ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಪ್ರಜಾಪ್ರಭುತ್ವದ ಯಶಸ್ಸಿಗೆ ಮತದಾರರ ಪಟ್ಟಿಯು ಅತ್ಯಂತ ಮೂಲಭೂತ ದಾಖಲೆ: ಜಿಲ್ಲಾಧಿಕಾರಿ ಜಿ ಪ್ರಭು ಕರೆ

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ–2026ರ ಕುರಿತು ಸಾರ್ವಜನಿಕರಲ್ಲಿ ವ್ಯಾಪಕ ಅರಿವು ಮೂಡಿಸುವ ಉದ್ದೇಶದಿಂದ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಜಿಲ್ಲಾ ಸ್ವೀಪ್  ಸಮಿತಿಯ ವತಿಯಿಂದ ನಾನಾ ಕಾರ್ಯಕ್ರಮಗಳನ್ನು ಹಮ್ಮಿ ಕೊಂಡಿರುವುದರ ಉದ್ದೇಶವೇ ನಾಗರೀಕರಿಗೆ ಜಾಗೃತಿ ಮೂಡಿಸುವುದೇ ಆಗಿದೆ. ಆ ಮೂಲಕ ಅರ್ಹ ಮತದಾರರು ಪಟ್ಟಿಯಿಂದ ಕೈತಪ್ಪಿ ಹೋಗದಂತೆ ನೋಡಿಕೊಳ್ಳುವುದೇ ಆಗಿದೆ

ಚಿಕ್ಕಬಳ್ಳಾಪುರ: ಪ್ರಜಾಪ್ರಭುತ್ವದ ಯಶಸ್ಸಿಗೆ ಮತದಾರರ ಪಟ್ಟಿಯು ಅತ್ಯಂತ ಮೂಲ ದಾಖಲೆ. ಪ್ರತಿಯೊಬ್ಬ ಅರ್ಹ ನಾಗರಿಕರ ಹೆಸರು ಮತದಾರರ ಪಟ್ಟಿಯಲ್ಲಿ ಕಡ್ಡಾಯವಾಗಿ ಇರಬೇಕು. ಅದೇ ರೀತಿ ಅನರ್ಹ ಅಥವಾ ನಕಲಿ ಹೆಸರುಗಳು ಪಟ್ಟಿಯಲ್ಲಿ ಉಳಿಯದಂತೆ ನೋಡಿಕೊಳ್ಳುವುದು ಎಸ್‌ಐಆರ್‌ನ  ಪ್ರಮುಖ ಉದ್ದೇಶವಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಪ್ರಭು ತಿಳಿಸಿದರು.

ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಮುಂಭಾಗದಿಂದ ಸರ್ ಎಂ.ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದವರೆಗೆ ಸೋಮವಾರ ಆಯೋಜಿಸಿದ್ದ ಬೃಹತ್ ಕಾಲ್ನಡಿಗೆ ಜಾಥಾ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಜಿ.ಪ್ರಭು ಚಾಲನೆ ನೀಡಿ ಮಾತನಾಡಿದರು.

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ–2026ರ ಕುರಿತು ಸಾರ್ವಜನಿಕರಲ್ಲಿ ವ್ಯಾಪಕ ಅರಿವು ಮೂಡಿಸುವ ಉದ್ದೇಶದಿಂದ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿಯ ವತಿಯಿಂದ ನಾನಾ ಕಾರ್ಯ ಕ್ರಮಗಳನ್ನು ಹಮ್ಮಿಕೊಂಡಿರುವುದರ ಉದ್ದೇಶವೇ ನಾಗರೀಕರಿಗೆ ಜಾಗೃತಿ ಮೂಡಿಸುವುದೇ ಆಗಿದೆ.ಆಮೂಲಕ ಅರ್ಹ ಮತದಾರರು ಪಟ್ಟಿಯಿಂದ ಕೈತಪ್ಪಿ ಹೋಗದಂತೆ ನೋಡಿಕೊಳ್ಳುವುದೇ ಆಗಿದೆ ಎಂದರು.

ಇದನ್ನೂ ಓದಿ: Chinthamani News: ಚಿಂತಾಮಣಿ ನಗರದ ಟ್ರಾಫಿಕ್ ಸಮಸ್ಯೆಗೆ ಮುಕ್ತಿ ನೀಡಿ: ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಕೆ ಆರ್ ಎಸ್ ಪಕ್ಷದಿಂದ ಮನವಿ

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ–2026ರ ಅಂಗವಾಗಿ ಜೂ.30ರಿಂದ ಜುಲೈ 29 ರವರೆಗೆ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ ನೀಡಿ ಪ್ರತಿಯೊಬ್ಬ ಮತದಾರರಿಗೆ ಗಣತಿ ನಮೂನೆಯನ್ನು ಎರಡು ಪ್ರತಿಗಳಲ್ಲಿ ವಿತರಿಸಿ, ಭರ್ತಿ ಮಾಡಿದ ನಮೂನೆಗಳನ್ನು ಮರಳಿ ಸ್ವೀಕರಿಸಲಿದ್ದಾರೆ. ಈ ಕಾರ್ಯ ಯಶಸ್ವಿಯಾಗಲು ಸಾರ್ವಜನಿಕರು ಅಗತ್ಯ ಮಾಹಿತಿ ನೀಡಿ ಸಂಪೂರ್ಣ ಸಹಕಾರ ನೀಡುವಂತೆ ಮನವಿ ಮಾಡಿದರು.

