ಗೌರಿಬಿದನೂರು: ನಗರದ ಕೋಟೆಯಲ್ಲಿರುವ ಅಂಬೇಡ್ಕರ್ ಭವನದಲ್ಲಿ ಕಾರ್ಮಿಕ ಇಲಾಖೆ ಮತ್ತು ಗ್ರಾಮೀಣ ಯುವ ಕಲಾ ಸಂಘದ ವತಿಯಿಂದ ಜಾನಪದ ಕಲಾವಿದರ ನೋಂದಣಿ ಕಾರ್ಯ ವನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಮಿಕ ನಿರೀಕ್ಷಕ ಟಿ ಬಿ ಸತೀಶ್ ಮಾತನಾಡಿ, ಅಸಂಘಟಿತ ಕಾರ್ಮಿಕ ಭದ್ರತಾ ಮಂಡಳಿಯಿAದ ಅಂಬೇಡ್ಕರ್ ಸಹಾಯ ಹಸ್ತ ಯೋಜನೆಯಡಿ ಅಸಂಘಟಿತ ಕಾರ್ಮಿಕರಿಗಾಗಿ ಉಚಿತ ನೋಂದಣಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಇದರಲ್ಲಿ 91 ವಿವಿಧ ಬಗೆಯ ಕೆಲಸಗಳಲ್ಲಿ ತೊಡಗಿಸಿ ಕೊಂಡಿರುವ ಕಾರ್ಮಿಕರನ್ನು ಗುರುತಿಸಿ ಅಂತಹವರಿಗೆ ಈ ಗುರುತಿನ ಚೀಟಿಯನ್ನು ನೀಡಲಾಗು ವುದು, ಎಲ್ಲಾ ಅಸಂಘಟಿತ ಕಾರ್ಮಿಕರು ಗುರುತಿನ ಚೀಟಿ ಪಡೆದು, ಸರ್ಕಾರದ ಸೌಲಭ್ಯಗಳನ್ನು ಪಡೆಯಬೇಕು ಎಂದು ತಿಳಿಸಿದರು.
ಇದನ್ನೂ ಓದಿ: Chikkaballapur (Chinthamani) News: ಕಲಿತ ವಿದ್ಯೆ ಮಾತ್ರ ಕೊನೆಯವರೆಗೂ ಜತೆಗಿರುತ್ತದೆ
ಜಾನಪದ ಯುವ ಕಲಾ ಸಂಘದ ಅಧ್ಯಕ್ಷ ಗೊಟ್ಲಗುಂಟೆ ವೆಂಕಟರಮಣಪ್ಪ ಮಾತನಾಡಿ, ಜಾನಪದ ಕಲಾವಿದರು ರಾಜ್ಯದೆಲ್ಲೆಡೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಾರೆ, ಇಂತಹ ಸಂದರ್ಭದಲ್ಲಿ ಯಾವುದಾದರು ಅವಘಡ ಸಂಭವಿಸಿದರೆ, ಸರ್ಕಾರದಿಂದ ಜಾನಪದ ಕಲಾವಿದರಿಗೆ ಸಹಾಯ ಹಸ್ತ ಸಿಗಲಿದೆ, ಹಾಗೂ ಕಲಾವಿದರ ಭದ್ರತೆಗಾಗಿ ಈ ಯೋಜನೆ ಅನುಕೂಲವಾಗಲಿದೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಛಲವಾದಿ ನಾರಾಯಣ ಸ್ವಾಮಿ, ಪವನ್, ಹಾಗೂ ಜಾನಪದ ಕಲಾವಿದರು ಹಾಜರಿದ್ದರು.