ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Eshwar Khandre: ಚಿಂತಾಮಣಿ, ಶಿಡ್ಲಘಟ್ಟದಲ್ಲಿ ಸಮಸ್ಯೆ ಹೆಚ್ಚು; ಖಾಸಗಿ ಕೊಳವೆಬಾವಿ, ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಕ್ರಮ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸರ್ಕಾರದ ಕಾರ್ಯದರ್ಶಿ ಶಮೀರ್ ಶುಕ್ಲ ಅವರ ಉಪಸ್ಥಿತಿಯಲ್ಲಿ ಸಚಿವ ಈಶ್ವರ್ ಖಂಡ್ರೆ ಅಧ್ಯಕ್ಷತೆಯಲ್ಲಿ ನಡೆದ ವಿಡಿಯೋ ಸಂವಾದ ಸಭೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಗ್ರಾಮೀಣ ಕುಡಿಯುವ ನೀರಿನ ಸಮಸ್ಯೆ ಹಾಗೂ ವಿಬಿಜಿ ರಾಮ್‌ಜಿ ಯೋಜನೆಯ ಪ್ರಗತಿ ಕುರಿತು ಸಮಗ್ರವಾಗಿ ಚರ್ಚಿಸಲಾಯಿತು.

ಚಿಕ್ಕಬಳ್ಳಾಪುರ: ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಎದುರಾಗುತ್ತಿರುವ ಕುಡಿಯುವ ನೀರಿನ ಸಮಸ್ಯೆಯನ್ನು ತಕ್ಷಣ ಪರಿಹರಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ್ ಖಂಡ್ರೆ(Eshwar Khandre) ಅಧಿಕಾರಿಗಳಿಗೆ ಸೂಚಿಸಿದರು.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸರ್ಕಾರದ ಕಾರ್ಯದರ್ಶಿ ಶಮೀರ್ ಶುಕ್ಲ ಅವರ ಉಪಸ್ಥಿತಿಯಲ್ಲಿ ಸಚಿವ ಈಶ್ವರ್ ಖಂಡ್ರೆ ಅಧ್ಯಕ್ಷತೆಯಲ್ಲಿ ನಡೆದ ವಿಡಿಯೋ ಸಂವಾದ ಸಭೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಗ್ರಾಮೀಣ ಕುಡಿಯುವ ನೀರಿನ ಸಮಸ್ಯೆ ಹಾಗೂ ವಿಬಿಜಿ ರಾಮ್‌ಜಿ ಯೋಜನೆಯ ಪ್ರಗತಿ ಕುರಿತು ಸಮಗ್ರವಾಗಿ ಚರ್ಚಿಸಲಾಯಿತು.

ಇದನ್ನೂ ಓದಿ: Eshwar B Khandre: ಹಿರೇಹಳ್ಳಿ ಪಂಚಾಯ್ತಿ ರಸ್ತೆ, ಚರಂಡಿ ಅಭಿವೃದ್ಧಿಗೆ 25 ಲಕ್ಷ ರೂ.: ಈಶ್ವರ ಖಂಡ್ರೆ

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ನವೀನ್ ಭಟ್ ಅವರು ಜಿಲ್ಲೆಯ ಕುಡಿಯುವ ನೀರಿನ ಪರಿಸ್ಥಿತಿ ಕುರಿತು ಸಚಿವರಿಗೆ ಮಾಹಿತಿ ನೀಡಿದರು. ಜಿಲ್ಲೆಯ ಇತರೆ ತಾಲ್ಲೂಕುಗಳಿಗೆ ಹೋಲಿಸಿದರೆ ಚಿಂತಾಮಣಿ ಮತ್ತು ಶಿಡ್ಲಘಟ್ಟ ತಾಲ್ಲೂಕುಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಹೆಚ್ಚಿನ ಪ್ರಮಾಣದಲ್ಲಿ ಕಂಡುಬರುತ್ತಿದೆ. ಗ್ರಾಮಗಳಲ್ಲಿ ನೀರಿನ ಸಮಸ್ಯೆ ಉಂಟಾದ ಕೂಡಲೇ ಖಾಸಗಿ ಕೊಳವೆಬಾವಿಗಳನ್ನು ಬಳಸಿಕೊಳ್ಳುವುದರ ಜೊತೆಗೆ ಅಗತ್ಯವಿರುವ ಕಡೆ ಟ್ಯಾಂಕರ್‌ಗಳ ಮೂಲಕ ನೀರು ಪೂರೈಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ಬೇಸಿಗೆಯ ತೀವ್ರತೆ ಹಾಗೂ ಅಂತರ್ಜಲ ಮಟ್ಟ ಕುಸಿತದ ಹಿನ್ನೆಲೆಯಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ನೀರಿನ ಲಭ್ಯತೆ ಕುರಿತು ನಿರಂತರ ನಿಗಾ ವಹಿಸಲಾಗುತ್ತಿದ್ದು, ಸಮಸ್ಯೆ ಎದುರಾದ ಪ್ರದೇಶಗಳಿಗೆ ತ್ವರಿತವಾಗಿ ಪರ್ಯಾಯ ನೀರಿನ ವ್ಯವಸ್ಥೆ ಕಲ್ಪಿಸಲಾಗುತ್ತಿದೆ ಎಂದು ಅವರು ವಿವರಿಸಿದರು.

ಇದೇ ವೇಳೆ ವಿಬಿಜಿ ರಾಮ್‌ಜಿ ಯೋಜನೆಯ ಪ್ರಗತಿ ಕುರಿತೂ ಸಭೆಯಲ್ಲಿ ಚರ್ಚೆ ನಡೆಯಿತು. ಯೋಜನೆಯಡಿ ಜಿಲ್ಲೆಯಲ್ಲಿ ಮಾನವ ದಿನಗಳ ಸೃಜನೆ ಮಾಡಲಾಗುತ್ತಿದ್ದು, ಕಾರ್ಮಿಕರಿಗೆ ನಿಗದಿತ ಅವಧಿಯಲ್ಲಿ ಕೂಲಿ ವೆಚ್ಚದ ಹಣ ಪಾವತಿಸಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು. ಯೋಜನೆಯ ಅನುಷ್ಠಾನದಲ್ಲಿ ಎದುರಾಗುತ್ತಿರುವ ಕೆಲವು ತಾಂತ್ರಿಕ ಸಮಸ್ಯೆಗಳನ್ನು ಸಚಿವರ ಗಮನಕ್ಕೆ ತರಲಾಯಿತು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಅತೀಕ್ ಪಾಷಾ, ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಎಲ್ಲ ತಾಲ್ಲೂಕು ಗಳ ಸಹಾಯಕ ಕಾರ್ಯಪಾಲಕ ಅಭಿಯಂತರರು, ವಿಬಿಜಿ ರಾಮ್‌ಜಿ ಯೋಜನೆಯ ಜಿಲ್ಲಾ ಪಂಚಾಯತ್ ಸಿಬ್ಬಂದಿ ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.