ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Chikkaballapur News: ಬಾಗೇಪಲ್ಲಿಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ ; ನಾಡಿನ ಒಳಿತಿಗೆ ನಾರಿಯರ ಪ್ರಾರ್ಥನೆ

ವರಮಹಾಲಕ್ಷ್ಮಿ ದೇವಿಗೆ ಸೀರೆ ಉಡಿಸಿ, ಕಲಶ ಇಟ್ಟು ವಸ್ತ್ರ, ಒಡವೆ, ಧನಕನಕಾದಿಗಳನ್ನಿಟ್ಟು, ಫಲ ವಸ್ತುಗಳು, ಅರಶಿನ ಕುಂಕುಮ, ನೈವೇದ್ಯಕ್ಕೆ ಹಣ್ಣು, ತರಕಾರಿ, ಬಗೆಬಗೆಯ ತಿನಿಸುಗಳನ್ನು ತಯಾರಿಸಿ ಮಹಾಲಕ್ಷ್ಮಿ ದೇವಿಯ ಮುಂದಿಟ್ಟು ಪೂಜಿಸುತ್ತಾರೆ. ಮಹಿಳೆಯರೇ ಮಾಡುವ ಹಬ್ಬ ಇದಾಗಿರುವು ದರಿಂದ ಮಹಿಳೆಯರು ನಸುಕಿನಲ್ಲಿಯೇ ಎದ್ದು ಮನೆಯ ಮುಂದೆ ಸಾರಿಸಿ ರಂಗೋಲಿ ಬಳಿದು ಸ್ನಾನ ಮಾಡಿ ಬಂದು ಹೊಸ ಉಡುಗೆ ತೊಟ್ಟು ದೇವಿಗೆ ಮುಂದೆ ಕುಳಿತು ಸಂಕಲ್ಪ ಮಾಡಿ ವ್ರತ ಕೈಗೊಳ್ಳುತ್ತಾರೆ.

ಬಾಗೇಪಲ್ಲಿಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

Ashok Nayak Ashok Nayak Aug 9, 2025 1:39 PM

ಬಾಗೇಪಲ್ಲಿ: ಶ್ರಾವಣ ಮಾಸದ 2ನೇ ಶುಕ್ರವಾರದಂದು ಆಚರಿಸುವ ವರಮಹಾಲಕ್ಷ್ಮಿ ಹಬ್ಬವನ್ನು ಪಟ್ಟಣದ ಸೇರಿದಂತೆ ತಾಲೂಕಿನಾದ್ಯಂತ ಅತ್ಯಂತ ಸಡಗರ, ಸಂಭ್ರಮದಿಂದ ಆಚರಣೆ ಮಾಡ ಲಾಯಿತು.

ಪಟ್ಟಣದ ಪ್ರತಿ ಮನೆಗಳಲ್ಲಿಯೂ ತಾಯಿ ವರಮಹಾಲಕ್ಷ್ಮಿಯ ವೈಭವ ಜೋರಾಗಿದೆ.ಬಾಗೇಪಲ್ಲಿ ಪಟ್ಟಣದ ವೇಣು ಅವರ ಮನೆಯಲ್ಲಿ ವಿಶೇಷವಾಗಿ ಮಹಾಲಕ್ಷ್ಮಿ ವಿಶೇಷವಾಗಿ ದೇವಿಗೆ ಅಲಂಕಾರ ಮಾಡಿ ಪೂಜೆ ಸಲ್ಲಿಸಿದ್ದಾರೆ. ಜೊತೆಗೆ ಮುತ್ತೈದೆಯರಿಗೆ ಉಡಿ ತುಂಬುವ ಮೂಲಕ ಪಾರಂಪರಿಕ ವಾಗಿ ನಡೆದುಕೊಂಡು ಬಂದಿರುವ ಹಬ್ಬಗಳನ್ನು ಶ್ರದ್ಧಾ ಭಕ್ತಿಯಿಂದ ಆಚರಣೆ ಮಾಡಿದರು.

ಸಮೃದ್ಧಿ, ಏಳಿಗೆ ಹಾಗೂ ಸಂಪತ್ತಿನ ಸಂಕೇತವಾದ ವರಮಹಾಲಕ್ಷ್ಮಿ ಮೂರ್ತಿಗೆ ಮಹಿಳೆಯರು ಹೂವು, ಹಣ್ಣಿನ ನೈವೇದ್ಯ ಅರ್ಪಿಸಿದರು. ನಂತರ ಸುಮಂಗಲಿಯರೆಲ್ಲ ಅರಿಶಿಣ-ಕುಂಕುಮ ವಿನಿಮಯ ಮಾಡಿಕೊಂಡು ನಾಡಿಗೆ ಒಳಿತಾಗಲಿ ಎಂದು ಪ್ರಾರ್ಥಿಸಿದರು.

