ಬಿಗ್​ಬಾಸ್ ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Assault Case: ಚಿಕ್ಕಮಗಳೂರಿನಲ್ಲಿ ಅಮಾನವೀಯ ಘಟನೆ, ಶಿಕ್ಷಕಿಯ ನಗ್ನಗೊಳಿಸಿ ಮರಕ್ಕೆ ಕಟ್ಟಿಹಾಕಿ ಹಲ್ಲೆ

Chikkamagaluru: ಕೊಪ್ಪ ತಾಲೂಕಿನ ಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆಯಲ್ಲಿ, ಸರ್ಕಾರಿ ಶಾಲೆಯ ಅತಿಥಿ ಶಿಕ್ಷಕಿ ಶಾಲೆ ಮುಗಿಸಿ ಮನೆಗೆ ವಾಪಸ್ಸಾಗುತ್ತಿದ್ದಾಗ ಅವರ ಮೇಲೆ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ಮಾಡಿದ್ದಾರೆ. ಅಷ್ಟೇ ಅಲ್ಲದೆ ನಗ್ನಗೊಳಿಸಿರುವ ಆರೋಪ ಕೇಳಿಬಂದಿದೆ.

ಚಿಕ್ಕಮಗಳೂರು, ಅ.29: ಚಿಕ್ಕಮಗಳೂರು (Chikkamagalur) ಜಿಲ್ಲೆಯ ಕೊಪ್ಪ ತಾಲೂಕಿನಲ್ಲಿ ಮಂಗಳವಾರ ಅಮಾನವೀಯ ಘಟನೆ (Crime news) ನಡೆದಿದೆ. ಸರ್ಕಾರಿ ಶಾಲೆಯ ಅತಿಥಿ ಶಿಕ್ಷಕಿಯೊಬ್ಬರ (teacher) ಮೇಲೆ ಮಾರಣಾಂತಿಕ ಹಲ್ಲೆ (Assault Case) ನಡೆಸಿದ್ದಲ್ಲದೆ, ಅವರನ್ನು ವಿವಸ್ತ್ರಗೊಳಿಸಿ ಮರಕ್ಕೆ ಕಟ್ಟಿಹಾಕಲಾಗಿದೆ. ಕೊಪ್ಪ ತಾಲೂಕಿನ ಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಈ ಘಟನೆಯಲ್ಲಿ, ಸರ್ಕಾರಿ ಶಾಲೆಯ ಅತಿಥಿ ಶಿಕ್ಷಕಿ ಶಾಲೆ ಮುಗಿಸಿ ಮನೆಗೆ ವಾಪಸ್ಸಾಗುತ್ತಿದ್ದಾಗ ಅವರ ಮೇಲೆ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ಮಾಡಿದ್ದಾರೆ. ಅಷ್ಟೇ ಅಲ್ಲದೆ ನಗ್ನಗೊಳಿಸಿರುವ ಆರೋಪ ಕೇಳಿಬಂದಿದೆ.

ಶಿಕ್ಷಕಿಯ ಕೂಗಾಟ ಕೇಳಿ ಸ್ಥಳಕ್ಕೆ ಧಾವಿಸಿದ ಮನೆಯವರು ಮತ್ತು ಸ್ಥಳೀಯರು ಆಕೆಯನ್ನು ರಕ್ಷಿಸಿದ್ದಾರೆ. ತೀವ್ರವಾಗಿ ಗಾಯಗೊಂಡಿರುವ ಶಿಕ್ಷಕಿಯನ್ನು ಮೊದಲು ಕೊಪ್ಪ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಘಟನೆ ಬಗ್ಗೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದು, ಜಯಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಆರೋಪಿಗಳನ್ನು ಬಂಧಿಸಿ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

ಶಿಕ್ಷಕಿ ಮೇಲೆ ಹಲ್ಲೆ ಮಾಡಿ ವಿವಸ್ತ್ರಗೊಳಿಸಿ ಮರಕ್ಕೆ ಕಟ್ಟಿಹಾಕಿದ ಘಟನೆ ಸಂಬಂಧ ತನಿಖೆಗೆ ಕೊಪ್ಪ ಡಿವೈಎಸ್‌ಪಿ ನೇತೃತ್ವದಲ್ಲಿ ಮೂರು ವಿಶೇಷ ತಂಡಗಳನ್ನು ರಚಿಸಿರುವುದಾಗಿ ಚಿಕ್ಕಮಗಳೂರು ಎಸ್‌ಪಿ ತಿಳಿಸಿದ್ದಾರೆ. ಶಿಕ್ಷಕಿಯ ಸಂಬಂಧಿ ಯುವಕನೊಬ್ಬನಿಂದಲೇ ಈ ಹಲ್ಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: Murder Case: ಜಮೀನು ವ್ಯಾಜ್ಯ; ಬಡ ರೈತನ ಮೇಲೆ ಹಲ್ಲೆ, ಜೀಪ್‌ ಹರಿಸಿ ಕೊಲೆ ಮಾಡಿದ ಬಿಜೆಪಿ ನಾಯಕ

