Chikkaballapur News: “ಯುವನಿಧಿ ಅರಿವು ಕಾರ್ಯಾಗಾರ”, ಪಂಚ ಗ್ಯಾರಂಟಿಗಳು ಯಶಸ್ವಿ ಅನುಷ್ಠಾನ: ಯಲುವಳ್ಳಿ ಎನ್ ರಮೇಶ್
ನಗರದ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಗುರುವಾರ ಜಿಲ್ಲಾ ಉದ್ಯೋಗ ವಿನಿಯಮ ಕಚೇರಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ, ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಮತ್ತು ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಸಹಯೋಗದಲ್ಲಿ ಆಯೋಜಿಸಲಾಗಿದ್ದ, “ಯುವನಿಧಿ ಅರಿವು ಕಾರ್ಯಾಗಾರ” ಉದ್ಘಾಟಿಸಿ ಮಾತನಾಡಿದರು.
-
ಚಿಕ್ಕಬಳ್ಳಾಪುರ : ಯುವ ಜನತೆಯ ಉಜ್ವಲ ಭವಿಷ್ಯಕ್ಕಾಗಿ ರಾಜ್ಯ ಸರ್ಕಾರದ ಜಾರಿ ಮಾಡಿರುವ ಯುವನಿಧಿ ಯೋಜನೆಯು ಯುವ ಸಮೂಹಕ್ಕೆ ವರವಾಗಿದ್ದು, ಜಿಲ್ಲೆಯ ಶೇ.98.13 ರಷ್ಟು ಅರ್ಹ ಉದ್ಯೋಗಕಾಂಕ್ಷಿಗಳನ್ನು ಯೋಜನೆಯಡಿ ನೊಂದಾಯಿಸಿ ಸೌಲತ್ತು ನೀಡಲಾಗುತ್ತಿದೆ ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಯಲುವಳ್ಳಿ ಎನ್.ರಮೇಶ್ ತಿಳಿಸಿದರು.
ನಗರದ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಗುರುವಾರ ಜಿಲ್ಲಾ ಉದ್ಯೋಗ ವಿನಿಯಮ ಕಚೇರಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ, ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಮತ್ತು ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಸಹಯೋಗದಲ್ಲಿ ಆಯೋಜಿಸಲಾಗಿದ್ದ, “ಯುವನಿಧಿ ಅರಿವು ಕಾರ್ಯಾಗಾರ” ಉದ್ಘಾಟಿಸಿ ಮಾತನಾಡಿದರು.
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯುವನಿಧಿ ಯೋಜನೆಯಡಿ ಅರ್ಹರಿರುವ 6200 ಅಭ್ಯರ್ಥಿಗಳ ಪೈಕಿ 6084 ಅಭ್ಯರ್ಥಿಗಳನ್ನು (ಶೇ.98.13 ರಷ್ಟು) ನೊಂದಾಯಿಸಲಾಗಿದೆ. ನೊಂದಾಯಿತರ ಪೈಕಿ 5058 ಅಭ್ಯರ್ಥಿಗಳಿಗೆ ಆರ್ಥಿಕ ಸೌಲತ್ತು ಬಿಡುಗಡೆ ಮಾಡಿ ಶೇ.83.14 ಆರ್ಥಿಕ ಸಾಧನೆ ಮಾಡಲಾಗಿದೆ. ಬಾಕಿ ಉಳಿದಿರುವ ಅಭ್ಯರ್ಥಿಗಳಿಗೂ ಆರ್ಥಿಕ ಸೌಲಭ್ಯ ವಿತರಿಸಲು ಕ್ರಮ ವಹಿಸಲಾಗಿದೆ. ಒಟ್ಟಾರೆಯಾಗಿ ಜಿಲ್ಲೆಯಲ್ಲಿ ಈ ವರೆಗೆ 137148000 ಗಳ ಹಣವನ್ನು ಡಿಬಿಟಿ ಮುಖಾಂತರ ಅರ್ಹ ಉದ್ಯೋಗಾಕಾಂಕ್ಷಿಗಳ ಖಾತೆಗೆ ಜಮೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.
