Datta Jayanti 2025: ನಾಳೆಯಿಂದ ದತ್ತ ಜಯಂತಿ, ಚಿಕ್ಕಮಗಳೂರಿನ ಈ ಪ್ರದೇಶಗಳಲ್ಲಿ ಪ್ರವಾಸಿಗರಿಗೆ ನಿರ್ಬಂಧ
ದತ್ತ ಜಯಂತಿಯ (Datta Jayanti 2025) ಹಿನ್ನೆಲೆಯಲ್ಲಿ ಇಂದಿನಿಂದ ಡಿ.5ರ ಬೆಳಗ್ಗೆ 10 ಗಂಟೆಯವರೆಗೂ ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತದ ಸಾಲಿನ ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ದತ್ತಾತ್ರೇಯ ಪೀಠ, ಬಾಬಾಬುಡನ್ ಸ್ವಾಮಿ ದರ್ಗಾಗೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಪೊಲೀಸ್ ಹೈ ಅಲರ್ಟ್ ಘೋಷಣೆ ಮಾಡಿದ್ದಾರೆ.
ದತ್ತ ಪೀಠ, ಬಾಬಾಬುಡನ್‌ಗಿರಿ -
ಚಿಕ್ಕಮಗಳೂರು, ಡಿ.01: ಜಿಲ್ಲೆಯ ಮುಳ್ಳಯ್ಯನಗಿರಿಯ (Mullayyanagiri) ದತ್ತಪೀಠದಲ್ಲಿ (Datta peetha) ದತ್ತ ಜಯಂತಿ (Datta Jayanti 2025) ಹಿನ್ನಲೆ ಚಿಕ್ಕಮಗಳೂರು (Chikkamagaluru) ಜಿಲ್ಲಾಡಳಿತದಿಂದ ಮುಂಜಾಗ್ರತಾ ಕ್ರಮವಾಗಿ ಹಲವು ನಿರ್ಬಂಧಗಳನ್ನು ವಿಧಿಸಲಾಗಿದೆ. ಹಿಂದೂ ಸಂಘಟನೆಗಳಿಂದ ನಾಳೆಯಿಂದ (ಡಿ.2) ಮೂರು ದಿನಗಳ ಕಾಲ ದತ್ತ ಜಯಂತಿ ನಡೆಯಲಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ.
ಡಿ.3ರಂದು ಬೃಹತ್ ಶೋಭಾಯಾತ್ರೆ ಹಿನ್ನೆಲೆ ಚಿಕ್ಕಮಗಳೂರು ನಗರದಲ್ಲಿ ನಡೆಯಲಿರುವ ವಾರದ ಸಂತೆಗೆ ನಿಷೇಧ ವಿಧಿಸಲಾಗಿದೆ. ಡಿ. 4ರಂದು ದತ್ತ ಪಾದುಕೆ ದರ್ಶನ ಹಿನ್ನೆಲೆ ಚಿಕ್ಕಮಗಳೂರು ನಗರ ಸೇರಿ ಜಿಲ್ಲೆಯ ಪ್ರಮುಖ ಪಟ್ಟಣಗಳು ಬಂದ್ ಆಗಲಿದ್ದು, ಅಂಗಡಿ ಮುಂಗಟ್ಟು ಬಂದ್ ಮಾಡುವಂತೆ ಜಿಲ್ಲಾಡಳಿತ ಸೂಚಿಸಿದೆ. ಇಂದಿನಿಂದ ಡಿ.5ರ ಬೆಳಗ್ಗೆ 10 ಗಂಟೆಯವರೆಗೂ ಚಂದ್ರದ್ರೋಣ ಪರ್ವತದ ಸಾಲಿನ ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ದತ್ತಾತ್ರೇಯ ಪೀಠ, ಬಾಬಾಬುಡನ್ ಸ್ವಾಮಿ ದರ್ಗಾಗೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಪೊಲೀಸ್ ಹೈ ಅಲರ್ಟ್ ಘೋಷಣೆ ಮಾಡಿದ್ದಾರೆ.
ಬಿಗಿ ಬಂದೋಬಸ್ತ್
ದತ್ತ ಜಯಂತಿ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬಂದೋಬಸ್ತ್ ಕಾರ್ಯಕ್ಕೆ ಪೊಲೀಸರ ಜೊತೆಗೆ 15ಕ್ಕೂ ಹೆಚ್ಚು ಡ್ರೋನ್ ಕ್ಯಾಮರಾಗಳನ್ನು ಬಳಸಿಕೊಳ್ಳಲಾಗುತ್ತಿದೆ. ವಿವಿಧ ಸ್ಥಳಗಳಲ್ಲಿ ಒಟ್ಟು 28 ಚೆಕ್ಪೋಸ್ಟ್ಗಳನ್ನು ತೆರೆಯಲಾಗಿದ್ದು, ಹಗಲು, ರಾತ್ರಿ ಕಣ್ಗಾವಲು ಇರಲಿದೆ. ದೇಗುಲದ ಒಳಗೆ ಫೋಟೋಗಳನ್ನು ಕ್ಲಿಕ್ ಮಾಡುವುದು ಮತ್ತು ವೀಡಿಯೊಗಳನ್ನು ಚಿತ್ರೀಕರಣ ನಿಷೇಧಿಸಲಾಗಿದೆ. ಭಕ್ತಾದಿಗಳು ಪ್ಲಾಸ್ಟಿಕ್ ವಸ್ತುಗಳನ್ನು ಬಳಸದಂತೆ ಮತ್ತು ದಾರಿಯಲ್ಲಿ ಕಸ ಹಾಕದಂತೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ.
ಗೃಹ ಸಚಿವರಿಗೆ ಅವಹೇಳನ, ಚಿಕ್ಕಮಗಳೂರು ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಬಂಧನ
ದತ್ತ ಜಯಂತಿ ದಿನ ಅಂದರೆ ಡಿ.4ರಂದು ಬೆಳಗ್ಗೆ 6 ಗಂಟೆಯಿಂದ ಭಕ್ತರನ್ನು ಪೀಠಕ್ಕೆ ಬಿಡಲಾಗುವುದು. ಮಧ್ಯಾಹ್ನ 2 ಗಂಟೆ ನಂತರ ಪೀಠಕ್ಕೆ ತೆರಳಲು ಅವಕಾಶ ಇರುವುದಿಲ್ಲ. ಸುಪ್ರೀಂ ಕೋರ್ಟ್‌ನ ನಿರ್ದೇಶನದಂತೆ ಉತ್ಸವಗಳನ್ನು ನಡೆಸಲಾಗುವುದು ಎಂದು ಈಗಾಗಲೇ ಜಿಲ್ಲಾಧಿಕಾರಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ತಿಳಿಸಿದ್ದಾರೆ.