ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ವಲಸೆ ಕಾರ್ಮಿಕರ ಮೇಲೆ ಕಾಫಿ ಎಸ್ಟೇಟ್ ಮಾಲಕನ ದರ್ಪ; ಬಂದೂಕು, ದೊಣ್ಣೆ ಹಿಡಿದು ಹಲ್ಲೆ: ವಿಡಿಯೊ ವೈರಲ್‌

Assault Case: ತಮಿಳುನಾಡಿನ ವಲಸೆ ಕಾರ್ಮಿಕರ ಮೇಲೆ ಕಾಫಿ ಎಸ್ಟೇಟ್ ಮಾಲಕ ಹಲ್ಲೆ ನಡೆಸಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಬಸಗೂಡು ಗ್ರಾಮದಲ್ಲಿ ನಡೆದಿದ್ದು, ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿರುವ ವಿಡಿಯೊ ವೈರಲ್‌ ಆಗಿದೆ. ಮಾಲಕನ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ಚಿಕ್ಕಮಗಳೂರಿನಲ್ಲಿ ಕಾರ್ಮಿಕರನ್ನು ತಳಿಸಿದ ಕಾಫಿ ಎಸ್ಟೇಟ್‌ ಮಾಲಕ

ಚಿಕ್ಕಮಗಳೂರು, ನ. 28: ವಲಸೆ ಕಾರ್ಮಿಕರ ಮೇಲೆ ಕಾಫಿ ಎಸ್ಟೇಟ್ ಮಾಲಕ ದೌರ್ಜನ್ಯ ಎಸಗಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಬಸಗೂಡು ಗ್ರಾಮದಲ್ಲಿ ನಡೆದಿದ್ದು (Assault Case), ವಿಡಿಯೊ ವೈರಲ್‌ ಆಗಿದೆ (Viral Video). ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿರುವ ವಿಡಿಯೊದಲ್ಲಿ ಮಾಲಕ ದೊಣ್ಣೆಯಿಂದ ಕಾರ್ಮಿಕರ ಮೇಲೆ ಮನಸೋಇಚ್ಛೆ ಹಲ್ಲೆ ನಡೆಸುತ್ತಿರುವುದು ಕಂಡು ಬಂದಿದೆ. ಮಹಿಳೆಯ ಮೇಲೂ ದಾಳಿ ಮಾಡಲಾಗಿದ್ದು, ಕಳವಳ ವ್ಯಕ್ತವಾಗುತ್ತಿದೆ.

ದಾಳಿ ನಡೆಸಿದ ಎಸ್ಟೇಟ್ ಮಾಲಕನನ್ನು ಭರತ್ ಎಂದು ಗುರುತಿಸಲಾಗಿದೆ. ಕಾರ್ಮಿಕರು ಮತ್ತು ಮಹಿಳೆಯರನ್ನು ಜೀತದಾಳುಗಳಂತೆ ನಡೆಸಿಕೊಳ್ಳಲಾಗಿದೆ. ಮಹಿಳೆಯರು ಮತ್ತು ಮಕ್ಕಳು ಎಂದೂ ನೋಡದೆ ಮಾನಸಿಕ ಮತ್ತು ದೈಹಿಕವಾಗಿ ಕಿರುಕುಳ ನೀಡಿ ಜೀವ ಬೆದರಿಕೆ ಹಾಕಲಾಗಿದೆ ಎನ್ನುವ ಆರೋಪವೂ ಭರತ್‌ ವಿರುದ್ಧ ಕೇಳಿ ಬಂದಿದೆ.



ಹಲ್ಲೆಗೊಳಗಾದವರು ತಮಿಳು ಕಾರ್ಮಿಕರು ಎನ್ನಲಾಗಿದೆ. ಮಲ್ಲಂದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಭರತ್‌ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ ಬೆನ್ನಲ್ಲೇ ಎಫ್‌ಐಆರ್‌ ದಾಖಲಿಸಲಾಗಿದೆ. ಆರೋಪಿಯನ್ನು ಶೀಘ್ರದಲ್ಲೇ ಬಂಧಿಸುವುದಾಗಿ ಪೊಲೀಸರು ತಿಳಿಸಿದ್ದಾರೆ.

