ಚಿಂತಾಮಣಿ: ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಕಾಂಗ್ರೆಸ್ ಪಕ್ಷದವರು ಎಸ್‌ಐಆರ್(SIR) ಮೂಲಕ ಅಕ್ರಮ ಎಸಗುತ್ತಿದ್ದಾರೆ ಎಂದು ಬಿಜೆಪಿ ಮುಖಂಡ ವೇಣುಗೋಪಾಲ್ ಗಂಭೀರ ಆರೋಪ ಮಾಡಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು,"ಪ್ರತಿಯೊಬ್ಬ ನಾಗರಿಕನಿಗೂ ಕೇವಲ ಒಂದೇ ಒಂದು ಮತದಾನದ ಹಕ್ಕು ಇರಬೇಕು ಎಂಬ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ, ಸಂವಿಧಾನಬದ್ಧವಾಗಿ ಮನೆ ಮನೆಗೆ ತೆರಳಿ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಮಾಡಲಾಗುತ್ತಿದೆ.ಆದರೆ ಚಿಂತಾಮಣಿಯಲ್ಲಿ ಕಾಂಗ್ರೆಸ್ ಪಕ್ಷದವರು ಅಧಿಕಾರಿಗಳ ಮುಖಾಂತರ ಈ ಪ್ರಕ್ರಿಯೆಯನ್ನು ಹಾಳುಗೆಡವುತ್ತಿದ್ದಾರೆ ಎಂದು ದೂರಿದರು.
ಇದನ್ನೂ ಓದಿ: SIR in Karnataka: ಹುಬ್ಬಳ್ಳಿಯ ತಮ್ಮ ನಿವಾಸದಲ್ಲೇ SIRನಲ್ಲಿ ಭಾಗಿಯಾಗಿ ಪ್ರೇರಣೆಯಾದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ
ಚಿಂತಾಮಣಿಯ ಸುಮಾರು 4-5 ಕಡೆಗಳಲ್ಲಿ ಗುಂಪುಗಳನ್ನು ಕಟ್ಟಿಕೊಂಡು ಅಕ್ರಮ ಎಸಗಲಾಗು ತ್ತಿರುವ ದೂರುಗಳು ಕೇಳಿಬಂದಿವೆ.
ಯಾವ ಯಾವ ವಾರ್ಡ್‌ಗಳಲ್ಲಿ, ಯಾವ ಬೂತ್ ಮಟ್ಟದಲ್ಲಿ ಈ ರೀತಿ ನಿಯಮಬಾಹಿರವಾಗಿ ಗುಂಪುಗಳನ್ನು ಮಾಡಲಾಗಿದೆ ಎಂಬ ಸಂಪೂರ್ಣ ಮಾಹಿತಿ ಲಭ್ಯವಿದ್ದು, ಈ ಬಗ್ಗೆ ತಹಶೀಲ್ದಾರ್ ಹಾಗೂ ಜಿಲ್ಲಾಧಿಕಾರಿಗಳು ಗಮನಹರಿಸಿ ಮರುಪರಿಶೀಲನೆ ನಡೆಸಬೇಕು.
ಈ ಅಕ್ರಮದ ಕುರಿತು ತಹಶೀಲ್ದಾರರು ಸೂಕ್ತ ಸಮಜಾಯಿಷಿ ನೀಡಬೇಕು. ಅಗತ್ಯವಿರುವ ಎಲ್ಲಾ ಪೂರಕ ದಾಖಲೆಗಳು ಹಾಗೂ ಆಧಾರಗಳ ಸಮೇತ ಶೀಘ್ರದಲ್ಲೇ ಅಧಿಕೃತವಾಗಿ ದೂರು ದಾಖಲಿಸಲು ಬಿಜೆಪಿ ಸಿದ್ಧತೆ ಮಾಡಿಕೊಂಡಿದೆ ಎಂದು ವೇಣುಗೋಪಾಲ್ ತಿಳಿಸಿದ್ದಾರೆ.