ಇದನ್ನೂ ಓದಿ: Chikkaballapur News: ಆದಿಚುಂಚನಗಿರಿ ಶ್ರೀ ಅಮೃತ ಹಸ್ತದಿಂದ ಮೇ.13ರಂದು ಒಕ್ಕಲಿಗರ ಸಂಘದ ನೂತನ ವಾಣಿಜ್ಯ ಮಳಿಗೆಗಳ ಲೋಕಾರ್ಪಣೆ
ಪಂಚ ಗ್ಯಾರಂಟಿ ಯೋಜನೆಗಳು ವಿಶೇಷವಾಗಿ ಬಡವರಿಗೆ, ಮಧ್ಯಮ ವರ್ಗದವರಿಗೆ ಹಾಗೂ ಕಡು ಸಂಕಷ್ಟದಲ್ಲಿ ಇರುವ ಕುಟುಂಬಗಳಿಗೆ ಬಹಳ ಪ್ರಯೋಜನ ಆಗುವ ನಿಟ್ಟಿ ನಲ್ಲಿ ಬಹಳ ಚಿಂತನೆ ಮಾಡಿ ತಜ್ಞರ ಅಭಿಪ್ರಾಯದಂತೆ ರಾಜ್ಯ ಸರ್ಕಾರ ಜಾರಿ ಮಾಡಿದ್ದು, ನಿರೀಕ್ಷೆಯಂತೆ ಯಶಸ್ವಿಯಾಗಿ ಜಿಲ್ಲೆಯಲ್ಲಿ ಪಂಚ ಗ್ಯಾರಂಟಿಗಳು ಅನುಷ್ಠಾನವಾಗುತ್ತಿವೆ. ಅನಿವಾರ್ಯ ಕಾರಣಗಳಿಂದ ಈವರೆಗೆ ಯಾವುದೇ ಅರ್ಹ ಫಲಾನುಭವಿಗಳು ಈ ಯೋಜನೆಗಳಿಂದ ವಂಚಿತರಾಗಿದ್ದಲ್ಲಿ ಸಂಬAಧಪಟ್ಟವರನ್ನು ಸಂಪರ್ಕಿಸಿ ನೊಂದಾಯಿಸಿ ಕೊಂಡು ಸದರಿ ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.
ಉದ್ಯೋಗಾಕಾಂಕ್ಷಿ ವಿದ್ಯಾವಂತ ಯುವ ಸಮೂಹಕ್ಕೆ ನೆರವಾಗುವ ನಿಟ್ಟಿನಲ್ಲಿ ನಿರುದ್ಯೋಗಿ ಭತ್ಯೆ (ಸೈಪಂಡರಿ) ಯೋಜನೆಯನ್ನು ದಿವಂಗತ ದೇವರಾಜ ಅರಸು ಅವರು ಮುಖ್ಯ ಮಂತ್ರಿಯಾಗಿದ್ದಾಗ ಜಾರಿಗೆ ತಂದಿದ್ದರು, ಇಂದಿನ ಯುವನಿಧಿ ಯೋಜನೆಯು ಅದರ ಮುಂದುವರೆದ ಭಾಗವಾಗಿದ್ದು, ಉದ್ಯೋಗಾಕಾಂಕ್ಷಿ ಪದವೀಧರರಿಗೆ 3000 ರೂ, ಡಿಪ್ಲೊಮೋ ಅಭ್ಯರ್ಥಿಗಳಿಗೆ 1500 ರೂ ನೀಡಲಾಗುತ್ತಿದೆ. ಈ ಯೋಜನೆಯಡಿ ಅಭ್ಯರ್ಥಿ ಗಳನ್ನು ನೋಂದಣಿ ಮಾಡುವ ಪ್ರಕ್ರಿಯೆಯು ನಿರಂತವಾಗಿ ಚಾಲನೆಯಲ್ಲಿದ್ದು, ಅಭ್ಯರ್ಥಿ ಗಳೆ ಆನ್ ಲೈನ್ ಮೂಲಕ ನೋಂದಣಿ ಮಾಡಿಕೊಳ್ಳಬಹುದಾಗಿದೆ. ಈ ಸಂಬಂಧ ಯಾವುದೇ ತೊಡಕುಗಳಿದ್ದಲ್ಲಿ ಜಿಲ್ಲಾ ಉದ್ಯೋಗ ವಿನಿಯಮ ಕಚೇರಿಯನ್ನು ಸಂಪರ್ಕಿಸು ವಂತೆ ಮನವಿ ಮಾಡಿದರು.
