ಚಿಕ್ಕಮಗಳೂರು, ಏ.10: ಪ್ರವಾಸಕ್ಕೆಂದು ಚಿಕ್ಕಮಗಳೂರಿಗೆ (Chikkamagaluru) ಬಂದು ನಾಪತ್ತೆ (Girl missing case) ಆಗಿದ್ದ ಕೇರಳ ಮೂಲದ ಬಾಲಕಿ ಶ್ರೀನಂದಾ (Srinanda) (14) ಮುಳ್ಳಯ್ಯನಗಿರಿ (mullayyanagiri) ಬಳಿಯ ಮಾಣಿಕ್ಯಧಾರ (manikydhara) ಜಲಪಾತದ ಸಮೀಪದ ಪ್ರಪಾತದಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಆಕಸ್ಮಿಕವಾಗಿ ಜಾರಿ ಬಿದ್ದು ಸತ್ತಿರಬಹುದು ಎಂದು ಶಂಕಿಸಲಾಗಿತ್ತು. ಇದೀಗ ಆಕೆಯ ತಂದೆಯ ಹೇಳಿಕೆಯ ಹಿನ್ನೆಲೆಯಲ್ಲಿ, ಆಕೆಯ ಸಾವಿನ ಹಿಂದೆ ಬೇರೆ ಕಾರಣ ಇರಬಹುದು ಎಂಬ ಅನುಮಾನ ಮೂಡಿದೆ.
ಏಪ್ರಿಲ್ 7ರಂದು ಕುಟುಂಬದವರೊಂದಿಗೆ ಶ್ರೀನಂದಾ ಚಿಕ್ಕಮಗಳೂರಿನ ಮಾಣಿಕ್ಯಧಾರಕ್ಕೆ ಪ್ರವಾಸಕ್ಕೆ ಬಂದಿದ್ದಳು. ಮಂಗಳವಾರ ಸಂಜೆ ಸುಮಾರು 5.30ರ ವೇಳೆ ಆಕೆ ಆಕಸ್ಮಿಕವಾಗಿ ನಾಪತ್ತೆಯಾಗಿದ್ದಳು. ಬಳಿಕ ಕುಟುಂಬದವರು ಹಾಗೂ ಸ್ಥಳೀಯರು ಹುಡುಕಾಟ ನಡೆಸಿದರೂ ಪ್ರಯೋಜನವಾಗಿಲ್ಲ. ಅರಣ್ಯ ಇಲಾಖೆ, ಪೊಲೀಸರು, ಸೇರಿದಂತೆ ಇತರೆ ರಕ್ಷಣಾ ತಂಡಗಳು ಸತತ ಮೂರು ದಿನಗಳ ಕಾಲ ಕಾರ್ಯಾಚರಣೆ ನಡೆಸಿದ್ದು ಅಂತಿಮವಾಗಿ ನಿನ್ನೆ (ಏಪ್ರಿಲ್ 10) ಶ್ರೀನಂದಾ 2000 ಅಡಿ ಆಳದ ಪ್ರಪಾತದಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಶ್ರೀನಂದಾ ಅದು ಹೇಗೆ ಬಿದ್ದಳು ಎನ್ನುವುದೇ ನಿಗೂಢವಾಗಿದೆ. ಆಕಸ್ಮಿಕವಾಗಿ ಕಾಲು ಜಾರಿ ಬಿದ್ದಿರಬಹುದು ಎನ್ನಲಾಗಿತ್ತು. ಆದರೆ ಇದೀಗ ತಂದೆ, ಪೊಲೀಸರ ಮುಂದೆ ಹೇಳಿರುವ ಒಂದು ಹೇಳಿಕೆ ಶ್ರೀನಂದಾ ಸಾವಿನ ಬಗ್ಗೆ ಮತ್ತೊಂದು ಅನುಮಾನ ಮೂಡಿಸಿದೆ.
