಿಮಾ ಮೊತ್ತ ಪಾವತಿಯಾಗುವ ನಿರೀಕ್ಷೆಯಿದೆ. ಜಾನುವಾರುಗಳಿಗೆ ಮೇವು ಒದಗಿಸುವ ಉದ್ದೇಶ ದಿಂದ ನೀರಾವರಿ ಸೌಲಭ್ಯ ಹೊಂದಿರುವ ರೈತರಿಗೆ 12 ಸಾವಿರ ಬಿತ್ತನೆ ಬೀಜ ಕಿಟ್‌ಗಳನ್ನು ವಿತರಿಸಲಾಗುತ್ತಿದೆ ಎಂದರು.

19cbpm1ಪ್ರಜಾಸೇವಾ ಆಂದೋಲನ- (9) ಒಕ

ಶಿಡ್ಲಘಟ್ಟ ತಾಲ್ಲೂಕಿನ ಎಚ್.ಎನ್.ವ್ಯಾಲಿ ವ್ಯಾಪ್ತಿಯ ಕೆರೆಗಳಿಗೆ ನೀರು ಹರಿಸುವ ಕಾಲುವೆಗಳ ದುರಸ್ತಿ ಕಾರ್ಯ ನಡೆಯುತ್ತಿದ್ದು, ಶೀಘ್ರದಲ್ಲೇ ನಿಗದಿತ ಪ್ರಮಾಣದಲ್ಲಿ ನೀರು ಹರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಹೇಳಿದರು.

ಜಿಲ್ಲೆಯಲ್ಲಿನ ಕಂದಾಯ ಹಾಗೂ ಅರಣ್ಯ ಭೂಮಿ ಸಂಬAಧಿತ ಸಮಸ್ಯೆಗಳಿಗೆ ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಜಿಲ್ಲಾಧಿಕಾರಿ ನೇತೃತ್ವದ ಸಮಿತಿ ಅಂತಿಮ ಕ್ರಮ ಕೈಗೊಳ್ಳುತ್ತಿದೆ. 597 ಸರ್ವೆ ಸಂಖ್ಯೆಗಳ ವ್ಯಾಪ್ತಿಯ ಸಮಸ್ಯೆ ಪರಿಶೀಲಿಸಲಾಗುತ್ತಿದ್ದು, ಮೂಲತಃ ಉಳುಮೆ ಮಾಡುತ್ತಿರುವ ರೈತರಿಗೆ ಸೇರಿದ ಜಮೀನುಗಳ ಪಹಣಿ ತಿದ್ದುಪಡಿ ಕಾರ್ಯವೂ ನಡೆಯುತ್ತಿದೆ. ಈಗಾಗಲೇ 5 ಸಾವಿರ ಎಕರೆ ಜಮೀನನ್ನು ಅರಣ್ಯ ವ್ಯಾಪ್ತಿಯಿಂದ ಕೈಬಿಡಲಾಗಿದೆ ಎಂದು ತಿಳಿಸಿದರು.

ಮುಂದಿನ ಒಂದು ವಾರದಲ್ಲಿ 200 ಅಂಗನವಾಡಿ ಸಿಬ್ಬಂದಿ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಿ, ಜಿಲ್ಲೆಯ ಎಲ್ಲ ಅಂಗನವಾಡಿಗಳ ಮೂಲಕ ಗರ್ಭಿಣಿಯರು ಹಾಗೂ ಮಕ್ಕಳಿಗೆ ಪೌಷ್ಟಿಕ ಆಹಾರ ವಿತರಣೆಯನ್ನು ಸಮರ್ಪಕಗೊಳಿಸಲಾಗುವುದು. 25 ವರ್ಷ ಮೇಲ್ಪಟ್ಟವರಿಗೆ ಮನೆ ಬಾಗಿಲಲ್ಲೇ ಆರೋಗ್ಯ ತಪಾಸಣೆ ನಡೆಸಿ, ರಕ್ತದೊತ್ತಡ, ಮಧುಮೇಹ, ಕುಷ್ಠರೋಗ, ಕ್ಷಯರೋಗ ಸೇರಿದಂತೆ 10 ಬಗೆಯ ಕಾಯಿಲೆಗಳ ತಪಾಸಣೆ ನಡೆಸಲಾಗುವುದು. ಅಗತ್ಯವಿರುವವರಿಗೆ ಸೂಕ್ತ ಚಿಕಿತ್ಸೆ ಒದಗಿಸುವ ಕಾರ್ಯಕ್ರಮವನ್ನೂ ಶೀಘ್ರ ಜಾರಿಗೊಳಿಸಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಜಿ.ಪ್ರಭು ಅವರು ಸಾರ್ವಜನಿಕರಿಂದ ಸ್ವತಃ ಅರ್ಜಿಗಳನ್ನು ಸ್ವೀಕರಿಸಿ, ಅವುಗಳ ವಿಲೇವಾರಿ ಪ್ರಕ್ರಿಯೆಯಲ್ಲಿ ಭಾಗವಹಿಸಿದರು. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ವೈ.ನವೀನ್ ಭಟ್ ಸೇರಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು, ಸಿಬ್ಬಂದಿ ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.

ಶಿಡ್ಲಘಟ್ಟ, ಗೌರಿಬಿದನೂರು, ಬಾಗೇಪಲ್ಲಿ, ಚಿಕ್ಕಬಳ್ಳಾಪುರ ಹಾಗೂ ಚಿಂತಾಮಣಿ ವ್ಯಾಪ್ತಿಯಲ್ಲೂ ಅಧಿಕಾರಿಗಳು ಸಾರ್ವಜನಿಕರಿಂದ ಅರ್ಜಿಗಳನ್ನು ಸ್ವೀಕರಿಸಿ, ವಿಲೇವಾರಿ ಪ್ರಕ್ರಿಯೆಯಲ್ಲಿ ಭಾಗವಹಿಸಿ ದರು.