ವಿದ್ಯಾರ್ಥಿಗಳಿಗೆ ಆರ್ಥಿಕ ಸಹಾಯದ ಭರವಸೆ
ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿಗೆ ದಾಖಲಾಗಿರುವ ವಿದ್ಯಾರ್ಥಿಗಳು ಶೇ.90 ರಷ್ಟು ಗ್ರಾಮೀಣ ಭಾಗದವರಾಗಿದ್ದು, ಬಡ ಮತ್ತು ಮಧ್ಯಮ ವರ್ಗದ ಕುಟುಂಬದ ಹಿನ್ನೆಲೆ ಹೊಂದಿದ್ದಾರೆ. ಈ ವಿದ್ಯಾರ್ಥಿಗಳ ಪೈಕಿ ಸು. 40ಕ್ಕೂ ಹೆಚ್ಚು ವಿದ್ಯಾರ್ಥಿಗಳು ತಂದೆ ತಾಯಿಯನ್ನು ಕಳೆದುಕೊಂಡವರಾಗಿದ್ದಾರೆ. ಈ ವಿದ್ಯಾರ್ಥಿಗಳ ಕಾಲೇಜಿನ ಶುಲ್ಕವನ್ನು ವೈಯಕ್ತಿಕವಾಗಿ ಭರಿಸಲು ಇಚ್ಛಿಸಿದ್ದು, ಪ್ರಾಂಶುಪಾಲರು ಆ ವಿದ್ಯಾರ್ಥಿಗಳ ಪಟ್ಟಿಯನ್ನು ನೀಡುವಂತೆ ಹಾಗೂ ಏಕ ಪೋಷಕ ಮಕ್ಕಳ ವಿವರವನ್ನು ಸಹ ನೀಡುವಂತೆ ಮನವಿ ಮಾಡಿದರು. ಈ ವಿದ್ಯಾರ್ಥಿಗಳಿಗೆ ಆರ್ಥಿಕ ಸಹಾಯವನ್ನು ಮಾಡುವುದಾಗಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರು ಭರವಸೆ ನೀಡಿದರು.