ಆ ದಿನ ಕುಟುಂಬದ ಸದಸ್ಯರೆಲ್ಲರೂ ಒಟ್ಟಾಗಿ ಮಾಣಿಕ್ಯಾಧಾರದ ಮೆಟ್ಟಿಲುಗಳನ್ನು ಇಳಿಯುತ್ತಿದ್ದರು. ಕುಟುಂಬದ ಸದಸ್ಯರೆಲ್ಲಾ ಮುಂದೆ ಹೋಗುತ್ತಿದ್ದರೆ, ಬಾಲಕಿ ಶ್ರೀನಂದ ಅವರ ಹಿಂದೆಯೇ ಬರುತ್ತಿದ್ದಳು. ಆದರೆ, ಒಂದು ತಿರುವಿನಲ್ಲಿ ನೋಡುವಷ್ಟರಲ್ಲಿ ಆಕೆ ಅಲ್ಲಿರಲಿಲ್ಲ. ಮೂರು ದಿನಗಳ ಕಾಲ ನಿರಂತರ ಶೋಧ ಕಾರ್ಯಾಚರಣೆ ನಡೆದ ಬಳಿಕ, ಅರಿಶಿನಗುಪ್ಪೆ ಭಾಗದಿಂದ ಹೊರಟ ಶೋಧ ತಂಡಕ್ಕೆ ಸುಮಾರು ಮೂರ್ನಾಲ್ಕು ಕಿಲೋಮೀಟರ್ ದೂರದಲ್ಲಿರುವ ಆಳವಾದ ಕಂದಕದ ಬಳಿ ಬಾಲಕಿಯ ಮೃತದೇಹ ಪತ್ತೆಯಾಗಿದೆ. ಈ ಪ್ರಪಾತವು ಸುಮಾರು 2000 ಅಡಿ ಆಳವಿದೆ. ಅತ್ಯಂತ ದುರ್ಗಮ ಪ್ರದೇಶವಾಗಿರುವ ಕಾರಣ ಶವವನ್ನು ಹೊರತೆಗೆದು ಮೇಲೆ ಎತ್ತಿಕೊಂಡು ಬರುವ ಕಾರ್ಯವೂ ಸವಾಲಿನದ್ದಾಗಿತ್ತು.
Girl missing case: ಮರಳಿ ಬರಲೇ ಇಲ್ಲ ಶ್ರೀನಂದಾ, ಮಾಣಿಕ್ಯಧಾರದ ಪ್ರಪಾತದಲ್ಲಿ ಬಾಲಕಿ ಶವ ಪತ್ತೆ
ತಂದೆ ಬೈದಿದ್ದಕ್ಕೆ ಆತ್ಮಹತ್ಯೆ ಶಂಕೆ
ಶ್ರೀನಂದಾ ತಂದೆ ರಮೇಶ್, ಮೊಬೈಲ್ ವಿಚಾರಕ್ಕೆ ಮಗಳಿಗೆ ಬೈದಿದ್ದ ಬಗ್ಗೆ ಪೊಲೀಸರ ಮುಂದೆ ಹೇಳಿದ್ದಾರೆ. ಇದರಿಂದ ಶ್ರೀನಂದಾ, ಮಾಣಿಕ್ಯಧಾರಾ ಪಾರ್ಕಿಂಗ್ ಸ್ಥಳದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕಿ ವ್ಯಕ್ತವಾಗಿದೆ. ರಮೇಶ್ ಅವರು ಮೊಬೈಲ್ ವಿಚಾರಕ್ಕೆ ಮಗಳಿಗೆ ಬೈದಿದ್ದ ಬಗ್ಗೆ ಪೊಲೀಸರ ಮುಂದೆ ಹೇಳಿಕೊಂಡಿದ್ದಾರೆ. ಮಾಣಿಕ್ಯಧಾರಾ ಬಳಿ ಸೆಲ್ಫಿ ತೆಗೆದುಕೊಳ್ಳುತ್ತಿದ್ದ ವೇಳೆ ಶ್ರೀನಂದಾಗೆ ತಂದೆ ರಮೇಶ್ ಬೈದಿದ್ದು, ಅಲ್ಲದೇ ಮೊಬೈಲ್ ಕೊಡುವಂತೆ ವಾರ್ನ್ ಮಾಡಿದ್ದರು. ಇದರಿಂದ ಮನನೊಂದು ಶ್ರೀನಂದಾ, ಮಾಣಿಕ್ಯಧಾರಾದ ಫಾಲ್ಸ್ಗೆ ತೆರಳದೆ ವಾಪಸ್ ಆಗಿದ್ದಳು. ಬಳಿಕ ಶ್ರೀನಂದಾ ಕಾಣೆಯಾಗಿದ್ದಳು. ಈ ಹಿನ್ನೆಲೆಯಲ್ಲಿ ನೊಂದು ಚಂದ್ರದ್ರೋಣ ಪರ್ವತದ ಮಾಣಿಕ್ಯಧಾರಾ ಪಾರ್ಕಿಂಗ್ ಸ್ಥಳದಿಂದ ಜಿಗಿದಿರಬಹುದು ಎಂದು ಶಂಕಿಸಲಾಗಿದ್ದು, ಈ ಬಗ್ಗೆ ಪೊಲೀಸರು ಸಹ ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ.
Girl Missing: ಮುಳ್ಳಯ್ಯನಗಿರಿಯಲ್ಲಿ ಬಾಲಕಿ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್, ಕಿಡ್ನಾಪ್ ಆಗಿರಬಹುದು ಎಂದ ತಾಯಿ