ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

World Day Against Child Labor: ಕನ್ನಡ ಭವನದಲ್ಲಿ ಜೂ.12ರಂದು ವಿಶ್ವಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ವಕೀಲರ ಸಂಘ ಹಾಗೂ ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸಂಘ, ಚಿಕ್ಕಬಳ್ಳಾಪುರ ಇವರ ಸಂಯುಕ್ತಾ ಶ್ರಯದಲ್ಲಿ ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾ ಚರಣೆ(World Day Against Child Labor)ಯನ್ನು ಜೂ.12ರಂದು ಬೆಳಗ್ಗೆ 11 ಗಂಟೆಗೆ ನಗರದ ಕನ್ನಡ ಭವನದಲ್ಲಿ ಆಯೋಜಿಸಲಾಗಿದೆ.

ಕನ್ನಡ ಭವನದಲ್ಲಿ ವಿಶ್ವಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ

-

Profile
Ashok Nayak Jun 10, 2026 11:34 PM

ಚಿಕ್ಕಬಳ್ಳಾಪುರ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ವಕೀಲರ ಸಂಘ ಹಾಗೂ ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸಂಘ, ಚಿಕ್ಕಬಳ್ಳಾಪುರ ಇವರ ಸಂಯುಕ್ತಾಶ್ರಯದಲ್ಲಿ ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾ ಚರಣೆ(World Day Against Child Labor)ಯನ್ನು ಜೂ.12ರಂದು ಬೆಳಗ್ಗೆ 11 ಗಂಟೆಗೆ ನಗರದ ಕನ್ನಡ ಭವನದಲ್ಲಿ ಆಯೋಜಿಸಲಾಗಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಪ್ರದೀಪ್ ಈಶ್ವರ್(Pradeep Eshwar) ನೆರವೇರಿಸಲಿದ್ದಾರೆ.

ಇದನ್ನೂ ಓದಿ: World Day Against Child Labor: ಜೂ.12ರಂದು ವಿಶ್ವಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಅಂಗವಾಗಿ ಜಾಥಾ ಕಾರ್ಯಕ್ರಮ

ಮುಖ್ಯ ಅತಿಥಿಗಳಾಗಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದ ಡಾ.ಕೆ.ಸುಧಾಕರ್(Dr. K. Sudhakar), ಕೋಲಾರ ಲೋಕಸಭಾ ಕ್ಷೇತ್ರದ ಸಂಸದ ಎಂ. ಮಲ್ಲೇಶ್ ಬಾಬು(M MalleshBabu), ಕರ್ನಾಟಕ ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಎನ್ ಸಂಪಂಗಿ, ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮದ ಅಧ್ಯಕ್ಷ ಡಾ.ಬಿ.ಸಿ. ಮುದ್ದು ಗಂಗಾಧರ್, ಕರ್ನಾಟಕ ರಾಜ್ಯ ಬೀಜ ನಿಗಮ ಅಧ್ಯಕ್ಷ ಆಂಜಿನಪ್ಪ, ಕರ್ನಾಟಕ ರಾಜ್ಯ ಸಹಕಾರ ಕೈಮಗ್ಗ ನೇಕಾರರ ಮಹಾ ಮಂಡಳಿಯ ಅಧ್ಯಕ್ಷ ಬಿ.ಜೆ. ಗಣೇಶ್, ಶಾಸಕರುಗಳಾದ ಎಂ.ಸಿ. ಸುಧಾಕರ್(M C Sudhakar), ಎಸ್. ಎನ್.ಸುಬ್ಬಾರೆಡ್ಡಿ(S N Subbareddy), ಬಿ.ಎನ್. ರವಿಕುಮಾರ್ ಕೆ. ಹೆಚ್. ಪುಟ್ಟಸ್ವಾಮಿಗೌಡ, ವಿಧಾನ ಪರಿಷತ್ ಶಾಸಕರುಗಳಾದ ಚಿದಾನಂದ ಎಂ ಗೌಡ, ಎಂ.ಎಲ್. ಅನಿಲ್ ಕುಮಾರ್, ಡಿ.ಟಿ. ಶ್ರೀನಿವಾಸ್, ಡಾ.ಹೆಚ್. ನರಸಿಂಹಯ್ಯ ವಿಜ್ಞಾನ ಶೈಕ್ಷಣಿಕ ಸಾಂಸ್ಕೃತಿಕ ಮತ್ತು ಪ್ರವಾಸೋದ್ಯಮ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎನ್.ಹೆಚ್. ಶಿವಶಂಕರ್ ರೆಡ್ಡಿ, ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷ ಗೊಲ್ಲಹಳ್ಳಿ ಶಿವಪ್ರಸಾದ್, ಚಿಕ್ಕಬಳ್ಳಾಪುರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ.ಎನ್. ಕೇಶವ ರೆಡ್ಡಿ, ಜಿಲ್ಲಾ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎನ್. ರಮೇಶ್ ಭಾಗವಹಿಸಲಿದ್ದಾರೆ.

ಉಪನ್ಯಾಸವನ್ನು ಕನ್ನಡ ಉಪನ್ಯಾಸಕರು ಹಾಗೂ ಆಕಾಶವಾಣಿ ಮತ್ತು ದೂರದರ್ಶನ ಚಂದನ ಜಿಲ್ಲಾ ವರದಿಗಾರರಾದ ಎನ್ ಚಂದ್ರಶೇಖರ್ ನೀಡಲಿದ್ದಾರೆ.

ಜಿಲ್ಲೆಯ ಎಲ್ಲಾ ಚುನಾಯಿತ ಜನಪ್ರತಿನಿಧಿಗಳು, ಸರ್ಕಾರಿ ನೌಕರರ ಸಂಘ ಹಾಗೂ ಇತರೆ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಜಿಲ್ಲೆಯ ಸಮಸ್ತ ನಾಗರಿಕರು ಭಾಗವಹಿಸಿದ್ದಾರೆ.