ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

K H Puttaswamy gowda: ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವುದು ಎಲ್ಲರ ಜವಾಬ್ದಾರಿ: ಶಾಸಕ ಪುಟ್ಟಸ್ವಾಮಿಗೌಡ

ಸಮಾಜದ ಪ್ರತಿಯೊಬ್ಬರಿಗೂ ಸಾಮಾಜಿಕ, ಆರ್ಥಿಕ ಹಾಗೂ ರಾಜಕೀಯ ನ್ಯಾಯ ದೊರೆಯುವಂತೆ ಮಾಡುವ ನಿಟ್ಟಿನಲ್ಲಿ ಎಲ್ಲರೂ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು. ಸಂವಿಧಾನ ಪ್ರತಿಪಾದಿ ಸಿರುವ ಸಮಾನತೆ, ಸ್ವಾತಂತ್ರ್ಯ, ಸಾಮಾಜಿಕ ನ್ಯಾಯ ಮತ್ತು ಭ್ರಾತೃತ್ವದ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು.

ಗೌರಿಬಿದನೂರು: ಡಾ.ಬಿ.ಆರ್.ಅಂಬೇಡ್ಕರ್(Dr B R Ambedkar) ಅವರು ನೀಡಿರುವ ಭಾರತೀಯ ಸಂವಿಧಾನವು ಪ್ರತಿಯೊಬ್ಬ ನಾಗರಿಕನಿಗೂ ಸಮಾನ ಹಕ್ಕು, ಗೌರವಯುತ ಜೀವನ ಹಾಗೂ ನ್ಯಾಯ ಯುತ ಅವಕಾಶಗಳನ್ನು ಖಾತ್ರಿಪಡಿಸುವ ಮಹತ್ವದ ಮಾರ್ಗದರ್ಶಿಯಾಗಿದೆ ಎಂದು ಶಾಸಕ ಕೆ.ಹೆಚ್.ಪುಟ್ಟಸ್ವಾಮಿಗೌಡ(MLA K H Puttaswamy gowda) ಹೇಳಿದರು.

ನಗರದ ತಾಲೂಕು ಕಚೇರಿ ಸಭಾಂಗಣದಲ್ಲಿ ತಾಲೂಕು ಆಡಳಿತದ ವತಿಯಿಂದ ಆಯೋಜಿಸಿದ್ದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿದು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಮತ್ತಷ್ಟು ಬಲಪಡಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದರು.

ಇದನ್ನೂ ಓದಿ: K H Puttaswamy Gowda: ಜನರ ಸಮಸ್ಯೆಗಳಿಗೆ ಕಾಲಮಿತಿಯಲ್ಲಿ ಪರಿಹಾರ ನೀಡಿ: ಶಾಸಕ ಪುಟ್ಟಸ್ವಾಮಿಗೌಡ

ಸಮಾಜದ ಪ್ರತಿಯೊಬ್ಬರಿಗೂ ಸಾಮಾಜಿಕ, ಆರ್ಥಿಕ ಹಾಗೂ ರಾಜಕೀಯ ನ್ಯಾಯ ದೊರೆಯುವಂತೆ ಮಾಡುವ ನಿಟ್ಟಿನಲ್ಲಿ ಎಲ್ಲರೂ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು. ಸಂವಿಧಾನ ಪ್ರತಿಪಾದಿಸಿರುವ ಸಮಾನತೆ, ಸ್ವಾತಂತ್ರ್ಯ, ಸಾಮಾಜಿಕ ನ್ಯಾಯ ಮತ್ತು ಭ್ರಾತೃತ್ವದ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಸರ್ವರಿಗೂ ಸಮಾನ ಅವಕಾಶ ಹಾಗೂ ಗೌರವಯುತ ಬದುಕು ಕಲ್ಪಿಸುವ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಅರವಿಂದ್, ತಾಪಂ ಇಒ ಜಿ.ಕೆ.ಹೊನ್ನಯ್ಯ, ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಎನ್.ಆರ್.ಮಂಜುನಾಥ್, ವಕೀಲರ ಸಂಘದ ಅಧ್ಯಕ್ಷ ದಿನೇಶ್ ಕುಮಾರ್, ವಿವಿಧ ಇಲಾಖೆಗಳ ಅಧಿಕಾರಿಗಳು, ದಲಿತ ಸಂಘಟನೆಗಳ ಮುಖಂಡರು, ಕೆ.ಹೆಚ್.ಪಿ. ಬಣದ ಮುಖಂಡರು, ಕಾಲೇಜು ಉಪನ್ಯಾಸಕರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.