ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Chikkaballapur News: 12ರಂದು ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ

ಜೂನ್ 12ರಂದು "ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ" ಪ್ರಯುಕ್ತ  ಎಲ್ಲಾ ಸರ್ಕಾರಿ ಕಚೇರಿಗಳು ಮತ್ತು ಶಾಲಾ-ಕಾಲೇಜುಗಳಲ್ಲಿ ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳ ಬೇಕು. ಜಿಲ್ಲೆಯ ಗ್ರಾಮ,ತಾಲ್ಲೂಕು,ಜಿಲ್ಲಾ ಪಂಚಾಯಿತಿಗಳ ಚುನಾಯಿತ ಪ್ರತಿನಿಧಿಗಳು, ಇತರೆ ಜನ ಪ್ರತಿನಿಧಿಗಳು ಈ ಕಾರ್ಯಕ್ರಮ ಗಳಲ್ಲಿ ಭಾಗವಹಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಕ್ರಮ ವಹಿಸಬೇಕು.

12ರಂದು ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ

ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆಯನ್ನು ಇದೇ ಜೂನ್ ೧೨ ರಂದು ನಗರದ ಅಂಬೇಡ್ಕರ್ ಭವನದಲ್ಲಿ ಸರ್ಕಾರಿ ಮಾರ್ಗ ಸೂಚಿಗಳನ್ವಯ ಅರ್ಥಪೂರ್ಣವಾಗಿ ಆಚರಿಸಲಾಗುವುದು  ಎಂದು ಜಿಲ್ಲಾಧಿಕಾರಿ ಪಿ ಎನ್ ರವೀಂದ್ರ ತಿಳಿಸಿದರು.

Profile Ashok Nayak Jun 5, 2025 11:52 AM

ಚಿಕ್ಕಬಳ್ಳಾಪುರ : ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆಯನ್ನು ಇದೇ ಜೂನ್ ೧೨ ರಂದು ನಗರದ ಅಂಬೇಡ್ಕರ್ ಭವನದಲ್ಲಿ ಸರ್ಕಾರಿ ಮಾರ್ಗ ಸೂಚಿಗಳನ್ವಯ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಪಿ ಎನ್ ರವೀಂದ್ರ ತಿಳಿಸಿದರು. ನಗರ ಹೊರವಲಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅವರು "ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ"ಯ ಪೂರ್ವಬಾವಿ ಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸಮಾಜದಲ್ಲಿ ಬಾಲಕಾರ್ಮಿಕ ಪದ್ಧತಿಯ  ದುಷ್ಪರಿಣಾಮಗಳ ಬಗ್ಗೆ ವಿದ್ಯಾರ್ಥಿಗಳನ್ನು ಎಚ್ಚರ ಗೊಳಿಸುವ ನಿಟ್ಟಿನಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆಯನ್ನು ಬಹಳ ವಿಶೇಷವಾಗಿ ಅಯೋಜಿಸಬೇಕು  ಜೂನ್ ೧೨ ರಂದು ೯ ಘಂಟೆಗೆ ಜೂನಿಯರ್ ಕಾಲೇಜಿನಿಂದ ಅಂಬೇಡ್ಕರ್ ಭವನದವರೆಗೆ ಜಾಗೃತಿ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಂಡು ಸಾಮಾಜಿಕ ಜಾಗೃತಿಗೆ ಮುಂದಾಗಬೇಕು ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಕಾರ್ಯಕ್ರಮ ಗಳಿಗೆ ಸಂಪೂರ್ಣ ಸಹಕಾರ ನೀಡಲು ಸಂಬAಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ಇದನ್ನೂ ಓದಿ: IPL 2025: ಆರ್‌ಸಿಬಿ ಎದುರು ಪಂಜಾಬ್‌ ಕಿಂಗ್ಸ್‌ ಸೋಲಿಗೆ ಕಾರಣ ತಿಳಿಸಿದ ರಿಕಿ ಪಾಂಟಿಂಗ್‌!

ಜೂನ್ 12ರಂದು "ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ" ಪ್ರಯುಕ್ತ  ಎಲ್ಲಾ ಸರ್ಕಾರಿ ಕಚೇರಿಗಳು ಮತ್ತು ಶಾಲಾ-ಕಾಲೇಜುಗಳಲ್ಲಿ ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳ ಬೇಕು. ಜಿಲ್ಲೆಯ ಗ್ರಾಮ,ತಾಲ್ಲೂಕು,ಜಿಲ್ಲಾ ಪಂಚಾಯಿತಿಗಳ ಚುನಾಯಿತ ಪ್ರತಿನಿಧಿಗಳು, ಇತರೆ ಜನ ಪ್ರತಿನಿಧಿಗಳು ಈ ಕಾರ್ಯಕ್ರಮ ಗಳಲ್ಲಿ ಭಾಗವಹಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಕ್ರಮ ವಹಿಸಬೇಕು.  

ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆಯ ಪ್ರಮಾಣ ವಚನವನ್ನು ಬೋಧಿಸಲು ವ್ಯವಸ್ಥೆ ಮಾಡಬೇಕು.ಜಿಲ್ಲೆಯ ಶಾಲಾ-ಕಾಲೇಜುಗಳ ಓಅಅ & ಓSS ವಿದ್ಯಾರ್ಥಿಗಳಿಂದ ಜಿಲ್ಲೆಯ ವಿವಿದೆಡೆ ಜಾಥಾ ಕಾರ್ಯಕ್ರಮವನ್ನು ಆಯೋಜಿಸಿ ಬಾಲ ಹಾಗೂ ಕಿಶೋರ ಕಾರ್ಮಿಕ ವಿರೋಧಿ ಪದ್ಧತಿ ಕುರಿತು ಘೋಷಣೆಗಳನ್ನು ಕೂಗಿಸಿ ಅರಿವು ಮೂಡಿಸಬೇಕು ಈ ಎಲ್ಲಾ ಕಾರ್ಯಗಳನ್ನು ಸುಸೂತ್ರ ವಾಗಿ ಆಯೋಜಿಸಲು ಸಕಲ ವ್ಯವಸ್ಥೆಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧಿಶರಾದ ಬಿ ಶಿಲ್ಪ, ಜಿಲ್ಲಾ ಕಾರ್ಮಿಕ ಅಧಿಕಾರಿ ಶಬಾನಾ ಆಜ್ಮಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಎಸ್.ಎಸ್ ಮಹೇಶ್ ಕುಮಾರ್, ಜಿಲ್ಲಾ ಆರ್.ಸಿ.ಎಚ್ ಅಧಿಕಾರಿ ಡಾ. ಸಂತೋಷ್ ಬಾಬು ಜಿ.ವಿ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ನೌತಾಜ್ ಹಾಗೂ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.