ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Chikkaballapur News: ಖಾಸಗಿ ಕೊಳವೆಬಾವಿಗಳ ಮೂಲಕ ನೀರು ಪೂರೈಕೆ: ಡಾ.ನವೀನ್ ಭಟ್

ಪ್ರಸ್ತುತ ನೀರಿನ ಸಮಸ್ಯೆ ಇರುವ ಗ್ರಾಮಗಳಲ್ಲಿ ಖಾಸಗಿ ಕೊಳವೆಬಾವಿಗಳ ಮೂಲಕ ನೀರು ಪೂರೈಸ ಲಾಗುತ್ತಿದೆ. ನೀರಿನ ಸಮಸ್ಯೆಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ತ್ವರಿತವಾಗಿ ದೂರು ಸ್ವೀಕರಿಸಿ ಪರಿಹರಿಸಲು 8884777235 ಸಹಾಯವಾಣಿ ಆರಂಭಿಸಲಾಗಿದೆ. ಇದುವರೆಗೆ ಶುದ್ಧ ಕುಡಿಯುವ ನೀರಿನ ಘಟಕಗಳ ದುರಸ್ತಿ, ನೀರಿನ ಪೈಪ್‌ಲೈನ್ ಹಾಗೂ ಜಲಜೀವನ್ ಮಿಷನ್ ಕಾಮಗಾರಿಗಳ ವಿಳಂಬಕ್ಕೆ ಸಂಬಂಧಿಸಿದಂತೆ 116 ಕರೆಗಳು ಬಂದಿದ್ದು, ಎಲ್ಲ ಸಮಸ್ಯೆಗಳಿಗೂ ಪರಿಹಾರ ಕಲ್ಪಿಸ ಲಾಗಿದೆ

44 ಗ್ರಾಮಗಳಲ್ಲಿ ನೀರಿನ ಸಮಸ್ಯೆ; 104 ಗ್ರಾಮಗಳಿಗೆ ಮುನ್ನೆಚ್ಚರಿಕೆ

-

Profile
Ashok Nayak Sep 12, 2026 12:02 AM

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ 44 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದ್ದು, ಮುಂದಿನ ದಿನಗಳಲ್ಲಿ 104 ಗ್ರಾಮಗಳಲ್ಲಿ ಸಮಸ್ಯೆ ಉಲ್ಬಣಿಸುವ ಸಾಧ್ಯತೆ ಹಿನ್ನೆಲೆಯಲ್ಲಿ ಮುನ್ನೆಚ್ಚ ರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾ ಧಿಕಾರಿ ಡಾ. ನವೀನ್ ಭಟ್ ತಿಳಿಸಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗ್ರಾಮೀಣ ಕುಡಿಯುವ ನೀರಿನ ಸಮಸ್ಯೆಗಳು ಹಾಗೂ ಎನ್‌ಆರ್‌ಎಲ್‌ಎಂ–ಸಂಜೀವಿನಿ ಸ್ವಸಹಾಯ ಸಂಘಗಳ ಮಾಸಿಕ ಸಂತೆಗಳ ವಾರ್ಷಿಕ ಕ್ಯಾಲೆಂಡರ್ ಕುರಿತು ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು.

ಪ್ರಸ್ತುತ ನೀರಿನ ಸಮಸ್ಯೆ ಇರುವ ಗ್ರಾಮಗಳಲ್ಲಿ ಖಾಸಗಿ ಕೊಳವೆಬಾವಿಗಳ ಮೂಲಕ ನೀರು ಪೂರೈಸ ಲಾಗುತ್ತಿದೆ. ನೀರಿನ ಸಮಸ್ಯೆಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ತ್ವರಿತವಾಗಿ ದೂರು ಸ್ವೀಕರಿಸಿ ಪರಿಹರಿಸಲು 8884777235 ಸಹಾಯವಾಣಿ ಆರಂಭಿಸಲಾಗಿದೆ. ಇದುವರೆಗೆ ಶುದ್ಧ ಕುಡಿಯುವ ನೀರಿನ ಘಟಕಗಳ ದುರಸ್ತಿ, ನೀರಿನ ಪೈಪ್‌ಲೈನ್ ಹಾಗೂ ಜಲಜೀವನ್ ಮಿಷನ್ ಕಾಮಗಾರಿಗಳ ವಿಳಂಬಕ್ಕೆ ಸಂಬಂಧಿಸಿದಂತೆ 116 ಕರೆಗಳು ಬಂದಿದ್ದು, ಎಲ್ಲ ಸಮಸ್ಯೆಗಳಿಗೂ ಪರಿಹಾರ ಕಲ್ಪಿಸ ಲಾಗಿದೆ ಎಂದರು.

