ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Girl death: ಆಟವೇ ಮೃತ್ಯುವಾಯ್ತು! ಜೋಕಾಲಿ ಸೀರೆ ಕುತ್ತಿಗೆಗೆ ಬಿಗಿದು ಬಾಲಕಿ ಸಾವು

ಚಿಕ್ಕಮಗಳೂರು ಜಿಲ್ಲೆಯ ಹೆಬ್ಬಳ್ಳಿಯಲ್ಲಿ ದುರ್ಘಟನೆ ನಡೆದಿದೆ. ಸೀರೆಯಿಂದ ಕಟ್ಟಿದ ಜೋಕಾಲಿಯಲ್ಲಿ ಆಟವಾಡುತ್ತಾ ಗಿರಕಿ ಹೊಡೆಯುವಾಗ ಅಥವಾ ಆಕಸ್ಮಿಕವಾಗಿ ಕಾಲು ಜಾರಿದಾಗ, ಸೀರೆಯು ಬಾಲಕಿಯ ಕುತ್ತಿಗೆಗೆ ಬಿಗಿಯಾಗಿ ಸುತ್ತಿಕೊಂಡಿದೆ. ಇದರಿಂದಾಗಿ ಬಾಲಕಿಗೆ ಉಸಿರಾಡಲು ಸಾಧ್ಯವಾಗದೇ ಸ್ಥಳದಲ್ಲೇ ಮೃತಪಟ್ಟಿದ್ದಾಳೆ ಎನ್ನಲಾಗಿದೆ.

ಮೃತ ಲೇಖನಾ

ಚಿಕ್ಕಮಗಳೂರು, ಏ.14: ಜಿಲ್ಲೆಯ (chikkamagaluru) ಹೆಬ್ಬಳ್ಳಿ ಗ್ರಾಮದಲ್ಲಿ ಆಟವಾಡುತ್ತಿದ್ದ ಹತ್ತು ವರ್ಷದ ಬಾಲಕಿಯೊಬ್ಬಳನ್ನು (Girl death) ವಿಧಿ ವಿಚಿತ್ರ ರೀತಿಯಲ್ಲಿ ಬಲಿ ಪಡೆದಿದೆ. ಮನೆಯಲ್ಲಿ ಸೀರೆಯಿಂದ ಕಟ್ಟಿದ್ದ ಉಯ್ಯಾಲೆಯಲ್ಲಿ ಆಟವಾಡುತ್ತಿದ್ದ ಬಾಲಕಿ, ಅಕಸ್ಮಿಕವಾಗಿ ಸೀರೆ ಕುತ್ತಿಗೆಗೆ ಬಿಗಿದುಕೊಂಡು (strangled) ಮೃತಪಟ್ಟಿರುವ ದಾರುಣ ಘಟನೆ ವರದಿಯಾಗಿದೆ.

ಚಿಕ್ಕಮಗಳೂರು ತಾಲೂಕಿನ ಹೆಬ್ಬಳ್ಳಿ ಗ್ರಾಮದ ನಿವಾಸಿಯಾದ ಪುಟ್ಟ ಕಂದಮ್ಮ ಲೇಖನಾ (10) ಮೃತಪಟ್ಟ ದುರ್ದೈವಿ. ಮನೆಯಲ್ಲಿ ಪೋಷಕರು ಇಲ್ಲದ ಸಮಯದಲ್ಲಿ ಬಾಲಕಿ ಸೀರೆಯಿಂದ ತಯಾರಿಸಿದ ಉಯ್ಯಾಲೆಯಲ್ಲಿ ಆಟವಾಡುತ್ತಿದ್ದಳು. ಆಟವಾಡುತ್ತಾ ಜೋಕಾಲಿಯಲ್ಲಿ ಗಿರಕಿ ಹೊಡೆಯುವಾಗ ಅಥವಾ ಆಕಸ್ಮಿಕವಾಗಿ ಕಾಲು ಜಾರಿದಾಗ, ಸೀರೆಯು ಆಕೆಯ ಕುತ್ತಿಗೆಗೆ ಬಿಗಿಯಾಗಿ ಸುತ್ತಿಕೊಂಡಿದೆ. ಇದರಿಂದಾಗಿ ಬಾಲಕಿಗೆ ಉಸಿರಾಡಲು ಸಾಧ್ಯವಾಗದೇ ಸ್ಥಳದಲ್ಲೇ ಮೃತಪಟ್ಟಿದ್ದಾಳೆ ಎನ್ನಲಾಗಿದೆ.

ಕೆಲಸ ಮುಗಿಸಿ ಪೋಷಕರು ಮನೆಗೆ ಬಂದಾಗ ಮಗು ಮೃತಪಟ್ಟಿರುವುದು ಬೆಳಕಿಗೆ ಬಂದಿದೆ. ಆಟವಾಡುತ್ತಿದ್ದ ಮಗು ಹೆಣವಾಗಿ ಬಿದ್ದಿರುವುದನ್ನು ಕಂಡು ಪೋಷಕರ ಆಕ್ರಂದನ ಮುಗಿಲು ಮುಟ್ಟಿದ್ದು, ಇಡೀ ಗ್ರಾಮದಲ್ಲಿ ಶೋಕದ ಛಾಯೆ ಆವರಿಸಿದೆ.

Hippopotamus: ಪಶುವೈದ್ಯೆ ಸಾವಿಗೆ ಕಾರಣವಾದ ತಾವರೆಕೊಪ್ಪದ ನೀರಾನೆ ಮರಿ ಗರ್ಭದಲ್ಲೇ ಸಾವು!

ಡಿವೈಡರ್‌ಗೆ ಕಾರು ಡಿಕ್ಕಿಯಾಗಿ ಓರ್ವ ಸಾವು

ಕೋಲಾರ: ಡಿವೈಡರ್‌ಗೆ ಡಿಕ್ಕಿಯಾಗಿ ಕಾರು ಪಲ್ಟಿಯಾದ ಪರಿಣಾಮ ಓರ್ವ ಸಾವನ್ನಪ್ಪಿದ್ದು, ಮತ್ತೊಬ್ಬ ಗಂಭೀರ ಗಾಯಗೊಂಡ ಘಟನೆ ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್ ವೇಯಲ್ಲಿ (Bengaluru-Chennai Expressway) ನಡೆದಿದೆ. ಕೋಲಾರ (Kolar) ಜಿಲ್ಲೆಯ ಕೆಜಿಎಫ್ (KGF) ತಾಲೂಕಿನ ದೊಡ್ಡಕಾರಿ ಬಳಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಚೆನ್ನೈ ಮೂಲದ ದೇವಾನಂದ್ (24) ಮೃತಪಟ್ಟಿದ್ದಾರೆ.

ಮತ್ತೋರ್ವ ಯುವಕ ಸರ್ವೇಶ್ ತೀವ್ರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾನೆ. ಇನ್ನಿಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿದೆ. ನಿನ್ನೆ ಮುಂಜಾನೆ ಬೆಂಗಳೂರಿನಿಂದ ಚೆನ್ನೈಗೆ ತೆರಳುತ್ತಿದ್ದ ಕ್ರೇಟಾ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿಯಾಗಿ ನಾಲ್ಕೈದು ಪಲ್ಟಿಯಾಗಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಬೇತಮಂಗಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಗೊಂಡಿದ್ದಾರೆ.‌

ಹರೀಶ್‌ ಕೇರ

View all posts by this author