ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಸಮಯಕ್ಕೆ ಸರಿಯಾಗಿ ಬಾರದ ಕಾರ್ಯಕರ್ತೆ : ಅಂಗನವಾಡಿಗೆ ಬೀಗ ಹಾಕಿ ಗ್ರಾಮಸ್ಥರಿಂದ ಆಕ್ರೋಶ

ಗ್ರಾಮದ ಅಂಗನವಾಡಿ ಕಾರ್ಯಕರ್ತೆ ಸಾವಿತ್ರಮ್ಮ ಹಾಗೂ ಸಹಾಯಕಿ ನಡುವೆ ದೀರ್ಘಕಾಲದಿಂದ ವೈಯಕ್ತಿಕ ಭಿನ್ನಾಭಿಪ್ರಾಯಗಳು ಮತ್ತು ಜಗಳಗಳು ನಡೆಯುತ್ತಿದ್ದು, ಇದರಿಂದಾಗಿ ಅಂಗನವಾಡಿ ಕೇಂದ್ರದ ದೈನಂದಿನ ಕಾರ್ಯಕಲಾಪಗಳಿಗೆ ತೀವ್ರ ಹಿನ್ನಡೆಯಾಗಿದೆ. ಇವರಿಬ್ಬರ ಆಂತರಿಕ ಕಲಹ ದಿಂದಾಗಿ ಕೇಂದ್ರಕ್ಕೆ ಬೀಗ ಹಾಕಿ ಹೋಗಿರುವ ಘಟನೆಯೂ ನಡೆದಿದೆ

ತಾಲೂಕಿನ ಬಿ.ವಡ್ಡಹಳ್ಳಿ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಸರಿಯಾದ ಸಮಯಕ್ಕೆ ಸಿಬ್ಬಂದಿ ಬಾರದಿರುವುದು ಮತ್ತು ಗರ್ಭಿಣಿಯರು ಹಾಗೂ ಮಕ್ಕಳಿಗೆ ಪೌಷ್ಟಿಕ ಆಹಾರ ವಿತರಣೆಯಲ್ಲಿ ತಾರತಮ್ಯ ಎಸಗಲಾಗುತ್ತಿದೆ ಎಂದು ಆರೋಪಿಸಿ ಗ್ರಾಮಸ್ಥರು ಅಂಗನವಾಡಿ ಕಟ್ಟಡಕ್ಕೆ ಬೀಗ ಜಡಿದು ತೀವ್ರ ಧರಣಿ ನಡೆಸಿದ್ದಾರೆ.

ಚಿಂತಾಮಣಿ: ತಾಲೂಕಿನ ಬಿ.ವಡ್ಡಹಳ್ಳಿ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಸರಿಯಾದ ಸಮಯಕ್ಕೆ ಸಿಬ್ಬಂದಿ ಬಾರದಿರುವುದು ಮತ್ತು ಗರ್ಭಿಣಿಯರು ಹಾಗೂ ಮಕ್ಕಳಿಗೆ ಪೌಷ್ಟಿಕ ಆಹಾರ ವಿತರಣೆಯಲ್ಲಿ ತಾರತಮ್ಯ ಎಸಗಲಾಗುತ್ತಿದೆ ಎಂದು ಆರೋಪಿಸಿ ಗ್ರಾಮಸ್ಥರು ಅಂಗನವಾಡಿ ಕಟ್ಟಡಕ್ಕೆ ಬೀಗ ಜಡಿದು ತೀವ್ರ ಧರಣಿ ನಡೆಸಿದ್ದಾರೆ.

ಗ್ರಾಮದ ಅಂಗನವಾಡಿ ಕಾರ್ಯಕರ್ತೆ ಸಾವಿತ್ರಮ್ಮ ಹಾಗೂ ಸಹಾಯಕಿ ನಡುವೆ ದೀರ್ಘಕಾಲದಿಂದ ವೈಯಕ್ತಿಕ ಭಿನ್ನಾಭಿಪ್ರಾಯಗಳು ಮತ್ತು ಜಗಳಗಳು ನಡೆಯುತ್ತಿದ್ದು, ಇದರಿಂದಾಗಿ ಅಂಗನವಾಡಿ ಕೇಂದ್ರದ ದೈನಂದಿನ ಕಾರ್ಯಕಲಾಪಗಳಿಗೆ ತೀವ್ರ ಹಿನ್ನಡೆಯಾಗಿದೆ. ಇವರಿಬ್ಬರ ಆಂತರಿಕ ಕಲಹ ದಿಂದಾಗಿ ಕೇಂದ್ರಕ್ಕೆ ಬೀಗ ಹಾಕಿ ಹೋಗಿರುವ ಘಟನೆಯೂ ನಡೆದಿದೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Anganwadi worker attacked: ಬಿ.ವಡ್ಡಹಳ್ಳಿ ಗ್ರಾಮದಲ್ಲಿ ಅಂಗನವಾಡಿ ಕಾರ್ಯಕರ್ತೆ ಮೇಲೆ ಹಲ್ಲೆ, ಜೀವ ಬೆದರಿಕೆ!