ಇದನ್ನೂ ಓದಿ: Chikkaballapur News: ರಾಜಲಕ್ಷ್ಮೀ ದೇವಸ್ಥಾನಕ್ಕೆ ಹರಿದು ಬಂದ ಭಕ್ತ ಸಾಗರ

ಸಂಪತ್ತಿನ ಅಧಿದೇವತೆ ಲಕ್ಷ್ಮಿಯನ್ನು ಪೂಜಿಸುವ ಹಬ್ಬ ವರಮಹಾಲಕ್ಷ್ಮಿ, ಶ್ರಾವಣ ಮಾಸದ ಎರಡನೇ ಶುಕ್ರವಾರ ಆಡಿ ಶುಕ್ರವಾರದಂದು ಆಚರಿಸಲಾಗುತ್ತದೆ. ಹಾಗಾಗಿ ಧನಕನಕಾದಿ ಐಶ್ವರ್ಯಗಳನ್ನು ಕರುಣಿಸು ಎಂದು ಭಕ್ತರು ತಮ್ಮ ಮನೆಗಳಲ್ಲಿ ಇಷ್ಟಾನುಸಾರ, ಶಕ್ತಿಯಾನುಸಾರ ಪೂಜೆ ಮಾಡುತ್ತಾರೆ.

ವರಮಹಾಲಕ್ಷ್ಮಿ ದೇವಿಗೆ ಸೀರೆ ಉಡಿಸಿ, ಕಲಶ ಇಟ್ಟು ವಸ್ತ್ರ, ಒಡವೆ, ಧನಕನಕಾದಿಗಳನ್ನಿಟ್ಟು, ಫಲವಸ್ತುಗಳು, ಅರಶಿನ ಕುಂಕುಮ, ನೈವೇದ್ಯಕ್ಕೆ ಹಣ್ಣು, ತರಕಾರಿ, ಬಗೆಬಗೆಯ ತಿನಿಸುಗಳನ್ನು ತಯಾರಿಸಿ ಮಹಾಲಕ್ಷ್ಮಿ ದೇವಿಯ ಮುಂದಿಟ್ಟು ಪೂಜಿಸುತ್ತಾರೆ. ಮಹಿಳೆಯರೇ ಮಾಡುವ ಹಬ್ಬ ಇದಾಗಿರುವುದರಿಂದ ಮಹಿಳೆಯರು ನಸುಕಿನಲ್ಲಿಯೇ ಎದ್ದು ಮನೆಯ ಮುಂದೆ ಸಾರಿಸಿ ರಂಗೋಲಿ ಬಳಿದು ಸ್ನಾನ ಮಾಡಿ ಬಂದು ಹೊಸ ಉಡುಗೆ ತೊಟ್ಟು ದೇವಿಗೆ ಮುಂದೆ ಕುಳಿತು ಸಂಕಲ್ಪ ಮಾಡಿ ವ್ರತ ಕೈಗೊಳ್ಳುತ್ತಾರೆ.

ನಂತರ ದೇವಿಗೆ ಬಗೆಬಗೆಯ ತಿನಿಸುಗಳನ್ನು ತಯಾರಿಸಿ ದೇವರ ಮುಂದಿಡುತ್ತಾರೆ. ಹಲವೆಡೆ ಸಾಯಂಕಾಲ ಶುಕ್ರವಾರ ವರಮಹಾಲಕ್ಷ್ಮಿಗೆ ಪೂಜೆ ಮಾಡುತ್ತಾರೆ. ಸಾಯಂಕಾಲ ಹೊತ್ತು ಮುತ್ತೈದೆಯರನ್ನು ಅರಶಿನ ಕುಂಕುಮಕ್ಕೆ ಕರೆಯುವುದು ಬಹುತೇಕ ಕಡೆ ವಾಡಿಕೆಯಿದೆ.

ಹೆಣ್ಣು ಮಕ್ಳಳು ಈ ಹಬ್ವನ್ನು ಆಚರಿಸಿ ತಮ್ಮ ನೆರೆ ಹೊರೆಯವರನ್ನು, ಬಂಧುಗಳನ್ನು ಮನೆಗೆ ಆಹ್ವಾನಿಸುತ್ತಾರೆ. ಮನೆಯಲ್ಲಿ ಸುಖ , ಸಂಪತ್ತು, ಸಮೃದ್ಧಿ ನೆಲೆಸಲಿ ಎಂದು ಪ್ರಾರ್ಥಿಸುತ್ತಾರೆ. ಹೆಸರೇ ಹೇಳುವಂತೆ ಬೇಡಿದ ಭಕ್ತರಿಗೆ ವರವನ್ನು ಕರುಣಿಸುವ ವರಮಹಾಲಕ್ಷ್ಮಿ ಹಬ್ಬಕ್ಕೆ ವಿಶೇಷ ಮಹತ್ವವಿದೆ.