ತಾಯಿಗೆ ಅವಾಚ್ಯ ನಿಂದನೆ, ಸಂಬಂಧಿಕನಿಂದ ಕೊಲೆ

ಬೆಂಗಳೂರು: ಬೆಂಗಳೂರಿನ (Bengaluru Crime News) ಉಲ್ಲಾಳ ಉಪನಗರದಲ್ಲಿ ಬೆಳಗಿನ ಜಾವ ನಾಲ್ಕು ಗಂಟೆ ಸುಮಾರಿಗೆ ಯುವಕನನ್ನು ಬರ್ಬರವಾಗಿ ಕೊಲೆ (Murder case) ಮಾಡಲಾಗಿದೆ. ಸ್ಥಳಕ್ಕೆ ಜ್ಞಾನಭಾರತಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸಂಬಂಧಿಕನೇ ಹೊಡೆದು ಕೊಂದಿದ್ದಾನೆ. ಉಳ್ಳಾಲ ಉಪನಗರದ ಬಳಿ ಹೆಣವಾಗಿ ಬಿದ್ದಿರುವ ಯುವಕನನ್ನು 36 ವರ್ಷದ ಅವಿನಾಶ್​ ಎಂದು ಪೊಲೀಸರು ಗುರುತಿಸಿದ್ದಾರೆ. ಸಂಬಂಧಿಕನಾದ ಕಾರ್ತಿಕ್​ ಮನೆಗೆ ಹೋಗಿದ್ದ ಅವಿನಾಶ್​ ಕುಡಿದು ಗಲಾಟೆ ಮಾಡಿದ್ದ. ಕಾರ್ತಿಕ್ ತಾಯಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದ. ತಾಯಿಗೆ ಕೆಟ್ಟ ಮಾತುಗಳಿಂದ ಬೈಯ್ದ ಎನ್ನುವ ಕಾರಣಕ್ಕೆ ಕಾರ್ತಿಕ್​ ಸಿಟ್ಟಿನಲ್ಲಿ ಅವಿವಾಶನನ್ನು ಕೊಲೆಗೈದಿದ್ದಾನೆ ಎನ್ನಲಾಗುತ್ತಿದೆ.

ಮನೆಗೆ ಬಂದು ಗಲಾಟೆ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ನಿನ್ನೆ ರಾತ್ರಿ ಇಬ್ಬರ ನಡುವೆ ಗಲಾಟೆ ನಡೆದಿದೆ. ಮೃತ ಅವಿನಾಶ್ ಹಾಗೂ ಕಾರ್ತಿಕ್ ಇಬ್ಬರು ಸಂಬಂಧಿಗಳಾಗಿದ್ದಾರೆ. ಅವಿನಾಶ್, ಕಾರ್ತಿಕ್‌ನ ತಾಯಿಗೆ ನಿಂದಿಸಿದ್ದ. ಈ ಸಂದರ್ಭ ತಾಯಿ ಪೊಲೀಸರಿಗೆ ಫೋನ್ ಮಾಡಿದ್ದಾರೆ. ಬೆಳಗಿನ ಜಾವ ಕಾರ್ತಿಕ್​, ಬೈಕ್‌ನ ಕಬ್ಬಿಣದ ಕ್ರಾಸ್ ಗಾರ್ಡ್ ರಾಡ್​ನಿಂದ ಅವಿನಾಶನ ತಲೆ ಹಾಗೂ ಬೆನ್ನಿಗೆ ಹೊಡೆದಿದ್ದಾನೆ. ತೀವ್ರ ರಕ್ತಸ್ರಾವದಿಂದ ಅವಿನಾಶ್ ಸಾವನ್ನಪ್ಪಿದ್ದಾನೆ. ಬಳಿಕ ಆರೋಪಿ 112 ಗೆ ಕರೆ ಮಾಡಿ ಮಾಹಿತಿ ನೀಡಿದ್ದ.ಈ ಸಂಬಂಧ ಜ್ಞಾನಭಾರತಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ. ಘಟನಾ ಸ್ಥಳಕ್ಕೆ ನೈರುತ್ಯ ವಿಭಾಗದ ಡಿಸಿಪಿ ಅನಿತಾ ಹದ್ದಣ್ಣವರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಹರೀಶ್‌ ಕೇರ

View all posts by this author