ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

MLA B.Z.Zameer Ahmed Khan: ಜಮೀರ್ ಅಹ್ಮದ್ ಖಾನ್ ಅವರಿಗೆ ಡಿಸಿಎಂ ಹುದ್ದೆ ಸೇರಿ: ಐವರಿಗೆ ಸಚಿವ ಸ್ಥಾನ ನೀಡಲು ಆಗ್ರಹ

ನಗರದ ಜಾಮಿಯಾ ಮಸೀದಿ ಎದುರು ಮುಸ್ಲಿಂ ಸಮುದಾಯದ ಮುಖಂಡರು ಹಾಗೂ ಬಾಂಧವರು, ನೂತನ ಸಚಿವ ಸಂಪುಟದ ಮೊದಲ ಪಟ್ಟಿಯಲ್ಲಿ ಕೇವಲ ಒಬ್ಬ ಮುಸ್ಲಿಂ ಶಾಸಕರಿಗೆ ಮಾತ್ರ ಸ್ಥಾನ ನೀಡಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದರು. ಜಮೀರ್ ಅಹ್ಮದ್ ಖಾನ್, ವಿಧಾನ ಪರಿಷತ್ ಸದಸ್ಯ ನಸೀರ್ ಅಹ್ಮದ್ ಸೇರಿದಂತೆ ಒಟ್ಟು ಐದು ಮುಸ್ಲಿಂ ಪ್ರತಿನಿಧಿಗಳಿಗೆ ಸಚಿವ ಸ್ಥಾನ ನೀಡಬೇಕು ಎಂದು ಆಗ್ರಹಿಸಿದರು.

ಹಿರಿಯ ಶಾಸಕ ಬಿ.ಝೆಡ್.ಜಮೀರ್ ಅಹ್ಮದ್ ಖಾನ್ ಅವರನ್ನು ಉಪಮುಖ್ಯಮಂತ್ರಿ ಸ್ಥಾನ ನೀಡುವ ಜತೆಗೆ ರಾಜ್ಯ ಸಚಿವ ಸಂಪುಟದಲ್ಲಿ ಐವರು ಮುಸ್ಲಿಂ ಶಾಸಕರಿಗೆ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಿ ಚಿಕ್ಕಬಳ್ಳಾಪುರದಲ್ಲಿ ಮುಸ್ಲಿಂ ಸಮುದಾಯದ ಮುಖಂಡರು ಪ್ರತಿಭಟನೆ ನಡೆಸಿದರು.

ಚಿಕ್ಕಬಳ್ಳಾಪುರ: ಹಿರಿಯ ಶಾಸಕ ಬಿ.ಝೆಡ್.ಜಮೀರ್ ಅಹ್ಮದ್ ಖಾನ್( MLA B.Z.Zameer Ahmed Khan) ಅವರನ್ನು ಉಪಮುಖ್ಯಮಂತ್ರಿ ಸ್ಥಾನ(DCM Post) ನೀಡುವ ಜತೆಗೆ ರಾಜ್ಯ ಸಚಿವ ಸಂಪುಟದಲ್ಲಿ ಐವರು ಮುಸ್ಲಿಂ ಶಾಸಕರಿಗೆ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಿ ಚಿಕ್ಕಬಳ್ಳಾಪುರದಲ್ಲಿ ಮುಸ್ಲಿಂ ಸಮುದಾಯದ ಮುಖಂಡರು ಪ್ರತಿಭಟನೆ ನಡೆಸಿದರು.

