ಜೂ.12 ರಂದು ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನಾಚರಣೆ; ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಪೂರ್ವ ಸಿದ್ಧತಾ ಸಭೆ
ಜೂನ್.12ರಂದು ಜಿಲ್ಲಾ ಕೇಂದ್ರದಲ್ಲಿ “ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನಾಚರಣೆ” ಆಚರಿಸುವ ಸಂಬಂಧ ರೂಪುರೇಷೆಗಳ ಬಗ್ಗೆ ಚರ್ಚಿಸುವ ಸಲುವಾಗಿ ಮಂಗಳವಾರ ಜಿಲ್ಲಾಧಿಕಾರಿ ಗಳ ಕಚೇರಿಯ ನ್ಯಾಯಾಲಯ ಸಭಾಂಗಣದಲ್ಲಿ ನಡೆದ “ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿಯ ಜಿಲ್ಲಾ ಮಟ್ಟದ ಕಾರ್ಯಕಾರಿ ಸಮಿತಿ ಸಭೆ ಹಾಗೂ ಜಿಲ್ಲಾ ಕಾರ್ಯಪಡೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜೂನ್ ೧೨ ರಂದು ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನಾಚರಣೆ ಯಶಸ್ವಿಯಾಗಿಸಲು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಪೂರ್ವ ಸಿದ್ಧತಾ ಸಭೆಯ ಚಿತ್ರ -
ಚಿಕ್ಕಬಳ್ಳಾಪುರ: ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನಾಚರಣೆಯನ್ನು ಜೂನ್ 12ರಂದು ಜಿಲ್ಲಾ ಕೇಂದ್ರದಲ್ಲಿ ಅರ್ಥಪೂರ್ಣವಾಗಿ ಆಚರಣೆ ಮಾಡಲು ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಪರಸ್ಪರ ಸಮನ್ವಯ ಮತ್ತು ಸಹಕಾರದೊಂದಿಗೆ ಕಾರ್ಯೋನ್ಮುಖರಾಗಬೇಕು ಹಾಗೂ ಅಗತ್ಯ ವಿರುವ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳಾದ ಜಿ.ಪ್ರಭು ಸೂಚನೆ ನೀಡಿದರು.
ಜೂನ್ 12ರಂದು ಜಿಲ್ಲಾ ಕೇಂದ್ರದಲ್ಲಿ “ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನಾಚರಣೆ” ಆಚರಿಸುವ ಸಂಬಂಧ ರೂಪುರೇಷೆಗಳ ಬಗ್ಗೆ ಚರ್ಚಿಸುವ ಸಲುವಾಗಿ ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಯ ನ್ಯಾಯಾಲಯ ಸಭಾಂಗಣದಲ್ಲಿ ನಡೆದ “ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿಯ ಜಿಲ್ಲಾಮಟ್ಟದ ಕಾರ್ಯಕಾರಿ ಸಮಿತಿ ಸಭೆ ಹಾಗೂ ಜಿಲ್ಲಾ ಕಾರ್ಯಪಡೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಬಾಲ ಕಾರ್ಮಿಕ ವಿರೋಧಿ ದಿನವನ್ನು ಜಿಲ್ಲೆಯಲ್ಲಿ ಜೂನ್.12ರಂದು ಆಯೋಜಿಸಿ ಆ ಮೂಲಕ ಸಮಾಜಕ್ಕೆ ಪರಿಣಾಮಕಾರಿ ಸಂದೇಶ ರವಾನೆಯಾಗುವಂತೆ ಕಾರ್ಯಕ್ರಮವನ್ನು ಅರ್ಥಪೂರ್ಣ ಗೊಳಿಸಬೇಕು. ಬಾಲ ಕಾರ್ಮಿಕ ಪದ್ದತಿ ನಿಷೇಧ ಕಾಯಿದೆ ಮತ್ತು ಬಾಲ ಕಾರ್ಮಿಕ ಪದ್ದತಿ ಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಅಂದು ಜಿಲ್ಲಾ ಕೇಂದ್ರದಲ್ಲಿ ಜಾಗೃತಿ ಜಾಥಾ ನಡೆಸಬೇಕು. ಜೊತೆಗೆ ಜಿಲ್ಲೆಯಾದ್ಯಂತ ಬಾಲಕಾರ್ಮಿಕ ಪದ್ದತಿಯೆಂಬ ಸಾಮಾಜಿಕ ಪಿಡುಗಿನ ಕುರಿತು ಅರಿವು ಮೂಡಿಸುವ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಬೇಕು.
