ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

MLA B.N.Ravikumar: ತ್ಯಾಜ್ಯ ಘಟಕ ಬೆಂಕಿಗೆ ಕಂಗಾಲಾದ ಗ್ರಾಮಸ್ಥರು: ಸ್ಥಳಕ್ಕೆ ಧಾವಿಸಿದ ಶಾಸಕ

ತ್ಯಾಜ್ಯ ಸಂಸ್ಕರಣಾ ಘಟಕದ ಯಂತ್ರೋಪಕರಣಗಳನ್ನು ದುರಸ್ತಿ ಮಾಡಿ ಗೊಬ್ಬರ ತಯಾರಿಕಾ ಪ್ರಕ್ರಿಯೆಯನ್ನು ಶೀಘ್ರ ಆರಂಭಿಸುವಂತೆ ಹಾಗೂ ಅಗತ್ಯವಿದ್ದಲ್ಲಿ ಹೊಸ ಟೆಂಡರ್ ಕರೆಯುವ ಮೂಲಕ ತ್ಯಾಜ್ಯ ವಿಲೇವಾರಿ ವ್ಯವಸ್ಥೆ ಸುಧಾರಿಸುವಂತೆ ಅಧಿಕಾರಿ ಗಳಿಗೆ ನಿರ್ದೇಶನ ನೀಡಿದರು.

ತ್ಯಾಜ್ಯ ಘಟಕ ಬೆಂಕಿಗೆ ಕಂಗಾಲಾದ ಗ್ರಾಮಸ್ಥರು: ಸ್ಥಳಕ್ಕೆ ಧಾವಿಸಿದ ಶಾಸಕ

-

Profile
Ashok Nayak Apr 4, 2026 10:35 PM

ತ್ಯಾಜ್ಯ ಘಟಕದಲ್ಲಿ ಬೆಂಕಿ

ಗ್ರಾಮಸ್ಥರ ಆಕ್ರೋಶ

ಶಾಸಕರ ತುರ್ತು ಕ್ರಮ ಸೂಚನೆ
ಶಿಡ್ಲಘಟ್ಟ:
ತಾಲ್ಲೂಕಿನ ಹಿತ್ತಲಹಳ್ಳಿ ಗೇಟ್ ಸಮೀಪದ ನಗರಸಭೆಯ ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಗ್ರಾಮಸ್ಥರು ಆಕ್ರೋಶ ವ್ಯಕ್ತ ಪಡಿಸಿ ತ್ಯಾಜ್ಯ ವಾಹನಗಳನ್ನು ಒಳಗೆ ಬಿಡದೆ ಅಡ್ಡಗಟ್ಟಿ ಧರಣಿ ನಡೆಸಿದರು.

ಶಾಸಕ ಬಿ.ಎನ್.ರವಿಕುಮಾರ್(MLA B.N.Ravikumar) ಮಾತನಾಡಿ, ಸತತವಾಗಿ ಉರಿಯು ತ್ತಿರುವ ಬೆಂಕಿಯನ್ನು ತಕ್ಷಣ ನಂದಿಸಲು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ತ್ಯಾಜ್ಯ ಸಂಸ್ಕರಣಾ ಘಟಕದ ಯಂತ್ರೋಪಕರಣಗಳನ್ನು ದುರಸ್ತಿ ಮಾಡಿ ಗೊಬ್ಬರ ತಯಾರಿಕಾ ಪ್ರಕ್ರಿಯೆಯನ್ನು ಶೀಘ್ರ ಆರಂಭಿಸುವಂತೆ ಹಾಗೂ ಅಗತ್ಯವಿದ್ದಲ್ಲಿ ಹೊಸ ಟೆಂಡರ್ ಕರೆಯುವ ಮೂಲಕ ತ್ಯಾಜ್ಯ ವಿಲೇವಾರಿ ವ್ಯವಸ್ಥೆ ಸುಧಾರಿಸುವಂತೆ ಅಧಿಕಾರಿ ಗಳಿಗೆ ನಿರ್ದೇಶನ ನೀಡಿದರು.

