ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Shidlaghatta News: ಯುವಜನತೆ ಗುರಿ ಹೊಂದಿ ಮುಂದೆ ಸಾಗಬೇಕು: ಪ್ರಾಂಶುಪಾಲ ಡಾ.ಜಿ.ಮುರಳಿ ಆನಂದ್

ಕಾಲೇಜು ಶಿಕ್ಷಣವು ಕೇವಲ ಪದವಿ ಪಡೆಯುವುದಕ್ಕೆ ಸೀಮಿತವಾಗದೆ, ಉತ್ತಮ ವ್ಯಕ್ತಿತ್ವ ಹಾಗೂ ಸಮಾಜಮುಖಿ ಚಿಂತನೆ ಬೆಳೆಸುವ ದಿಕ್ಕಿನಲ್ಲಿ ಸಾಗಬೇಕು. ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಸವಾಲುಗಳ ನಡುವೆಯೂ ವಿದ್ಯಾಭ್ಯಾಸ ಮತ್ತು ಕ್ರೀಡೆಯಲ್ಲಿ ಸಾಧನೆ ಮಾಡುತ್ತಿರುವುದು ಹೆಮ್ಮೆಯ ಸಂಗತಿ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಯುವಜನತೆ ಗುರಿ ಹೊಂದಿ ಮುಂದೆ ಸಾಗಬೇಕು

ವಿದ್ಯಾರ್ಥಿಗಳು ಜೀವನದಲ್ಲಿ ಉನ್ನತ ಗುರಿಯನ್ನು ಹೊಂದಿ ನಿರಂತರ ಶ್ರಮಿಸಿದರೆ ಯಶಸ್ಸು ಖಚಿತ ಎಂದು ಪ್ರಾಂಶುಪಾಲ ಡಾ.ಜಿ.ಮುರಳಿ ಆನಂದ್ ಹೇಳಿದರು. -

Profile
Ashok Nayak May 26, 2026 11:27 PM

ಶಿಡ್ಲಘಟ್ಟ: ವಿದ್ಯಾರ್ಥಿಗಳು ಜೀವನದಲ್ಲಿ ಉನ್ನತ ಗುರಿಯನ್ನು ಹೊಂದಿ ನಿರಂತರ ಶ್ರಮಿಸಿ ದರೆ ಯಶಸ್ಸು ಖಚಿತ ಎಂದು ಪ್ರಾಂಶುಪಾಲ ಡಾ.ಜಿ.ಮುರಳಿ ಆನಂದ್ ಹೇಳಿದರು.

ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ 2025-26ನೇ ಸಾಲಿನ ವಾರ್ಷಿಕೋ ತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕಾಲೇಜು ಶಿಕ್ಷಣವು ಕೇವಲ ಪದವಿ ಪಡೆಯುವುದಕ್ಕೆ ಸೀಮಿತವಾಗದೆ, ಉತ್ತಮ ವ್ಯಕ್ತಿತ್ವ ಹಾಗೂ ಸಮಾಜಮುಖಿ ಚಿಂತನೆ ಬೆಳೆಸುವ ದಿಕ್ಕಿನಲ್ಲಿ ಸಾಗಬೇಕು. ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಸವಾಲುಗಳ ನಡುವೆಯೂ ವಿದ್ಯಾಭ್ಯಾಸ ಮತ್ತು ಕ್ರೀಡೆಯಲ್ಲಿ ಸಾಧನೆ ಮಾಡುತ್ತಿರುವುದು ಹೆಮ್ಮೆಯ ಸಂಗತಿ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಇದನ್ನೂ ಓದಿ: Shidlaghatta News: ರಸ್ತೆ ಅಭಿವೃದ್ಧಿಗೆ ಆಗ್ರಹಿಸಿ ಸಾದಲಿಯಲ್ಲಿ ಅನಿರ್ದಿಷ್ಟಾವಧಿ ಧರಣಿ

ಚಿಮುಲ್ ನಿರ್ದೇಶಕ ರಾಮಯ್ಯ ಮಾತನಾಡಿ, ಇಂದಿನ ಯುವಜನತೆ ಮೊಬೈಲ್ ಬಳಕೆ ಯನ್ನು ನಿಯಂತ್ರಿಸಿಕೊಂಡು ವಿದ್ಯಾಭ್ಯಾಸ ಹಾಗೂ ವ್ಯಕ್ತಿತ್ವ ವಿಕಸನದ ಕಡೆ ಹೆಚ್ಚಿನ ಗಮನ ಹರಿಸಬೇಕು. ವಿದ್ಯಾಭ್ಯಾಸದ ಜೊತೆಗೆ ದುಡಿದು ಕುಟುಂಬದ ಜವಾಬ್ದಾರಿಯನ್ನು ನಿಭಾಯಿಸುತ್ತಿರುವ ವಿದ್ಯಾರ್ಥಿಗಳ ಪರಿಶ್ರಮ ಶ್ಲಾಘನೀಯ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ವಿವಿಧ ಸಾಂಸ್ಕೃತಿಕ ಹಾಗೂ ಕ್ರೀಡಾ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ಹಾಗೂ ಪ್ರಮಾಣಪತ್ರಗಳನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಬಂಕ್ ಮುನಿಯಪ್ಪ, ಪ್ರಾಧ್ಯಾಪಕರಾದ ಡಾ.ಶಫಿ ಅಹಮದ್, ಡಾ. ವಿಜಯೇಂದ್ರಕುಮಾರ್, ಡಾ.ಎನ್.ಎ.ಆದಿನಾರಾಯಣಪ್ಪ, ಜಿ.ಬಿ.ವೆಂಕಟೇಶ್, ಡಾ. ರವಿಕುಮಾರ್, ಎಂ.ಸುನೀತಾ, ವಿ.ಆರ್.ಶಿವಶಂಕರಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.