ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Murder Case: ತಾಯಿಯ ಕೊಲೆ ಮಾಡಿ ಶವ ಅರೆಬರೆ ಸುಟ್ಟು ಪಕ್ಕದಲ್ಲೇ ಮಲಗಿದ ಮಗ!

Chikkamagaluru: ಇವರ ಒಂಟಿ ಮನೆ ನಿರ್ಜನ ಪ್ರದೇಶದಲ್ಲಿದೆ. ಒಂಟಿಮನೆಯಲ್ಲಿ ಈ ಭೀಕರ ಕೊಲೆ ನಡೆದಿದೆ. ಯಾವ ಕಾರಣಕ್ಕಾಗಿ ತಾಯಿಯನ್ನು ಕೊಲೆ ಮಾಡಿ ಶವ ಸುಟ್ಟು ಹಾಕಿದ್ದಾನೆ, ಈತ ಮಾನಸಿಕ ಅಸ್ವಸ್ಥನೇ ಎಂಬ ಬಗ್ಗೆಯೂ ತನಿಖೆ ನಡೆಯುತ್ತಿದ್ದು, ವಿವರಗಳು ಇನ್ನಷ್ಟೇ ತಿಳಿದು ಬರಬೇಕಿದೆ.

ತಾಯಿಯ ಕೊಲೆ ಮಾಡಿ ಶವ ಅರೆಬರೆ ಸುಟ್ಟು ಪಕ್ಕದಲ್ಲೇ ಮಲಗಿದ ಮಗ!

ಆರೋಪಿ ಪವನ್

ಹರೀಶ್‌ ಕೇರ ಹರೀಶ್‌ ಕೇರ Jul 31, 2025 7:15 AM

ಚಿಕ್ಕಮಗಳೂರು : ಚಿಕ್ಕಮಗಳೂರಲ್ಲಿ (Chikkamagaluru crime news) ಬೆಚ್ಚಿ ಬೆಳಿಸುವ ಘಟನೆ ನಡೆದಿದೆ. ಮಗನೊಬ್ಬ ಹೆತ್ತ ತಾಯಿಯನ್ನೇ ಕೊಲೆ (Murder Case) ಮಾಡಿದ್ದು ಅಲ್ಲದೆ ಆಕೆಯ ಶವವನ್ನು ಸುಟ್ಟು ಹಾಕಿದ್ದಾನೆ. ಪೂರ್ತಿ ಸುಡದೆ ಅರ್ಧಂಬರ್ಧ ಸುಟ್ಟ ಶವದ ಪಕ್ಕದಲ್ಲಿಯೇ ಮಲಗಿ ಆರಾಮಾಗಿ ನಿದ್ದೆ ಮಾಡಿದ್ದಾನೆ. ಘಟನೆ ಚಿಕ್ಕಮಗಳೂರು ತಾಲೂಕಿನ ಹಕ್ಕಿಮಕ್ಕಿ ಗ್ರಾಮದಲ್ಲಿ ನಡೆದಿದೆ. ಮೃತ ಮಹಿಳೆ ಭವಾನಿ (55) ಹಾಗೂ ಹತ್ಯೆಗೈದ ಪಾಪಿ ಪುತ್ರ ಪವನ್ ಎಂದು ತಿಳಿದುಬಂದಿದೆ.

ಇವರ ಒಂಟಿ ಮನೆ ನಿರ್ಜನ ಪ್ರದೇಶದಲ್ಲಿದೆ. ಒಂಟಿಮನೆಯಲ್ಲಿ ಈ ಭೀಕರ ಕೊಲೆ ನಡೆದಿದೆ. ಯಾವ ಕಾರಣಕ್ಕಾಗಿ ತಾಯಿಯನ್ನು ಕೊಲೆ ಮಾಡಿ ಶವ ಸುಟ್ಟು ಹಾಕಿದ್ದಾನೆ, ಈತ ಮಾನಸಿಕ ಅಸ್ವಸ್ಥನೇ ಎಂಬ ಬಗ್ಗೆಯೂ ತನಿಖೆ ನಡೆಯುತ್ತಿದ್ದು, ವಿವರಗಳು ಇನ್ನಷ್ಟೇ ತಿಳಿದು ಬರಬೇಕಿದೆ. ಪೊಲೀಸರು ಗ್ರಾಮಕ್ಕೆ ಭೇಟಿ ನೀಡಿ ಪವನ್‌ನನ್ನು ಬಂಧಿಸಿದ್ದಾರೆ. ಆಲೂರು ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

ಜನ್ಮದಿನದಂದೇ ನೇಣಿಗೆ ಶರಣಾದ ಕಲಬುರಗಿ ಕೇಂದ್ರೀಯ ವಿವಿ ವಿದ್ಯಾರ್ಥಿನಿ

ಕಲಬುರಗಿ: ಕಲಬುರಗಿ ಕೇಂದ್ರೀಯ ವಿವಿಯಲ್ಲಿನ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿಯೊಬ್ಬಳು ತನ್ನ ಜನ್ಮದಿನದಂದೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ (Self Harming) ಬುಧವಾರ ಮಧ್ಯಾಹ್ನ ನಡೆದಿದೆ. ಜಿಲ್ಲೆಯ ಆಳಂದ ತಾಲೂಕಿನ ಕಡಗಂಚಿ ಗ್ರಾಮದಲ್ಲಿರುವ ಕರ್ನಾಟಕ ಕೇಂದ್ರೀಯ ವಿವಿಯಲ್ಲಿ ಪ್ರಾಣಿಶಾಸ್ತ್ರ ವಿಭಾಗದಲ್ಲಿ ಐದನೇ ಸೆಮಿಸ್ಟರ್ ವ್ಯಾಸಂಗ ಮಾಡುತ್ತಿದ್ದ ಜಯಶ್ರೀ (21) ಅತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.

ಒಡಿಶಾ ಮೂಲದ ವಿದ್ಯಾರ್ಥಿನಿ ಜಯಶ್ರೀ ಆತ್ಮಾಹತ್ಯೆ ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಆಗಮಿಸಿ, ಪರೀಶಿಲನೆ ನಡೆಸಿದ್ದಾರೆ. ನರೋಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: Murder Case: ಪಾರ್ಟಿ ಮಾಡುತ್ತಿದ್ದ ಮಾಜಿ ಗ್ರಾ.ಪಂ ಅಧ್ಯಕ್ಷನ ಮೇಲೆ ಡೆಡ್ಲಿ ಅಟ್ಯಾಕ್‌; ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