ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Chikkamagaluru news: ಅಂಬೇಡ್ಕರ್‌ ಜಯಂತಿ ಮೆರವಣಿಗೆಗೆ ನುಗ್ಗಿದ ಕಾರು, ಬಾಲಕಿ ಸಾವು, ಹಲವರಿಗೆ ಗಾಯ

ಚಿಕ್ಕಮಗಳೂರು ತಾಲೂಕಿನ ಬಿಳೆಕಲ್ಲು ಗ್ರಾಮದಲ್ಲಿ ಅಂಬೇಡ್ಕರ್ ಜಯಂತಿ ಮೆರವಣಿಗೆ ನಡೆಯುತ್ತಿದ್ದಾಗ, ನಿಯಂತ್ರಣ ತಪ್ಪಿದ ಕಾರೊಂದು ಏಕಾಏಕಿ ಜನರ ಗುಂಪಿಗೆ ನುಗ್ಗಿ ಪಲ್ಟಿಯಾಗಿದೆ. ಇಂದಾವರ ಗ್ರಾಮದಿಂದ ಬಿಳೆಕಲ್ಲು ಗ್ರಾಮದ ಸಂಬಂಧಿ ಮನೆಗೆ ಹೋಗಿದ್ದ ಸಾನ್ವಿ (7) ಎಂಬ ಬಾಲಕಿ ಕಾರು ಗುದ್ದಿದ ರಭಸಕ್ಕೆ ಸ್ಥಳದಲ್ಲೇ ಮೃತಪಟ್ಟಿದ್ದಾಳೆ.

ಅಂಬೇಡ್ಕರ್‌ ಜಯಂತಿ ಮೆರವಣಿಗೆಗೆ ನುಗ್ಗಿದ ಕಾರು, ಬಾಲಕಿ ಸಾವು, ಹಲವರಿಗೆ ಗಾಯ

ಚಿಕ್ಕಮಗಳೂರು ಕಾರು ಅಪಘಾತ -

ಹರೀಶ್‌ ಕೇರ
ಹರೀಶ್‌ ಕೇರ Apr 15, 2026 8:08 AM

ಚಿಕ್ಕಮಗಳೂರು, ಏ.15: ಅಂಬೇಡ್ಕರ್​ ಜಯಂತಿ (Ambedkar Jayanti) ಮೆರವಣಿಗೆ ವೇಳೆ ಭೀಕರ ದುರಂತ ಸಂಭವಿಸಿದೆ. ಜವರಾಯನಂತೆ ಬಂದ ಕಾರೊಂದು ಮೆರವಣಿಗೆಯಲ್ಲಿ ಸಾಗುತ್ತಿದ್ದ ಜನರ ಮೇಲೆ ಹರಿದಿದ್ದು, 7 ವರ್ಷದ ಬಾಲಕಿ (girl death) ಸಾವನ್ನಪ್ಪಿದ್ದಾಳೆ. ಭೀಕರ ಅಪಘಾತದಲ್ಲಿ ಹಲವು ಮಂದಿ ಗಾಯಗೊಂಡಿರುವ ಘಟನೆ ಚಿಕ್ಕಮಗಳೂರಿನ (Chikkamagaluru) ಜಿಲ್ಲೆಯ ಬಿಳೆಕಲ್ಲು ಗ್ರಾಮದಲ್ಲಿ ನಡೆದಿದೆ.

ಚಿಕ್ಕಮಗಳೂರು ತಾಲೂಕಿನ ಬಿಳೆಕಲ್ಲು ಗ್ರಾಮದಲ್ಲಿ ಅಂಬೇಡ್ಕರ್ ಜಯಂತಿ ಮೆರವಣಿಗೆ ನಡೆಯುತ್ತಿದ್ದಾಗ, ನಿಯಂತ್ರಣ ತಪ್ಪಿದ ಕಾರೊಂದು ಏಕಾಏಕಿ ಜನರ ಗುಂಪಿಗೆ ನುಗ್ಗಿ ಪಲ್ಟಿಯಾಗಿದೆ. ಇಂದಾವರ ಗ್ರಾಮದಿಂದ ಬಿಳೆಕಲ್ಲು ಗ್ರಾಮದ ಸಂಬಂಧಿ ಮನೆಗೆ ಹೋಗಿದ್ದ ಸಾನ್ವಿ (7) ಎಂಬ ಬಾಲಕಿ ಕಾರು ಗುದ್ದಿದ ರಭಸಕ್ಕೆ ಸ್ಥಳದಲ್ಲೇ ಮೃತಪಟ್ಟಿದ್ದಾಳೆ.

ಅಪಘಾತದಲ್ಲಿ 9 ಜನ ಗಾಯಗೊಂಡಿದ್ದು, ಅವರ ಸ್ಥಿತಿ ಕೂಡ ಗಂಭೀರವಾಗಿದೆ. ಹಾಸನದ ಗಣಪತಿ ಮೆರವಣಿಗೆ ವೇಳೆ ನಡೆದ ದುರಂತವನ್ನೇ ಇದು ನೆನಪಿಸುವಂತಿದೆ. ಐವರನ್ನು ಹಾಸನ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ನಿಶ್ಚಿತ (11), ತೃಪ್ತಿ (11), ತಿಮ್ಮರಾಜು (45), ಉಷಾ (22), ಸೃಷ್ಟಿ (18), ನಾಗರಾಜು (28), ಚೇತನ್ (16) ಸೇರಿದಂತೆ ಒಟ್ಟು 9 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

Girl death: ಆಟವೇ ಮೃತ್ಯುವಾಯ್ತು! ಜೋಕಾಲಿ ಸೀರೆ ಕುತ್ತಿಗೆಗೆ ಬಿಗಿದು ಬಾಲಕಿ ಸಾವು

ಕಾರು ಚಾಲಕನ ಸ್ಥಿತಿ ಕೂಡ ಗಂಭೀರವಾಗಿದೆ. ಘಟನೆ ಬಳಿಕ ಮಲ್ಲೇಗೌಡ ಸರ್ಕಾರಿ ಆಸ್ಪತ್ರೆ ಮುಂಭಾಗ ನೂರಾರು ಜನರು ಜಮಾಯಿಸಿದರು. ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಗಾಯಾಳು ಕಾರು ಚಾಲಕನನ್ನು ಹಾಸನಕ್ಕೆ ಕರೆದೊಯ್ಯುತ್ತಿದ್ದ ಆಂಬ್ಯುಲೆನ್ಸ್ ಅನ್ನು ತಡೆದು ಜನರು ಆಕ್ರೋಶ ಹೊರಹಾಕಿದ್ದಾರೆ. ಆಸ್ಪತ್ರೆ ಮುಂಭಾಗ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.