ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Eshwar Khandre: ಈಶ್ವರ ಖಂಡ್ರೆಗೆ ಉಪಮುಖ್ಯ ಮಂತ್ರಿ ಸ್ಥಾನ ನೀಡಬೇಕೆಂದು ವೀರಶೈವ ಮಹಾಸಭಾ ಮುಖಂಡರ ಆಗ್ರಹ

ಬಿಜೆಪಿ ಸರ್ಕಾರದಲ್ಲಿ ನಮ್ಮ ಸಮುದಾಯವನ್ನು ಗೌರವದಿಂದ ನಡೆಸಿಕೊಳ್ಳಲಾಗಿದೆ. ಕಾಂಗ್ರೆಸ್ ಸರ್ಕಾರದಲ್ಲೂ ಕೂಡ ಇದೇ ರೀತಿ ಈಶ್ವರ್ ಖಂಡ್ರೆ ಅವರನ್ನು ಉಪಮುಖ್ಯಮಂತ್ರಿ, ಉಳಿದ ನಾಲ್ಕು ಮಂದಿಗೆ ಸಚಿವ ಸ್ಥಾನ ನೀಡಬೇಕು ಆ ಮೂಲಕ ಅತ್ಯಂತ ಬಲಾಢ್ಯ ಸಮುದಾಯಕ್ಕೆ ರಾಜಕೀಯ ಪ್ರಾತಿನಿಧ್ಯ ಕಲ್ಪಿಸಿದಂತಾಗುತ್ತದೆ

ಈಶ್ವರ ಖಂಡ್ರೆಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಅಭಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಪದಾಧಿಕಾರಿಗಳು ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು

ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಅಸ್ತಿತ್ವಕ್ಕೆ ಬರಲಿರುವ ಕಾಂಗ್ರೆಸ್ ನೇತೃತ್ವದ ನೂತನ ಸರ್ಕಾರದಲ್ಲಿ ಅರಣ್ಯ, ಪರಿಸರ, ಜೀವಶಾಸ್ತ್ರ ಹಾಗೂ ಬೀದರ್ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಈಶ್ವರ ಖಂಡ್ರೆ(Eshwar Khandre) ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನ( Deputy Chief Minister post) ನೀಡಬೇಕು ಎಂದು ಅಖಿಲ ಭಾರತ ವೀರಶೈವ ಮಹಾ ಸಭಾದ ಜಿಲ್ಲಾಧ್ಯಕ್ಷ ಮಹೇಶ್ ಬಸವಾಪುರ ಕಾಂಗ್ರೆಸ್ ಹೈಕಮಾಂಡ್ ಗೆ ಆಗ್ರಹಿಸಿದರು.

ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಈಶ್ವರ ಖಂಡ್ರೆ ಅವರು ಕಾಂಗ್ರೆಸ್ ಪಕ್ಷ(Congress Party)ದ ಹಿರಿಯ ನಾಯಕರಲ್ಲೊಬ್ಬ ರಾಗಿದ್ದು, ಕಲ್ಯಾಣ ಕರ್ನಾಟಕ, ಉತ್ತರ ಕರ್ನಾಟಕ ಸೇರಿದಂತೆ ರಾಜ್ಯಾದ್ಯಂತ ಪಕ್ಷದ ಬಲವರ್ಧನೆಗೆ ಮಹತ್ವದ ಕೊಡುಗೆ ನೀಡಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲು ನಮ್ಮ ಸಮುದಾಯದ 36 ಶಾಸಕರ ಸಂಪೂರ್ಣ ಬೆಂಬಲದ ಜೊತೆಗೆ ಈಶ್ವರ್ ಖಂಡ್ರೆ ಅವರ ಅಪಾರ ಶ್ರಮವಿದೆ ಎಂದರು.

ಇದನ್ನೂ ಓದಿ: Minister Eshwar Khandre: ಮೂರು ಎಕರೆಗಿಂತ ಒಳಗಿನ ಅರಣ್ಯ ಭೂ ಒತ್ತುವರಿದಾರರ ಹಿತ ರಕ್ಷಣೆಗೆ ಬದ್ಧ : ಸಚಿವ ಈಶ್ವರ ಖಂಡ್ರೆ

ಬಿಜೆಪಿ ಸರ್ಕಾರದಲ್ಲಿ ನಮ್ಮ ಸಮುದಾಯವನ್ನು ಗೌರವದಿಂದ ನಡೆಸಿಕೊಳ್ಳಲಾಗಿದೆ. ಕಾಂಗ್ರೆಸ್ ಸರ್ಕಾರದಲ್ಲೂ ಕೂಡ ಇದೇ ರೀತಿ ಈಶ್ವರ್ ಖಂಡ್ರೆ ಅವರನ್ನು ಉಪಮುಖ್ಯ ಮಂತ್ರಿ, ಉಳಿದ ನಾಲ್ಕು ಮಂದಿಗೆ ಸಚಿವ ಸ್ಥಾನ ನೀಡಬೇಕು ಆ ಮೂಲಕ ಅತ್ಯಂತ ಬಲಾಢ್ಯ ಸಮುದಾಯಕ್ಕೆ ರಾಜಕೀಯ ಪ್ರಾತಿನಿಧ್ಯ ಕಲ್ಪಿಸಿದಂತಾಗುತ್ತದೆ ಎಂದು ಹೇಳಿದರು.