ಯಾಕಾಗಿ ಹಲ್ಲೆ?

ಆರಂಭದಲ್ಲಿ ಪುರುಷ ಕಾರ್ಮಿಕರೊಬ್ಬರ ಮೇಲೆ ಹಲ್ಲೆ ನಡೆಸಿದ ಭರತ್‌ ಬಳಿಕ ಮಹಿಳೆಯತ್ತ ತಿರುಗಿದ್ದಾನೆ. ಮಹಿಳೆ ನೆಲದ ಮೇಲೆ ಬಿದ್ದು ಹೊರಳಾಡಿದರೂ ಕರುಣೆಯೇ ಇಲ್ಲದೆ ದಾಳಿ ನಡೆಸಿದ್ದಾನೆ. ಕೆಲಸಬಿಟ್ಟು ಹೋಗುತ್ತೇವೆ ಎಂದು ಅವರು ಹೇಳಿದ ಕಾರಣ ಈ ಹಲ್ಲೆ ನಡೆದಿದೆ ಎನ್ನಲಾಗಿದೆ.

ಮೂವರು ಕಾರ್ಮಿಕರ ಮೇಲೆ ಇಟ್ಟಿಗೆ ಭಟ್ಟಿ ಮಾಲೀಕ ಮಾರಣಾಂತಿಕ ಹಲ್ಲೆ

ಕಾರ್ಮಿಕ ಮೇಲೆ ಹಲ್ಲೆ ನಡೆಸಿದ್ದ ಇಟ್ಟಿಗೆ ಭಟ್ಟಿ ಮಾಲಕ

ಕಳೆದ ವರ್ಷ ವಿಜಯಪರದಲ್ಲಿಯೂ ಇಂಯಹದ್ದೇ ಘಟನೆ ನಡೆದಿತ್ತು. ಮೂವರು ಕಾರ್ಮಿಕರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಇಟ್ಟಿಗೆ ಭಟ್ಟಿ ಮಾಲಕ ಸೇರಿ ಮೂವರನ್ನು ಬಳಿಕ ವಿಜಯಪುರ ಗ್ರಾಮಾಂತರ ಪೊಲೀಸರು ಬಂಧಿಸಿದ್ದರು. ಹಣ ಪಡೆದು ಕೆಲಸಕ್ಕೆ ಬರಲು ವಿಳಂಬ ಮಾಡಿದ್ದಕ್ಕೆ ಮೂವರು ಕಾರ್ಮಿಕರ ಮೇಲೆ ಮಾಲಕ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದ. ಈ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದ್ದರಿಂದ ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ ಕೇಳಿಬಂದಿತ್ತು. ಅದರ ಬೆನ್ನಲ್ಲೇ ಮಾಲಜ ಸೇರಿ ಮೂವರನ್ನು ಪೊಲೀಸರು ಬಂಧಿಸಿದ್ದರು.

ಇಟ್ಟಿಗೆ ಭಟ್ಟಿ ಮಾಲಕ ಖೇಮು ರಾಠೋಡ್, ವಿಶಾಲ ಜುಮನಾಳ ಹಾಗೂ ಸಚಿನ್ ಮಾನವರ್‌ನನ್ನು ಪೊಲೀಸರು ಗಾಂಧಿನಗರದ ಖೇಮು ನಿವಾಸದಲ್ಲಿ ಬಂಧಿಸಿದ್ದರು. ಇಂತಹ ಘಟನೆ ಪದೇ ಪದೆ ನಡೆಯುತ್ತಿರುವುದರಿಂದ ಸರ್ಕಾರ ಕಠಿಣ ಲ್ರಮ ಕೈಗೊಳ್ಳಬೇಕು ಎನ್ನುವ ಆಗ್ರಹ ಕೇಳಿ ಬಂದಿದೆ.

ರಾಜ್ಯದ ಇನ್ನಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ.

ʼಪ್ರವಾಸಿ ಪ್ರಪಂಚʼ ವೆಬ್‌ಸೈಟ್‌ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್‌ ಮಾಡಿ.

Ramesh Ballamoole

View all posts by this author