ಫೋಟೋ ಗ್ಯಾಲರಿ ಐಪಿಎಲ್​ ಅಕ್ಷಯ ತೃತೀಯ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Suhas Shetty Murder Case: ಸುಹಾಸ್ ಹತ್ಯೆ, ಪಹಲ್ಗಾಮ್‌ ದಾಳಿ ಖಂಡಿಸಿ ನಾಳೆ ಚಿಕ್ಕಮಗಳೂರು ಜಿಲ್ಲೆ ಬಂದ್

Suhas Shetty Murder Case: ಬಂಧಿತ ಇಬ್ಬರು ಹಿಂದೂಗಳಾದ ನಾಗರಾಜ್ ಮತ್ತು ರಂಜಿತ್ ಚಿಕ್ಕಮಗಳೂರು ಜಿಲ್ಲೆಯ ಕಳಸ ಮೂಲದವರು. ಹೀಗಾಗಿ ಕಾಫಿನಾಡಿನಲ್ಲಿ ಪೊಲೀಸರು ಹೈ ಅಲರ್ಟ್ ಘೋಷಿಸಿದ್ದಾರೆ. ಪಕ್ಕದ ದಕ್ಷಿಣ ಕನ್ನಡದಿಂದ ಬರುವ ಪ್ರತಿ ವಾಹನಗಳ ಮೇಲೆ ಕಣ್ಣಿಟ್ಟಿದ್ದು, ಕೊಟ್ಟಿಗೆಹಾರ ಗೇಟ್‌ನಲ್ಲಿ ಬರುವ ಪ್ರತಿ ವಾಹನ ತಪಾಸಣೆ ನಡೆಸುತ್ತಿದ್ದಾರೆ.

ಸುಹಾಸ್ ಹತ್ಯೆ, ಪಹಲ್ಗಾಮ್‌ ದಾಳಿ ಖಂಡಿಸಿ ನಾಳೆ ಚಿಕ್ಕಮಗಳೂರು ಜಿಲ್ಲೆ ಬಂದ್

ಸುಹಾಸ್‌ ಶೆಟ್ಟಿ

ಹರೀಶ್‌ ಕೇರ ಹರೀಶ್‌ ಕೇರ May 4, 2025 11:19 AM

ಚಿಕ್ಕಮಗಳೂರು: ಪಹಲ್ಗಾಮ್​​ನಲ್ಲಿ ಉಗ್ರರ ದಾಳಿ (Pahalgam terror attack) ಮತ್ತು ಮಂಗಳೂರಿನ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ (Suhas Shetty murder case) ಹತ್ಯೆ ಖಂಡಿಸಿ ಭಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ (VHP) ನಾಳೆ (ಮೇ 05) ಬಂದ್​ಗೆ ಕರೆ ನೀಡಿದೆ. ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆ ವರೆಗೆ ಚಿಕ್ಕಮಗಳೂರು (Chikkamagaluru bandh) ನಗರ ಸೇರಿದಂತೆ 9 ತಾಲೂಕಿನಲ್ಲಿ ಬಂದ್​ ಮಾಡಲು ನಿರ್ಧರಿಸಲಾಗಿದೆ. ಸ್ವಯಂ ಘೋಷಿತರಾಗಿ ಅಂಗಡಿ ಮುಂಗಟ್ಟು ಬಂದ್​ ಮಾಡುವಂತೆ ಹಿಂದೂ ಸಂಘಟನೆಗಳು ಮನವಿ ಮಾಡಿವೆ.

ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಭಜರಂಗದಳ ಚಿಕ್ಕಮಗಳೂರು ಜಿಲ್ಲಾ ಕಾರ್ಯದರ್ಶಿ ರಂಗನಾಥ್, ಪಾಕಿಸ್ತಾನದ ಮುಸ್ಲಿಮರು ಹಿಂದೂಗಳನ್ನು ಹತ್ಯೆ ಮಾಡುತ್ತಿದ್ದಾರೆ. ಭಜರಂಗದಳದ ಕಾರ್ಯಕರ್ತರನ್ನು ಗುರಿಯಾಗಿಸಿ ಹತ್ಯೆ ಮಾಡುತ್ತಿದ್ದಾರೆ. ಇದನ್ನ ಖಂಡಿಸಿ ನಾವು ಚಿಕ್ಕಮಗಳೂರು ಬಂದ್ ಕರೆ ನೀಡುತ್ತಿದ್ದೇವೆ ಎಂದು ಹೇಳಿದ್ದಾರೆ.