ಜಿಲ್ಲಾ ಉದ್ಯೋಗಾಧಿಕಾರಿ ಪ್ರಸಾದ್.ಎಂ ಮಾತನಾಡುತ್ತಾ, ಯುವನಿಧಿ ಯೋಜನೆಯನ್ನು ಉದ್ಯೋಗಾಕಾಂಕ್ಷಿ ಯುವ ಸಮೂಹ ಸದುಪಯೋಗಪಡಿಸಿಕೊಳ್ಳಬೇಕು. ಪ್ರತಿಯೊಬ್ಬ ಯುವಕ ಯುವತಿಯರು ದುಡಿಯುವಂತಾಗಬೇಕು ಎಂದು ರಾಜ್ಯ ಸರ್ಕಾರ ಉದ್ದೇಶಿಸಿ ಕೌಶಲ್ಯ ಅಭಿವೃದ್ಧಿ ಇಲಾಖೆಯಡಿ ಹಲವು ತರಬೇತಿ ಕಾರ್ಯಕ್ರಮಗಳನ್ನು ಆಯೋಜಿಸು ತ್ತಿದೆ. ಅವುಗಳ ಸದುಪಯೋಗವನ್ನು ಪಡೆಯಲು ಹಾಗೂ ಉದ್ಯೋಗಕ್ಕಾಗಿ ಅರ್ಜಿ ಸಲ್ಲಿಸಲು ಮತ್ತು ಸಂದರ್ಶನಕ್ಕೆ ಹಾಜರಾಗಲು ಯುವನಿಧಿ ಹಣ ಉಪಯೋಗಕ್ಕೆ ಬರು ತ್ತಿರುವುದು ಕಂಡುಬರುತ್ತಿದೆ. ಆದ್ದರಿಂದ ನಿಮ್ಮ ಸಹೋದರರು, ನಿಮ್ಮ ಸ್ನೇಹಿತರಿಗೆ ಯುವನಿಧಿ ಯೋಜನೆಯ ಮಹತ್ವದ ಬಗ್ಗೆ ತಿಳಿಸಬೇಕೆಂದು ವಿದ್ಯಾರ್ಥಿಗಳಿಗೆ ಸಲಹೆ ಮಾಡಿದರು.
ಚಿಕ್ಕಬಳ್ಳಾಪುರ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಕೆ.ಎನ್. ಜಯರಾಮ್ ಅವರು ಮಾತನಾಡಿ, ಸ್ವಾಮಿ ವಿವೇಕಾನಂದ ಜಯಂತಿ' ದಿನದಂದು 2024ರಲ್ಲಿ ಯುವನಿಧಿ ಯೋಜನೆಯು ಪ್ರಾರಂಭಿಸಲಾಯಿತು. ಈ ಯೋಜನೆಯ ಮುಖ್ಯ ಉದ್ದೇಶ ವಿದ್ಯಾವಂತ ಯುವಕ ಯುವತಿಯರು ಉದ್ಯೋಗವನ್ನು ಪಡೆಯಲು ಪ್ರಯತ್ನ ಮಾಡುತ್ತಿರುವವರಿಗೆ ಉತ್ತೇಜನ ನೀಡುವುದಾಗಿದೆ. ಸ್ವಾಮಿ ವಿವೇಕಾನಂದರ ಚಿಂತನೆ ಗಳನ್ನು ಅಳವಡಿಕೊಂಡು ಪ್ರತಿಯೊಬ್ಬರು ಉದ್ಯೋಗ ಪಡೆಯುವ ನಿಟ್ಟಿನಲ್ಲಿ ಯುವನಿಧಿ ಯನ್ನು ಉಪಯೋಗಿಸಿಕೊಳ್ಳುವಂತೆ ಉದ್ಯೋಗಾಕಾಂಕ್ಷಿಗಳಲ್ಲಿ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಚಂದ್ರಯ್ಯ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸದಸ್ಯರಾದ ನಾರಾಯಣಸ್ವಾಮಿ, ಲಕ್ಷ್ಮಣ್, ವೆಂಕಟಲಕ್ಷ್ಮಮ್ಮ, ಬಾಲಕೃಷ್ಣ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಯುವನಿಧಿ ಯೋಜನೆ, ಉದ್ಯೋಗ ಮೇಳ, ಉದ್ಯೋಗ ಪತ್ರ, ಸ್ಟಡಿ ಸರ್ಕಲ್, ಯುವನಿಧಿ ಪ್ಲಸ್ ಕುರಿತ ಬಿತ್ತಿಪತ್ರಗಳು ಮತ್ತು ಕರಪತ್ರಗಳನ್ನು ವಿದ್ಯಾರ್ಥಿಗಳಿಗೆ ವಿತರಿಸಿ ಜಾಗೃತಿ ಮೂಡಿಸಲಾಯಿತು.