ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Woman missing: ಚಂದ್ರದ್ರೋಣ ಪರ್ವತಕ್ಕೆ ಭೇಟಿ ನೀಡಿದ್ದ ಕೇರಳದ ಯುವತಿ ನಾಪತ್ತೆ

ನಾಪತ್ತೆಯಾದ ಯುವತಿ ನಂದನ, ಕೇರಳದ ಪಾಲಕ್ಕಾಡ್ ಮೂಲದವರು. ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತ ಶ್ರೇಣಿಗೆ ಕೇರಳದಿಂದ ಬಂದಿದ್ದ 40 ಜನ ಪ್ರವಾಸಿಗರ ತಂಡ ಹಾಗೂ ಕುಟುಂಬದೊಂದಿಗೆ ನಂದನ ಅವರು ಚಿಕ್ಕಮಗಳೂರಿಗೆ ಬಂದಿದ್ದರು. ಪರ್ವತದ ಸುಂದರ ತಾಣಗಳನ್ನು ವೀಕ್ಷಿಸುತ್ತಿದ್ದ ಸಂದರ್ಭದಲ್ಲಿ ಇವರು ನಿಗೂಢವಾಗಿ ನಾಪತ್ತೆಯಾಗಿದ್ದಾರೆ.

ಚಂದ್ರದ್ರೋಣ ಪರ್ವತಕ್ಕೆ ಭೇಟಿ ನೀಡಿದ್ದ ಕೇರಳದ ಯುವತಿ ನಾಪತ್ತೆ

ಚಂದ್ರದ್ರೋಣ ಬೆಟ್ಟ -

ಹರೀಶ್‌ ಕೇರ
ಹರೀಶ್‌ ಕೇರ Apr 8, 2026 7:46 AM

ಚಿಕ್ಕಮಗಳೂರು, ಏ.09: ಕೊಡಗಿನ ತಡಿಯಂಡಮೋಳ್ (Thadiyandamol hill) ಬೆಟ್ಟದಲ್ಲಿ ಚಾರಣಕ್ಕೆ (trekking) ಹೋಗಿದ್ದ ಕೇರಳದ ಶರಣ್ಯ ಎಂಬುವವರು ನಾಪತ್ತೆಯಾಗಿ ಸಿಕ್ಕ ಬೆನ್ನಲ್ಲೇ, ಇದೀಗ ಚಿಕ್ಕಮಗಳೂರಿನಲ್ಲಿ (Chikkamagaluru) ಮತ್ತೊಬ್ಬ ಕೇರಳ ಮೂಲದ ಯುವತಿ ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ.

ನಾಪತ್ತೆಯಾದ ಯುವತಿ ನಂದನ, ಕೇರಳದ ಪಾಲಕ್ಕಾಡ್ ಮೂಲದವರು. ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತ ಶ್ರೇಣಿಗೆ ಕೇರಳದಿಂದ ಬಂದಿದ್ದ 40 ಜನ ಪ್ರವಾಸಿಗರ ತಂಡ ಹಾಗೂ ಕುಟುಂಬದೊಂದಿಗೆ ನಂದನ ಅವರು ಚಿಕ್ಕಮಗಳೂರಿಗೆ ಬಂದಿದ್ದರು. ಪರ್ವತದ ಸುಂದರ ತಾಣಗಳನ್ನು ವೀಕ್ಷಿಸುತ್ತಿದ್ದ ಸಂದರ್ಭದಲ್ಲಿ ಇವರು ನಿಗೂಢವಾಗಿ ನಾಪತ್ತೆಯಾಗಿದ್ದಾರೆ.

ಯುವತಿಯ ನಾಪತ್ತೆಯ ಸುದ್ದಿ ತಿಳಿಯುತ್ತಿದ್ದಂತೆಯೇ ಪೊಲೀಸ್ ಇಲಾಖೆ ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿ ಜಂಟಿಯಾಗಿ ತೀವ್ರ ಶೋಧ ಕಾರ್ಯ ಆರಂಭಿಸಿದ್ದಾರೆ. ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಜಯಕುಮಾರ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Kerala techie Sharanya found: ಕೇರಳ ಮೂಲದ ಶರಣ್ಯ ಪತ್ತೆ: ಕೊಡಗಿನ ಮಲೆಕುಡಿಯ ಬುಡಕಟ್ಟು ಜನರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಅಭಿನಂದನೆ

ಹೊಳೆಗೆ ಹಾರಿ ನರ್ಸ್‌ ಆತ್ಮಹತ್ಯೆ

ಚಿಕ್ಕಮಗಳೂರು: ಹೊಳೆಗೆ ಹಾರಿ ನರ್ಸ್ (Nurse) ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು (Chikkamgaluru) ಜಿಲ್ಲೆ ಎನ್.ಆರ್.ಪುರ ತಾಲೂಕಿನ ಮುಡುಬ ಬಳಿ ನಡೆದಿದೆ. ಮೃತರನ್ನ ರನ್ಯಾ ಬೇಸಿಲ್ (30) ಎಂದು ಗುರುತಿಸಲಾಗಿದೆ. ಎನ್.ಆರ್ ಪುರ (NR Pura) ತಾಲೂಕಿನ ಮುತ್ತಿನಕೊಪ್ಪ ಮೂಲಕದ ಮೃತ ರನ್ಯಾ ಬೇಸಿಲ್ ಶಿವಮೊಗ್ಗದ ನಾರಾಯಣ ಹೃದಯಾಲಯದಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದರು.

ನಿನ್ನೆ ಕೂಡ ಆಸ್ಪತ್ರೆಗೆ ಹೋಗಿ ತನ್ನ ಕೆಲಸ ಮುಗಿಸಿ ಮನೆಗೆ ಬಂದಿದ್ದರು. ನಿತ್ಯ ಶಿವಮೊಗ್ಗಕ್ಕೆ ಓಡಾಡುತ್ತಿದ್ದ ರನ್ಯಾ ನಿನ್ನೆ ಸಂಜೆ ಕೆಲಸ ಮುಗಿಸಿ ಮನೆಗೆ ಬಂದಿದ್ದರು. ಮನೆಗೆ ಬಂದಿದ್ದ ರನ್ಯಾ ಮತ್ತೆ ಮುಡುಬ ಬಳಿ ಹೋಗಿ ಸೇತುವೆ ಮೇಲಿಂದ ಹೊಳೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. 12 ವರ್ಷದ ಹಿಂದೆ ಮದುವೆಯಾಗಿದ್ದ ರನ್ಯಾಗೆ ಇಬ್ಬರು ಮಕ್ಕಳಿದ್ದು, ಪತಿ ಕಾಫಿ ಬೆಳೆಗಾರರಾಗಿದ್ದಾರೆ. ಎನ್.ಆರ್ ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.