ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Chikkaballapur News: ಶಿಕ್ಷಕರ ಸಮಸ್ಯೆಗಳಿಗೆ ಸಂಘಟಿತವಾಗಿ ಧ್ವನಿಯಾಗುತ್ತೇವೆ: ಕೆ.ಜಿ.ಶ್ರೀನಿವಾಸ್

ಶಿಕ್ಷಕರಿಗೆ ಕರ್ತವ್ಯ ನಿರ್ವಹಣೆಯಲ್ಲಿ ಎದುರಾಗುವ ಸಮಸ್ಯೆಗಳು, ಸೇವಾ ವಿಚಾರಗಳು ಹಾಗೂ ಇತರ ನ್ಯಾಯಯುತ ಬೇಡಿಕೆಗಳಿಗೆ ಸಂಘ ಸದಾ ಬೆಂಬಲವಾಗಿ ನಿಲ್ಲಲಿದೆ. ಸಂಘಟನೆಯ ಮೂಲಕ ಶಿಕ್ಷಕರಲ್ಲಿ ಒಗ್ಗಟ್ಟು ಮೂಡಿಸಿ, ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೂ ಪೂರಕವಾಗಿ ಕೆಲಸ ಮಾಡಲಾಗುವುದು ಎಂದು ಹೇಳಿದರು

ಶಿಕ್ಷಕರ ಸಮಸ್ಯೆಗಳಿಗೆ ಸಂಘಟಿತವಾಗಿ ಧ್ವನಿಯಾಗುತ್ತೇವೆ: ಕೆ.ಜಿ.ಶ್ರೀನಿವಾಸ್

-

Profile
Ashok Nayak Aug 21, 2026 1:17 PM

ಚಿಕ್ಕಬಳ್ಳಾಪುರ: ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸುವುದರ ಜತೆಗೆ, ಅವರ ಹಕ್ಕು ಹಾಗೂ ಹಿತಾಸಕ್ತಿಗಳ ರಕ್ಷಣೆಗೆ ಸಂಘಟಿತವಾಗಿ ಧ್ವನಿಯಾಗುವ ಮೂಲಕ ಕರ್ನಾಟಕ ಶಾಲಾ ಶಿಕ್ಷಕರ ಸಂಘವನ್ನು ತಾಲೂಕಿನಲ್ಲಿ ಮತ್ತಷ್ಟು ಬಲಿಷ್ಠಗೊಳಿಸಲಾಗುವುದು ಎಂದು ನೂತನ ತಾಲೂಕು ಅಧ್ಯಕ್ಷ ಕೆ.ಜಿ. ಶ್ರೀನಿವಾಸ್ ಹೇಳಿದರು.

ನಗರದ ಸರ್ಕಾರಿ ನೌಕರರ ಭವನದಲ್ಲಿ ನಡೆದ ಕರ್ನಾಟಕ ಶಾಲಾ ಶಿಕ್ಷಕರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ ಹಾಗೂ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಶಿಕ್ಷಕರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳನ್ನು ಗುರುತಿಸಿ ಅವುಗಳ ಪರಿಹಾರಕ್ಕಾಗಿ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಹಾಗೂ ಸರ್ಕಾರದ ಗಮನ ಸೆಳೆಯಲಾಗುವುದು ಎಂದರು.

ಶಿಕ್ಷಕರಿಗೆ ಕರ್ತವ್ಯ ನಿರ್ವಹಣೆಯಲ್ಲಿ ಎದುರಾಗುವ ಸಮಸ್ಯೆಗಳು, ಸೇವಾ ವಿಚಾರಗಳು ಹಾಗೂ ಇತರ ನ್ಯಾಯಯುತ ಬೇಡಿಕೆಗಳಿಗೆ ಸಂಘ ಸದಾ ಬೆಂಬಲವಾಗಿ ನಿಲ್ಲಲಿದೆ. ಸಂಘಟನೆಯ ಮೂಲಕ ಶಿಕ್ಷಕರಲ್ಲಿ ಒಗ್ಗಟ್ಟು ಮೂಡಿಸಿ, ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೂ ಪೂರಕವಾಗಿ ಕೆಲಸ ಮಾಡಲಾಗು ವುದು ಎಂದು ಹೇಳಿದರು.