ಇದನ್ನೂ ಓದಿ: MLA B.N. Ravikumar: ದಿಬ್ಬೂರಹಳ್ಳಿ–ತಿಮ್ಮಸಂದ್ರ ರಸ್ತೆ ಕಾಮಗಾರಿ ಪರಿಶೀಲಿಸಿದ ಶಾಸಕ ಬಿ.ಎನ್. ರವಿಕುಮಾರ್

ಇದೇ ವೇಳೆ, ನಗರದಿಂದ ಕನಿಷ್ಠ ಐದು ಕಿಲೋಮೀಟರ್ ದೂರದಲ್ಲಿ ಸುಮಾರು ಹತ್ತು ಎಕರೆ ಜಮೀನನ್ನು ಪರ್ಯಾಯವಾಗಿ ಗುರುತಿಸಲು ತಹಶೀಲ್ದಾರ್ ಗಗನಸಿಂಧು ಅವರಿಗೆ ಸೂಚನೆ ನೀಡಿದರು.

cbpm6kasa

ಘಟನಾ ಸ್ಥಳಕ್ಕೆ ಆಗಮಿಸಿದ ಪೌರಾಯುಕ್ತರು, ತಹಶೀಲ್ದಾರ್ ಹಾಗೂ ನಗರಸಭೆ ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳು ಬೆಳಗ್ಗಿನಿಂದಲೇ ಸ್ಥಳದಲ್ಲೇ ಮುಕ್ಕಾಂ ಹಾಕಿ ಪರಿಸ್ಥಿತಿಯನ್ನು ನಿಯಂತ್ರಿಸಲು ಕ್ರಮ ಕೈಗೊಂಡರು. ಈ ಸಂದರ್ಭದಲ್ಲಿ ಅಧಿಕಾರಿಗಳು ಮತ್ತು ಗ್ರಾಮಸ್ಥರ ನಡುವೆ ಮಾತಿನ ಚಕಮಕಿ ಕೂಡ ನಡೆಯಿತು.

ಗ್ರಾಮಸ್ಥರು ಪರಿಸರ ಮಾಲಿನ್ಯ ಹಾಗೂ ಆರೋಗ್ಯ ಸಮಸ್ಯೆಗಳ ಬಗ್ಗೆ ತೀವ್ರ ಆತಂಕ ವ್ಯಕ್ತಪಡಿಸಿ, ತ್ಯಾಜ್ಯ ಘಟಕವನ್ನು ಸ್ಥಳಾಂತರಿಸುವಂತೆ ಒತ್ತಾಯಿಸಿದರು.

image

“ಸತತವಾಗಿ ಉರಿಯುತ್ತಿರುವ ಬೆಂಕಿಯನ್ನು ತಕ್ಷಣ ನಂದಿಸಲು ಕ್ರಮ ಕೈಗೊಳ್ಳಬೇಕು. ತ್ಯಾಜ್ಯ ಸಂಸ್ಕರಣಾ ಘಟಕದ ಯಂತ್ರೋಪಕರಣಗಳನ್ನು ದುರಸ್ತಿ ಮಾಡಿ ಗೊಬ್ಬರ ತಯಾರಿಕಾ ಪ್ರಕ್ರಿಯೆಯನ್ನು ಶೀಘ್ರ ಆರಂಭಿಸಬೇಕು. ಅಗತ್ಯವಿದ್ದರೆ ಹೊಸ ಟೆಂಡರ್ ಮೂಲಕ ತ್ಯಾಜ್ಯ ವಿಲೇವಾರಿ ವ್ಯವಸ್ಥೆಯನ್ನು ಸುಧಾರಿಸಬೇಕು.”

ಬಿ.ಎನ್.ರವಿಕುಮಾರ್ ಶಾಸಕ