ಇದನ್ನೂ ಓದಿ: Chikkaballapur News: ಸರ್ಕಾರಿ ಶಾಲೆಗೇ ಮಕ್ಕಳನ್ನು ದಾಖಲಿಸಿ, ಉತ್ತಮ ಭವಿಷ್ಯ ಕಲ್ಪಿಸಿ: ಉಪನಿರ್ದೇಶಕ ರಮೇಶ್.ವಿ ಮನವಿ
ಬೆಳಗ್ಗೆ 9 ಗಂಟೆಗೆ ಸರಿಯಾಗಿ ಜಾಥಾ ಕಾರ್ಯಕ್ರಮಕ್ಕೆ ಪಂಚಗಿರಿ ಬೋಧನಾ ಪ್ರೌಢಶಾಲೆಯಿಂದ ಚಾಲನೆ ನೀಡಲು ವ್ಯವಸ್ಥೆ ಮಾಡಬೇಕು. ಈ ಜಾಥಾ ಪಂಚಗಿರಿ ಬೋಧನಾ ಪ್ರೌಢಶಾಲೆಯ ಆವರಣದಿಂದ ಆರಂಭವಾಗಿ ಬಿ.ಬಿ.ರಸ್ತೆಯ ಮೂಲಕ ಸಭಾ ಕಾರ್ಯಕ್ರಮ ನಡೆಯುವ ಕನ್ನಡ ಭವನಕ್ಕೆ ತಲುಪಲಿದೆ. ಕನ್ನಡ ಭವನದಲ್ಲಿ ನಡೆಯುವ ಸಭಾ ಕಾರ್ಯಕ್ರಮವನ್ನು ಬೆಳಗ್ಗೆ 11 ಗಂಟೆಗೆ ಸರಿಯಾಗಿ ನಿಗದಿತ ಸಮಯಕ್ಕೆ ಪ್ರಾರಂಭಿಸಲು ಕ್ರಮ ಕೈಗೊಳ್ಳಬೇಕು.
ಎಲ್ಲಾ ಇಲಾಖೆಗಳ ಸಹಕಾರ ಮತ್ತು ಸಮನ್ವಯದೊಂದಿಗೆ ಅರ್ಥವತ್ತಾದ ಕಾರ್ಯಕ್ರಮದ ಜೊತೆಗೆ ಪೂರಕವಾದ ಚಟುವಟಿಕೆಗಳನ್ನು ಹಮ್ಮಿಕೊಳ್ಳಬೇಕು. ಕಾರ್ಯಕ್ರಮವು ಚುನಾಯಿತ ಜನಪ್ರತಿನಿಧಿ ಗಳು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಸರ್ಕಾರೇತರ ಸಂಸ್ಥೆಗಳು, ಸ್ವಸಹಾಯ ಗುಂಪುಗಳು ಮತ್ತು ಸಂಘಗಳು, ವಿವಿಧ ಕಾರ್ಮಿಕ ಸಂಘಟನೆಗಳು ಹಾಗೂ ಬಾಲ ಕಾರ್ಮಿಕ ಪದ್ದತಿಯ ವಿರುದ್ಧ ಆಂದೋಲನ ನಡೆಸುತ್ತಿರುವ ಸಂಸ್ಥೆಗಳ ಕಾರ್ಯಕರ್ತರನ್ನು ಒಳಗೊಳ್ಳುವಂತೆ ಮುಂಜಾಗ್ರತೆ ವಹಿಸಬೇಕು. ಕಾರ್ಯಕ್ರಮ ಆಯೋಜನೆಯಲ್ಲಿ ಯಾವುದೇ ಲೋಪಗಳಾಗದಂತೆ ಎಚ್ಚರ ವಹಿಸ ಬೇಕು ಎಂದು ನಿರ್ದೇಶನ ನೀಡಿದರು.