ಇದನ್ನೂ ಓದಿ: Chikkaballapur News: ಬರದ ಹೊಡೆತಕ್ಕೆ ರೈತ ಸಂಘ ಆಕ್ರೋಶ; ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಲು ಎಕೆಆರ್‌ಎಸ್ ಆಗ್ರಹ

ನೂತನ ಪ್ರಧಾನ ಕಾರ್ಯದರ್ಶಿ ಜೆ.ಎನ್. ರಾಘವೇಂದ್ರ ರಾವ್ ಮಾತನಾಡಿ, ಶಿಕ್ಷಕರ ಸಮಸ್ಯೆ ಗಳನ್ನು ಕೇವಲ ವೈಯಕ್ತಿಕ ಸಮಸ್ಯೆಗಳೆಂದು ಪರಿಗಣಿಸದೆ ಸಂಘಟನೆಯ ಮೂಲಕ ಪರಿಣಾಮಕಾರಿ ಯಾಗಿ ಪರಿಹರಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲಾಗುವುದು. ತಾಲೂಕು ಮಟ್ಟದಲ್ಲಿ ಶಿಕ್ಷಕ ರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಅವರ ಅಹವಾಲುಗಳನ್ನು ಸಂಗ್ರಹಿಸಿ ಸಂಬಂಧಪಟ್ಟವರ ಗಮನಕ್ಕೆ ತರಲಾಗುವುದು ಎಂದರು.

ಶಿಕ್ಷಕರ ಸಂಘಟನೆ ಸದೃಢವಾಗಿದ್ದಾಗ ಮಾತ್ರ ಶಿಕ್ಷಕರ ಬೇಡಿಕೆಗಳಿಗೆ ಸೂಕ್ತ ಸ್ಪಂದನೆ ದೊರೆಯಲು ಸಾಧ್ಯ. ಹೀಗಾಗಿ ಎಲ್ಲ ಶಿಕ್ಷಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಂಘದ ಚಟುವಟಿಕೆಗಳನ್ನು ವಿಸ್ತರಿಸಲಾಗುವುದು ಎಂದು ಅವರು ತಿಳಿಸಿದರು.

ನೂತನ ಪದಾಧಿಕಾರಿಗಳ ಆಯ್ಕೆ

ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಷಡಕ್ಷರಿ ಬಣದ ನೇತೃತ್ವದಲ್ಲಿ ಚಿಕ್ಕಬಳ್ಳಾಪುರ ತಾಲೂಕು ಘಟಕದ ಅಧ್ಯಕ್ಷರಾಗಿ ಕೆ.ಜಿ. ಶ್ರೀನಿವಾಸ್, ಪ್ರಧಾನ ಕಾರ್ಯದರ್ಶಿಯಾಗಿ ಜೆ.ಎನ್. ರಾಘವೇಂದ್ರ ರಾವ್, ಖಜಾಂಜಿಯಾಗಿ ಪಟೇಲ್ ಶ್ರೀನಿವಾಸ್ ಹಾಗೂ ಮಹಿಳಾ ಸದಸ್ಯರಾಗಿ ಚಂದ್ರಕಲಾ ಮತ್ತು ವಿಜಯಲಕ್ಷ್ಮಿ ಅವರನ್ನು ಆಯ್ಕೆ ಮಾಡಲಾಯಿತು.

ಜಿಲ್ಲಾ ಘಟಕದ ಅಧ್ಯಕ್ಷರಾಗಿ ಡಿ.ಎಂ. ಶ್ರೀರಾಮ್, ಖಜಾಂಜಿಯಾಗಿ ನಝೀರ್ ಹಾಗೂ ಮಹಿಳಾ ಘಟಕದ ಅಧ್ಯಕ್ಷರಾಗಿ ಪ್ರೇಮಾವತಿ ಅವರನ್ನು ಆಯ್ಕೆ ಮಾಡಲಾಯಿತು.

ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರ ಸಹಕಾರದೊಂದಿಗೆ ನಡೆದ ಕಾರ್ಯಕ್ರಮದಲ್ಲಿ ರಾಜ್ಯದ ಷಡಕ್ಷರಿ ಬಣದ ಅಧ್ಯಕ್ಷೆ ಸುಮತಿ, ಎನ್‌ಪಿಎಸ್ ನೌಕರರ ಸಂಘದ ಅಧ್ಯಕ್ಷ ನಾಗನಗೌಡ ಹಾಗೂ ರಾಜ್ಯದ ವಿವಿಧ ಪದಾಧಿಕಾರಿಗಳು ಉಪಸ್ಥಿತರಿದ್ದು, ನೂತನ ಪದಾಧಿಕಾರಿಗಳಿಗೆ ಶುಭ ಹಾರೈಸಿದರು.

ಪದಗ್ರಹಣದ ಬಳಿಕ ನೂತನ ಪದಾಧಿಕಾರಿಗಳು ಶಿಕ್ಷಕರ ಹಿತಾಸಕ್ತಿಗೆ ಬದ್ಧವಾಗಿ ಕಾರ್ಯ ನಿರ್ವಹಿಸುವ ಸಂಕಲ್ಪ ವ್ಯಕ್ತಪಡಿಸಿದರು.