ಪ್ರಜಾಪ್ರಭುತ್ವದ ಯಶಸ್ಸಿಗೆ ಮತದಾರರ ಪಟ್ಟಿಯು ಅತ್ಯಂತ ಮೂಲ ದಾಖಲೆ. ಪ್ರತಿಯೊಬ್ಬ ಅರ್ಹ ನಾಗರಿಕರ ಹೆಸರು ಮತದಾರರ ಪಟ್ಟಿಯಲ್ಲಿ ಕಡ್ಡಾಯವಾಗಿ ಇರಬೇಕು. ಅದೇ ರೀತಿ ಅನರ್ಹ ಅಥವಾ ನಕಲಿ ಹೆಸರುಗಳು ಪಟ್ಟಿಯಲ್ಲಿ ಉಳಿಯದಂತೆ ನೋಡಿಕೊಳ್ಳುವುದು ಪ್ರಮುಖ ಉದ್ದೇಶ ವಾಗಿದೆ. ಈ ನಿಟ್ಟಿನಲ್ಲಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ರಮವನ್ನು ಪರಿಣಾಮಕಾರಿ ಯಾಗಿ ಜಿಲ್ಲೆಯಲ್ಲಿ ಜಾರಿಗೊಳಿಸಲಾಗುತ್ತಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ಹೆಸರು ತೆಗೆದು ಹಾಕುವುದು, ವಿಳಾಸ ಬದಲಾವಣೆ, ತಿದ್ದುಪಡಿ ಸೇರಿದಂತೆ ಅಗತ್ಯ ಬದಲಾವಣೆಗಳನ್ನು ಸಮಯಕ್ಕೆ ಸರಿಯಾಗಿ ಮಾಡಿಸಿಕೊಳ್ಳುವುದು ಪ್ರತಿಯೊಬ್ಬ ನಾಗರಿಕರ ಜವಾಬ್ದಾರಿಯಾಗಿದೆ. 18 ವರ್ಷ ಪೂರೈಸಿರುವ ಹಾಗೂ ಅರ್ಹತೆ ಹೊಂದಿ ರುವ ಯುವಜನರು ತಪ್ಪದೇ ಮತದಾರರಾಗಿ ನೋಂದಾಯಿಸಿಕೊಳ್ಳಬೇಕು. ಮತದಾನದ ಹಕ್ಕು ಪ್ರತಿಯೊಬ್ಬ ನಾಗರಿಕನ ಪ್ರಜಾಪ್ರಭುತ್ವದ ಅಮೂಲ್ಯ ಹಕ್ಕಾಗಿದ್ದು, ಅದನ್ನು ಚಲಾಯಿಸಲು ಮತದಾರರ ಪಟ್ಟಿಯಲ್ಲಿ ಹೆಸರು ಇರಬೇಕು ಎಂದು ತಿಳಿಸಿದರು.

29cbpm10r

ಜಿಲ್ಲಾ ಸ್ವೀಪ್ ಸಮಿತಿಯ ಅಧ್ಯಕ್ಷರು ಹಾಗೂ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ವೈ. ನವೀನ್ ಭಟ್ ಅವರು ಮಾತನಾಡಿ, ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ರಮವು ಕೇವಲ ಸರ್ಕಾರಿ ಇಲಾಖೆಯ ಜವಾಬ್ದಾರಿಯಲ್ಲ; ಪ್ರತಿಯೊಬ್ಬ ನಾಗರಿಕರ ಸಹಭಾಗಿತ್ವದಿಂದ ಮಾತ್ರ ಈ ಅಭಿಯಾನ ಯಶಸ್ವಿಯಾಗುತ್ತದೆ ಜಿಲ್ಲೆಯಲ್ಲಿ ಯಾವುದೇ ಅರ್ಹ ಮತದಾರರು ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಹಾಗೂ ಅನರ್ಹ ಹೆಸರು ಗಳು ಪಟ್ಟಿಯಲ್ಲಿ ಉಳಿಯದಂತೆ ಸಾರ್ವಜನಿಕರು ಅಧಿಕಾರಿಗಳೊಂದಿಗೆ ಸಹಕರಿಸಬೇಕು ಎಂದು ಮನವಿ ಮಾಡಿದರು.

