ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Chikkaballapur accident: ಚಿಕ್ಕಬಳ್ಳಾಪುರದಲ್ಲಿ ಭೀಕರ ಸರಣಿ ಅಪಘಾತ; ಲಾರಿಗೆ ಆಟೋ ಡಿಕ್ಕಿಯಾಗಿ 6 ಮಂದಿ ದುರ್ಮರಣ

ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿಯಲ್ಲಿ ಭೀಕರ ರಸ್ತೆ ಅಪಘಾತ ನಡೆದಿದೆ. ಕೂಲಿ ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಆಟೋ, ರಸ್ತೆಬದಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ದುರಂತ ಸಂಭವಿಸಿದೆ. ಬಾಗೇಪಲ್ಲಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬಾಗೇಪಲ್ಲಿಯಲ್ಲಿ ಲಾರಿಗೆ ಆಟೋ ಡಿಕ್ಕಿಯಾಗಿರುವುದು.

ಚಿಕ್ಕಬಳ್ಳಾಪುರ: ಜಿಲ್ಲೆಯ ಬಾಗೇಪಲ್ಲಿಯಲ್ಲಿ ಭೀಕರ ಸರಣಿ ಅಪಘಾತ ನಡೆದಿದೆ. ಲಾರಿಗೆ ಆಟೋ ಡಿಕ್ಕಿಯಾದ ಪರಿಣಾಮ ಐವರು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ಕೂಲಿ ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಆಟೋ, ರಸ್ತೆಬದಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ (Chikkaballapur accident) ಸಂಭವಿಸಿದೆ.

ಸರಣಿ ಅಪಘಾತದಲ್ಲಿ ಮೊದಲಿಗೆ ಥಾರ್ ಕಾರು, ಆಟೋಗೆ ಡಿಕ್ಕಿಯಾಗಿದೆ. ಕಾರು ಡಿಕ್ಕಿಯ ರಭಸಕ್ಕೆ ಆಟೋ ನಿಯಂತ್ರಣ ತಪ್ಪಿ ಮುಂಭಾಗದಲ್ಲಿದ್ದ ಲಾರಿಗೆ ಅಪ್ಪಳಿಸಿದೆ. ಪರಿಣಾಮವಾಗಿ ಆಟೋ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಅದರಲ್ಲಿದ್ದ ಆರು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.

ಡಿಕ್ಕಿಯ ರಭಸಕ್ಕೆ ಆಟೋ ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಮೃತದೇಹಗಳು ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು. ಅಪಘಾತದ ತೀವ್ರತೆಗೆ ಆಟೋದಲ್ಲಿದ್ದ ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣವೇ ಬಾಗೇಪಲ್ಲಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕೆಲವರ ಸ್ಥಿತಿ ಆತಂಕಕಾರಿ ಎಂದು ತಿಳಿದುಬಂದಿದೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಬಾಗೇಪಲ್ಲಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

ಮಂತ್ರಾಲಯದ ಬಳಿ ದುರಂತ; ತುಂಗಭದ್ರಾ ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಐವರು ನೀರುಪಾಲು

ಬಳ್ಳಾರಿ: ಮಂತ್ರಾಲಯದ ಬಳಿ ತುಂಗಭದ್ರಾ ನದಿಯಲ್ಲಿ ಈಜಲು ತೆರಳಿದ್ದ ಐವರು ನೀರುಪಾಲಾಗಿರುವ ಘಟನೆ ನಡೆದಿದೆ. ಮೃತರನ್ನು ಹೈದರಾಬಾದ್‌ ಮೂಲದ ಯುವನ ಚಂದ್ರ(5), ಸತೀಶ್(35), ಮಂತ್ರಾಲಯ ಗ್ರಾಮದ ರಾಘವೇಂದ್ರ(25), ಧನುಷ್(23) ಉರವಕೊಂಡದ ಸಂಧ್ಯಾ(22) ಎಂದು ಗುರುತಿಸಲಾಗಿದೆ. ಮತ್ತೋರ್ವ ಯುವತಿ ಅಪರ್ಣಾ (Mantralaya) ಅದೃಷ್ಟವಶಾತ್​​ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ನದಿಯಂತಾದ ರಸ್ತೆಯಲ್ಲಿ ಸಿಲುಕಿದ್ದ ದಿವ್ಯಾಂಗ ಯುವಕನನ್ನು ರಕ್ಷಿಸಿದ ಬೆಂಗಳೂರು ಪೊಲೀಸ್ : ವಿಡಿಯೋ ವೈರಲ್

ಮೃತರು ಮಂತ್ರಾಲಯದಲ್ಲಿ ಸಂಬಂಧಿಕರ ಮನೆಯಲ್ಲಿ ಏರ್ಪಡಿಸಿದ್ದ ಸತ್ಯನಾರಾಯಣ ಪೂಜೆಗೆ ಬಂದಿದ್ದರು. ನದಿಯ ನೀರಿನ ಆ ತಿಳಿಯದೆ ಈಜಲು ಹೋಗಿ ಐವರು ಜಲ ಸಮಾಧಿಯಾಗಿದ್ದಾರೆ. ಮೃತರ ಪೈಕಿ ರಾಘವೇಂದ್ರ, ಸಂಧ್ಯಾ ಮೃತದೇಹ ಪತ್ತೆಯಾಗಿದ್ದು, ಉಳಿದವರಿಗಾಗಿ ಸ್ಥಳದಲ್ಲಿ ಶೋಧ ಮುಂದುವರಿದಿದೆ. ಮೃತದೇಹಗಳಿಗಾಗಿ ಮೀನುಗಾರರು ಹುಡುಕಾಟ ನಡೆಸುತ್ತಿದ್ದು ಎಮ್ಮಿಗನೂರು ಡಿವೈಎಸ್‌ಪಿ ಭಾರ್ಗವಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.