Datta Paduka Darshan: ದತ್ತ ಮಾಲಾಧಾರಿಗಳಿಂದ ದತ್ತ ಪಾದುಕೆ ದರ್ಶನ : ಜಿಲ್ಲೆಯಾದ್ಯಂತ ಪೊಲೀಸ್‌ ಹೈ ಅಲರ್ಟ್

Datta Paduka Darshan: ಇಂದು ದತ್ತ ಜಯಂತಿಯ ಕೊನೆಯ ದಿನವಾದ ಹಿನ್ನೆಲೆ ಸಹಸ್ರಾರು ದತ್ತ ಮಾಲಾಧಾರಿಗಳು ದತ್ತ ಪಾದುಕೆ ದರ್ಶನವನ್ನು ಮಾಡಿದ್ದಾರೆ.

Profile Deekshith Nair December 14, 2024
ಚಿಕ್ಕಮಗಳೂರು: ಇಂದು(ಡಿ.14) ದತ್ತ ಜಯಂತಿಯ(Datta Jayanthi) ಕೊನೆಯ ದಿನವಾದ ಹಿನ್ನೆಲೆ ಚಿಕ್ಕಮಗಳೂರಿನ(Chikmagaluru) ದತ್ತಪೀಠದಲ್ಲಿ ಸಾವಿರಾರು ದತ್ತ ಮಾಲಾಧಾರಿಗಳು ದತ್ತ ಪಾದುಕೆ ದರ್ಶನವನ್ನು(Datta Paduka Darshan) ಪಡೆದುಕೊಂಡಿದ್ದಾರೆ. ದತ್ತ ಜಯಂತಿಯ ಕೊನೆಯ ದಿನವಾದ ಇಂದು ರಾಜ್ಯಾದ್ಯಾಂತ ಸಹಸ್ರಾರು ದತ್ತ ಮಾಲಾಧಾರಿಗಳು ಆಗಮಿಸಿದ್ದು, ಶ್ರೀಗುರುದತ್ತಾತ್ರೇಯ ಪೀಠದಲ್ಲಿ ದತ್ತ ಪಾದುಕೆ ದರ್ಶನವನ್ನು ಮಾಡಿದ್ದಾರೆ. ಈ ವೇಳೆ ಗುಹೆಯ ಮುಂಭಾಗದ ತುಳಸಿ ಕಟ್ಟೆಯ ಬಳಿ ಹೋಮ ಪೂಜೆ ನಡೆದಿದೆ. ಇನ್ನು ಮುಂಜಾಗ್ರತಾ ಕ್ರಮವಾಗಿ ಚಿಕ್ಕಮಗಳೂರು ನಗರದ ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಪ್ರದೇಶಗಳನ್ನು ಬಂದ್ ಮಾಡಲಾಗಿತ್ತು. ಅಷ್ಟೇ ಅಲ್ಲದೆ, ಬಾಬಾ ಬುಡನ್ ಸ್ವಾಮಿ ದರ್ಗಾಕ್ಕೆ ತೆರಳುವ ಮಾರ್ಗದಲ್ಲಿ ಜಿಲ್ಲಾಡಳಿತದ‌ ಸೂಚನೆಯಂತೆ ಅಂಗಡಿ ಮುಂಗಟ್ಟು ಸಂಪೂರ್ಣವಾಗಿ ಬಂದ್‌ ಆಗಿದ್ದವು. ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಪೊಲೀಸರು ಹೈ ಅಲರ್ಟ್‌(Police High Alert) ನಲ್ಲಿದ್ದರು. ಭದ್ರತೆಗಾಗಿ ಸರಿ ಸುಮಾರು ನಾಲ್ಕು ಸಾವಿರ ಪೊಲೀಸರನ್ನು ನಿಯೋಜಿಸಲಾಗಿತ್ತು ಎಂದು ತಿಳಿದು ಬಂದಿದೆ. ವಿಶ್ವ ಹಿಂದೂ ಪರಿಷತ್ ಭಜರಂಗ ದಳದ ವತಿಯಿಂದ ಹಮ್ಮಿಕೊಂಡಿದ್ದ ದತ್ತಜಯಂತಿಯ ಕೊನೆಯ ದಿನದಲ್ಲಿ ಬಹಳ ಅದ್ಧೂರಿಯಾಗಿ ಪೂಜೆ ನೆರವೇರಿದೆ. ಕೆಲ ದಿನಗಳ ಹಿಂದೆಯಷ್ಟೇ ನಗರದ ಕಾಮಧೇನು ಗಣಪತಿ ದೇವಸ್ಥಾನದಲ್ಲಿ ಬಿಜೆಪಿ ನಾಯಕ ಸಿ.ಟಿ.ರವಿ ಸೇರಿದಂತೆ ಇತರೆ ಮುಖಂಡರು ದತ್ತಮಾಲೆ ಧರಿಸಿದ್ದರು. ಇಂದು ಅವರೆಲ್ಲರು ದತ್ತ ಪಾದುಕೆ ದರ್ಶನವನ್ನು ಮಾಡಿದ್ದಾರೆ ಎಂಬ ಮಾಹಿತಿಯಿದೆ. ಇನ್ಮು ಮೊನ್ನೆ ಗುರುವಾರ ಅನಸೂಯಾ ದೇವಿ ಸಂಕೀರ್ತನಾ ಯಾತ್ರೆ ನಡೆಯಿತು. ನಗರದ ಬೋಳರಾಮೇಶ್ವರ ದೇವಾಲಯ ಆವರಣದಿಂದ ಕಾಲ್ನಡಿಗೆ ಮೂಲಕ ಹೊರಟ ಸಂಕೀರ್ತನಾ ಯಾತ್ರೆ, ಐ.