ಚಿಕ್ಕಬಳ್ಳಾಪುರ: ಪ್ರಧಾನಮಂತ್ರಿ ಧನ-ಧಾನ್ಯ ಕೃಷಿ ಯೋಜನೆಯ ಕೇಂದ್ರ ನೋಡಲ್ ಅಧಿಕಾರಿ ಶ್ರೀ ಅಲೆಕ್ಸ್ ಪಾಲ್ ಮೆನನ್, ಐಎಎಸ್ ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ನವೀನ್ ಭಟ್ ಅವರು ಚಿಕ್ಕಬಳ್ಳಾಪುರ ತಾಲ್ಲೂಕಿನ ಅಜ್ಜವಾರ, ಪಟ್ರೇನಹಳ್ಳಿ ಹಾಗೂ ಜಾತವಾರ ಹೊಸಹಳ್ಳಿ ಗ್ರಾಮಗಳಿಗೆ ಭೇಟಿ ನೀಡಿ ಕೃಷಿ ಮತ್ತು ತೋಟಗಾರಿಕೆ ಇಲಾಖೆಯ ಯೋಜನೆಗಳ ಪ್ರಗತಿಯನ್ನು ಪರಿಶೀಲಿಸಿದರು.
ಗ್ರಾಮಗಳಲ್ಲಿ ನಿರ್ಮಿಸಲಾಗಿರುವ ಪಾಲಿಹೌಸ್‌ಗಳಿಗೆ ಭೇಟಿ ನೀಡಿದ ಅಧಿಕಾರಿಗಳು, ಬೆಳೆಗಳ ಸ್ಥಿತಿ ಗತಿ, ಕೃಷಿ ಚಟುವಟಿಕೆಗಳ ಪ್ರಗತಿ ಹಾಗೂ ಯೋಜನೆಗಳಿಂದ ರೈತರಿಗೆ ದೊರೆಯುತ್ತಿರುವ ಪ್ರಯೋಜನಗಳ ಕುರಿತು ಪರಿಶೀಲನೆ ನಡೆಸಿದರು. ಪಾಲಿಹೌಸ್ ಕೃಷಿ ಪದ್ಧತಿ, ಬೆಳೆ ನಿರ್ವಹಣೆ ಹಾಗೂ ಉತ್ಪಾದನೆ ಕುರಿತು ರೈತರಿಂದ ಮಾಹಿತಿ ಪಡೆದುಕೊಂಡರು.
ಇದನ್ನೂ ಓದಿ: Chikkaballapur News: ಕೃಷಿ ಉತ್ಪಾದಕತೆ ಹೆಚ್ಚಿಸಲು ಧನ-ಧಾನ್ಯ ಯೋಜನೆ ಪರಿಣಾಮಕಾರಿ ಅನುಷ್ಠಾನ ಅಗತ್ಯ
ಈ ಸಂದರ್ಭದಲ್ಲಿ ರೈತರೊಂದಿಗೆ ಕೃಷಿ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಚರ್ಚಿಸಿದ ಅಲೆಕ್ಸ್ ಪಾಲ್ ಮೆನನ್, ಯೋಜನೆಗಳ ಸದುಪಯೋಗ ಪಡೆದುಕೊಂಡು ಆಧುನಿಕ ಕೃಷಿ ಪದ್ಧತಿಗಳನ್ನು ಅಳವಡಿಸಿಕೊಳ್ಳುವ ಕುರಿತು ರೈತರ ಅಭಿಪ್ರಾಯಗಳನ್ನು ಆಲಿಸಿದರು.
ಕೃಷಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನ ಹಾಗೂ ರೈತರಿಗೆ ಅಗತ್ಯ ಸೌಲಭ್ಯ ತಲುಪಿಸುವ ಕುರಿತು ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು.
ಈ ಸಂದರ್ಭದಲ್ಲಿ ಕೃಷಿ ಇಲಾಖೆ ನಿರ್ದೇಶಕ ಜಿಂಟಿ, ವಿವಿಧ ಇಲಾಖೆಗಳ ಅಧಿಕಾರಿಗಳು, ರೈತರು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.