Shidlaghatta News: ಶಿಡ್ಲಘಟ್ಟದಲ್ಲಿ ವೈಭವದಿಂದ ನಡೆದ ವೀರಬ್ರಹ್ಮೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವ
ಮಹೋತ್ಸವವನ್ನು ಶ್ರದ್ಧಾಭಕ್ತಿಯಿಂದ ಆಯೋಜಿಸಲಾಗಿದ್ದು, ನಗರ ಮತ್ತು ಗ್ರಾಮೀಣ ಭಾಗದ ಮುಖಂಡರು ಹಾಗೂ ವಿಶ್ವಕರ್ಮ ಸಮುದಾಯದ ಕುಲಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮಕ್ಕೆ ವಿಶೇಷ ಮೆರಗು ತಂದರು. ಭಕ್ತರ ಸಮ್ಮುಖದಲ್ಲಿ ನಡೆದ ಕಾರ್ಯ ಕ್ರಮವು ಧಾರ್ಮಿಕ ವಾತಾವರಣವನ್ನು ಮತ್ತಷ್ಟು ಮೆರಗುಗೊಳಿಸಿತು.
-
ಶಿಡ್ಲಘಟ್ಟ: ನಗರದ ಅಯ್ಯಪ್ಪಸ್ವಾಮಿ ದೇವಾಲಯದ ಮುಂಭಾಗದ ಆಶೋಕ ರಸ್ತೆಯಲ್ಲಿ ಇರುವ ಪುರೋಹಿತರಾದ ಟಿ. ವೀರಭ್ರಮಯ್ಯಚಾರಿ ಹಾಗೂ ಭಾರತಮ್ಮ ದಂಪತಿಗಳ ನಿವಾಸದಲ್ಲಿ ವಿಶ್ವಕರ್ಮ ಶ್ರೀಮತ್ ಪೋತಲೂರು ವೀರಬ್ರಹ್ಮೇಂದ್ರ ಸ್ವಾಮಿಗಳವರ 5ನೇ ವರ್ಷದ ಆರಾಧನಾ ಮಹೋತ್ಸವವನ್ನು ಭಕ್ತಿಭಾವದಿಂದ ಆಚರಿಸಲಾಯಿತು.
ಈ ಮಹೋತ್ಸವವನ್ನು ಶ್ರದ್ಧಾಭಕ್ತಿಯಿಂದ ಆಯೋಜಿಸಲಾಗಿದ್ದು, ನಗರ ಮತ್ತು ಗ್ರಾಮೀಣ ಭಾಗದ ಮುಖಂಡರು ಹಾಗೂ ವಿಶ್ವಕರ್ಮ ಸಮುದಾಯದ ಕುಲಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮಕ್ಕೆ ವಿಶೇಷ ಮೆರಗು ತಂದರು. ಭಕ್ತರ ಸಮ್ಮುಖ ದಲ್ಲಿ ನಡೆದ ಕಾರ್ಯಕ್ರಮವು ಧಾರ್ಮಿಕ ವಾತಾವರಣವನ್ನು ಮತ್ತಷ್ಟು ಮೆರಗು ಗೊಳಿಸಿತು.
ಇದನ್ನೂ ಓದಿ: Shidlaghatta News: ಎಸ್'ಎಸ್'ಎಲ್'ಸಿಯಲ್ಲಿ ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿನಿಯರಿಗೆ ಸನ್ಮಾನ
ಕಾರ್ಯಕ್ರಮದ ಅಂಗವಾಗಿ ಹೋಮ-ಹವನ ಸೇರಿದಂತೆ ವಿವಿಧ ಪೂಜಾ ವಿಧಿಗಳನ್ನು ನೆರವೇರಿಸಲಾಯಿತು. ರಾಜ್ಯದಲ್ಲಿ ಉತ್ತಮ ಮಳೆ, ಸಮೃದ್ಧ ಬೆಳೆ ಮತ್ತು ಜನರ ಸುಖ-ಶಾಂತಿಗಾಗಿ ಭಗವಂತನಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ದೇವರಿಗೆ ವಿಶೇಷ ಹೂವಿನ ಅಲಂಕಾರ, ಅಭಿಷೇಕಗಳನ್ನು ನೆರವೇರಿಸಿ, ಭಕ್ತರಿಗೆ ಪ್ರಸಾದ ವಿತರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ನಗರಸಭೆ ಸದಸ್ಯ ಅನೀಲ್ ಕುಮಾರ್, ಸುಂದರಾಚಾರಿ, ಬಿ.ಕೆ. ಮುನಿರತ್ನಾಚಾರ್, ಮಂಜುನಾಥಾಚಾರಿ, ಸಂದ್ಯರಾಣಿ, ಶಾಂತಕುಮಾರ್, ಶ್ರೀನಿವಾಸ ಮೂರ್ತಿ, ಆರ್. ಜಗದೀಶ್, ವಿಜಯಕುಮಾರ್, ರಮೇಶ್, ಉಮಾದೇವಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.