CT Ravi: ಕಾಂಗ್ರೆಸ್ ಎಂದರೆ ಬ್ರಹ್ಮಾಂಡ ಭ್ರಷ್ಟಾಚಾರ, ಇದು ಬೆಲೆ ಏರಿಕೆಯ ಸರ್ಕಾರ: ಸಿ.ಟಿ.ರವಿ
CT Ravi: ಕಾಂಗ್ರೆಸ್ ಎಂದರೆ ಬ್ರಹ್ಮಾಂಡ ಭ್ರಷ್ಟಾಚಾರ ಮತ್ತು ಇದು ಬೆಲೆ ಏರಿಕೆಯ ಸರ್ಕಾರ. ಬಸ್ ದರ, ವಿದ್ಯುತ್ ದರ, ಹಾಲಿನ ದರ, ನೀರಿನ ದರ, ಕಸದ ದರ, ಡೀಸೆಲ್- ಪೆಟ್ರೋಲ್, ಮೆಟ್ರೋ ದರ ಏರಿಸಿದ ಸರ್ಕಾರ ಇದು ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಆರೋಪಿಸಿದ್ದಾರೆ.

ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ.

ಚಿಕ್ಕಮಗಳೂರು: ಮೈಸೂರು ಮಹಾರಾಜರು ಹತ್ತಾರು ಅಭಿವೃದ್ಧಿ ಕಾರ್ಯಗಳ ಮೂಲಕ ಗುರುತಿಸಿಕೊಂಡಿದ್ದರೆ, ಕಾಂಗ್ರೆಸ್ ಸರ್ಕಾರವು (State Congress Government) ತನ್ನನ್ನು ವಾಲ್ಮೀಕಿ ನಿಗಮದ ಹಗರಣ, ಮುಡಾ ಹಗರಣ ಸೇರಿ ಹತ್ತಾರು ಹಗರಣಗಳ ಮೂಲಕ ಗುರುತಿಸಿಕೊಂಡಿದೆ ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ (CT Ravi) ಆರೋಪಿಸಿದರು. ಬಿಜೆಪಿ ಜನಾಕ್ರೋಶ ಯಾತ್ರೆಯ ಅಂಗವಾಗಿ ಇಲ್ಲಿ ಏರ್ಪಡಿಸಿದ್ದ ಬೃಹತ್ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, ಇದು ಹಲಾಲ್ ಕಟ್ ಸರ್ಕಾರ. ಬಸ್ ದರ, ವಿದ್ಯುತ್ ದರ, ಹಾಲಿನ ದರ, ನೀರಿನ ದರ, ಕಸದ ದರ, ಡೀಸೆಲ್- ಪೆಟ್ರೋಲ್, ಮೆಟ್ರೋ ದರ ಏರಿಸಿದ ಸರ್ಕಾರ ಎಂದು ದೂರಿದರು.
ಕಾಂಗ್ರೆಸ್ ಎಂದರೆ ಬ್ರಹ್ಮಾಂಡ ಭ್ರಷ್ಟಾಚಾರ ಮತ್ತು ಬೆಲೆ ಏರಿಕೆಯ ಸರ್ಕಾರ ಎಂದು ಆರೋಪಿಸಿದ ಅವರು, ಬಸ್ ದರ, ವಿದ್ಯುತ್ ದರ, ಹಾಲಿನ ದರ, ನೀರಿನ ದರ, ಕಸದ ದರ, ಡೀಸೆಲ್- ಪೆಟ್ರೋಲ್, ಮೆಟ್ರೋ ದರ ಏರಿಸಿದ ಸರ್ಕಾರ ಎಂದು ತಿಳಿಸಿದ ಅವರು, ಅಡುಗೆ ಎಣ್ಣೆ ಬೆಲೆ, ಕುಡಿಯುವ ಎಣ್ಣೆಯ ಬೆಲೆಯನ್ನೂ ಏರಿಸಿದ ಸರ್ಕಾರ ಇದು ಎಂದು ಟೀಕಿಸಿದರು.
