ಚಿಕ್ಕಬಳ್ಳಾಪುರ: ನಗರದ ನಾಗಾರ್ಜುನ ಇಂಜಿನಿಯರಿಂಗ್ ಮತ್ತು ತಾಂತ್ರಿಕ ಮಹಾವಿದ್ಯಾಲಯ ದಲ್ಲಿ ವಿವಿಧ ಕಂಪನಿಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳನ್ನು ಗುರುತಿಸಿ ಸನ್ಮಾನಿಸುವ ನಿಟ್ಟಿನಲ್ಲಿ ಸಾಧಕರ ದಿನವನ್ನು ಆಚರಿಸಲಾಯಿತು.
ಈ ವೇಳೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಪ್ರಾಂಶುಪಾಲ ಡಾ.ಜಿ ತಿಪ್ಪೇಸ್ವಾಮಿ, ನಾಗಾ ಲೋಟದಲ್ಲಿರುವ ತಂತ್ರಜ್ಞಾನ ಮತ್ತು ಸ್ಪರ್ಧಾತ್ಮಕ ಜಗತ್ತಿನಲ್ಲಿ ವಿದ್ಯಾರ್ಥಿಗಳಿಗೆ ಕೌಶಲ್ಯಾ ಧಾರಿತ ಶಿಕ್ಷಣ ಬಹುಮುಖ್ಯ. ಈ ನಿಟ್ಟಿನಲ್ಲಿ ನಮ್ಮ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ ಶ್ಲಾಘನೀಯ. ಆದ್ದರಿಂದ ಸಾಧಕರನ್ನು ಗುರುತಿಸಿ ಗೌರವಿಸುವ ಕೆಲಸಕ್ಕೆ ಮುಂದಾಗಿದ್ದೇವೆ ಎಂದರು.
ನಮ್ಮ ಸಂಸ್ಥೆಯಲ್ಲಿ ಅಂತಿಮ ವರ್ಷದ ಇಂಜಿನಿಯರಿಂಗ್ ಪದವಿ ವಿದ್ಯಾಭ್ಯಾಸ ಮಾಡುತ್ತಿರುವ ನೂರಾರು ವಿದ್ಯಾರ್ಥಿಗಳು ಇಂದು ವಿವಿಧ ಕಂಪನಿಗಳಿಗೆ ಆಯ್ಕೆಯಾಗಿರುವುದು ನಿಜಕ್ಕೂ ಹೆಮ್ಮೆಯ ವಿಚಾರ. ನಿಮ್ಮೆಲ್ಲರ ಭವಿಷ್ಯ ಉಜ್ವಲವಾಗಲಿ ಎಂದು ಆಶೀರ್ವದಿಸಿದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ವಿಟಿಯು ನಾಮಿನಿ ಸದಸ್ಯ ಮಂಜುನಾಥ್, ಸಾಧಕ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ, ಪ್ರಶಸ್ತಿಗಳನ್ನು ವಿತರಿಸುವ ಮೂಲಕ ಶುಭ ಹಾರೈಸಿದರು.
ಇದನ್ನೂ ಓದಿ: Chikkaballapur News: ಶ್ರೀಮಂತಿಕೆ ಮತ್ತು ಅಧಿಕಾರ ಪೂಜಿಸುವಂತಹ ಸಮಾಜ ಅಗಿದೆ, ಪ್ರಾಮಾಣಿಕರಿಗೆ ಯಾವುದೇ ಬೆಲೆಯಿಲ್ಲ
ಪೋಷಕರ ಸಮ್ಮುಖದಲ್ಲಿ ನಡೆದ ಈ ಕಾರ್ಯಕ್ರಮವು "ಕ್ಯಾಂಪಸ್‌ನಿಂದ ಕಾರ್ಪೊರೇಟ್‌ಗೆ" ಎಂಬ ಘೋಷವಾಕ್ಯದೊಂದಿಗೆ ಯಶಸ್ವಿಯಾಗಿ ಜರುಗಿತು.
ನೂತನ ಯೋಜನೆಗಳ ಉದ್ಘಾಟನೆ: ಕಾಲೇಜಿನ ಶೈಕ್ಷಣಿಕ ಗುಣಮಟ್ಟವನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ಯುವ ನಿಟ್ಟಿನಲ್ಲಿ ಮೂರು ಪ್ರಮುಖ ಯೋಜನೆಗಳಿಗೆ ಇದೇ ಸಂದರ್ಭದಲ್ಲಿ ಚಾಲನೆ ನೀಡಲಾಯಿತು.
ವಿದ್ಯಾರ್ಥಿಗಳನ್ನು ಕೃತಕ ಬುದ್ಧಿಮತ್ತೆ (AI) ಕ್ಷೇತ್ರದಲ್ಲಿ ಪರಿಣತರನ್ನಾಗಿ ಮಾಡಲು 'AI Ready Engineer' ಕಾರ್ಯಕ್ರಮವನ್ನು ಪ್ರಾರಂಭಿಸಲಾಯಿತು.
ಅತ್ಯಾಧುನಿಕ ತಂತ್ರಜ್ಞಾನದ ಸೌಲಭ್ಯವುಳ್ಳ 'AI Specialised Lab' ಅನ್ನು ಅಧಿಕೃತವಾಗಿ ಉದ್ಘಾಟಿಸಲಾಯಿತು.
ಹಳೆಯ ವಿದ್ಯಾರ್ಥಿಗಳ ನಡುವೆ ಸಂಪರ್ಕ ಸೇತುವೆಯಾಗಿ ಕಾರ್ಯನಿರ್ವಹಿಸಲು 'KoRo' ಹೆಸರಿನ NCET ಅಲುಮ್ನಿ (Alumni) ಆ್ಯಪ್ ಅನ್ನು ಲೋಕಾರ್ಪಣೆಗೊಳಿಸಲಾಯಿತು.
ಒಟ್ಟಾರೆಯಾಗಿ, ಸಮಾರಂಭವು ವಿದ್ಯಾರ್ಥಿಗಳ ದೃಢಸಂಕಲ್ಪ ಮತ್ತು NCET ಸಂಸ್ಥೆಯ ಗುಣಮಟ್ಟದ ಶಿಕ್ಷಣಕ್ಕೆ ಸಾಕ್ಷಿಯಾಯಿತು.
ಇದೇ ವೇಳೆ ಸಂಸ್ಥೆಯ ನಿರ್ದೇಶಕ ಡಾ. ಗೋಪಾಲಕೃಷ್ಣ, ಆಡಳಿತ ಮಂಡಳಿಯ ಕಿಶನ್ ಸೇರಿದಂತೆ ಗಣ್ಯರು ವಿದ್ಯಾರ್ಥಿಗಳನ್ನು ಕುರಿತು ಮಾತನಾಡಿದರು.
ಕಾರ್ಯಕ್ರಮದಲ್ಲಿ ಟೋರಿ ಸಂಸ್ಥೆ ಸಿ ಇ ಒ ಬಾಬ್ಜಿ ನೀಲಂ ಹಾಗೂ ಎಲ್ಲಾ ವಿಭಾಗಗಳ ಮುಖ್ಯಸ್ಥರು, ವಿದ್ಯಾರ್ಥಿಗಳು, ಪೋಷಕರು ಹಾಜರಿದ್ದರು.