ಚಿಕ್ಕಬಳ್ಳಾಪುರ ಜಿಲ್ಲೆಯನ್ನು ಬಾಲ ಕಾರ್ಮಿಕ ಪದ್ದತಿ ಮುಕ್ತವಾಗಿಸಲು ಪ್ರತಿಯೊಬ್ಬರೂ ವಿಶೇಷ ಕಾಳಜಿ ವಹಿಸಿ ಹೆಚ್ಚಿನ ಗಮನವನ್ನು ಆದ್ಯತೆಯ ಮೇಲೆ ಹರಿಸಬೇಕು. ಈ ಹಿನ್ನೆಲೆಯಲ್ಲಿ ಜೂನ್ 13 ರಿಂದ 30ರವರೆಗೆ ರಕ್ಷಣಾ ಅಭಿಯಾನವನ್ನು ಬಾಲಕಾರ್ಮಿಕ (ನಿಷೇಧ & ನಿಯಂತ್ರಣ) ಕಾಯ್ದೆ 1986ರ ಕಲಂ 16 & 17ರಡಿ ನೇಮಕಗೊಂಡಿರುವ 11 ಇಲಾಖೆಗಳಾದ ಕಂದಾಯ ಇಲಾಖೆ, ಪಂಚಾಯತ್ ರಾಜ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಕ್ಷಣ ಇಲಾಖೆ, ನಗರಾಭಿವೃದ್ಧಿ ಇಲಾಖೆ, ರೇಷ್ಮೆ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಇಲಾಖೆ, ಕೃಷಿ ಇಲಾಖೆ ಹಾಗೂ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಇವರ ಸಹಯೋಗದೊಂದಿಗೆ ಕೈಗೊಳ್ಳಲು ಸೂಚಿಸಿದರು.
ಬಾಲ ಕಾರ್ಮಿಕ ಪದ್ದತಿಯನ್ನು ಹೋಗಲಾಡಿಸುವ ವಿಚಾರವನ್ನು ಜಿಲ್ಲಾಡಳಿತ ಅತ್ಯಂತ ಗಂಭೀರ ವಾಗಿ ಮತ್ತು ವಿಶೇಷ ಕಾಳಜಿಯ ವಿಷಯವಾಗಿ ತೆಗೆದುಕೊಂಡಿದೆ. ಅನಿರೀಕ್ಷಿತ ದಾಳಿಗಳನ್ನು ನಡೆಸಿ ಬಾಲಕಾರ್ಮಿಕರನ್ನು ರಕ್ಷಿಸುವ ಮತ್ತು ಅವರಿಗೆ ಶಿಕ್ಷಣ ನೀಡಿ ಉತ್ತಮ ಭವಿಷ್ಯ ಕಟ್ಟಿಕೊಡುವ ಜೊತೆಗೆ ಮಕ್ಕಳ ಪೋಷಕರಿಗೆ ತಿಳುವಳಿಕೆ ನೀಡುವ ಹಾಗೂ ಮಕ್ಕಳನ್ನು ದುಡಿಮೆಯಲ್ಲಿ ತೊಡಗಿಸು ವವರ ವಿರುದ್ಧ ಕಾನೂನಿನ ಅಸ್ತ್ರ ಪ್ರಯೋಗಿಸಿ ಅವರಿಗೆ ತಕ್ಕ ಪಾಠ ಕಲಿಸಿ ಅನಿಷ್ಠ ಪದ್ದತಿಗೆ ಕಡಿವಾಣ ಹಾಕುವ ಕೆಲಸ ಮಾಡಲಾಗುತ್ತಿದೆ. ಇದರ ಭಾಗವಾಗಿ ಜಿಲ್ಲೆಯಾದ್ಯಂತ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಕರಪತ್ರ ಮತ್ತು ಭಿತ್ತಿ ಪತ್ರಗಳನ್ನು ವಿತರಣೆ ಮಾಡುವು ದರೊಂದಿಗೆ ಜಿಲ್ಲಾ ಮತ್ತು ಕಾನೂನು ಕಾನೂನು ಸೇವೆಗಳ ಪ್ರಾಧಿಕಾರದ ಸಹಕಾರ ಪಡೆದು ಕಾನೂನು ಅರಿವು ನೆರವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು.
ಕೆಲಸದ ಸ್ಥಳಗಳಲ್ಲಿ ಅನಿರೀಕ್ಷಿತ ತಪಾಸಣೆ ಕೈಗೊಂಡು ಬಾಲಕಾರ್ಮಿಕತೆಗೆ ಸಿಲುಕಿರುವ ಮಕ್ಕಳನ್ನು ರಕ್ಷಿಸುವುದು ಹಾಗೂ ಮಕ್ಕಳನ್ನು ಶಾಲೆಗೆ ಸೇರಿಸಿ, ಪೋಷಕರ ವಶಕ್ಕೆ ನೀಡಿ ಪೋಷಕ ರಿಗೆ ಮೊದಲ ಬಾರಿಗೆ ಅಗತ್ಯ ತಿಳುವಳಿಕೆ ನೀಡಬೇಕು. ಒಂದು ವೇಳೆ ಪುನರಾವರ್ತಿತ ಪ್ರಕರಣ ವಾದರೆ ಕಾನೂನು ರೀತ್ಯಾ ಕ್ರಮಜರುಗಿಸಬೇಕು ಎಂದು ಸೂಚಿಸಿದರು.