ಈ ಸುದ್ದಿಯನ್ನೂ ಓದಿ | NGEL Recruitment 2025: ಎಂಜಿನಿಯರಿಂಗ್ ಪದವೀಧರರಿಗೆ ಗುಡ್‌ನ್ಯೂಸ್; NGELನಲ್ಲಿದೆ 182 ಹುದ್ದೆ
ರೈಲ್ವೆ ಯೋಜನೆಗೆ ಕೇಂದ್ರದಿಂದ 2 ಸಾವಿರ ಕೋಟಿ ರೂ. ಅನುದಾನ
ತುಮಕೂರು: ತಿಪಟೂರು ನಗರದ ಹಾಸನ ಸರ್ಕಲ್ ಶಾರದಾ ನಗರ ರೈಲ್ವೆ ಮೇಲ್ಸೆತುವೆ ನಿರ್ಮಾಣ ಕಾಮಗಾರಿಗೆ ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ (V.Somanna) ಭೂಮಿ ಪೂಜೆ ನೆರವೇರಿಸಿದರು. ಬಳಿಕ ಮಾತನಾಡಿದ ಅವರು, ʼʼಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಮಾರ್ಗದರ್ಶನದಲ್ಲಿ, ಸಮಗ್ರ ತುಮಕೂರು ಜಿಲ್ಲೆಯ ಅಭಿವೃದ್ದಿಗೆ ಶ್ರಮಿಸುತ್ತೇನೆ. ಜಿಲ್ಲೆಯ ಅಭಿವೃದ್ದಿ ಜತೆಗೆ ನೆನೆಗುದಿಗೆ ಬಿದ್ದಿರುವ ರೈಲ್ವೆ ಯೋಜನೆಗಳನ್ನು ಪೂರ್ಣಗೊಳಿಸಲು ಕೇಂದ್ರ ಸರ್ಕಾರ 2 ಸಾವಿರ ಕೋಟಿ ರೂ. ಅನುದಾನ ನೀಡಿದೆ. 2 ವರ್ಷದಲ್ಲಿ 90 ಕೋಟಿ ರೂ. ವೆಚ್ಚದಲ್ಲಿ ತುಮಕೂರು ರೈಲ್ವೆ ನಿಲ್ದಾಣ ಅಭಿವೃದ್ದಿ ಪಡಿಸಿ, ನನ್ನ ಆರಾಧ್ಯ ದೈವ ಡಾ. ಶಿವಕುಮಾರ ಸ್ವಾಮೀಜಿ (Dr. Shivakumara swamiji) ಹೆಸರನ್ನು ರೈಲ್ವೆ ನಿಲ್ದಾಣಕ್ಕೆ ಇಡಲಾಗುವುದುʼʼ ಎಂದು ತಿಳಿಸಿದರು.
ʼʼಜಿಲ್ಲೆಯಲ್ಲಿ ತುಮಕೂರು ಹೊರತುಪಡಿಸಿದರೆ ತಿಪಟೂರು ವೇಗವಾಗಿ ಬೆಳೆಯುತ್ತಿರುವ ತಾಲೂಕು. ತಿಪಟೂರಿನ ಜನ ನನ್ನ ಮೇಲೆ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ಅಭಿಮಾನ ವಿಟ್ಟು ಹೆಚ್ಚುಮತ ನೀಡುವ ಮೂಲಕ ನನ್ನನ್ನು ಗೆಲ್ಲಿಸಿದ್ದಾರೆ. ನಿಮ್ಮ ಋಣ ಎಷ್ಟು ಜನ್ಮ ಎತ್ತಿದರು ತೀರಿಸಲು ಸಾಧ್ಯವಿಲ್ಲ, ಶೀಘ್ರವಾಗಿ ಹೊನ್ನವಳ್ಳಿ ರೋಡ್ ಮೇಲ್ಸೆತುವೆ, ಹಿಂಡಿಸ್ಕೆರೆ ರೈಲ್ವೆ ಕ್ರಾಸಿಂಗ್ ಮೇಲ್ಸೆತುವೆ ಕಾಮಗಾರಿ ಕೈಗೆತ್ತಿಕೊಂಡು, ಕೇವಲ ಒಂದೂವರೆ ವರ್ಷದಲ್ಲಿ ಜನರ ಉಪಯೋಗಕ್ಕೆ ನೀಡಲಾಗುವುದುʼʼ ಎಂದರು.