ನಗರದ ಜಾಮಿಯಾ ಮಸೀದಿ ಎದುರು ಮುಸ್ಲಿಂ ಸಮುದಾಯದ ಮುಖಂಡರು ಹಾಗೂ ಬಾಂಧವರು, ನೂತನ ಸಚಿವ ಸಂಪುಟದ ಮೊದಲ ಪಟ್ಟಿಯಲ್ಲಿ ಕೇವಲ ಒಬ್ಬ ಮುಸ್ಲಿಂ ಶಾಸಕರಿಗೆ ಮಾತ್ರ ಸ್ಥಾನ ನೀಡಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದರು.ಝಮೀರ್ ಅಹ್ಮದ್ ಖಾನ್,ವಿಧಾನ ಪರಿಷತ್ ಸದಸ್ಯ ನಸೀರ್ ಅಹ್ಮದ್ ಸೇರಿದಂತೆ ಒಟ್ಟು ಐದು ಮುಸ್ಲಿಂ ಪ್ರತಿನಿಧಿಗಳಿಗೆ ಸಚಿವ ಸ್ಥಾನ ನೀಡಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ನಗರಸಭೆ ಮಾಜಿ ಸದಸ್ಯ ಎಸ್.ಎಂ.ರಫೀಕ್, ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬರಲು ಮುಸ್ಲಿಂ ಸಮುದಾಯದ ಪಾತ್ರ ಮಹತ್ವದ್ದಾಗಿದೆ. ಸಚಿವ ಸಂಪುಟದಲ್ಲಿ ಕನಿಷ್ಠ ಐದು ಮಂದಿ ಮುಸ್ಲಿಂ ಶಾಸಕರಿಗೆ ಸಚಿವ ಸ್ಥಾನ ನೀಡಬೇಕು.

ಇದನ್ನೂ ಓದಿ: Zameer Ahmed: ಸಚಿವ ಸ್ಥಾನದ ನಿರೀಕ್ಷೆಯಲ್ಲಿರುವ ಜಮೀರ್‌ ಅಹ್ಮದ್‌ಗೆ ಸಂಕಷ್ಟ; ಬೈ ಎಲೆಕ್ಷನ್‌ನಲ್ಲಿ ಪಕ್ಷವಿರೋಧಿ ಚಟುವಟಿಕೆ ಆರೋಪ, ಆಡಿಯೊ ವೈರಲ್‌!

ಕಳೆದ ಮೂರು ವರ್ಷಗಳಿಂದ ಸಚಿವರಾಗಿ ಉತ್ತಮ ಕಾರ್ಯನಿರ್ವಹಣೆ ನೀಡಿರುವ ಜಮೀರ್ ಅಹ್ಮದ್ ಖಾನ್ ಅವರಿಗೆ ಮೊದಲ ಪಟ್ಟಿಯಲ್ಲೇ ಸ್ಥಾನ ದೊರೆಯಬೇಕಾಗಿತ್ತು. ಆದರೆ ಕೆಲವು ಪಿತೂರಿಗಳಿಂದ ಅದು ಸಾಧ್ಯವಾಗಿಲ್ಲವೆಂದು ಕಾಣುತ್ತದೆ. ಕೂಡಲೇ ಅವರಿಗೆ ಡಿಸಿಎಂ ಹುದ್ದೆ ನೀಡುವುದರ ಜೊತೆಗೆ ಇನ್ನೂ ನಾಲ್ವರು ಮುಸ್ಲಿಂ ಪ್ರತಿನಿಧಿಗಳನ್ನು ಸಚಿವ ಸಂಪುಟಕ್ಕೆ ಸೇರಿಸ ಬೇಕು. ಇದು ರಾಜ್ಯದ ಸುಮಾರು 80 ಲಕ್ಷ ಮುಸ್ಲಿಂ ಸಮುದಾಯದ ಒತ್ತಾಯವಾಗಿದೆ ಎಂದು ಹೇಳಿದರು.

