ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Chikkaballapur News: ನೂತನ ಅಪರಾಧ ಕಾನೂನುಗಳ ಕುರಿತು ಜಿಲ್ಲಾ ಪೊಲೀಸ್ ಸಿಬ್ಬಂದಿಗೆ ಕಾರ್ಯಾಗಾರ

ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ವಕೀಲ ಶ್ರೀ ಮುನೇಗೌಡ ಅವರು ನೂತನ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (BNSS)ಯ ಪ್ರಮುಖ ಅಂಶಗಳು, ತನಿಖಾ ವಿಧಾನದಲ್ಲಿನ ಬದಲಾವಣೆ ಗಳು, ನ್ಯಾಯಾಂಗ ಪ್ರಕ್ರಿಯೆಯಲ್ಲಿ ಪೊಲೀಸ್ ಅಧಿಕಾರಿಗಳ ಜವಾಬ್ದಾರಿಗಳು ಹಾಗೂ ಕಾನೂನು ಅನುಷ್ಠಾನ ಕ್ಕೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತು ವಿವರವಾದ ಮಾಹಿತಿ ನೀಡಿದರು.

ಚಿಕ್ಕಬಳ್ಳಾಪುರ: ನೂತನ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (ಬಿಎನ್‌ಎಸ್‌ಎಸ್) ಸೇರಿದಂತೆ ಜಾರಿಯಲ್ಲಿರುವ ಹೊಸ ಅಪರಾಧ ಕಾನೂನುಗಳ ಕುರಿತು ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಅರಿವು ಮೂಡಿಸುವ ಉದ್ದೇಶದಿಂದ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಒಂದು ದಿನದ ಕಾರ್ಯಾಗಾರ ಆಯೋಜಿಸಲಾಯಿತು.

ಕಾರ್ಯಾಗಾರದಲ್ಲಿ ಜಿಲ್ಲೆಯ ಎಲ್ಲ ಪೊಲೀಸ್ ವೃತ್ತ ನಿರೀಕ್ಷಕರು (ಸಿಪಿಐ), ಪೊಲೀಸ್ ನಿರೀಕ್ಷಕರು (ಪಿಐ), ಪೊಲೀಸ್ ಉಪನಿರೀಕ್ಷಕರು (ಪಿಎಸ್‌ಐ), ತನಿಖಾ ಸಹಾಯಕರು ಹಾಗೂ ವಿಶೇಷ ವಿಭಾಗದ (ಎಸ್‌ಬಿ) ಸಿಬ್ಬಂದಿ ಭಾಗವಹಿಸಿದರು.

ಇದನ್ನೂ ಓದಿ: Chikkaballapur News: ಶಿಕ್ಷಕರ ಸೇವೆ ಸಮಾಜದ ಶಾಶ್ವತ ಸಂಪತ್ತು: ಹರೀಶ್ ಕೆ.ರೆಡ್ಡಿ

ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ವಕೀಲ ಶ್ರೀ ಮುನೇಗೌಡ ಅವರು ನೂತನ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (BNSS)ಯ ಪ್ರಮುಖ ಅಂಶಗಳು, ತನಿಖಾ ವಿಧಾನದಲ್ಲಿನ ಬದಲಾವಣೆ ಗಳು, ನ್ಯಾಯಾಂಗ ಪ್ರಕ್ರಿಯೆಯಲ್ಲಿ ಪೊಲೀಸ್ ಅಧಿಕಾರಿಗಳ ಜವಾಬ್ದಾರಿಗಳು ಹಾಗೂ ಕಾನೂನು ಅನುಷ್ಠಾನಕ್ಕೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತು ವಿವರವಾದ ಮಾಹಿತಿ ನೀಡಿದರು.

ನೂತನ ಕಾನೂನುಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಸಮಗ್ರ ಅರಿವು ಹೊಂದಿರುವುದು ಅಗತ್ಯವಾಗಿದೆ. 

FB_IMG_1785497292890 chi

ಈ ನಿಟ್ಟಿನಲ್ಲಿ ಆಯೋಜಿಸಲಾಗಿರುವ ಇಂತಹ ಕಾರ್ಯಾಗಾರಗಳು ತನಿಖೆಯ ಗುಣಮಟ್ಟ ಹೆಚ್ಚಿಸಲು ಹಾಗೂ ಸಾರ್ವಜನಿಕರಿಗೆ ಉತ್ತಮ ಸೇವೆ ಒದಗಿಸಲು ಸಹಕಾರಿಯಾಗಲಿವೆ ಎಂದು ಅಭಿಪ್ರಾಯ ವ್ಯಕ್ತವಾಯಿತು.

ಕಾರ್ಯಾಗಾರದಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿ ನೂತನ ಕಾನೂನುಗಳಿಗೆ ಸಂಬಂಧಿಸಿದ ತಮ್ಮ ಸಂದೇಹಗಳನ್ನು ನಿವಾರಿಸಿಕೊಂಡು ಸಂವಾದದಲ್ಲಿ ಸಕ್ರಿಯವಾಗಿ ಪಾಲ್ಗೊಂಡರು.