ʼʼತಿಪಟೂರು ಶಾರದಾ ನಗರ ರೈಲ್ವೆ ಮೇಲ್ಸೆತುವೆ ಕಾಮಗಾರಿಯು 15 ತಿಂಗಳಲ್ಲಿ ಪೂರ್ಣಗೊಳ್ಳಲಿದೆ. ನಮ್ಮ ಸರ್ಕಾರದಲ್ಲಿ ವೆಂಕಟ, ಸೀನನ ಲೆಕ್ಕಗಳಿಗೆ ಅವಕಾಶವಿಲ್ಲ. ಪಾರದರ್ಶಕವಾಗಿ ಯಾರು ಗುಣಮಟ್ಟದ ಕಾಮಗಾರಿ ನಿರ್ವಹಿಸುತ್ತಾರೊ ಅವರಿಗೆ ಬಿಲ್ ನೀಡುತ್ತೇವೆ. ನಾನು ಯಾವಾಗಲೂ ಪಕ್ಷಾತೀತವಾಗಿ ಕೆಲಸ ಮಾಡುತ್ತೇನೆ. ಚುನಾವಣೆ ವೇಳೆಯಲ್ಲಿ ಮಾತ್ರ ರಾಜಕೀಯ ನಂತರ ಏನಿದರೂ ಅಭಿವೃದ್ದಿಗೆ ಮಾತ್ರ ಆದ್ಯತೆ ನೀಡುತ್ತೇವೆ. ತಿಪಟೂರು ಶಾಸಕ ಕೆ.ಷಡಕ್ಷರಿ ಅವರಿಗೆ ತಡವಾಗಿ ಆಹ್ವಾನ ತಲುಪಿರುವ ಬಗ್ಗೆ ಮಾಹಿತಿ ತಿಳಿದು ಬಂದಿದ್ದು, ಅವರ ಕ್ಷಮೆ ಕೋರುತ್ತೇನೆ. ನಾನು ಷಡಕ್ಷರಿ ಸ್ನೇಹಿತರು. ರಾಜಕೀಯವೇ ಬೇರೆ; ಅಭಿವೃದ್ದಿಯ ವಿಚಾರದಲ್ಲಿ ನಾವೆಲ್ಲ ಒಂದೇʼʼ ಎಂದರು.
ಈ ಸುದ್ದಿಯನ್ನೂ ಓದಿ | Bangalore News: ಅವಧಿಗೂ ಮುನ್ನ ಜನಿಸಿದ 830 ಗ್ರಾಂ ತೂಕದ ಶಿಶುವನ್ನು ರಕ್ಷಿಸುವಲ್ಲಿ ಯಶಸ್ವಿಯಾದ ವೈದ್ಯರು!
ಮಾಜಿ ಸಚಿವ ಬಿ.ಸಿ.ನಾಗೇಶ್, ರೈಲ್ವೆ ಸಿಇಒ ಅಜಯ್ ಶರ್ಮ, ಡಿಆರ್‌ಎಂ ಮಿಥಲ್, ದಿಶಾ ಸಮಿತಿ ಅಧ್ಯಕ್ಷ ವೈ.ಎಚ್.ಹುಚ್ಚಯ್ಯ, ಆಯರಹಳ್ಳಿ ಶಂಕರಪ್ಪ, ಬಿಜೆಪಿ ಮುಖಂಡ ಲೋಕೇಶ್ವರ್, ಕೆ.ಟಿ. ಶಾಂತಕುಮಾರ್, ಜಕ್ಕನಹಳ್ಳಿ ಲಿಂಗರಾಜು ಮತ್ತಿತರರು ಉಪಸ್ಥಿತರಿದ್ದರು.