ಜಿ. ರಸ್ತೆ, ರತ್ನಗಿರಿ ರಸ್ತೆಯ ಶ್ರೀರಾಮ ದೇವಸ್ಥಾನ ಹಾದು ಕಾಮಧೇನು ಗಣಪತಿ ದೇವಾಲಯ ತಲುಪಿತ್ತು. ಸಾವಿರಕ್ಕೂ ಹೆಚ್ಚು ಮಹಿಳೆಯರು ಕೊರಳಿಗೆ ಕೇಸರಿ ಶಾಲು ಧರಿಸಿ, ಅನಸೂಯಾ ದೇವಿಯ ಚಿತ್ರಪಟ ಹಿಡಿದು ಸಾಗಿದ್ದರು. ಬಳಿಕ ವಾಹನಗಳಲ್ಲಿ ಶ್ರೀಗುರು ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾಕ್ಕೆ ತೆರಳಿದ್ದರು. ಅಲ್ಲಿ ಅನಸೂಯಾ ದೇವಿ ಪೂಜೆ, ಗಣಪತಿ ಪೂಜೆ, ದುರ್ಗಾಹೋಮ, ಕಲಾಶಾಭಿಷೇಕ ಮಾಡಿದ್ದರು. ದತ್ತಪೀಠ ವಿವಾದ ಬಾಬಾಬುಡನ್‌ ಗಿರಿ ಅಥವಾ ಶ್ರೀಗುರುದತ್ತಾತ್ರೇಯ ಪೀಠ ಮುಸ್ಲಿಮರಿಗೆ ಸೇರಿದ್ದೇ, ಹಿಂದೂಗಳಿಗೆ ಸೇರಿದ್ದೇ ಎನ್ನುವುದು ಬಹಳ ಹಿಂದಿನಿಂದಲೂ ವಿವಾದಕ್ಕೆ ಕಾರಣವಾಗಿದೆ. ಸರ್ಕಾರಿ ದಾಖಲೆಗಳಲ್ಲಿ ಶ್ರೀ ಗುರುದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ ಎಂದು ಹೇಳಲಾಗಿದೆ. ಈ ಸ್ಥಳವನ್ನು ಬಾಬಾ ಬುಡನ್‌ ಗಿರಿ ಎಂದು ಕೆಲವರು ಕರೆದರೆ, ಇನ್ನು ಕೆಲವರು ಇನಾಂ ದತ್ತಾತ್ರೇಯ ಪೀಠ ಎನ್ನುತ್ತಾರೆ. ಒಂದು ಕಾಲದಲ್ಲಿ ಹಿಂದೂ ಮುಸ್ಲಿಂ ಭಾವೈಕ್ಯತೆಯ ತಾಣವಾಗಿತ್ತು ಎಂದು ಹೇಳಲಾಗಿದೆ. ಆದರೆ, ನಂತರ ಈ ಸ್ಥಳದಲ್ಲಿ ಭಾರೀ ವಿವಾದ ಹುಟ್ಟಿಕೊಂಡಿತು. ದತ್ತಪೀಠಕ್ಕೆ ಹಿಂದೂ ಮತ್ತು ಮುಸ್ಲಿಮರು ನೂರಾರು ವರ್ಷಗಳಿಂದ ಹೊಂದಿಕೊಂಡಿದ್ದರು. ಆದರೆ, ಬಿಜೆಪಿ 1998ರಲ್ಲಿ ದತ್ತ ಮಾಲಾ ಅಭಿಯಾನ ಆರಂಭಿಸಿದ ನಂತರ ಕ್ಷೇತ್ರವು ದೇಶವ್ಯಾಪಿ ಗಮನ ಸೆಳೆಯಿತು. ಸಂಘ ಪರಿವಾರದ ಪ್ರಯತ್ನಗಳಿಗೆ ಪ್ರತಿಯಾಗಿ ಕೋಮು ಸೌಹಾರ್ದ ವೇದಿಕೆಯೂ ಚಿಕ್ಕಮಗಳೂರಿನಲ್ಲಿ ಸಮಾವೇಶಗಳನ್ನು ಆಯೋಜಿಸುವ ಮೂಲಕ ಗಮನ ಸೆಳೆಯುತ್ತಿತ್ತು. ಕ್ಷೇತ್ರದಲ್ಲಿದ್ದ ಮುಜಾವರ್‌ ಎರಡೂ ಪದ್ಧತಿಗಳ ಪ್ರಕಾರ ಈಗಲೂ ಪೂಜೆ ಮಾಡಿಕೊಡುತ್ತಿದ್ದಾರೆ. ಈ ಸುದ್ದಿಯನ್ನೂ ಓದಿ:Mahamastakabhisheka: ಗೊಮ್ಮಟಗಿರಿಯ ಬಾಹುಬಲಿಗೆ ವಿಜೃಂಭಣೆಯ ಮಹಾಮಸ್ತಕಾಭಿಷೇಕ; ಕಣ್ತುಂಬಿಕೊಂಡ ಸಹಸ್ರಾರು ಭಕ್ತರು
Three labourers brutally assaulted by brick kiln owner
1:53 PM January 20, 2025