ಇದನ್ನೂ ಓದಿ: Chikkaballapur News: ಅಹವಾಲು ಆಲಿಕೆ, ಸ್ಥಳದಲ್ಲೇ ಸಮಸ್ಯೆ ಪರಿಹಾರಕ್ಕೆ ಒತ್ತು; ಸರ್ಕಾರದ ಯೋಜನೆಗಳ ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ

ಜಿಲ್ಲೆಯಲ್ಲಿ ಒಟ್ಟು 1,159 ಶುದ್ಧ ಕುಡಿಯುವ ನೀರಿನ ಘಟಕಗಳಿದ್ದು, 639 ಘಟಕಗಳು ಗ್ರಾಮ ಪಂಚಾಯಿತಿಗಳ ನಿಯಂತ್ರಣದಲ್ಲಿದ್ದರೆ, 520 ಘಟಕಗಳು ಖಾಸಗಿ ನಿರ್ವಹಣೆಯಲ್ಲಿವೆ. ದುರಸ್ತಿಗೆ ಒಳಗಾದ 29 ಘಟಕಗಳನ್ನು ತೆರವುಗೊಳಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ತಿಳಿಸಿದರು.

ಸ್ವಸಹಾಯ ಸಂಘಗಳ ಉತ್ಪನ್ನಗಳಿಗೆ ಮಾರುಕಟ್ಟೆ

ಜಿಲ್ಲೆಯಲ್ಲಿ ಸುಮಾರು 10 ಸಾವಿರ ಸ್ವಸಹಾಯ ಸಂಘಗಳಿದ್ದು, 1.30 ಲಕ್ಷ ಮಹಿಳೆಯರು ಸದಸ್ಯ ರಾಗಿದ್ದಾರೆ. ಮಹಿಳೆಯರು ತಯಾರಿಸುವ ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸುವ ಉದ್ದೇಶದಿಂದ ಮಾಸಿಕ ಸಂತೆಗಳ ವಾರ್ಷಿಕ ಕ್ಯಾಲೆಂಡರ್ ರೂಪಿಸಲಾಗಿದೆ. ಗಣೇಶ ಚತುರ್ಥಿ, ಕ್ರಿಸ್ಮಸ್, ರಂಜಾನ್, ಯುಗಾದಿ ಹಾಗೂ ದೀಪಾವಳಿ ಸೇರಿದಂತೆ ಪ್ರಮುಖ ಹಬ್ಬಗಳಲ್ಲಿ ಉತ್ಪನ್ನಗಳ ಮಾರಾಟಕ್ಕೆ ವಿಶೇಷ ಮಳಿಗೆಗಳನ್ನು ಕಲ್ಪಿಸಲಾಗುವುದು ಎಂದರು.

ಮಾಸಿಕ ಸಂತೆ ಹಾಗೂ ಸರಸ್ ಮೇಳಗಳಲ್ಲಿ ಭಾಗವಹಿಸಿರುವ ಕೆಲವು ಸಂಘಗಳು ರೂಪಾಯಿ 2.5 ಲಕ್ಷದಿಂದ ರೂಪಾಯಿ 3.5 ಲಕ್ಷದವರೆಗೆ ವಹಿವಾಟು ನಡೆಸುತ್ತಿದ್ದು, ತಿಂಗಳಿಗೆ ರೂಪಾಯಿ 1 ಲಕ್ಷ ದಿಂದ ರೂಪಾಯಿ 1.5 ಲಕ್ಷದವರೆಗೆ ಆದಾಯ ಗಳಿಸುತ್ತಿವೆ. ಮುಂದಿನ ದಿನಗಳಲ್ಲಿ ಪ್ರತಿ ತಾಲ್ಲೂಕು ಕೇಂದ್ರದಲ್ಲಿ ‘ಶೀ ಮಾರ್ಟ್’ ಸ್ಥಾಪಿಸಲು ಉದ್ದೇಶಿಸಲಾಗಿದ್ದು, ಈಗಾಗಲೇ ಸ್ಥಳ ಗುರುತಿಸಲಾಗಿದೆ ಎಂದು ಹೇಳಿದರು.

ವಲಸೆ ತಡೆದು ಗ್ರಾಮೀಣ ಉದ್ಯೋಗ ಸೃಷ್ಟಿಸುವ ಉದ್ದೇಶದ ವಿಬಿಜಿ ರಾಮ್‌ಜಿ ಯೋಜನೆಯಡಿ ಜುಲೈ 1ರಿಂದ ಜಿಲ್ಲೆಯಲ್ಲಿ 1.17 ಲಕ್ಷ ಮಾನವ ದಿನಗಳ ಉದ್ಯೋಗ ಸೃಷ್ಟಿಸಲಾಗಿದೆ. ಜಿಲ್ಲೆಯಿಂದ ಕೂಲಿ ಅರಸಿ ವಲಸೆ ಹೋದ ಪ್ರಕರಣಗಳು ಕಂಡುಬಂದಿಲ್ಲ ಎಂದರು.

ಜಿಲ್ಲೆಯಲ್ಲಿ ಮೂರು ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳ ಕಾಮಗಾರಿಗಳು ಪ್ರಗತಿ ಯಲ್ಲಿವೆ. ಘನತ್ಯಾಜ್ಯ ನಿರ್ವಹಣೆಗೆ ಸಾರ್ವಜನಿಕರು ಬಳಕೆದಾರರ ಶುಲ್ಕ ಪಾವತಿಸುವ ಮೂಲಕ ಗ್ರಾಮ ಪಂಚಾಯಿತಿಗಳಿಗೆ ಸಹಕರಿಸಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಅತೀಕ್ ಪಾಷ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಮಂಜುನಾಥ್