World No Tobacco Day: ವಿಶ್ವ ತಂಬಾಕು ರಹಿತ ದಿನಕ್ಕೆ ನ್ಯಾ.ಟಿ.ಪಿ.ರಾಮಲಿಂಗೇಗೌಡ ಚಾಲನೆ
ಹದಿಹರೆಯದ ವಯಸ್ಸಿನಲ್ಲಿ ದುಶ್ಚಟಗಳ ಪ್ರಭಾವಕ್ಕೆ ಬಲಿಯಾಗುವ ಸಾಧ್ಯತೆ ಹೆಚ್ಚಿದ್ದು, ಈ ವಯಸ್ಸಿನಲ್ಲಿ ಅತಿಹೆಚ್ಚು ಜಾಗರೂಕರಾಗಿರಬೇಕು. ಎಷ್ಟೇ ಕಠಿಣ ಕಾನೂನುಗಳಿದ್ದರು, ವಿಶ್ವ ದಾದ್ಯಂತ ಸರಿಸುಮಾರು 80 ದಶ ಲಕ್ಷ ಜನ ತಂಬಾಕು ಸೇವನೆಯಿಂದ ಸಾವನ್ನಪ್ಪುತ್ತಿದ್ದಾರೆ ಆದ್ದರಿಂದ ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು
ಯುವಕರು ದುಶ್ಚಟಕ್ಕೆ ಬಲಿಯಾಗದಂತೆ ತಮ್ಮನ್ನು ತಾವು ಕಾಪಾಡಿಕೊಳ್ಳಬೇಕು ಎಂದು ಗೌರವಾನ್ವಿತ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಟಿ.ಪಿ ರಾಮಲಿಂಗೇಗೌಡ ತಿಳಿಸಿದರು. -
ಚಿಕ್ಕಬಳ್ಳಾಪುರ: ಯುವಕರು ದುಶ್ಚಟಕ್ಕೆ ಬಲಿಯಾಗದಂತೆ ತಮ್ಮನ್ನು ತಾವು ಕಾಪಾಡಿ ಕೊಳ್ಳಬೇಕು ಎಂದು ಗೌರವಾನ್ವಿತ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಟಿ.ಪಿ ರಾಮಲಿಂಗೇಗೌಡ ತಿಳಿಸಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ನಾಗಾರ್ಜುನ ಪದವಿ ಪೂರ್ವ ಕಾಲೇಜು ಹಾಗೂ ತಂಬಾಕು ನಿಯಂತ್ರಣ ಕೋಶ, ಚಿಕ್ಕಬಳ್ಳಾಪುರ ಅವರ ಸಂಯುಕ್ತಾಶ್ರಯದಲ್ಲಿ ಬೀಡಗಾನಹಳ್ಳಿಯ ನಾಗಾರ್ಜುನ ಪದವಿ ಪೂರ್ವ ಕಾಲೇಜಿನ ಆಡಿಟೋರಿಯಂ ಹಾಲ್‌ನಲ್ಲಿ ಸೋಮವಾರ ಆಯೋಜಿಸಿದ್ದ ವಿಶ್ವ ತಂಬಾಕು ರಹಿತ ದಿನ( World No Tobacco Day) ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಹದಿಹರೆಯದ ವಯಸ್ಸಿನಲ್ಲಿ ದುಶ್ಚಟಗಳ ಪ್ರಭಾವಕ್ಕೆ ಬಲಿಯಾಗುವ ಸಾಧ್ಯತೆ ಹೆಚ್ಚಿದ್ದು, ಈ ವಯಸ್ಸಿನಲ್ಲಿ ಅತಿಹೆಚ್ಚು ಜಾಗರೂಕರಾಗಿರಬೇಕು. ಎಷ್ಟೇ ಕಠಿಣ ಕಾನೂನುಗಳಿದ್ದರು, ವಿಶ್ವದಾದ್ಯಂತ ಸರಿಸುಮಾರು 80 ದಶ ಲಕ್ಷ ಜನ ತಂಬಾಕು ಸೇವನೆಯಿಂದ ಸಾವನ್ನಪ್ಪು ತ್ತಿದ್ದಾರೆ ಆದ್ದರಿಂದ ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ಇದನ್ನೂ ಓದಿ: Chikkaballapur News: 12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ-2026 ; ಕರಪತ್ರ ಬಿಡುಗಡೆ
ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಬಿ.ಶಿಲ್ಪ ರವರು ವಿಶ್ವ ತಂಬಾಕು ರಹಿತ ದಿನದ ಅಂಗವಾಗಿ ಪ್ರತಿಜ್ಞಾವಿಧಿ ಬೋಧಿಸಿ ಮಾತನಾಡಿದರು.