Assault case: ಮೂವರು ಕಾರ್ಮಿಕರ ಮೇಲೆ ಇಟ್ಟಿಗೆ ಭಟ್ಟಿ ಮಾಲೀಕ ಮಾರಣಾಂತಿಕ ಹಲ್ಲೆ; ಕೆಲಸಕ್ಕೆ ಬರುವುದು ವಿಳಂಬವಾಗಿದ್ದಕ್ಕೆ ರಾಕ್ಷಸಿ ಕೃತ್ಯ!

Saif Ali Khan, Ibrahim
2:50 PM January 16, 2025

Saif Ali Khan: 1,200 ಕೋಟಿ ರೂ. ಆಸ್ತಿಗಳ ಒಡೆಯ ಸೈಫ್‌ ಆಲಿ ಖಾನ್‌ನನ್ನು‌ ಆಟೋದಲ್ಲಿ ಆಸ್ಪತ್ರೆಗೆ ಕರೆದೊಯ್ದ ಪುತ್ರ ಇಬ್ರಾಹಿಂ; ಕಾರಣವೇನು?

Student dies 1
8:51 PM January 18, 2025

Heart Attack: ಕಾಲೇಜು ಮುಗಿಸಿ ಹೋಗುವಾಗ ಹೃದಯಾಘಾತವಾಗಿ ವಿದ್ಯಾರ್ಥಿನಿ ಸಾವು

robbery case shooting
1:49 PM January 16, 2025

Murder Case: ಸೆಕ್ಯೂರಿಟಿ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ ಮಾಡಿ 93 ಲಕ್ಷ ರೂ. ದರೋಡೆ

BBK 11 Mid week Elimination (1)
9:12 PM January 15, 2025

BBK 11: ಇಂದೇ ನಡೆಯಲಿದೆ ಮಿಡ್ ವೀಕ್ ಎಲಿಮಿನೇಷನ್: ಔಟ್ ಆದ ಸ್ಪರ್ಧಿ ಇವರೇ ನೋಡಿ

Saif ali Khan (1)
9:38 AM January 18, 2025

Saif Ali Khan: ರಕ್ತಸಿಕ್ತವಾದ ಬಟ್ಟೆ, ಸಂಪೂರ್ಣ ಅಸ್ವಸ್ಥರಾಗಿದ್ದ ಸೈಫ್‌! ಆ ರಾತ್ರಿ ನಡೆದಿದ್ದಾದರೂ ಏನು? ಆಟೋ ಡ್ರೈವರ್‌ ಹೇಳಿದ್ದೇನು?

Chaithra Kundapura remuneration (1)
7:13 AM January 16, 2025

BBK 11: ಬಿಗ್ ಬಾಸ್​ನಿಂದ ಹೊರಬಂದ ಚೈತ್ರಾ ಕುಂದಾಪುರಗೆ ಸಿಕ್ಕ ಹಣ ಎಷ್ಟು ಗೊತ್ತೇ?

Naga Sadhus
11:15 PM January 18, 2025

Maha Kumbh Mela: ಕುಂಭಮೇಳದ ವೇಳೆ ನಾಗ ಸಾಧುಗಳು ಬರುವುದೆಲ್ಲಿಂದ? ಬಳಿಕ ಅಪ್ರತ್ಯಕ್ಷರಾಗುವುದೇಕೆ? ಅವರ ನಿಗೂಢ ಪ್ರಪಂಚ ಹೇಗಿದೆ? ಇಲ್ಲಿದೆ ಸಮಗ್ರ ವಿವರ

Honnamaradi jatre
5:53 PM January 15, 2025

Honnamaradi Jatre: ವೈಭವದಿಂದ ನಡೆದ ಹೊನ್ನಮರಡಿ ಜಾತ್ರೆ; ಶ್ರೀ ರಂಗನಾಥಸ್ವಾಮಿ ದರ್ಶನ ಪಡೆದ ಸಾವಿರಾರು ಭಕ್ತರು

Eshwara Khandre
6:54 PM January 16, 2025

Bidar ATM Robbery: ಬೀದರ್ ಎಟಿಎಂ ದರೋಡೆ ಪ್ರಕರಣ; ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮಕ್ಕೆ ಸಚಿವ ಖಂಡ್ರೆ ಸೂಚನೆ