ಸರ್ಕಾರಿ ಬಸ್ ಸೇರಿದಂತೆ ಸಾರಿಗೆ ಸಂಚಾರಕ್ಕೆ ಯಾವುದೇ ಅಡ್ಡಿ ಮಾಡುವುದಿಲ್ಲ. ಸ್ವಯಂಪ್ರೇರಿತರಾಗಿ ಅಂಗಡಿ ಮುಂಗಟ್ಟು, ಹೋಟೆಲ್ ಬಂದ್ ಮಾಡಲು ಮನವಿ ಮಾಡಿರುವುದಾಗಿ ರಂಗನಾಥ್​ ಅವರು ತಿಳಿಸಿದ್ದಾರೆ.

ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ರಾಜ್ಯದಲ್ಲಿ ಸಂಚಲನ ಸೃಷ್ಟಿ ಮಾಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಇಬ್ಬರು ಹಿಂದೂಗಳು ಸೇರಿದಂತೆ 8 ಜನರನ್ನು ಬಂಧಿಸಲಾಗಿದೆ ಎಂದು ನಿನ್ನೆ ಮಂಗಳೂರು ಪೊಲೀಸ್​ ಆಯುಕ್ತ ಅನುಪಮ್ ಅಗರ್ವಾಲ್​ ಹೇಳಿದ್ದಾರೆ.

ಬಂಧಿತ ಇಬ್ಬರು ಹಿಂದೂಗಳಾದ ನಾಗರಾಜ್ ಮತ್ತು ರಂಜಿತ್ ಚಿಕ್ಕಮಗಳೂರು ಜಿಲ್ಲೆಯ ಕಳಸ ಮೂಲದವರು. ಹೀಗಾಗಿ ಕಾಫಿನಾಡಿನಲ್ಲಿ ಪೊಲೀಸರು ಹೈ ಅಲರ್ಟ್ ಘೋಷಿಸಿದ್ದಾರೆ. ಪಕ್ಕದ ದಕ್ಷಿಣ ಕನ್ನಡದಿಂದ ಬರುವ ಪ್ರತಿ ವಾಹನಗಳ ಮೇಲೆ ಕಣ್ಣಿಟ್ಟಿದ್ದು, ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದಲ್ಲಿ ಚಾರ್ಮಾಡಿ ಘಾಟಿ ಮಾರ್ಗವಾಗಿ ಬರುವ ಪ್ರತಿ ವಾಹನ ತಪಾಸಣೆ ನಡೆಸುತ್ತಿದ್ದಾರೆ.

ದಿನದ 24 ಗಂಟೆಗಳ ಕಾಲ ಕೊಟ್ಟಿಗೆಹಾರ ಚೆಕ್​ ಪೋಸ್ಟ್​ನಲ್ಲಿ ವಾಹನಗಳ ತಪಾಸಣೆ ಮಾಡುತ್ತಿದ್ದು, ಜಿಲ್ಲೆಗೆ ಬರುವ ಮತ್ತು ಹೊರ ಹೋಗುವ ಪ್ರತಿಯೊಬ್ಬರ ಮೇಲೂ ಪೊಲೀಸ್ ಇಲಾಖೆ ಕಣ್ಣಿಟ್ಟಿದೆ . ಕೋಮು ಸೂಕ್ಷ್ಮ ಚಿಕ್ಕಮಗಳೂರು ಜಿಲ್ಲೆಯಲ್ಲಿ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಹೈ ಅಲರ್ಟ್ ಆಗಿದ್ದಾರೆ.

ಇನ್ನು ಸುಹಾಸ್ ಶೆಟ್ಟಿ ಹತ್ಯೆ, ಕಾಶ್ಮೀರದಲ್ಲಿ ಉಗ್ರರ ದಾಳಿ ಖಂಡಿಸಿ ನಿನ್ನೆ ಚಿಕ್ಕಮಗಳೂರು ತಾಲೂಕಿನ ಆಲ್ದೂರು ಬಂದ್ ಕರೆ ನೀಡಲಾಗಿತ್ತು. ಹಿಂದೂ ಸಂಘಟನೆಗಳು ಕರೆದ ಆಲ್ದೂರು ಬಂದ್​ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು.

ಇದನ್ನೂ ಓದಿ: Suhas Shetty Murder Case: ಸುಹಾಸ್ ಶೆಟ್ಟಿ ಕೊಲೆಗೆ ಫಾಜಿಲ್ ತಮ್ಮನಿಂದಲೇ ಸುಪಾರಿ; 5 ಲಕ್ಷ ಫಡಿಂಗ್!