ಅಖಿಲ ಭಾರತ ವೀರಶೈವ ಮಹಾಸಭಾದ ಜಿಲ್ಲಾ ಕಾರ್ಯದರ್ಶಿ ಹಳೇಹಳ್ಳಿ ಶಿವಕುಮಾರ್ ಮಾತನಾಡಿ, ಈಶ್ವರ ಖಂಡ್ರೆ ಅವರು ನಾಲ್ಕನೇ ಬಾರಿ ಶಾಸಕರಾಗಿ ಆಯ್ಕೆಯಾಗಿದ್ದು, ಈ ಹಿಂದೆ ಪೌರಾಡಳಿತ ಸಚಿವರಾಗಿ ಮಾದರಿಯ ಆಡಳಿತ ನೀಡಿದ್ದಾರೆ. ಪ್ರಸ್ತುತ ಅರಣ್ಯ, ಪರಿಸರ, ಜೀವಶಾಸ್ತ್ರ ಹಾಗೂ ಬೀದರ್ ಜಿಲ್ಲಾ ಉಸ್ತುವಾರಿ ಸಚಿವರಾಗಿ ಸಮರ್ಥವಾಗಿ ಕರ್ತವ್ಯ ನಿರ್ವಹಿಸಿದ್ದು, ಹಸಿರು ಕ್ರಾಂತಿಯತ್ತ ಹಲವು ಕಾರ್ಯಕ್ರಮಗಳನ್ನು ಜಾರಿ ಗೊಳಿಸಿದ್ದಾರೆ.

ರಾಜ್ಯದ ಪ್ರಭಾವಿ ಸಚಿವರಲ್ಲಿ ಒಬ್ಬರಾಗಿರುವ ಅವರು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾಗಿಯೂ ರಾಜ್ಯದಾದ್ಯಂತ ಪ್ರಭಾವ ಹೊಂದಿದ್ದಾರೆ. ಜಾತ್ಯತೀತ ತತ್ವಗಳಲ್ಲಿ ನಂಬಿಕೆ ಇಟ್ಟುಕೊಂಡಿರುವ ದೂರದೃಷ್ಟಿಯ ನಾಯಕನಾದ ಈಶ್ವರ ಖಂಡ್ರೆ ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡುವುದು ಅಗತ್ಯವಾಗಿದೆ. 2028ರ ವಿಧಾನಸಭೆ ಚುನಾವಣೆಯಲ್ಲಿ ಮತ್ತೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲು ಅವರಂತಹ ಧುರೀಣರಿಗೆ ಸೂಕ್ತ ಸ್ಥಾನಮಾನ ನೀಡಬೇಕಾಗಿದೆ ಎಂದು ತಿಳಿಸಿದರು.

ಕರ್ನಾಟಕ ರಾಜ್ಯ ಗ್ರಾಮ ಪಂಚಾಯತಿ ಸದಸ್ಯರ ಕ್ಷೇಮಾಭಿವೃದ್ದಿ ಸಂಘದ ರಾಜ್ಯ ಸಹ ಕಾರ್ಯದರ್ಶಿ ಜಿ.ರೇವಣ ಸಿದ್ದೇಶ್ವರ ಮಾತನಾಡಿ, ಖಂಡ್ರೆ ಅವರಿಗೆ ಡಿಸಿಎಂ ಸ್ಥಾನ ನೀಡಿದರೆ ಕಲ್ಯಾಣ ಕರ್ನಾಟಕ(Kalyana Karnataka) ಭಾಗ ಹಾಗೂ ರಾಜ್ಯದ ಅಭಿವೃದ್ಧಿಗೆ ಮತ್ತಷ್ಟು ಉತ್ತೇಜನ ದೊರೆಯಲಿದೆ. ವೀರಶೈವ ಸಮುದಾಯದ ಬಲವನ್ನು ಪರಿಗಣಿಸಿ ಈ ಹುದ್ದೆ ನೀಡಬೇಕು ಎಂದು ಆಗ್ರಹಿಸಿದರು.

ಈ ವೇಳೆ ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾಧ್ಯಕ್ಷ ಮಹೇಶ್ ಬಸವಾಪುರ, ಉಪಾ ಧ್ಯಕ್ಷ ಸಿದ್ದಪ್ಪ, ಚಿಕ್ಕಬಳ್ಳಾಪುರ ತಾಲೂಕು ಘಟಕದ ಅಧ್ಯಕ್ಷ ರಾಜೇಂದ್ರ ಬಾಬು ವೀರಶೈವ ಮಹಾಸಭಾ ಜನರಲ್ ಸೆಕ್ರೆಟರಿ ಶಿವಕುಮಾರ್ ಹಳೆ ಹಳ್ಳಿ, ವೀರಶೈವ ಮಹಾಸಭಾ ರಾಜ್ಯ ಯುವ ಘಟಕದ ನಿರ್ದೇಶಕ ರಾಜಣ್ಣ,ರಾಷ್ಟ್ರೀಯ ಯುವ ಘಟಕದ ನಿರ್ದೇಶಕರು ಮಧು ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ಸದಸ್ಯರ ಕ್ಷೇಮ ಅಭಿವೃದ್ದಿ ಸಂಘದ ರೇವಣ ಸಿದ್ದೇಶ್ವರ , ರಾಜ್ಯ ಸಹಕಾರ್ಯದರ್ಶಿ ಕಿರಣ್ ಹಳೇಹಳ್ಳಿ ಇತರರು ಇದ್ದರು.