ವಿದ್ಯಾರ್ಥಿಗಳು ಹಾಗೂ ಯುವಜನರು ಸಮಾಜದಲ್ಲಿ ಜಾಗೃತಿ ಮೂಡಿಸುವಲ್ಲಿ ಪ್ರಮುಖ ಪಾತ್ರ ವಹಿಸಬೇಕು. ತಮ್ಮ ಕುಟುಂಬದವರು, ನೆರೆಹೊರೆಯವರು ಹಾಗೂ ಪರಿಚಯಸ್ಥರಿಗೆ ಮತದಾರರ ಪಟ್ಟಿಯನ್ನು ಪರಿಶೀಲಿಸಿ ಅಗತ್ಯವಿದ್ದರೆ ಹೆಸರು ಸೇರ್ಪಡೆ ಅಥವಾ ತಿದ್ದುಪಡಿ ಮಾಡಿಸಿ ಕೊಳ್ಳುವಂತೆ ಪ್ರೇರೇಪಿಸಬೇಕು. ಮತದಾನದ ಕುರಿತು ಜಾಗೃತಿ ಹೆಚ್ಚಿದಷ್ಟೂ ಪ್ರಜಾಪ್ರಭುತ್ವ ಇನ್ನಷ್ಟು ಸದೃಢವಾಗಲಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ವಿವಿಧ ಶಾಲೆಗಳ ವಿದ್ಯಾರ್ಥಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ, ಶಿಕ್ಷಕರು, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು, ಹಾಗೂ ಸಾರ್ವಜನಿಕರು ಉತ್ಸಾಹದಿಂದ ಭಾಗವಹಿಸಿ ಮತದಾರರ ಜಾಗೃತಿ ಅಭಿಯಾನಕ್ಕೆ ಕೈಜೋಡಿಸಿದರು.

ಸಾವಿರಕ್ಕೂ ಅಧಿಕ ಜನರ ಭಾಗವಹಿಸುವಿಕೆಯಿಂದ ನಡೆದ ಈ ಬೃಹತ್ ಕಾಲ್ನಡಿಗೆ ಜಾಥಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ–2026ರ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವಲ್ಲಿ ಮಹತ್ವದ ಹೆಜ್ಜೆಯಾಗಿ ಪರಿಣಮಿಸಿತು.

ಪ್ರತಿ ಅರ್ಹ ನಾಗರಿಕ ಮತದಾರರಾಗಲಿ", "ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಪರಿಶೀಲಿಸಿ", "ಪ್ರಜಾಪ್ರಭುತ್ವ ಬಲಪಡಿಸಲು ಮತದಾರರಾಗಿ ನೋಂದಾಯಿಸಿ", "ಮತದಾನ ನಮ್ಮ ಹಕ್ಕು, ನಮ್ಮ ಜವಾಬ್ದಾರಿ" ಎಂಬ ಘೋಷಣೆಗಳು ಜಾಥಾದ ಪ್ರಮುಖ ಆಕರ್ಷಣೆಯಾಗಿದ್ದವು. ಸಾರ್ವಜನಿಕರು ಸಹ ಜಾಥಾವನ್ನು ಗಮನಿಸಿ ಈ ಅಭಿಯಾನಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಿಂದ ಆರಂಭವಾದ ಜಾಥಾ ಬಿ.ಬಿ ರಸ್ತೆ ಮೂಲಕ ಸರ್ ಎಂ. ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದವರೆಗೆ ಸಾಗಿತು. ಮಾರ್ಗದುದ್ದಕ್ಕೂ ಭಾಗವಹಿಸಿದ  ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಜಾಗೃತಿ ಫಲಕಗಳನ್ನು ಹಿಡಿದು, ಮತದಾರರ ನೋಂದಣಿ ಮತ್ತು ಮತದಾನದ ಮಹತ್ವ ಸಾರುವ ಘೋಷಣೆಗಳನ್ನು ಕೂಗುತ್ತಾ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು.

ಬೃಹತ್ ಕಾಲ್ನಡಿಗೆ ಜಾಥಾದಲ್ಲಿ ಗಣ್ಯರೆಲ್ಲರು ಜಿಲ್ಲಾ ಕ್ರೀಡಾಂಗಣದ ವರೆಗೂ ಕಾಲ್ನಡಿಗೆ ಮಾಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಲ್ ಚೌಕ್ಸೆ, ಅಪರ ಜಿಲ್ಲಾಧಿಕಾರಿ ಡಾ.ಎನ್.ಭಾಸ್ಕರ್, ಉಪವಿಭಾಗಾಧಿಕಾರಿ ಡಿ.ಹೆಚ್.ಅಶ್ವಿನ್, ಜಿಲ್ಲಾ ಪಂಚಾಯತ್ ಉಪ ಕಾರ್ಯ ದರ್ಶಿ ಅತಿಕ್ ಪಾಷಾ, ತಹಸೀಲ್ದಾರ್ ರಶ್ಮಿ, ತಾಲ್ಲೂಕು ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿ ಜಿ.ಆರ್.ಮಂಜುನಾಥ ಹಾಗೂ ವಿವಿಧ ಇಲಾಖೆಯ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿ ಗಳು, ಸಿಬ್ಬಂದಿ ಇದ್ದರು.