ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Chikkamagaluru News: ಪ್ರೀತಿಸಿದವಳಿಗೆ ಕೈಕೊಟ್ಟು ಬೇರೊಬ್ಬರ ಜೊತೆ ಮದುವೆ; ಕಲ್ಯಾಣ ಮಂಟಪಕ್ಕೆ ನುಗ್ಗಿ ಯುವತಿ ರಂಪಾಟ

ಹತ್ತು ವರ್ಷಗಳಿಂದ ಪ್ರೀತಿಸುತ್ತಿದ್ದ ಯುವತಿಗೆ ಕೈಕೊಟ್ಟು ಬೇರೊಬ್ಬಳ ಜೊತೆ ಮದುವೆಯಾಗುತ್ತಿದ್ದ ಯುವಕನ ಮದುವೆ ಮಂಟಪಕ್ಕೆ ಬಂದು ಗಲಾಟೆ ನಡೆಸಿದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಮದುವೆ ನಡೆದು ಮುಗಿದ ಬಳಿಕ ಯುವಕನ ಕುಟುಂಬಸ್ಥರು ಸಂತ್ರಸ್ತೆ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಪ್ರೀತಿಸಿದವನಿಗಾಗಿ ಕಲ್ಯಾಣ ಮಂಟಪಕ್ಕೆ ನುಗ್ಗಿ ಯುವತಿ ರಂಪಾಟ

-

Vishakha Bhat
Vishakha Bhat Dec 14, 2025 1:35 PM

ಚಿಕ್ಕಮಗಳೂರು: ಹತ್ತು ವರ್ಷಗಳಿಂದ ಪ್ರೀತಿಸುತ್ತಿದ್ದ ಯುವತಿಗೆ ಕೈಕೊಟ್ಟು ಬೇರೊಬ್ಬಳ ಜೊತೆ ಮದುವೆಯಾಗುತ್ತಿದ್ದ ಯುವಕನ ಮದುವೆ ಮಂಟಪಕ್ಕೆ ಬಂದು ಗಲಾಟೆ ನಡೆಸಿದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಮದುವೆ ನಡೆದು ಮುಗಿದ ಬಳಿಕ ಯುವಕನ ಕುಟುಂಬಸ್ಥರು ಸಂತ್ರಸ್ತೆ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಘಟನೆ ಡಿಸೆಂಬರ್ 13ರಂದು ಚಿಕ್ಕಮಗಳೂರು ನಗರದ ಕಲ್ಯಾಣ ಮಂಟಪದಲ್ಲಿ ನಡೆದಿದೆ. ಚಿಕ್ಕಮಗಳೂರು ಮೂಲದ ಶರತ್ ಎಂಬ ಯುವಕ ಹಾಸನ ಜಿಲ್ಲೆಯ ಬೇಲೂರು ತಾಲೂಕದ ಯುವತಿಯನ್ನು ಕಳೆದ ಹತ್ತು ವರ್ಷಗಳಿಂದ ಪ್ರೀತಿಸುತ್ತಿದ್ದ ಎಂದು ಯುವತಿ ಹೇಳಿದ್ದಾಳೆ.

ಮದುವೆಯಾಗುವುದಾಗಿ ಭರವಸೆ ನೀಡಿ ಯುವತಿಯನ್ನು ನಂಬಿಸಿದ್ದನು. ಯುವತಿಯ ಕುಟುಂಬಕ್ಕೂ ಶರತ್ ಪರಿಚಯವಿದ್ದು, ಮದುವೆಗೆ ಒಪ್ಪಿಗೆ ಸಿಕ್ಕಿತ್ತು. ಕಳೆದ ನವರಾತ್ರಿ ಸಮಯದಲ್ಲಿ ಎರಡೂ ಕುಟುಂಬಗಳ ನಡುವೆ ಮದುವೆ ಮಾತುಕತೆ ನಡೆದಿತ್ತು ಎನ್ನಲಾಗಿದೆ. ಆದರೆ ಶರತ್ ತನ್ನ ಮೊದಲ ಮದುವೆಯನ್ನು ಮುಚ್ಚಿಟ್ಟಿದ್ದನು. ಮೂರು ವರ್ಷಗಳ ಹಿಂದೆ ಮದುವೆಯಾಗಿ ವಿಚ್ಛೇದನ ಪಡೆದಿದ್ದ ಆತ, ಈ ವಿಷಯವನ್ನು ಹಳೇ ಪ್ರೇಯಸಿಗೆ ಹೇಳದೇ ಮತ್ತೆ ಪ್ರೀತಿ ನಾಟಕ ಆಡಿದ್ದನು. ದುಬೈಗೆ ಹೋಗುವುದಾಗಿ ಸುಳ್ಳು ಹೇಳಿ ತಪ್ಪಿಸಿಕೊಂಡಿದ್ದ.

ಹಾಸನದಿಂದ ಚಿಕ್ಕಮಗಳೂರಿಗೆ ಧಾವಿಸಿ ಬಂದ ಸಂತ್ರಸ್ತೆ, ಶರತ್ ಮನೆಗೆ ಹೋಗಿ ಮೋಸದ ಬಗ್ಗೆ ಪ್ರಶ್ನಿಸಿದಳು. ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದಳು. ಪೊಲೀಸರು ಶರತ್‌‌ನನ್ನು ಕರೆಸಿ ಬುದ್ಧಿ ಹೇಳಿದರು. ಮದುವೆ ನಿಲ್ಲಿಸುವಂತೆಯೂ, ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿದ ಯುವತಿಯನ್ನೇ ಮದುವೆಯಾಗುವಂತೆ ಸಲಹೆ ನೀಡಿದರು. ಠಾಣೆಯಲ್ಲಿ ಪೊಲೀಸರ ಮುಂದೆ ಒಪ್ಪಿಕೊಂಡ ಶರತ್, ಮರುದಿನವೇ ಬೇರೊಬ್ಬ ಯುವತಿಯೊಂದಿಗೆ ಕಲ್ಯಾಣ ಮಂಟಪದಲ್ಲಿ ಮದುವೆಗೆ ಸಿದ್ಧನಾಗಿದ್ದ ಎಂದು ತಿಳಿದು ಬಂದಿದೆ. ಶರತ್‌ಗೆ ಬೇರೆಯೊಬ್ಬರ ಜೊತೆ ಮದುವೆಯಾದರೂ ಯುವತಿ ತನ್ನನ್ನೇ ಮದುವೆಯಾಗಬೇಕೆಂದು ಹಠ ಹಿಡಿದ್ದಾಳೆ. ಚಿಕ್ಕಮಗಳೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.