ಅಂಗನವಾಡಿ ಕಾರ್ಯಕರ್ತೆ ಸಾವಿತ್ರಮ್ಮರವರು ನಿಗದಿತ ಸಮಯಕ್ಕೆ ಕೇಂದ್ರಕ್ಕೆ ಬರುತ್ತಿಲ್ಲ. ಇದರಿಂದಾಗಿ ಮಕ್ಕಳು ಮತ್ತು ಪೋಷಕರು ಪರದಾಡುವಂತಾಗಿದೆ.ಮಕ್ಕಳಿಗೆ ಹಾಗೂ ಗರ್ಭಿಣಿಯರಿಗೆ ಸರ್ಕಾರದ ನಿಯಮಾವಳಿಗಳ ಪ್ರಕಾರ ಸರಿಯಾದ ರೀತಿಯಲ್ಲಿ ಪೌಷ್ಟಿಕ ಆಹಾರ ಮತ್ತು ಸೌಲಭ್ಯ ಗಳನ್ನು ವಿತರಿಸುತ್ತಿಲ್ಲ. ಅಂಗನವಾಡಿ ಕೆಲಸವನ್ನು ಬದಿಗೊತ್ತಿ, ಹೊರಗಿನಿಂದ ಬರುವ ಕೂಲಿ ಕಾರ್ಮಿಕರನ್ನು ಕರೆದುಕೊಂಡು ಟೊಮೆಟೊ ಕೀಳುವಂತಹ ವೈಯಕ್ತಿಕ ಕೃಷಿ ಕೆಲಸಗಳಿಗೆ ತೆರಳುತ್ತಿದ್ದಾರೆ ಎಂದು ಗ್ರಾಮದ ಮುಖಂಡರು ಹಾಗೂ ಸ್ಥಳೀಯ ಮಹಿಳೆಯರು ನೇರ ಆರೋಪ ಮಾಡಿದ್ದಾರೆ.

ಬೇಜವಾಬ್ದಾರಿತನದಿಂದಾಗಿ ನಮ್ಮ ಮಕ್ಕಳ ಭವಿಷ್ಯ ಹಾಗೂ ಆರೋಗ್ಯದ ಮೇಲೆ ಆಟವಾಡ ಲಾಗುತ್ತಿದೆ. ಇಲಾಖೆಯ ಉನ್ನತ ಅಧಿಕಾರಿಗಳು ಕೂಡಲೇ ಮಧ್ಯಪ್ರವೇಶಿಸಿ ಬೇಜವಾಬ್ದಾರಿ ಕಾರ್ಯಕರ್ತೆ ಸಾವಿತ್ರಮ್ಮ ರವರನ್ನು ಈ ಕೇಂದ್ರದಿಂದ ಬೇರೆಡೆಗೆ ವರ್ಗಾವಣೆ ಮಾಡಬೇಕು. ಅಲ್ಲಿಯವರೆಗೂ ನಮ್ಮ ಪ್ರತಿಭಟನೆ ನಿಲ್ಲುವುದಿಲ್ಲ"ಎಂದು ಗ್ರಾಮಸ್ಥರು ಎಚ್ಚರಿಸಿದ್ದಾರೆ.

ಪ್ರತಿಭಟನೆಯ ಸುದ್ದಿ ತಿಳಿದ ತಕ್ಷಣ ಸಿ ಡಿ ಪಿ ಓ ಅಧಿಕಾರಿ ಮಹೇಶ್ ಸ್ಥಳಕ್ಕೆ ಭೇಟಿ ನೀಡಿ ಗ್ರಾಮಸ್ಥರು ಲಿಖಿತ ಮೂಲಕ ನೀಡಿದ ದೂರನ್ನು ಸ್ವೀಕರಿಸಿ ಅಂಗನವಾಡಿ ಕಾರ್ಯಕರ್ತೆ ಮೇಲೆ ಮಾಡಿರುವ ಆರೋಪಗಳನ್ನು ಕುಲಂ ಕುಶವಾಗಿ ತನಿಖೆ ನಡೆಸಿ ಮೇಲಾಧಿಕಾರಿಗಳ ಗಮನಕ್ಕೆ ತಂದು ವರ್ಗಾವಣೆ ಮಾಡುವ ಭರವಸೆ ನೀಡಿದ ನಂತರ ಗ್ರಾಮಸ್ಥರು ಪ್ರತಿಭಟನೆಯನ್ನು ಹಿಂಪಡೆದರು.

ಪ್ರತಿಭಟನೆಯಲ್ಲಿ ಗಂಗರೆಡ್ಡಿ,ಸುಧಾ, ಶೈಲಜಾ,ಬೈರೆಡ್ಡಿ,ಸೇರಿದಂತೆ ಮತ್ತಿತರರು ಇದ್ದರು.