ಯುವ ಜನತೆಯು ಸಾಮಾಜಿಕ ಜಾಲತಾಣಗಳಲ್ಲಿನ ವಿಡಿಯೋ ಗಳ ಆಕರ್ಷಣೆಗೆ ಬಲಿ ಯಾಗಿ ಅದೇಷ್ಟೋ ಯುವಕರು ತಮ್ಮ ಜೀವನವನ್ನು ಹಾಳುಮಾಡಿಕೊಳ್ಳುತ್ತಿದ್ದಾರೆ. ಈ ರೀತಿಯ ವ್ಯಸನವು ವಿದ್ಯಾರ್ಥಿಗಳ ಭವಿಷ್ಯಕ್ಕೆ ಮಾರಕವಾಗಿದ್ದು, ಯಾವುದೇ ರೀತಿಯ ಮಾದಕ ವ್ಯಸನಗಳಿಗೆ ಬಲಿಯಾಗದಂತೆ ಪ್ರತಿಯೊಬ್ಬ ವಿದ್ಯಾರ್ಥಿಯು ಸ್ಥಿರ ಹಾಗೂ ಸಂಯಮ ಮನಸ್ಸನ್ನು ಕಾಪಾಡಿಕೊಳ್ಳಬೇಕು. ತಮ್ಮ ಸುತ್ತಮುತ್ತ ಕಾನೂನು ಬಾಹಿರ ವಾದ ಚಟುವಟಿಕೆಗಳು ಕಂಡುಬಂದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ಮಾಹಿತಿಯನ್ನು ನೀಡಬೇಕು, ಇದರಿಂದ ಸಮಾಜದ ಸ್ವಾಸ್ಥ್ಯವನ್ನು ಕಾಪಾಡಲು ಸಾಧ್ಯ ಎಂದು ತಿಳಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಮಹೇಶ್ ಕುಮಾರ್ ಮಾತ ನಾಡಿ, ತಂಬಾಕಿನ ಇತಿಹಾಸದ ಕುರಿತು ಸವಿವರವಾಗಿ ತಿಳಿಸುತ್ತಾ, ತಂಬಾಕು ಉತ್ಪನ್ನ ಸೇವನೆ ಹಾನಿಯ ಬಗ್ಗೆ ತಿಳಿದ ಮೊಘಲರ ರಾಜ ಜಹಾಂಗೀರ್ ರವರು ಕ್ರಿಸ್ತಶಕ 1670ರಲ್ಲಿ ಮೊದಲ ಬಾರಿಗೆ ತಂಬಾಕು ಸೇವನೆಯನ್ನು ನಿಷೇಧಿಸಿದ್ದರು ಹಾಗೂ ತಂಬಾಕು ಸೇವನೆ ಯಿಂದ ದೇಹದ ಪ್ರತಿಯೊಂದು ಅಂಗಾAಗಳ ಮೇಲೆ ದುಷ್ಪರಿಣಾಮ ಬೀರುತ್ತದೆ ಎಂದರು.
2016-17ರ ಗ್ಯಾಟ್ಸ್ ಸಮೀಕ್ಷೆಯ ಅಂಕಿ ಅಂಶಗಳ ಪ್ರಕಾರ, 2;8.8% ರಷ್ಟು ತಂಬಾಕು ವ್ಯಸನಿಗಳಿದ್ದಾರೆ. ಜಿಲ್ಲಾ ಆಸ್ಪತ್ರೆಯ ಕೊಠಡಿ ಸಂಖ್ಯೆ 72ರಲ್ಲಿ ತಂಬಾಕು ವ್ಯಸನ ಮುಕ್ತ ಕೇಂದ್ರವು ಕಾರ್ಯನಿರ್ವಹಿಸುತ್ತಿದ್ದು, ತಂಬಾಕು ಸೇವನೆಯನ್ನು ತ್ಯಜಿಸಲು ಉಚಿತವಾಗಿ ಆಪ್ತ ಸಮಾಲೋಚನೆ ಹಾಗೂ ಎನ್.ಆರ್.ಟಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದರು.
ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಜಗನ್ನಾಥ್ ರಾಯ್ ಮಾತನಾಡಿ, ಆಧುನಿಕ ಯುಗದಲ್ಲಿ ಗಂಡು ಹೆಣ್ಣು ಎಂಬ ಭೇದವಿಲ್ಲದೇ ಈ ದುಶ್ಚಟಕ್ಕೆ ಬಲಿಯಾಗುತ್ತಿರುವುದು ಕಂಡು ಬರುತ್ತಿದೆ. ಹುಕ್ಕಾ ಬಾರ್‌ಗಳು ಸೆಕ್ಷನ್-4ಎ ಅಡಿಯಲ್ಲಿ ನಿಷೇಧಿಸಲಾಗಿದೆ. ಕಾನೂನು ಬಾಹಿರವಾಗಿ ಮಾದಕ ವಸ್ತುಗಳ ಮಾರಾಟ, ಹುಕ್ಕಾ ಬಾರ್ಗಳು ಹಾಗೂ ಶಾಲಾ–ಕಾಲೇಜಿನ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳ ಮಾರಾಟ ಕಂಡುಬಂದಲ್ಲಿ ಪೊಲೀಸ್ ಇಲಾಖೆಗೆ ಅಥವಾ 112ಗೆ ಕರೆಮಾಡಿ ಮಾಹಿತಿಯನ್ನು ನೀಡಲು ತಿಳಿಸಿದರು.
ವಕೀಲರ ಸಂಘ ಅಧ್ಯಕ್ಷರಾದ ಕೆ.ವಿ.ಅಭಿಲಾಷ್ ಮಾತನಾಡಿ, ಈ ದೇಶದ ಶಕ್ತಿ ಯುವ ಜನರಾಗಿದ್ದು, ಬಲಿಷ್ಠ ರಾಷ್ಟ್ರದ ನಿರ್ಮಾಣಕ್ಕೆ ಯುವಜನತೆಯ ಕೊಡುಗೆ ಅಪಾರವಾಗಿದೆ. ಈ ನಿಟ್ಟಿನಲ್ಲಿ ಮಾನಸಿಕವಾಗಿ ಹಾಗೂ ದೈಹಿಕವಾಗಿ ಸಧೃಡವಾಗಿರಲು ಕೆಟ್ಟ ವ್ಯಸನದಿಂದ ದೂರ ಇರುವುದು ಅತ್ಯಗತ್ಯ ಎಂದು ತಿಳಿಸಿದರು.
ನಾಗಾರ್ಜುನ ಇಂಜಿನಿಯರಿಂಗ್ ಅಂಡ್ ಟೆಕ್ನಾಲಜಿ ಪ್ರಾಂಶುಪಾಲ ತಿಪ್ಪೇಸ್ವಾಮಿ ಅವರು ಮಾತನಾಡಿ, ಹದಿಹರೆಯದವರು ಸ್ನೇಹಿತರ ಪ್ರಭಾವಕ್ಕೊಳಗಾಗಿ ಅಥವಾ ತಮ್ಮ ಇಷ್ಟದ ನಟರನ್ನು ಅನುಕರಿಸಲು ಈ ವ್ಯಸನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ತುತ್ತಾಗುತ್ತಿದ್ದಾರೆ.
ಹಲವಾರು ವಿದ್ಯಾರ್ಥಿಗಳು ವಿದ್ಯಾರ್ಥಿ ಜೀವನದಲ್ಲಿಯೇ ಮಾದಕ ವ್ಯಸನಕ್ಕೆ ಬಲಿಯಾಗು ತ್ತಿದ್ದಾರೆ. ಮಾನಸಿಕ, ದೈಹಿಕ ಒತ್ತಡವಿದ್ದಲ್ಲಿ 14416 ಟೆಲಿ ಮನಸ್ ಸಂಖ್ಯೆಗೆ ಕರೆ ಮಾಡಿ ಉಚಿತವಾಗಿ ಆಪ್ತಸಮಾಲೋಚನೆ ಪಡೆಯಲು ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಎಲ್ಲಾ ಕಾರ್ಯಕ್ರಮಾನುಷ್ಠಾನಾಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗ, ತಾಲ್ಲೂಕು ಆರೋಗ್ಯಾಧಿ ಕಾರಿಗಳು, ವೈದ್ಯಾಧಿಕಾರಿಗಳು ಪ್ರಾಥಮಿಕ ಆರೋಗ್ಯ ಕೇಂದ್ರ, ನಂದಿ ಹಾಗೂ ನಾಗಾರ್ಜುನ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ವೃಂದ ಹಾಜರಿದ್ದರು.
ಕಾರ್ಯಕ್ರಮಕ್ಕೂ ಮುನ್ನ ವಿಶ್ವ ತಂಬಾಕು ರಹಿತ ದಿನದ ಅಂಗವಾಗಿ ತಂಬಾಕು ಸೇವನೆ ಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ತಿಳಿಸುವ ಕರಪತ್ರ,ಭಿತ್ತಿ ಚಿತ್ರಗಳನ್ನು ಬಿಡುಗಡೆ ಗೊಳಿಸಲಾಯಿತು ಹಾಗೂ ಕಾಲೇಜಿನ ಅವರಣದಲ್ಲಿ ಗಿಡ ನೆಡಲಾಯಿತು.