ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Chikkamagaluru news: ಕಡೂರು ಶಾಸಕರ ಪಿಎಯಿಂದ ಕಿರುಕುಳ, ಸರಕಾರಿ ನೌಕರ ಡೆತ್‌ನೋಟ್‌ ಬರೆದಿಟ್ಟು ನಾಪತ್ತೆ

ಕಡೂರು ತಾಲೂಕು ಕೇಂದ್ರದಲ್ಲಿ ಕೆಲಸ ಮಾಡುತ್ತಿದ್ದ ಇಕ್ಬಾಲ್ ನಾಪತ್ತೆಯಾಗಿದ್ದಾರೆ. ಶಾಸಕ ಕೆ.ಎಸ್.ಆನಂದ್ ಅವರ ಆಪ್ತ ಸಹಾಯಕ ಮಂಜುನಾಥ್, ತಹಶೀಲ್ದಾರ್ ಪೂರ್ಣಿಮಾ ಹಾಗೂ ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಶಿವಕುಮಾರ್, ಗ್ಯಾರಂಟಿ ಸಮಿತಿ ಅಧ್ಯಕ್ಷ ಕಲ್ಲೇಶ್ ವಿರುದ್ಧ ಕಿರುಕುಳ ಆರೋಪ ಮಾಡಿದ್ದಾರೆ.

ಶಾಸಕರ ಪಿಎ ಮಂಜುನಾಥ್‌, ನಾಪತ್ತೆಯಾದ ಇಕ್ಬಾಲ್

ಚಿಕ್ಕಮಗಳೂರು, ಫೆ.12: ಜಿಲ್ಲೆಯ (Chikkamagaluru news) ಕಡೂರು (Kaduru) ಕಾಂಗ್ರೆಸ್ ಶಾಸಕ ಕೆ.ಎಸ್.ಆನಂದ್ ಅವರ ಆಪ್ತ ಕಾರ್ಯದರ್ಶಿ ಕಿರುಕುಳಕ್ಕೆ ಬೇಸತ್ತು ಸರ್ಕಾರಿ ನೌಕರರೊಬ್ಬರು ಡೆತ್‌ನೋಟ್ (death note) ಬರೆದಿಟ್ಟು ನಾಪತ್ತೆಯಾಗಿದ್ದಾರೆ. ಡೆತ್‌ನೋಟ್‌ನಲ್ಲಿ ಶಾಸಕರ ಪಿಎ ಕಿರುಕುಳದ (Harassment) ಉಲ್ಲೇಖ ಮಾಡಿದ್ದಾರೆ.

ಕಡೂರು ತಾಲೂಕು ಕೇಂದ್ರದಲ್ಲಿ ಕೆಲಸ ಮಾಡುತ್ತಿದ್ದ ಇಕ್ಬಾಲ್ ನಾಪತ್ತೆಯಾಗಿದ್ದಾರೆ. ಶಾಸಕ ಕೆ.ಎಸ್.ಆನಂದ್ ಅವರ ಆಪ್ತ ಸಹಾಯಕ ಮಂಜುನಾಥ್, ತಹಶೀಲ್ದಾರ್ ಪೂರ್ಣಿಮಾ ಹಾಗೂ ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಶಿವಕುಮಾರ್, ಗ್ಯಾರಂಟಿ ಸಮಿತಿ ಅಧ್ಯಕ್ಷ ಕಲ್ಲೇಶ್ ವಿರುದ್ಧ ಕಿರುಕುಳ ಆರೋಪ ಮಾಡಿದ್ದಾರೆ.

ಡೆತ್‌ನೋಟ್‌ನಲ್ಲಿ, ನಾಲ್ವರ ಕಿರುಕುಳ ಸಹಿಸಲಾಗದೇ ಕುಟುಂಬ ಸಮೇತರಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ. ನನ್ನ ಸಾವಿಗೆ ಕಾರಣೀಕರ್ತರಾದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿ ಉಲ್ಲೇಖಿಸಿದ್ದಾರೆ. ಕಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಕಡೂರು ಪೊಲೀಸರು ಮಂಜುನಾಥ್‌ ಅವರನ್ನು ಹುಡುಕುತ್ತಿದ್ದಾರೆ.

ಅಪಘಾತದಲ್ಲಿ ಬಾಲಕಿ ಸಾವು

ಚಿಕ್ಕೋಡಿ: ರಸ್ತೆ ಅಪಘಾತದಲ್ಲಿ (Accident) 9 ವರ್ಷದ ಬಾಲಕಿ (Girl) ಸಾವನ್ನಪ್ಪಿರುವ ಘಟನೆ ಬೆಳಗಾವಿ (Belagavi) ಜಿಲ್ಲೆಯ ರಾಯಬಾಗ ತಾಲೂಕಿನ ಅಳಗವಾಡಿ ಗ್ರಾಮದಲ್ಲಿ ನಡೆದಿದೆ. ಅಳಗವಾಡಿ ಗ್ರಾಮದ ವೈಷ್ಣವಿ ತೇರದಾಳೆ (9) ಮೃತ ಬಾಲಕಿ‌. ಶಿಕ್ಷಣ ಸಂಯೋಜಕ ವಿಠಲ ತೇರದಾಳೆ ಅವರ ಸುಪುತ್ರಿ ವೈಷ್ಣವಿ ಇತ್ತೀಚೆಗೆ ಅಳಗವಾಡಿ ಗ್ರಾಮದ ಬಳಿ ಸಂಭವಿಸಿದ್ದ ರಸ್ತೆ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಳು. ಒಂದು ವಾರ ಕಾಲ ಸಾವು ಬದುಕಿನ ನಡುವೆ ಹೋರಾಟ ನಡೆಸಿ ಕೊನೆಗೆ ಬೆಳಗಾವಿಯ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ.

ಅಳುವ ಇಮೋಜಿಯೊಂದಿಗೆ ಡೆತ್‌ ನೋಟ್‌ ಬರೆದಿದ್ದ ಆತ್ಮಹತ್ಯೆ ಮಾಡಿಕೊಂಡ ಸೋದರಿಯರು; ಪತ್ರದಲ್ಲಿ ಏನಿದೆ?

ಹರೀಶ್‌ ಕೇರ

View all posts by this author