ಪ್ರತಿಜ್ಞಾ ವಿಧಿ ಸ್ವೀಕರಿಸಲು ಸೂಚನೆ: ಜೂನ್ ೧೨ ರಂದು ನಡೆಯಲಿರುವ “ವಿಶ್ವ ಬಾಲ ಕಾರ್ಮಿಕ ಪದ್ದತಿ ವಿರೋಧಿ ದಿನಾಚರಣೆ” ಅಂಗವಾಗಿ ಎಲ್ಲಾ ಸರ್ಕಾರಿ ಇಲಾಖೆಗಳು ಮತ್ತು ಕಚೇರಿಗಳು ಹಾಗೂ ಶಾಲಾ ಕಾಲೇಜುಗಳಲ್ಲಿ ಬಾಲ ಕಾರ್ಮಿಕ ಪದ್ದತಿ ವಿರುದ್ಧ ಪ್ರತಿಜ್ಞಾ ವಿಧಿಯನ್ನು ಕಡ್ಡಾಯವಾಗಿ ಸ್ವೀಕರಿಸಬೇಕು. ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳು, ಚುನಾಯಿತ ಜನಪ್ರತಿನಿಧಿಗಳು, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತರು ಪ್ರತಿಜ್ಞಾ ವಿಧಿ ಸ್ವೀಕರಿಸಲು ಸಂಬಂಧಪಟ್ಟ ಎಲ್ಲಾ ಇಲಾಖೆಗಳ ಮುಖ್ಯಸ್ಥರುಗಳು ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.
ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಪ್ರಯುಕ್ತ ಬಾಲ ಹಾಗೂ ಕಿಶೋರ ಕಾರ್ಮಿಕ ಪದ್ದತಿ ನಿಷೇಧ ಕಾಯ್ದೆಯ ಕುರಿತು ಆಡಿಯೋ ತುಣುಕಿನಲ್ಲಿರುವ ಅರಿವು ಮಾಹಿತಿಯನ್ನು ನಗರ ಮತ್ತು ಗ್ರಾಮೀಣ ಸಂಸ್ಥೆಗಳ ಸ್ವಚ್ಛತಾ ವಾಹನಗಳ ಧ್ವನಿವರ್ಧಕಗಳಲ್ಲಿ ಪ್ರಚಾರ ಮಾಡಬೇಕು. ಈ ಕುರಿತು ಎಲ್ಲಾ ನಗರಸಭೆ, ಪುರಸಭೆ ಹಾಗೂ ತಾಲ್ಲೂಕು ಮತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಗಳಲ್ಲಿ ಹೆಚ್ಚಿನ ಅರಿವು ಮೂಡಿಸುವಂತಾಗಬೇಕು ಎಂದರು.
ಸಭೆಯಲ್ಲಿ ಅಪರ ಪೊಲೀಸ್ ವರಿಷ್ಟಾಧಿಕಾರಿ ಜಗನ್ನಾಥ ರೈ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ಎಸ್.ಮಹೇಶ್ ಕುಮಾರ್, ಜಿಲ್ಲಾ ಕಾರ್ಮಿಕ ಅಧಿಕಾರಿ ಶಬನಾ ಅಜ್ಮಿ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ವಿ.ರಮೇಶ್, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಂಜುನಾಥ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಕೆ.ವಿ.ಮುನಿರತ್ನಮ್ಮ, ಮಹಿಳಾ ಮತ್ತು ಮಕ್ಕಳ ಇಲಾಖೆಯ ಉಪ ನಿರ್ದೇಶಕ ಆರ್. ವೆಂಕಟೇಶರೆಡ್ಡಿ, ರೇಷ್ಮೆ ಉಪನಿರ್ದೇಶಕ ಮಾರಪ್ಪ ಬಾಲಪ್ಪ ಬೀರದಹಳ್ಳಿ, ಬೆಸ್ಕಾಂ ಕಾರ್ಯ ನಿರ್ವಾಹಕ ಇಂಜಿನಿಯರ್ ರಮೇಶ್ ಕುಮಾರ್, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಸಹಾಯಕ ನಿರ್ದೇಶಕ ಮಂಜುನಾಥ ಹಾಗೂ ತಾಲ್ಲೂಕು ಕಾರ್ಮಿಕ ನಿರೀಕ್ಷಕರುಗಳು ಹಾಜರಿದ್ದರು.