ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

2 ದಿನಗಳ ಕಾಲ ಯಶಸ್ವಿಯಾಗಿ ನೆರವೇರಿದ ಉಚಿತ ಆರೋಗ್ಯ ಶಿಬಿರ!

ಶಿಬಿರದಲ್ಲಿ ಶ್ರೀ ಅಭಿನವ ವಿದ್ಯಾತೀರ್ಥ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಮಕ್ಕಳ ತಜ್ಞರು, ನೇತ್ರ ತಜ್ಞರು, ಇಎನ್‌ಟಿ ತಜ್ಞರು, ದಂತ ವೈದ್ಯರು, ಜನರಲ್‌ ಮೆಡಿಸಿನ್‌ ತಜ್ಞರು , ಆಹಾರ ತಜ್ಞರು ಭಾಗವಹಿಸಿ ಶಿಬಿರಕ್ಕೆ ಆಗಮಿಸಿದ್ದ ಸಾರ್ವಜನಿಕರಿಗೆ ಸೂಕ್ತ ತಪಾಸಣೆ ನಡೆಸಿ, ಆರೋಗ್ಯ ಸಲಹೆಗಳನ್ನು ನೀಡಿದರು.

ಶೃಂಗೇರಿ: ಪ್ರತಿ ಗ್ರಾಮಕ್ಕೂ ಆರೋಗ್ಯ ಸೇವೆಯನ್ನು ತಲುಪಿಸುವ ಉದ್ದೇಶದಿಂದ ಶ್ರೀ ಅಭಿನವ ವಿದ್ಯಾತೀರ್ಥ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಭಾಗವಾದ ಶ್ರೀ ಭಾರತೀತೀರ್ಥ ಮಹಾಸ್ವಾಮೀಜಿ ಮೊಬೈಲ್ ಆಸ್ಪತ್ರೆ ವತಿಯಿಂದ ಆಯೋಜಿಸಲಾಗಿದ್ದ 2 ದಿನಗಳ ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿಯಾಗಿ ನೆರವೇರಿದೆ. ಈ ಶಿಬಿರದಲ್ಲಿ 400 ಕ್ಕೂ ಅಧಿಕ ಜನರು ಆರೋಗ್ಯ ಸೇವೆಯನ್ನು ಪಡೆದುಕೊಂಡರು.

ಇದನ್ನೂ ಓದಿ: National Pulse Polio Campaign: ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಚಾಲನೆ: ಜಿಲ್ಲೆಯ 1.23 ಲಕ್ಷ ಮಕ್ಕಳಿಗೆ ಎರಡು ಹನಿ ಲಸಿಕೆ ಗುರಿ

ಶ್ರೀ ಭಾರತೀತೀರ್ಥ ಮಹಾಸ್ವಾಮೀಜಿ ಮೊಬೈಲ್ ಆಸ್ಪತ್ರೆ ವತಿಯಿಂದ ರೋಟರಿ ಕ್ಲಬ್‌ ಶೃಂಗೇರಿ ಹಾಗೂ ತೆಕ್ಕೂರು ಗ್ರಾಮಸ್ಥರ ಸಹಯೋಗದಲ್ಲಿ ತೆಕ್ಕೂರು ವೃತ್ತದ ಬಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಬಿರ ನಡೆಯಿತು. ಹಾಗೂ ವಿಕಾಸ ಸ್ವಸಹಾಯ ಸಂಘ ಸಿದ್ದರಮಠ ಮತ್ತು ಶ್ರೀ ಸಿದ್ದೇಶ್ವರ ಹಳೆಯ ವಿದ್ಯಾರ್ಥಿಗಳ ಸಂಘ ಇವರ ಸಹಯೋಗದಲ್ಲಿ ಶ್ರೀ ಸಿದ್ಧೇಶ್ವರ ಸ್ವಾಮಿ ದೇವಸ್ಥಾನ , ಸಿದ್ಧಾರಮಠ ಆವರಣದಲ್ಲಿ ರಕ್ತದಾನ ಶಿಬಿರ ಮತ್ತು ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು.

Camp 3

ತೆಕ್ಕೂರಿನಲ್ಲಿ 168 ಮಂದಿ ಹಾಗೂ ಸಿದ್ದಾರಮಠ ಆವರಣದಲ್ಲಿ ನಡೆದ ಶಿಬಿರದಲ್ಲಿ 250 ಕ್ಕೂ ಅಧಿಕ ಜನರು ಉಚಿತ ಆರೋಗ್ಯ ತಪಾಸಣೆ ಸೇವೆ ಪಡೆದುಕೊಂಡರು.

Camp 1

ಶಿಬಿರದಲ್ಲಿ ಶ್ರೀ ಅಭಿನವ ವಿದ್ಯಾತೀರ್ಥ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಮಕ್ಕಳ ತಜ್ಞರು, ನೇತ್ರ ತಜ್ಞರು, ಇಎನ್‌ಟಿ ತಜ್ಞರು, ದಂತ ವೈದ್ಯರು, ಜನರಲ್‌ ಮೆಡಿಸಿನ್‌ ತಜ್ಞರು , ಆಹಾರ ತಜ್ಞರು ಭಾಗ ವಹಿಸಿ ಶಿಬಿರಕ್ಕೆ ಆಗಮಿಸಿದ್ದ ಸಾರ್ವಜನಿಕರಿಗೆ ಸೂಕ್ತ ತಪಾಸಣೆ ನಡೆಸಿ, ಆರೋಗ್ಯ ಸಲಹೆಗಳನ್ನು ನೀಡಿದರು. ಕಾರ್ಯಕ್ರಮದಲ್ಲಿ ಪ್ರಯೋಗಾಲಯ ಪರೀಕ್ಷೆಗಳು, ಎಕ್ಸ್‌ ರೇ ಸೇವೆಯನ್ನು ಶೇ. 50 ರಷ್ಟು ರಿಯಾಯಿತಿ ದರದಲ್ಲಿ ಒದಗಿಸಲಾಯಿತು.

ಮಳೆಯ ನಡುವೆಯೂ ಉತ್ತಮ ಸಂಖ್ಯೆಯಲ್ಲಿ ಶಿಬಿರಕ್ಕೆ ಆಗಮಿಸಿದ ಸಾರ್ವಜನಿಕರು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.