ಚಿಂತಾಮಣಿ: ಸಚಿವ ಸಂಪುಟ ವಿಸ್ತರಣೆಯ ಸಂದರ್ಭದಲ್ಲಿ ಹಿಂದುಳಿದ ವರ್ಗಗಳ ಪ್ರಾತಿನಿಧ್ಯದ ಅಡಿಯಲ್ಲಿ ನೂತನ ವಿಧಾನ ಪರಿಷತ್ ಸದಸ್ಯರಾದ ಡಿ.ಟಿ. ಶ್ರೀನಿವಾಸ್ (D T Srinivas)ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಚಿಂತಾಮಣಿ ತಾಲೂಕಿನ ಯಾದವ ಜನಾಂಗದ ಮುಖಂಡರು ಕಾಂಗ್ರೆಸ್ ಹೈಕಮಾಂಡ್‌ಗೆ ಮನವಿ ಮಾಡಿದ್ದಾರೆ.
ನಗರದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮುಖಂಡರು ಕಳೆದ 23 ವರ್ಷಗಳಿಂದ ಯಾವುದೇ ಸರ್ಕಾರಗಳು ಯಾದವ ಸಮಾಜಕ್ಕೆ ಸಚಿವ ಸಂಪುಟದಲ್ಲಿ ಸೂಕ್ತ ಸ್ಥಾನಮಾನ ನೀಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಇದನ್ನೂ ಓದಿ : Chikkaballapur News: ರಸಗೊಬ್ಬರ, ಪೆಟ್ರೋಲ್ ಡೀಸೆಲ್ ಬೆಲೆ ಇಳಿಕೆಗೆ ಆಗ್ರಹಿಸಿ ಪುಟ್ಟಣ್ಣಯ್ಯ ಬಣದ ರೈತ ಸಂಘ ಪ್ರತಿಭಟನೆ
ಸುಮಾರು ವರ್ಷಗಳಿಂದ ಜನಾಂಗದಲ್ಲಿ ಶಾಸಕರಾಗಿ ಆಯ್ಕೆಯಾಗಿರಲಿಲ್ಲ.ಅಂತಹ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ ಡಿ.ಟಿ.ಶ್ರೀನಿವಾಸ್ ಅವರು ನೂತನವಾಗಿ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.ಅಲ್ಲದೆ ಅವರು ರಾಜ್ಯ ಹಿಂದುಳಿದ ವರ್ಗಗಳ ಕಾಂಗ್ರೆಸ್ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ ಎಂದು ಮುಖಂಡರು ವಿವರಿಸಿದರು.
ಡಿ.ಟಿ. ಶ್ರೀನಿವಾಸ್ ಅವರ ಸುದೀರ್ಘ ರಾಜಕೀಯ ಸೇವೆ ಮತ್ತು ಹಿಂದುಳಿದ ವರ್ಗಗಳ ಸಂಘಟನೆಗೆ ಅವರು ನೀಡಿರುವ ಕೊಡುಗೆಯನ್ನು ಗುರುತಿಸಿ,ಅಖಿಲ ಭಾರತ ಕಾಂಗ್ರೆಸ್ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ,ಪಕ್ಷದ ನಾಯಕರಾದ ಸೋನಿಯಾ ಗಾಂಧಿ,ರಾಹುಲ್ ಗಾಂಧಿ ಹಾಗೂ ರಾಜ್ಯದ ನಾಯಕರಾದ ಡಿ.ಕೆ. ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ಈ ಬಾರಿ ಸಚಿವ ಸಂಪುಟದಲ್ಲಿ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಚಿಂತಾಮಣಿ ತಾಲೂಕು ಯಾದವ ಸಮಾಜದ ಮುಖಂಡರು ಒಕ್ಕೊರಲಿನಿಂದ ಆಗ್ರಹಿಸಿದ್ದಾರೆ.