ನಗರಸಭೆ ಮಾಜಿ ಸದಸ್ಯ ಜಮಾಅತ್ ಅಹ್ಲ್ ಇಸ್ಲಾಂ ಸದಸ್ಯ ಮಹಮ್ಮದ್ ಜಾಫರ್ ಮಾತನಾಡಿ, ಮುಸ್ಲಿಂ ಸಮುದಾಯವು ಮೊದಲಿನಿಂದಲೂ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುತ್ತಾ ಬಂದಿದೆ. ಮಾಜಿ ಮುಖ್ಯಮಂತ್ರಿಗಳಾದ ಎಸ್.ಎಂ. ಕೃಷ್ಣ ಹಾಗೂ ಸಿದ್ದರಾಮಯ್ಯ ಅವರ ಆಡಳಿತಾವಧಿ ಯಲ್ಲಿ ಮುಸ್ಲಿಂ ಶಾಸಕರಿಗೆ ಸಚಿವ ಸಂಪುಟದಲ್ಲಿ ಹೆಚ್ಚಿನ ಪ್ರಾತಿನಿಧ್ಯ ನೀಡಲಾಗಿತ್ತು ಆದರೆ ಮುಖ್ಯಮಂತ್ರಿ ಬದಲಾವಣೆಯ ನಂತರದ ಮೊದಲ ಪಟ್ಟಿಯಲ್ಲಿ ಕೇವಲ ಒಬ್ಬರಿಗೆ ಮಾತ್ರ ಸ್ಥಾನ ನೀಡಿರುವುದು ಬೇಸರ ತಂದಿದೆ ಜಮೀರ್ ಅಹ್ಮದ್ ಖಾನ್ ಅವರ ಕಾರ್ಯವೈಖರಿ ರಾಜ್ಯದ ಜನತೆಗೆ ಪರಿಚಿತವಾಗಿದೆ ಎಂದರು.

ಅವರ ಹೆಸರು ಮೊದಲ ಪಟ್ಟಿಯಲ್ಲೇ ಇರಬೇಕಾಗಿತ್ತು.ರಾಜ್ಯದಲ್ಲಿ ಗಣನೀಯ ಜನಸಂಖ್ಯೆ ಹೊಂದಿ ರುವ ಮುಸ್ಲಿಂ ಸಮುದಾಯಕ್ಕೆ ಸಚಿವ ಸಂಪುಟದಲ್ಲಿ ಹೆಚ್ಚಿನ ಪ್ರಾತಿನಿಧ್ಯ ನೀಡಬೇಕು. ಜಮೀರ್ ಅಹ್ಮದ್ ಖಾನ್ ಅವರಿಗೆ ಡಿಸಿಎಂ ಹುದ್ದೆ ಹಾಗೂ ನಸೀರ್ ಅಹ್ಮದ್ ಸೇರಿದಂತೆ ಒಟ್ಟು ಐದು ಮಂದಿಗೆ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದರು.

ಜಮಾ ಅತೆ ಅಹ್ಲೆ ಇಸ್ಲಾಂ ಅಧ್ಯಕ್ಷ ಜಾವಿದ್ ಪಾಷಾ ಮಾತನಾಡಿ, ಹಿಂದಿನ ಕಾಂಗ್ರೆಸ್ ಸರ್ಕಾರ ಗಳಲ್ಲಿ ಮುಸ್ಲಿಂ ಸಮುದಾಯಕ್ಕೆ ಸಮರ್ಪಕ ಪ್ರಾತಿನಿಧ್ಯ ನೀಡಲಾಗುತ್ತಿತ್ತು. ಆದರೆ ಈ ಬಾರಿ ಒಬ್ಬರಿಗೆ ಮಾತ್ರ ಸಚಿವ ಸ್ಥಾನ ನೀಡಿರುವುದು ದುರದೃಷ್ಟಕರ. ಕಾಂಗ್ರೆಸ್ ಹೈಕಮಾಂಡ್ ಈ ಬಗ್ಗೆ ಗಮನಹರಿಸಿ ಸಮುದಾಯಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸಿ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಜಮಾಅತೆ ಅಹ್ಲೆ ಇಸ್ಲಾಂ ಕಾರ್ಯದರ್ಶಿ ಮಹಮ್ಮದ್ ಫಹಾದ್,ಉಪಾಧ್ಯಕ್ಷ ಸಾಧಿಕ್ ಅಲಿ, ಸದಸ್ಯರಾದ ನಯಾಜ್ ಪಾಷಾ, ಆಸೀಫ್ ಪಾಷಾ, ಇಸ್ಮಾಯಿಲ್ ಖಾನ್, ಅತಾವುಲ್ಲಾ, ಸಮಿವುಲ್ಲಾ(ಸಮ್ಮು) ಹಾಗೂ ಸಮುದಾಯದ ಪ್ರಮುಖರಾದ ಬಿ.ಅಜ್ಗರ್, ಫಜಿಲ್ ಖಾನ್, ಮಹಮ್ಮದ್ ತೌಸಿಫ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.